ಯೆರೆಮೀಯ 13:10 - ಕನ್ನಡ ಸತ್ಯವೇದವು J.V. (BSI)10 ನನ್ನ ಮಾತುಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಹಟದಂತೆ ನಡೆದು ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸಿ ಪೂಜಿಸುತ್ತಿರುವ ಈ ದುಷ್ಟ ಜನರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಾಟಿಯಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನನ್ನ ಮಾತುಗಳನ್ನು ಕೇಳದೆ ತಮ್ಮ ಹೃದಯದ ಹಟದಂತೆ ನಡೆದು, ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ ಪೂಜಿಸುತ್ತಿರುವ ಈ ದುಷ್ಟ ಜನರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಮಾನವಾಗಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಈ ದುಷ್ಟಜನರು ನನ್ನ ಮಾತುಗಳನ್ನು ಕೇಳಲೊಲ್ಲರು. ತಮ್ಮ ಹೃದಯದ ಒರಟುತನದಂತೆ ನಡೆದುಬರುತ್ತಿದ್ದಾರೆ. ಅನ್ಯದೇವತೆಗಳನ್ನು ಹಿಂಬಾಲಿಸಿ, ಪೂಜಿಸುತ್ತಿದ್ದಾರೆ. ಇವರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಾಟಿಯಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯೆಹೂದದಲ್ಲಿ ದುಷ್ಟರೂ ಗರ್ವಿಷ್ಠರೂ ಆಗಿರುವ ಜನರನ್ನು ಹಾಳುಮಾಡುವೆನು. ಅವರು ನನ್ನ ಸಂದೇಶವನ್ನು ಕೇಳುವುದಿಲ್ಲ. ಅವರು ಹಟಮಾರಿಗಳೂ ತಮ್ಮ ಮನಸ್ಸಿಗೆ ಬಂದಂತೆ ಮಾಡುವವರೂ ಆಗಿದ್ದಾರೆ. ಅವರು ಬೇರೆ ದೇವರುಗಳನ್ನು ಅನುಸರಿಸುತ್ತಾರೆ ಮತ್ತು ಪೂಜಿಸುತ್ತಾರೆ. ಯೆಹೂದದ ಜನರು ಈ ನಾರಿನ ನಡುಪಟ್ಟಿಯಂತೆ ಆಗುವರು. ಅವರು ಹಾಳಾಗಿ ನಿಷ್ಪ್ರಯೋಜಕರಾಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನನ್ನ ವಾಕ್ಯಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಕಲ್ಪನೆಯಂತೆ ನಡೆದುಕೊಂಡು, ಬೇರೆ ದೇವರುಗಳನ್ನು ಸೇವಿಸುವುದಕ್ಕೂ, ಅವುಗಳನ್ನು ಆರಾಧಿಸುವುದಕ್ಕೂ ಹಿಂಬಾಲಿಸುವ ಈ ದುಷ್ಟಜನರು ಯಾವ ಕೆಲಸಕ್ಕಾದರೂ ಬಾರದ ಈ ನಡುಕಟ್ಟಿನ ಹಾಗಿರುವರು. ಅಧ್ಯಾಯವನ್ನು ನೋಡಿ |
ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ - ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ ನಿಮ್ಮ ಪಿತೃಗಳಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.