ಯೆರೆಮೀಯ 12:6 - ಕನ್ನಡ ಸತ್ಯವೇದವು J.V. (BSI)6 ನಿನ್ನ ಸಹೋದರರೂ ನಿನ್ನ ತಂದೆಯ ಮನೆಯವರೂ ನಿನಗೆ ದ್ರೋಹ ಮಾಡಿರುತ್ತಾರೆ. ಇವರೇ ನಿನ್ನ ಬೆನ್ನಟ್ಟುತ್ತಾ ಕೂಗಿರುತ್ತಾರೆ; ಒಳ್ಳೇ ಮಾತಾಡಿದರೂ ಇವರನ್ನು ನಂಬಬೇಡ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಿನ್ನ ಸಹೋದರರೂ, ನಿನ್ನ ತಂದೆಯ ಮನೆಯವರೂ ನಿನಗೆ ದ್ರೋಹಮಾಡಿದ್ದಾರೆ. ಇವರೇ ನಿನ್ನ ಬೆನ್ನಟ್ಟುತ್ತಾ ಕೂಗುತ್ತಾರೆ; ಒಳ್ಳೆಯ ಮಾತನಾಡಿದರೂ ಇವರನ್ನು ನಂಬಬೇಡ” ಎಂದು ಹೇಳಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಿನ್ನ ಸೋದರರೇ, ನಿನ್ನ ತೌರುಮನೆಯವರೇ ನಿನಗೆ ದ್ರೋಹವೆಸಗಿದ್ದಾರೆ. ಇವರೇ ನಿನ್ನ ಬೆನ್ನಟ್ಟಿಬಂದು ಧಿಕ್ಕಾರ ಕೂಗಿದ್ದಾರೆ. ಇಂತಿರಲು ಇವರು ಸವಿನುಡಿದರೂ ನಂಬಲೆಬೇಡ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಈ ಜನರು ನಿನ್ನ ಸ್ವಂತ ಸಹೋದರರಾಗಿದ್ದಾರೆ. ನಿನ್ನ ಸ್ವಂತ ಕುಟುಂಬದ ಜನರೇ ನಿನ್ನ ವಿರುದ್ಧ ಕೂಗಾಡುತ್ತಾ ಸಂಚು ಮಾಡುತ್ತಿದ್ದಾರೆ. ಅವರು ನಿನ್ನೊಡನೆ ಸ್ನೇಹಿತರಂತೆ ಮಾತನಾಡಿದರೂ ಅವರನ್ನು ನಂಬಬೇಡ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಏಕೆಂದರೆ, ನಿನ್ನ ಸಹೋದರರೂ, ನಿನ್ನ ತಂದೆಯ ಮನೆತನದವರೂ ನಿನಗೆ ವಂಚನೆ ಮಾಡಿದ್ದಾರೆ. ಹೌದು, ಇವರೇ ನಿನಗೆ ವಿರೋಧವಾಗಿ ಬಂದು ಜೋರಾಗಿ ಕೂಗಿದ್ದಾರೆ. ಅವರು ನಿನಗೆ ಒಳ್ಳೆಯ ಮಾತುಗಳನ್ನು ಹೇಳಿದರೂ, ಅವರನ್ನು ನಂಬಬೇಡ. ಅಧ್ಯಾಯವನ್ನು ನೋಡಿ |
ಯೆಹೋವನು ನನಗೆ ಹೀಗೆ ಹೇಳಿದ್ದಾನೆ - ಸಿಂಹವು, ಪ್ರಾಯದ ಸಿಂಹವು, ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ ಬಹುಮಂದಿ ಕುರುಬರು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ ಅದು ಅವರ ಕೂಗಾಟಕ್ಕೆ ಹೆದರದೆ ಅವರ ಗದ್ದಲದಿಂದ ಹೇಗೆ ಧೈರ್ಯಗುಂದುವದಿಲ್ಲವೋ ಹಾಗೆಯೇ ಸೇನಾಧೀಶ್ವರನಾದ ಯೆಹೋವನು ಯುದ್ಧಮಾಡಲು ಚೀಯೋನ್ ಪರ್ವತದ ಶಿಖರದ ಮೇಲೆ ಇಳಿಯುವನು.