Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 13:1 - ಕನ್ನಡ ಸತ್ಯವೇದವು J.V. (BSI)

1 ಯೆಹೋವನು ನನಗೆ - ನೀನು ಹೋಗಿ ನಾರಿನ ನಡುಕಟ್ಟನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೋ, ನೀರಿನಲ್ಲಿ ನೆನಸಬೇಡ ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ನನಗೆ, “ನೀನು ಹೋಗಿ ನಾರಿನ ನಡುಕಟ್ಟನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೋ, ನೀರಿನಲ್ಲಿ ನೆನಸಿಡಬೇಡ” ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಸ್ವಾಮಿ ನನಗೆ : “ನೀನು ಹೋಗಿ ನಾರಿನ ನಡುಕಟ್ಟು ಒಂದನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೊ. ಅದನ್ನು ನೀರಿನಲ್ಲಿ ನೆನೆಸಬೇಡ,” ಎಂದು ಅಪ್ಪಣೆಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ನನಗೆ ಹೀಗೆ ಹೇಳಿದನು, “ಯೆರೆಮೀಯನೇ, ಹೋಗಿ ಒಂದು ನಾರಿನ ನಡುಪಟ್ಟಿಯನ್ನು ಕೊಂಡುಕೊ. ಅದನ್ನು ನಿನ್ನ ಸೊಂಟಕ್ಕೆ ಸುತ್ತಿಕೊ. ಆ ನಡುಪಟ್ಟಿ ನೀರಿನಲ್ಲಿ ನೆನೆಯದಂತೆ ನೋಡಿಕೊ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ನನಗೆ, “ನೀನು ಹೋಗಿ, ನಾರಿನ ನಡುಕಟ್ಟು ಒಂದನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೋ. ಅದನ್ನು ನೀರಿನಲ್ಲಿ ನೆನೆಸಬೇಡ,” ಎಂದು ಅಪ್ಪಣೆಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 13:1
9 ತಿಳಿವುಗಳ ಹೋಲಿಕೆ  

ಪುರಾತನಕಾಲದಲ್ಲಿ ನಮ್ಮ ಪಿತೃಗಳ ಸಂಗಡ ಪ್ರವಾದಿಗಳ ಬಾಯಿಂದ ಭಾಗಭಾಗವಾಗಿಯೂ ವಿಧವಿಧವಾಗಿಯೂ ಮಾತಾಡಿದ ದೇವರು


ಸಮಸ್ತ ಇಸ್ರಾಯೇಲ್ ವಂಶವೂ ಸಕಲ ಯೆಹೂದ ವಂಶವೂ ನನ್ನ ಪ್ರಜೆಯಾಗಿದ್ದು ನನಗೆ ಹೆಸರುವಾಸಿಯೂ ಸ್ತೋತ್ರವೂ ಮಹಿಮೆಯೂ ಆಗಿರಲೆಂದು ನಡುಕಟ್ಟು ಸೊಂಟಕ್ಕೆ ಬಿಗಿದಿರುವಂತೆ ಇವರನ್ನು ಬಿಗಿದುಕೊಂಡಿದ್ದೇನೆ; ಆದರೂ ಇವರು ಕೇಳಲೊಲ್ಲದೆ ಹೋದರು ಎಂದು ಯೆಹೋವನು ಅನ್ನುತ್ತಾನೆ.


ಇದೇ ಯೆಹೋವನ ನುಡಿ - ನೀನು ಕಣ್ಣಿನೊಗಗಳನ್ನು ಮಾಡಿ ನಿನ್ನ ಹೆಗಲಿಗೆ ಹಾಕಿಕೊಂಡು


ಯೆಹೋವನು ನನಗೆ ಹೀಗೆ ಹೇಳಿದನು - ಹೊರಡು, ಕುಂಬಾರನು ಮಾಡಿದ ಮಣ್ಣಿನ ಕೂಜವನ್ನು ಕೊಂಡುಕೊಂಡು ಜನರ ಹಿರಿಯರಲ್ಲಿಯೂ ಯಾಜಕರ ಹಿರಿಯರಲ್ಲಿಯೂ ಕೆಲವರನ್ನು ಕರೆದುಕೊಂಡು


ಪೌಲನ ನಡುಕಟ್ಟನ್ನು ತೆಗೆದು ತನ್ನ ಕೈಕಾಲುಗಳನ್ನು ಕಟ್ಟಿಕೊಂಡು - ಈ ನಡುಕಟ್ಟು ಯಾವನದೋ ಆ ಮನುಷ್ಯನನ್ನು ಯೆಹೂದ್ಯರು ಇದೇ ರೀತಿಯಾಗಿ ಯೆರೂಸಲೇವಿುನಲ್ಲಿ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸಿಕೊಡುವರು, ಹೀಗೆ ಪವಿತ್ರಾತ್ಮನು ಹೇಳುತ್ತಾನೆಂಬದಾಗಿ ಹೇಳಿದನು.


ಆಗ ಯೆಹೋವನು ಹೀಗೆ ಹೇಳಿದನು - ನನ್ನ ಸೇವಕನಾದ ಯೆಶಾಯನು ಐಗುಪ್ತದ ಮತ್ತು ಕೂಷಿನ ನಾಶನಕ್ಕೆ ಸೋಜಿಗದ ಗುರುತಾಗಿ ಮೂರು ವರುಷ ಬಟ್ಟೆ ಕೆರಗಳಿಲ್ಲದೆ ನಡೆದ ಪ್ರಕಾರ


ನೀನೆದ್ದು ಕುಂಬಾರನ ಮನೆಗೆ ಇಳಿದುಹೋಗು; ಅಲ್ಲೇ ನನ್ನ ನುಡಿಯನ್ನು ನಿನಗೆ ಕೇಳಮಾಡುವೆನು ಎಂಬ ಮಾತನ್ನು ದಯಪಾಲಿಸಿದನು.


ನೀನು ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತೆಗೆದುಕೊಂಡು ಹೋಗಿ ತಹಪನೇಸಿನಲ್ಲಿರುವ ಫರೋಹನ ಮನೆಯ ಬಾಗಿಲ ಮುಂದೆ ಯೆಹೂದ್ಯರ ಕಣ್ಣೆದುರಿಗೆ ನೆಲಗಟ್ಟಿನ ಕೆಳಗೆ ಇಟ್ಟು ಗಾರೆಯಿಂದ ಮುಚ್ಚಿಬಿಟ್ಟು ಅವರಿಗೆ ಹೀಗೆ ಹೇಳು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು