Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 13:15 - ಕನ್ನಡ ಸತ್ಯವೇದವು J.V. (BSI)

15 ಕಿವಿಗೊಟ್ಟು ಕೇಳಿರಿ, ಹೆಮ್ಮೆ ಪಡಬೇಡಿರಿ; ಯೆಹೋವನೇ ಮಾತಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕಿವಿಗೊಟ್ಟು ಕೇಳಿರಿ, ಹೆಮ್ಮೆಪಡಬೇಡಿರಿ; ಯೆಹೋವನೇ ಮಾತನಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಜನರೇ, ಕಿವಿಗೊಡಿ, ಹೆಮ್ಮೆಪಡಬೇಡಿ, ಸರ್ವೇಶ್ವರನೇ ನಿಮಗೆ ಕೊಡುವ ಆದೇಶ ಇದು :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಕೇಳಿರಿ, ಗಮನ ಕೊಡಿರಿ; ದೇವರು ನಿಮಗೆ ಹೇಳಿದ್ದಾನೆ. ಗರ್ವಪಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಕೇಳಿರಿ, ಕಿವಿಗೊಡಿರಿ, ಗರ್ವಪಡಬೇಡಿರಿ; ಏಕೆಂದರೆ ಯೆಹೋವ ದೇವರು ಮಾತನಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 13:15
11 ತಿಳಿವುಗಳ ಹೋಲಿಕೆ  

ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.


ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆಗಲಾತನು ನಿಮ್ಮನ್ನು ಮೇಲಕ್ಕೆ ತರುವನು.


ಯೆಹೋವನು ನನ್ನನ್ನು ಮಂದೆಕಾಯುವದರಿಂದ ತಪ್ಪಿಸಿ - ನೀನು ಹೋಗಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಪ್ರವಾದನೆಮಾಡು ಎಂದು ನನಗೆ ಅಪ್ಪಣೆಕೊಟ್ಟನು.


ವೃದ್ಧರೇ, ಕೇಳಿರಿ! ದೇಶನಿವಾಸಿಗಳೇ, ನೀವೆಲ್ಲರೂ ಕಿವಿಗೊಡಿರಿ! ಇಂಥ ಬಾಧೆಯು ನಿಮ್ಮ ಕಾಲದಲ್ಲಿಯಾಗಲಿ ನಿಮ್ಮ ತಂದೆಗಳ ಕಾಲದಲ್ಲಿಯಾಗಲಿ ಸಂಭವಿಸಿತ್ತೋ?


ಆದರೆ ನೀವು ನನ್ನನ್ನು ಕೊಂದುಹಾಕಿದ ಪಕ್ಷಕ್ಕೆ ನೀವೂ ಈ ಪಟ್ಟಣವೂ ಇದರ ನಿವಾಸಿಗಳೂ ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ಪಾತ್ರರಾಗುವಿರಿ ಎಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ಮಾತುಗಳನ್ನೆಲ್ಲಾ ನಿಮ್ಮ ಕಿವಿಗೆ ಮುಟ್ಟಿಸುವಂತೆ ಯೆಹೋವನು ನನ್ನನ್ನು ಕಳುಹಿಸಿರುವದು ಖಂಡಿತ.


ನಿಮ್ಮಲ್ಲಿ ಯಾರು ಈ ಮಾತಿಗೆ ಕಿವಿಗೊಡುವರು? ಯಾರು ಇನ್ನು ಮುಂದೆ ಆಲಿಸಿ ಕೇಳುವರು?


ಅಹಂಕಾರಿಗಳೆಲ್ಲಾ ಯೆಹೋವನಿಗೆ ಅಸಹ್ಯ; ಅವರಿಗೆ ದಂಡನೆ ಖಂಡಿತ.


ಇದು ಯೆಹೋವನಾದ ನನ್ನ ನುಡಿ - ಇದೇ ಪ್ರಕಾರವಾಗಿ ನಾನು ಯೆಹೂದದ ದೊಡ್ಡಸ್ತಿಕೆಯನ್ನೂ ಯೆರೂಸಲೇವಿುನ ಬಲು ದೊಡ್ಡಸ್ತಿಕೆಯನ್ನೂ ಕೆಡಿಸಿಬಿಡುವೆನು.


ಆಕಾಶಮಂಡಲವೇ, ಆಲಿಸು! ಭೂಮಂಡಲವೇ, ಕೇಳು! ಯೆಹೋವನು ಮಾತಾಡುತ್ತಿದ್ದಾನೆ; ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹಮಾಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು