Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 13:16 - ಕನ್ನಡ ಸತ್ಯವೇದವು J.V. (BSI)

16 ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಿರಿ; ಇಲ್ಲದಿದ್ದರೆ ಸ್ವಲ್ಪಕಾಲದೊಳಗೆ ಆತನು ಕತ್ತಲನ್ನು ಉಂಟುಮಾಡುವನು, ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವವು; ನೀವು ಬೆಳಕನ್ನು ನಿರೀಕ್ಷಿಸುತ್ತಿರುವಾಗ ಆತನು ಅದನ್ನು ಮರಣಾಂಧಕಾರದ ಕಾರ್ಗತ್ತಲನ್ನಾಗಿ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಿರಿ; ಇಲ್ಲದಿದ್ದರೆ ಸ್ವಲ್ಪ ಕಾಲದೊಳಗೆ ಆತನು ಕತ್ತಲನ್ನು ಉಂಟುಮಾಡುವನು. ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವವು; ನೀವು ಬೆಳಕನ್ನು ನಿರೀಕ್ಷಿಸುತ್ತಿರುವಾಗ ಆತನು ಅದನ್ನು ಮರಣಾಂಧಕಾರದ ಕಾರ್ಗತ್ತಲನ್ನಾಗಿ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಿಮ್ಮ ದೇವರಾದ ಸರ್ವೇಶ್ವರನಿಗೆ ಸಲ್ಲಿಸಿ ಗೌರವವನ್ನು ಇಲ್ಲವಾದರೆ ಆತ ಬರಮಾಡುವನು ಸ್ವಲ್ಪಕಾಲದಲ್ಲೇ ಕತ್ತಲನ್ನು. ನಿಮ್ಮ ಕಾಲುಗಳು ಮುಗ್ಗರಿಸುವುವು ಮಬ್ಬಿನ ಗುಡ್ಡಗಳ ನಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಿಮ್ಮ ದೇವರಾದ ಯೆಹೋವನು ಅಂಧಕಾರವನ್ನು ಉಂಟುಮಾಡುವ ಮೊದಲೇ ಆತನನ್ನು ಗೌರವಿಸಿರಿ, ಕಗ್ಗತ್ತಲಿನ ಬೆಟ್ಟಗಳ ಮೇಲೆ ನೀವು ಬೀಳುವ ಮೊದಲೇ ಆತನನ್ನು ಸ್ತುತಿಸಿರಿ. ಯೆಹೂದದ ಜನರಾದ ನೀವು ಬೆಳಕನ್ನು ನಿರೀಕ್ಷಿಸುತ್ತಿದ್ದೀರಿ. ಆದರೆ ಯೆಹೋವನು ಬೆಳಕನ್ನು ಗಾಢಾಂಧಕಾರವನ್ನಾಗಿ ಪರಿವರ್ತಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವರು ಕತ್ತಲೆಯನ್ನು ತರುವುದಕ್ಕಿಂತ ಮೊದಲು ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವುದಕ್ಕಿಂತ ಮುಂಚೆ ನಿಮ್ಮ ದೇವರಾದ ಯೆಹೋವ ದೇವರನ್ನು ಮಹಿಮೆಪಡಿಸಿರಿ. ನೀವು ಬೆಳಕನ್ನು ನಿರೀಕ್ಷಿಸಿದ್ದೀರಿ. ಆದರೆ ಅವರು ಗಾಡಾಂಧಕಾರದ ಗುಡ್ಡಗಳನ್ನು ತಂದಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 13:16
36 ತಿಳಿವುಗಳ ಹೋಲಿಕೆ  

ಆದಕಾರಣ [ಯೆಹೋವನ] ನ್ಯಾಯನಿರ್ಣಯವು ನಮಗೆ ದೂರವಾಗಿದೆ. [ಆತನ] ರಕ್ಷಣಧರ್ಮದ ಕಾರ್ಯವು ನಮಗೆ ಸಂಧಿಸುವದಿಲ್ಲ; ಬೆಳಕನ್ನು ಎದುರುನೋಡುತ್ತಿರುವ ನಮ್ಮನ್ನು ಕತ್ತಲೆಯೇ ಆವರಿಸಿದೆ, ಜ್ಯೋತಿಯನ್ನು ನಿರೀಕ್ಷಿಸುತ್ತಿರುವ ನಾವು ಅಂಧಕಾರದಲ್ಲೇ ನಡೆಯುತ್ತೇವೆ.


ಮೇಲಕ್ಕೆ ಕಣ್ಣೆತ್ತಿದರೂ ಭೂವಿುಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವವು; ಕಾರ್ಗತ್ತಲೆಗೆ ತಳ್ಳಲ್ಪಡುವರು.


ಇಗೋ, ಕತ್ತಲು ಭೂವಿುಯನ್ನು ಆವರಿಸಿದೆ, ಕಾರ್ಗತ್ತಲು ಜನಾಂಗಗಳನ್ನು ಮುಚ್ಚಿದೆ; ನಿನ್ನ ಮೇಲಾದರೋ ಯೆಹೋವನು ಉದಯಿಸುವನು, ಆತನ ತೇಜಸ್ಸು ನಿನ್ನಲ್ಲಿ ಕಾಣಿಸುವದು.


ಸಮುದ್ರವು ಭೋರ್ಗರೆಯುವಂತೆ ಆ ದಿನದಲ್ಲಿ ಇವರು ಯೆಹೂದ್ಯರ ಮೇಲೆ ಗುರುಗುಟ್ಟುವರು; ದೇಶದಲ್ಲಿಯೋ, ಆಹಾ, ಅಂಧಕಾರವೂ ವ್ಯಾಕುಲವೂ ತುಂಬಿರುವವು, ಮೋಡ ಕವಿದು ಬೆಳಕು ಕತ್ತಲಾಗುವದು.


ದುಷ್ಟರ ಮಾರ್ಗವೋ ಕತ್ತಲಿನಂತಿದೆ; ತಾವು ಯಾವದಕ್ಕೆ ಎಡವಿಬಿದ್ದೆವೆಂದು ಅವರಿಗೆ ಗೊತ್ತಾಗದು.


ಆಗ ಯೆಹೋಶುವನು ಆಕಾನನಿಗೆ - ನನ್ನ ಮಗನೇ, ನೀನು ಇಸ್ರಾಯೇಲ್ ದೇವರಾದ ಯೆಹೋವನನ್ನು ಘನಪಡಿಸಿ ಆತನಿಗೆ ಸ್ತೋತ್ರ ಸಲ್ಲಿಸು. ನೀನು ಮಾಡಿದ್ದನ್ನು ನನಗೆ ಹೇಳು, ಯಾವದನ್ನೂ ಮುಚ್ಚಬೇಡ ಅಂದನು.


ಆದಕಾರಣ ಅವರ ಮಾರ್ಗವು ಕತ್ತಲಲ್ಲಿ ಜಾರಿಬೀಳುವ ಇಳುಮೇಡುಗಳಿಗೆ ಸಮಾನವಾಗುವದು; ಅವರು ಅಟ್ಟಲ್ಪಟ್ಟು ಅಂಧಕಾರದಲ್ಲಿ ಬಿದ್ದುಹೋಗುವರು; ನಾನು ಅವರ ಮೇಲೆ ಕೇಡನ್ನು, ದಂಡನೆಯ ವರುಷದ ಕೇಡನ್ನು ಬರಮಾಡುವೆನು. ಇದು ಯೆಹೋವನ ನುಡಿ.


ನಾನು [ದಿವ್ಯಜ್ಞಾನದಿಂದ] ನೋಡಿದೆನು, ಹಾ, ಭೂಲೋಕವು ಹಾಳುಪಾಳಾಗಿತ್ತು; ಆಕಾಶವನ್ನು ನೋಡಿದೆನು, ಅದರಲ್ಲಿ ಬೆಳಕೇ ಇರಲಿಲ್ಲ.


ನೀನು ನಮ್ಮನ್ನು ಪರಾಜಯಪಡಿಸಿ ನಮ್ಮ ದೇಶವನ್ನು ನರಿಗಳಿರುವ ಕಾಡನ್ನಾಗಿ ಮಾಡಿದ್ದೇಕೆ? ಕಾರ್ಗತ್ತಲು ನಮ್ಮನ್ನು ಕವಿಯುವಂತೆ ಮಾಡಿದ್ದೇಕೆ?


ನೀವು ನಿಮ್ಮ ದೇಶನಿವಾಸಿಗಳ ವಿನಾಶಕ್ಕೆ ಕಾರಣವಾಗಿರುವ ಗಡ್ಡೆ ಮತ್ತು ಇಲಿ ಇವುಗಳ ಸ್ವರೂಪಗಳನ್ನು ಚಿನ್ನದಿಂದ ಮಾಡಿಸಿ ಇಸ್ರಾಯೇಲ್‍ದೇವರಿಗೆ ಬಹುಮಾನವಾಗಿ ಕೊಟ್ಟರೆ ಆತನ ಶಿಕ್ಷಾಹಸ್ತವು ನಿಮ್ಮನ್ನೂ ನಿಮ್ಮ ದೇವತೆಗಳನ್ನೂ ಪ್ರಾಂತಗಳನ್ನೂ ಬಿಟ್ಟುಹೋದೀತು.


ತರುವಾಯ ಯೆಹೋವನು ಮೋಶೆಗೆ - ಆಕಾಶಕ್ಕೆ ನಿನ್ನ ಕೈ ಚಾಚು; ಆಗ ಐಗುಪ್ತದೇಶದಲ್ಲೆಲ್ಲಾ ಕತ್ತಲುಂಟಾಗುವದು; ಆ ಕತ್ತಲಿನಿಂದ ಜನರು ತಡವರಿಸುತ್ತಾ ನಡೆಯುವರೆಂದು ಹೇಳಿದನು.


ಅದು ಎಡವುವ ಕಲ್ಲು ಮುಗ್ಗರಿಸುವ ಬಂಡೆ ಎಂತಲೂ ಬರೆದಿರುವ ಮಾತು ಸರಿಬೀಳುತ್ತದೆ. ಅವರು ದೇವರ ವಾಕ್ಯವನ್ನು ನಂಬಲೊಲ್ಲದೆ ಇರುವದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ; ಅದಕ್ಕಾಗಿಯೇ ಅವರು ನೇಮಕವಾದರು.


ಯೇಸು ಅವರಿಗೆ - ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮಲ್ಲಿ ಇರುತ್ತದೆ; ಕತ್ತಲೆಯು ನಿಮ್ಮನ್ನು ಮುಸುಕಿಕೊಳ್ಳದಂತೆ ಬೆಳಕು ನಿಮಗೆ ಇರುವಾಗಲೇ ಸಂಚಾರಮಾಡಿರಿ. ಕತ್ತಲೆಯಲ್ಲಿ ಸಂಚಾರಮಾಡುವವನಿಗೆ ತಾನು ಎಲ್ಲಿ ಹೋಗುತ್ತೇನೆಂದು ತಿಳಿಯದು.


ನಮಗೆ ಬರತಕ್ಕ ಸಹಾಯವನ್ನು ವ್ಯರ್ಥವಾಗಿ ಎದುರುನೋಡಿ ನೋಡಿ ಕಣ್ಣು ಮೊಬ್ಬಾಯಿತು. ನಮ್ಮನ್ನು ಉದ್ಧರಿಸಲಾರದ ಜನಾಂಗದ ಆಗಮನವನ್ನು ನಮ್ಮ ಕೋವರದಲ್ಲಿ ಕಾದುಕೊಂಡಿದ್ದೇವಲ್ಲಾ.


ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿದ್ದೀಯೋ? ಚೀಯೋನಿನ ಮೇಲೆ ಮನಃಪೂರ್ವಕವಾಗಿ ಅಸಹ್ಯಪಟ್ಟಿದ್ದೀಯೋ? ನಮಗೆ ಗುಣವಾಗದಂತೆ ಏಕೆ ಪೆಟ್ಟುಹೊಡೆದಿ? ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮಕಾಲವನ್ನು ಎದುರುನೋಡಿದೆವು, ಹಾ, ಅಂಜಿಕೆಯೇ!


ನಾವು ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮಕಾಲವನ್ನು ಎದುರುನೋಡಿದೆವು, ಹಾ, ಅಂಜಿಕೆಯೇ!


ಆದರೆ ಅಂಧಕಾರದ ದಿನಗಳು ಬಹಳವೆಂದು ನೆನಪಿಗೆ ತರಲಿ. ಮುಂದಾಗುವದೆಲ್ಲಾ ವ್ಯರ್ಥವೇ.


ಕತ್ತಲೆಯೂ ಘೋರಾಂಧಕಾರವೂ ಅದನ್ನು ವಶಮಾಡಿಕೊಳ್ಳಲಿ; ಮೋಡವು ಅದನ್ನು ಕವಿಯಲಿ, ಹಗಲನ್ನು ಮುಚ್ಚಿಕೊಳ್ಳುವ ಮೊಬ್ಬು ಅದನ್ನು ಹೆದರಿಸಲಿ;


ಕತ್ತಲಲ್ಲಿಯೂ ಘೋರಾಂಧಕಾರದಲ್ಲಿಯೂ ಬೇಡಿಗಳಿಂದ ಬಂಧಿಸಲ್ಪಟ್ಟು ನೋವಿನಿಂದ ಬಿದ್ದುಕೊಂಡಿದ್ದರು.


ಆತನು ಅವರ ಬಂಧನಗಳನ್ನು ತೆಗೆದುಹಾಕಿ ಕತ್ತಲೆಯಿಂದಲೂ ಘೋರಾಂಧಕಾರದಿಂದಲೂ ಅವರನ್ನು ಹೊರತಂದನು.


ನಮ್ಮನ್ನು ಐಗುಪ್ತದೇಶದೊಳಗಿಂದ ಬರಮಾಡಿ ಕಾಡಾಗಿಯೂ ಹಳ್ಳಕೊಳ್ಳವಾಗಿಯೂ ನಿರ್ಜಲವಾಗಿಯೂ ಘೋರಾಂಧಕಾರವಾಗಿಯೂ ಯಾರೂ ಹಾದುಹೋಗದೆಯೂ ಯಾರೂ ವಾಸಿಸದೆಯೂ ಇರುವ ಅರಣ್ಯದಲ್ಲಿ ನಡಿಸಿದ ಯೆಹೋವನು ಎಲ್ಲಿ ಎಂದು ಅವರು ಅಂದುಕೊಳ್ಳಲಿಲ್ಲವಲ್ಲ.


ಆದಕಾರಣ ಇಗೋ, ನಾನು ಈ ಜನರ ಮುಂದೆ ಆಟಂಕಗಳನ್ನು ಒಡ್ಡುವೆನು; ತಂದೆಗಳೂ ಮಕ್ಕಳೂ ಅವುಗಳನ್ನು ಎಡವುವರು, ನೆರೆಹೊರೆಯವರೂ ನಾಶವಾಗುವರು. ಇದೇ ಯೆಹೋವನಾದ ನನ್ನ ನುಡಿ.


ನನ್ನ ಜನರು ತಪ್ಪಿಸಿಕೊಂಡ ಕುರಿಗಳು; ಪಾಲಕರು ಅವರನ್ನು ದಾರಿತಪ್ಪಿಸಿ ಪರ್ವತಗಳಲ್ಲಿ ಅಲೆದಾಡಿಸಿದ್ದಾರೆ; ನನ್ನ ಜನರು ತಮ್ಮ ಹಕ್ಕೆಯನ್ನು ಮರೆತು ಬೆಟ್ಟಗುಡ್ಡಗಳಲ್ಲಿ ತಿರುಗಾಡುತ್ತಲಿದ್ದಾರೆ.


ಅವರ ಹೃದಯವು ನೀರಾಗಿ ಬಹುಜನ ಎಡವಿಬೀಳುವಂತೆ ಸಂಹರಿಸುವ ಖಡ್ಗವನ್ನು ಅವರ ಪುರದ್ವಾರಗಳಿಗೆಲ್ಲಾ ತಂದಿದ್ದೇನೆ. ಆಹಾ, ವಿುಂಚಿನಂತೆ ವಿುಂಚುತ್ತದೆ, ವಧೆಗಾಗಿ ಉಜ್ಜಿದೆ!


ಮಂದೆಯ ಕುರುಬನು ಸುತ್ತುಮುತ್ತಲು ಚದರಿಹೋದ ತನ್ನ ಕುರಿಗಳನ್ನು ಹುಡುಕುವ ಹಾಗೆ ನಾನು ನನ್ನ ಕುರಿಗಳನ್ನು ಹುಡುಕುವೆನು; ಕಾರ್ಮುಗಿಲಿನ ದುರ್ದಿನದಲ್ಲಿ ಚೆಲ್ಲಾಪಿಲ್ಲಿಯಾದ ಎಲ್ಲಾ ಸ್ಥಳಗಳಿಂದ ಅವುಗಳನ್ನು ಬಿಡಿಸಿ


ಮ್ಲೇಚ್ಫರ ಧಿಕ್ಕಾರವನ್ನು ಇನ್ನು ನಿನ್ನ ಕಿವಿಗೆ ಬೀಳಿಸೆನು; ನೀನು ಜನಾಂಗಗಳಿಂದ ಇನ್ನು ಅವಮಾನವನ್ನು ಅನುಭವಿಸದಿರುವಿ; ನಿನ್ನ ಪ್ರಜೆಯು ಮುಗ್ಗರಿಸುವದಕ್ಕೆ ಇನ್ನು ನೀನು ಕಾರಣನಾಗುವದಿಲ್ಲ; ಇದು ಕರ್ತನಾದ ಯೆಹೋವನ ನುಡಿ.


ಇಗೋ, ಪರ್ವತಗಳನ್ನು ರೂಪಿಸಿ ವಾಯುವನ್ನು ಸೃಷ್ಟಿಸಿ ತನ್ನ ಸಂಕಲ್ಪವನ್ನು ಮನುಷ್ಯರಿಗೆ ವ್ಯಕ್ತಗೊಳಿಸಿ ಉದಯವನ್ನು ಅಂಧಕಾರವನ್ನಾಗಿ ಮಾಡಿ ಭೂವಿುಯ ಉನ್ನತಪ್ರದೇಶಗಳಲ್ಲಿ ನಡೆಯುವಾತನಿಗೆ ಸೇನಾಧೀಶ್ವರದೇವರಾದ ಯೆಹೋವನೆಂಬದೇ ನಾಮಧೇಯ.


ಯೆಹೋವನ ದಿನವನ್ನು ನಿರೀಕ್ಷಿಸಿಕೊಂಡಿರುವವರೇ, ನಿಮ್ಮ ಗತಿಯನ್ನು ಏನು ಹೇಳಲಿ! ಯೆಹೋವನ ದಿನವು ನಿಮಗೇಕೆ? ಅದು ಬೆಳಕಲ್ಲ, ಕತ್ತಲೆಯೇ.


ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ; ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ಅಡ್ಡಬೀಳಿರಿ.


ಕುರುಡರಂತೆ ಗೋಡೆಯನ್ನು ತಡವರಿಸುತ್ತೇವೆ, ಹೌದು, ಕಣ್ಣಿಲ್ಲದವರ ಹಾಗೆ ತಡವಾಡುತ್ತೇವೆ, ಮಧ್ಯಾಹ್ನದಲ್ಲಿ ಸಂಜೆಯಂತೆ ಎಡವುತ್ತೇವೆ, ಪುಷ್ಟರ ನಡುವೆ ಸತ್ತವರ ಹಾಗಿದ್ದೇವೆ.


ಅದು ಕತ್ತಲಿನ ಮೊಬ್ಬಿನ ದಿನ, ಕಾರ್ಮುಗಿಲ ಕಗ್ಗತ್ತಲ ದಿನ. ಉದಯವು ಬೆಟ್ಟಗಳ ಮೇಲೆ ಹರಡಿಕೊಳ್ಳುವ ಹಾಗೆ ಇಗೋ, ಪ್ರಬಲವಾದ ದೊಡ್ಡ ದಂಡು! ಇಂಥದು ಹಿಂದೆಂದೂ ಬಂದಿಲ್ಲ, ಇನ್ನು ಮುಂದೆ ತಲತಲಾಂತರಗಳ ಬಹು ವರುಷಗಳಲ್ಲಿಯೂ ಬರುವದಿಲ್ಲ.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನನ್ನ ನಾಮವನ್ನು ಘನಪಡಿಸಬೇಕೆಂಬ ಆಜ್ಞೆಯನ್ನು ನೀವು ಆಲಿಸಿ ಮಂದಟ್ಟುಮಾಡಿಕೊಳ್ಳದಿದ್ದರೆ ನಾನು ನಿಮಗೆ ಶಾಪವನ್ನು ಬರಮಾಡುವೆನು, ನಿಮಗೆ ಆಶೀರ್ವಾದವಾಗಿ ದಯಪಾಲಿಸಿದವುಗಳನ್ನೂ ಶಪಿಸುವೆನು; ಹೌದು, ಈ ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮಂದಟ್ಟುಮಾಡಿಕೊಳ್ಳದ ಕಾರಣ ಅವುಗಳನ್ನು ಶಪಿಸೇ ಇದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು