Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 12:16 - ಕನ್ನಡ ಸತ್ಯವೇದವು J.V. (BSI)

16 ಇವರು ಮೊದಲು ಬಾಳನ ಹೆಸರೆತ್ತಿ ಪ್ರಮಾಣಮಾಡುವ ಅಭ್ಯಾಸವನ್ನು ನನ್ನ ಜನರಿಗೆ ಕಲಿಸಿಕೊಟ್ಟ ಪ್ರಕಾರ ಈಗ ನನ್ನ ಹೆಸರನ್ನೆತ್ತಿ ಯೆಹೋವನ ಜೀವದಾಣೆ ಎಂದು ಪ್ರಮಾಣ ಮಾಡುವ ನನ್ನ ಜನರ ಅಭ್ಯಾಸವನ್ನು ಚೆನ್ನಾಗಿ ಮಾಡಿಕೊಂಡರೆ ನನ್ನ ಜನರ ಮಧ್ಯದಲ್ಲಿ ನೆಲೆಗೊಂಡು ವೃದ್ಧಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇವರು ಮೊದಲು ಬಾಳನ ಹೆಸರೆತ್ತಿ ಪ್ರಮಾಣಮಾಡುವ ಅಭ್ಯಾಸವನ್ನು ನನ್ನ ಜನರಿಗೆ ಕಲಿಸಿಕೊಟ್ಟ ಪ್ರಕಾರ, ಈಗ ನನ್ನ ಹೆಸರನ್ನೆತ್ತಿ ‘ಯೆಹೋವನ ಜೀವದಾಣೆ’ ಎಂದು ಪ್ರಮಾಣಮಾಡುವ ನನ್ನ ಜನರ ಅಭ್ಯಾಸವನ್ನು ಮಾಡಿಕೊಂಡರೆ ನನ್ನ ಜನರ ಮಧ್ಯದಲ್ಲಿ ನೆಲೆಗೊಂಡು ವೃದ್ಧಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನನ್ನ ಜನರಿಗೆ ಬಾಳ್‍ದೇವತೆಯ ಹೆಸರೆತ್ತಿ ಪ್ರಮಾಣಮಾಡುವ ಅಭ್ಯಾಸವನ್ನು ಮೊದಲು ಕಲಿಸಿಕೊಟ್ಟವರು ಇವರೇ. ಈಗ ನನ್ನ ಜನರ ಮಾರ್ಗವನ್ನು ಅವಲಂಬಿಸಿ ನನ್ನ ಹೆಸರೆತ್ತಿ, “ಸರ್ವೇಶ್ವರನ ಜೀವದಾಣೆ” ಎಂದು ಪ್ರಮಾಣ ಮಾಡುವುದನ್ನು ಕಲಿತರೆ ನನ್ನ ಜನರ ನಡುವೆ ನೆಲೆಗೊಂಡು ವೃದ್ಧಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆ ಜನರು ತಮ್ಮ ಪಾಠಗಳನ್ನು ಸರಿಯಾಗಿ ಕಲಿತುಕೊಳ್ಳಬೇಕೆಂಬುದು ನನ್ನ ಅಪೇಕ್ಷೆ. ಮೊದಲು, ಆ ಜನರು ಬಾಳನ ಹೆಸರೆತ್ತಿ ಪ್ರಮಾಣ ಮಾಡುವುದನ್ನು ನನ್ನ ಜನರಿಗೆ ಕಲಿಸಿಕೊಟ್ಟರು. ಈಗ ಆ ಜನರು ಅದೇ ರೀತಿಯಲ್ಲಿ ತಮ್ಮ ಪಾಠವನ್ನು ಕಲಿತುಕೊಳ್ಳಬೇಕೆಂಬುದು ನನ್ನ ಇಚ್ಛೆ. ಅವರು, ‘ಯೆಹೋವನ ಜೀವದಾಣೆ’ ಎಂದು ಹೇಳಿದರೆ ಅವರನ್ನು ಅಭಿವೃದ್ಧಿಪಡಿಸಿ ಅವರನ್ನು ನಮ್ಮ ಜನರ ಮಧ್ಯದಲ್ಲಿ ನೆಲೆಗೊಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇವರು ಮೊದಲು ಬಾಳನ ಹೆಸರೆತ್ತಿ ಪ್ರಮಾಣಮಾಡುವ ಅಭ್ಯಾಸವನ್ನು ನನ್ನ ಜನರಿಗೆ ಕಲಿಸಿಕೊಟ್ಟ ಪ್ರಕಾರ, ‘ಈಗ ಯೆಹೋವ ದೇವರ ಜೀವದಾಣೆ,’ ಎಂದು ಹೇಳಿ ನನ್ನ ಹೆಸರಿನ ಆಣೆ ಇಟ್ಟುಕೊಳ್ಳುವುದಕ್ಕೆ ನನ್ನ ಜನರ ಮಾರ್ಗಗಳನ್ನು ಜಾಗ್ರತೆಯಾಗಿ ಕಲಿತುಕೊಂಡರೆ, ಆಗ ಅವರು ನನ್ನ ಜನರ ನಡುವೆ ನೆಲೆಗೊಂಡು ವೃದ್ಧಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 12:16
28 ತಿಳಿವುಗಳ ಹೋಲಿಕೆ  

ಯೆಹೋವನ ಜೀವದಾಣೆ ಎಂದು ಸತ್ಯನ್ಯಾಯ ಧರ್ಮಾನುಸಾರವಾಗಿ ನೀನು ಪ್ರಮಾಣಮಾಡಿದರೆ ಜನಾಂಗಗಳು ಆತನಿಂದ ತಮ್ಮನ್ನು ಆಶೀರ್ವದಿಸಿಕೊಂಡು ಆತನಲ್ಲಿ ಹೆಚ್ಚಳಪಡುವರು.


ಮಾಳಿಗೆಗಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆ ಪೂಜಿಸುವವರನ್ನೂ ಯೆಹೋವನ ಭಕ್ತರೆಂದು ಪ್ರತಿಜ್ಞೆಮಾಡಿಕೊಂಡು ಆರಾಧಿಸಿ ಮಲ್ಕಾಮನ ಮೇಲೆ ಆಣೆಯಿಡುವವರನ್ನೂ


ಉಳಿದಿರುವ ಈ ಜನಾಂಗಗಳ ಜೊತೆಯಲ್ಲಿ ಸೇರಿಕೊಳ್ಳಬೇಡಿರಿ. ಅವರ ದೇವತೆಗಳ ಹೆಸರು ಹೇಳಿ ಆರಾಧಿಸಲೂ ಪ್ರಮಾಣಮಾಡಲೂಬಾರದು, ಅವುಗಳಿಗೆ ಅಡ್ಡಬಿದ್ದು ಸೇವಿಸಲೂಬಾರದು.


ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವವು; ನಾನು ನಿನ್ನ ಮಧ್ಯದಲ್ಲಿ ವಾಸಿಸುವೆನು; ಆಗ ಸೇನಾಧೀಶ್ವರ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬದು ನಿನಗೆ ಗೊತ್ತಾಗುವದು.


ಜನರು ಯೆಹೋವನ ಜೀವದಾಣೆ ಎಂದರೂ ಆ ಆಣೆಯು ಸುಳ್ಳೇ ಸುಳ್ಳು [ಎಂದು ಯೆಹೋವನು ಅನ್ನುತ್ತಾನೆ].


ಆ ಕಾಲದಲ್ಲಿ ಯೆರೂಸಲೇಮನ್ನು ಯೆಹೋವನ ಸಿಂಹಾಸನವೆಂದು ಕರೆಯುವರು; ಯೆಹೋವನ ನಾಮಮಹತ್ವದ ಸ್ಥಾನವಾದ ಯೆರೂಸಲೇವಿುಗೆ ಸಕಲ ಜನಾಂಗಗಳವರು ನೆರೆದುಬರುವರು; ಇನ್ನು ಮೇಲೆ ತಮ್ಮ ದುಷ್ಟಹೃದಯದ ಹಟದಂತೆ ನಡೆಯರು.


ನಿಮ್ಮ ಪೂರ್ವದ ಕಷ್ಟಗಳು ಇನ್ನು ನನ್ನ ಕಣ್ಣಿಗೆ ಬೀಳದೆ ಮರೆತುಹೋಗಿರುವವಾದದರಿಂದ ಲೋಕದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವ ಪ್ರತಿಯೊಬ್ಬನೂ ಸತ್ಯಸಂಧನಾದ ದೇವರ ಹೆಸರಿನಿಂದ ಆಶೀರ್ವದಿಸಿಕೊಳ್ಳುವನು; ಲೋಕದಲ್ಲಿ ಆಣೆಯಿಡುವ ಪ್ರತಿಯೊಬ್ಬನೂ ಸತ್ಯಸಂಧನಾದ ದೇವರ ಮೇಲೆ ಆಣೆಯಿಡುವನು.


ಆತನೇ ಈಗ ಹೀಗನ್ನುತ್ತಾನೆ - ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪಕಾರ್ಯವೇ ಸರಿ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.


ಎಲ್ಲರೂ ನನಗೆ ಅಡ್ಡಬೀಳುವರು, ಎಲ್ಲರೂ ನನ್ನನ್ನು ದೇವರೆಂದು ಪ್ರತಿಜ್ಞೆಮಾಡುವರು ಎಂಬ ನುಡಿ ನನ್ನ ಸತ್ಯದ ಬಾಯಿಂದ ಹೊರಟಿದೆ, ಅದನ್ನು ಹಿಂತೆಗೆಯೆನು, ನನ್ನ ಮೇಲೆ ಆಣೆಯಿಟ್ಟಿದ್ದೇನೆ.


ನಾವು ದೇವರ ಜೊತೆ ಕೆಲಸದವರು; ನೀವು ದೇವರ ಹೊಲವೂ ದೇವರ ಕಟ್ಟಡವೂ ಆಗಿದ್ದೀರಿ.


ನನ್ನ ಜೀವದಾಣೆ, ಎಲ್ಲರೂ ನನಗೆ ಅಡ್ಡ ಬೀಳುವರು, ಎಲ್ಲರೂ ನನ್ನನ್ನು ದೇವರೆಂದು ಪ್ರತಿಜ್ಞೆ ಮಾಡುವರು ಎಂಬದಾಗಿ ಕರ್ತನು ಹೇಳಿದ್ದಾನೆ ಎಂದು ಬರೆದದೆ.


ನಾರೀಮಣಿಯೇ, ನಿನಗೆ ಗೊತ್ತಿಲ್ಲವಾದರೆ ಹಿಂಡಿನ ಹೆಜ್ಜೆಯ ಜಾಡನ್ನು ಹಿಡಿದು ಹೋಗಿ ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಮರಿಗಳನ್ನು ಮೇಯಿಸು.


ಆದರೆ ಕೆಲವು ಕೊಂಬೆಗಳು ಮುರಿದುಹಾಕಲ್ಪಡಲು ಕಾಡೆಣ್ಣೇಮರದಂತಿರುವ ನೀನು ಅವುಗಳ ತಾವಿನಲ್ಲಿ ಕಸಿಕಟ್ಟಿಸಿಕೊಂಡವನಾಗಿ ಊರೆಣ್ಣೇಮರದ ರಸವತ್ತಾದ ಬೇರಿನಲ್ಲಿ ಪಾಲು ಹೊಂದಿದರೂ ಆ ಕೊಂಬೆಗಳನ್ನು ಕಡೆಗಣಿಸಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ;


ಈ ರಾತ್ರಿ ಇಲ್ಲೇ ಇರು; ನಾಳೆ ಅವನು ಮೈದುನಧರ್ಮವನ್ನು ನಡಿಸಿದರೆ ಸರಿ; ಇಲ್ಲವಾದರೆ ಯೆಹೋವನಾಣೆ, ನಾನೇ ಅದನ್ನು ನಡಿಸುವೆನು. ಬೆಳಗಾಗುವ ತನಕ ಇಲ್ಲೇ ಮಲಗಿಕೋ ಎಂದು ಹೇಳಿದನು.


ನೀನು ಕುರುಡರಿಗೆ ಕಣ್ಣುಕೊಟ್ಟು ಬಂದಿಗಳನ್ನು ಸೆರೆಯಿಂದಲೂ ಕತ್ತಲಲ್ಲಿ ಬಿದ್ದವರನ್ನು ಕಾರಾಗೃಹದಿಂದಲೂ ಹೊರಗೆ ಕರತರಬೇಕು ಎಂದು


ಯೆಹೋವನು ಹೀಗನ್ನುತ್ತಾನೆ - ನಾನು ನಿನ್ನನ್ನು ಹೇಗೆ ಕ್ಷವಿುಸಲಿ? ನಿನ್ನ ಜನರು ನನ್ನನ್ನು ವಿಸರ್ಜಿಸಿ ದೇವರಲ್ಲದವುಗಳ ಮೇಲೆ ಆಣೆಯಿಟ್ಟಿದ್ದಾರೆ; ನಾನು ಅವರಿಗೆ ಹೊಟ್ಟೆತುಂಬಾ ಆಹಾರಕೊಟ್ಟ ಮೇಲೆ ಅವರು ಹಾದರ ಮಾಡಿದರು, ಸೂಳೆಯರ ಮನೆಗಳಲ್ಲಿ ಗುಂಪುಕೂಡಿದರು.


ಯೆಹೋವನು ಹೀಗೆ ನುಡಿಯುತ್ತಾನೆ - ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವವು, ಆ ಸನ್ಮಾರ್ಗವು ಎಲ್ಲಿ ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವದು (ಎಂದು ನಾನು ಅಪ್ಪಣೆಕೊಟ್ಟಾಗ) ಅದರಲ್ಲಿ ನಾವು ನಡೆಯುವದೇ ಇಲ್ಲವೆಂದರು.


(ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ - ನಮ್ಮ ಪಿತೃಗಳು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ ಎಂದು ಅರಿಕೆ ಮಾಡುವರು.


ನಾನು ದಂಡನೆ ನಿರ್ಣಯಿಸಿದ ಆ ಜನಾಂಗದವರು ತಮ್ಮ ಕೆಟ್ಟತನದಿಂದ ತಿರುಗಿಕೊಂಡರೆ ನಾನು ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು.


ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ವಿಧಿಗಳೂ ನಿಮ್ಮ ಪಿತೃಗಳನ್ನು ಹಿಂದಟ್ಟಿ ಹಿಡಿದು ನಿತ್ಯವಾಗಿವೆಯಷ್ಟೆ; ಅವರು ತಿರುಗಿಕೊಂಡು - ಸೇನಾಧೀಶ್ವರ ಯೆಹೋವನು ನಮ್ಮ ದುರ್ಮಾರ್ಗ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ ಅಂದುಕೊಂಡರು.


ಹೊರಟುಬಂದ ಬಹು ಜನಾಂಗದವರು - ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ, ಹೋಗೋಣ! ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು, ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು. ಏಕಂದರೆ ಚೀಯೋನಿನಿಂದ ಧರ್ಮೋಪದೇಶವೂ ಯೆರೂಸಲೇವಿುನಿಂದ ಯೆಹೋವನ ವಾಕ್ಯವೂ ಹೊರಡುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು