Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 12:5 - ಕನ್ನಡ ಸತ್ಯವೇದವು J.V. (BSI)

5 [ಇಂತೆನ್ನುವ ನನಗೆ ಯೆಹೋವನು ಹೀಗೆ ಹೇಳಿದ್ದಾನೆ - ] ನೀನು ಕಾಲಾಳುಗಳ ಸಂಗಡ ಓಡಿ ಆಯಾಸಗೊಂಡಿದ್ದರೆ ಕುದುರೆಗಳೊಂದಿಗೆ ಓಡಿ ಹೇಗೆ ಮುಂದಾಗುವಿ? ನಿರಪಾಯದೇಶದಲ್ಲಿ ನೀನು ನಿರ್ಭಯವಾಗಿದ್ದರೂ ಯೊರ್ದನಿನ ದಟ್ಟಡವಿಯಲ್ಲಿ ಏನು ಮಾಡುವಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇಂತೆನ್ನುವ ಯೆಹೋವನು ನನಗೆ, “ನೀನು ಕಾಲಾಳುಗಳ ಸಂಗಡ ಓಡಿ ಆಯಾಸಗೊಂಡಿದ್ದರೆ ಕುದುರೆಗಳೊಂದಿಗೆ ಓಡಿ ಹೇಗೆ ಮುಂದಾಗುವಿ? ಅಪಾಯವಿಲ್ಲದ ದೇಶದಲ್ಲಿ ನೀನು ನಿರ್ಭಯವಾಗಿದ್ದರೂ ಯೊರ್ದನಿನ ದಟ್ಟಡವಿಯಲ್ಲಿ ಏನು ಮಾಡುವಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 (ಆಗ ಸರ್ವೇಶ್ವರ ನನಗೆ) : “ಕಾಲಾಳುಗಳ ಸಂಗಡ ಓಡಲು ಆಯಾಸಗೊಂಡೆಯಾದರೆ ಕುದುರೆಗಳೊಂದಿಗೆ ಓಡಿ ಹೇಗೆ ಹೋರಾಡುವೆ? ಪ್ರಶಾಂತ ಪ್ರದೇಶದಲ್ಲಿ ನಿರ್ಭಯನಾಗಿ ನಿಲ್ಲಲಾರೆಯಾದರೆ ಜೋರ್ಡಾನಿನ ದಟ್ಟ ಅಡವಿಯಲ್ಲಿ ಏನು ಮಾಡಬಲ್ಲೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಯೆರೆಮೀಯನೇ, ನೀನು ಕಾಲಾಳುಗಳ ಸಂಗಡ ಓಡಿ ಆಯಾಸಗೊಂಡಿರುವುದಾದರೆ, ಕುದುರೆಗಳೊಂದಿಗೆ ಓಡಿ ಹೇಗೆ ಗೆಲ್ಲುವೆ? ಸುರಕ್ಷಿತವಾದ ದೇಶದಲ್ಲಿ ನೀನು ದಣಿದುಕೊಂಡರೆ ಜೋರ್ಡನ್ ನದಿ ದಡದ ಭಯಾನಕ ಮುಳ್ಳುಕಂಟಿಯ ಪ್ರದೇಶಕ್ಕೆ ಬಂದಾಗ ಏನು ಮಾಡುವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಕಾಲಾಳುಗಳ ಸಂಗಡ ಓಡುವಾಗ ನಿನಗೆ ಆಯಾಸವಾದರೆ, ಕುದುರೆಗಳ ಸಂಗಡ ಹೇಗೆ ಹೋರಾಡುವೆ? ನೀನು ಸುರಕ್ಷಿತವಾದ ದೇಶದಲ್ಲಿ ಎಡವಿದರೆ, ಯೊರ್ದನಿನ ದಟ್ಟ ಅಡವಿಯಲ್ಲಿ ಹೇಗೆ ಸುಧಾರಿಸುವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 12:5
14 ತಿಳಿವುಗಳ ಹೋಲಿಕೆ  

ಪ್ರಿಯರೇ, ನೀವು ಪರಿಶೋಧನೆಗಾಗಿ ಪುಟಕ್ಕೆ ಹಾಕಲ್ಪಟ್ಟದ್ದಕ್ಕೆ ಆಶ್ಚರ್ಯಪಡಬೇಡಿರಿ; ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ.


ಇಕ್ಕಟ್ಟಿನ ದಿನದಲ್ಲಿ ನೀನು ಬಳಲಿಹೋದರೆ ನಿನ್ನ ಬಲವೂ ಇಕ್ಕಟ್ಟೇ.


ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೋರ್ದನಿನ ದಟ್ಟಡವಿಯಿಂದ [ಕಸ್ದೀಯರಿಗೆ] ನಿತ್ಯನೆಲೆಯಾದ ಗೋಮಾಳಕ್ಕೆ ಏರಿ ಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವದಕ್ಕೆ ನೇವಿುಸುವೆನು; ನನ್ನ ಸಮಾನನು ಯಾವನು? ನನ್ನನ್ನು ನ್ಯಾಯವಿಚಾರಣೆಗೆ ಯಾವನು ಕರೆದಾನು? ಮಂದೆಯನ್ನು ಕಾಯುವ ಯಾವನು ನನ್ನೆದುರಿಗೆ ನಿಲ್ಲಬಲ್ಲನು?


ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟಡವಿಯಿಂದ [ಎದೋಮ್ಯರಿಗೆ] ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವದಕ್ಕೆ ನೇವಿುಸುವೆನು; ನನ್ನ ಸಮಾನನು ಯಾವನು? ನನ್ನನ್ನು ನ್ಯಾಯವಿಚಾರಣೆಗೆ ಯಾವನು ಕರೆದಾನು? ಮಂದೆಯನ್ನು ಕಾಯುವ ಯಾವನು ನನ್ನೆದುರಿಗೆ ನಿಲ್ಲಬಲ್ಲನು?


ನಿನ್ನ ಜಲಪಾತಗಳಿಂದುಂಟಾಗುವ ಮಹಾಘೋಷವು ಒಂದು ಪ್ರವಾಹವು ಮತ್ತೊಂದು ಪ್ರವಾಹವನ್ನು ಕೂಗುತ್ತದೋ ಎಂಬಂತಿರುವದು. ಹಾಗೆಯೇ ನೀನು ಅಲ್ಲಕಲ್ಲೋಲವಾದ [ದುಃಖ ಪ್ರವಾಹದ] ತೆರೆಗಳನ್ನು ನನ್ನ ತಲೆಯ ಮೇಲೆ ದಾಟಿಸಿದಿಯಲ್ಲಾ.


ಮಗನೇ, ಯೆಹೋವನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ;


ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು ನೀರಿನಲ್ಲಿ ತಮ್ಮ ಕಾಲುಗಳನ್ನು ಅದ್ದುತ್ತಲೇ ಸುಗ್ಗೀಕಾಲದಲ್ಲೆಲ್ಲಾ ದಡಮೀರಿ ಹರಿಯುವ ಯೊರ್ದನ್ ಹೊಳೆಯ ನೀರು ನಿಂತು ಹೋಯಿತು.


ಮತ್ತು ಅರಸನು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶಲೆಮ್ಯ, ಇವರಿಗೆ ಲೇಖಕನಾದ ಬಾರೂಕನನ್ನೂ ಪ್ರವಾದಿಯಾದ ಯೆರೆಮೀಯನನ್ನೂ ಹಿಡಿಯಬೇಕೆಂದು ಅಪ್ಪಣೆಕೊಟ್ಟನು; ಆದರೆ ಯೆಹೋವನು ಅವರನ್ನು ಮರೆಯಲ್ಲಿಟ್ಟನು.


ಸಮಸ್ತಜನರಿಗೆ ಹೇಳಬೇಕೆಂದು ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಯೆರೆಮೀಯನು ನುಡಿದು ಮುಗಿಸಿದ ಮೇಲೆ ಯಾಜಕರೂ ಪ್ರವಾದಿಗಳೂ ಎಲ್ಲಾ ಜನರೂ ಅವನನ್ನು ಹಿಡಿದು ನಿನಗೆ ಮರಣವೇ ಆಗಬೇಕು;


ಯೊರ್ದನ್ ನದಿಯು ಪ್ರಥಮ ಮಾಸದಲ್ಲಿ ದಡತುಂಬಿ ಹರಿಯುತ್ತಿರುವಾಗ ಅದನ್ನು ದಾಟಿ ನದಿಯ ತಗ್ಗಿನ ಪೂರ್ವ ಪಶ್ಚಿಮ ಪ್ರದೇಶಗಳವರೆಲ್ಲರನ್ನೂ ಓಡಿಸಿಬಿಟ್ಟವರು ಇವರೇ.


ಹೀಗಿರಲು ಸೇನಾಧೀಶ್ವರನಾದ ಯೆಹೋವನು ನನಗೆ - ನಮ್ಮ ಕೈಯಿಂದ ನೀನು ಸಾಯಬಾರದಾಗಿದ್ದರೆ ಯೆಹೋವನ ಹೆಸರೆತ್ತಿ ಪ್ರವಾದಿಸಬೇಡ ಎಂದು ನಿನ್ನ ಪ್ರಾಣಕ್ಕೆ ಹೊಂಚುಹಾಕುತ್ತಿರುವ ಅನಾತೋತಿನವರ ವಿಷಯದಲ್ಲಿ ನನ್ನ ತೀರ್ಮಾನವು ಇದೇ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು