Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 13:17 - ಕನ್ನಡ ಸತ್ಯವೇದವು J.V. (BSI)

17 ನೀವು ಕೇಳದಿದ್ದರೆ ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿವಿುತ್ತ ಗೋಳಾಡುವದು; ಯೆಹೋವನ ಮಂದೆಯು ಸೆರೆಯಾಗಿ ಹೋದದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನೀವು ಕೇಳದಿದ್ದರೆ ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿಮಿತ್ತ ಗೋಳಾಡುವುದು. ಯೆಹೋವನ ಮಂದೆಯು ಸೆರೆಯಾಗಿ ಹೋದುದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನೀವು ಕಿವಿಗೊಡದಿದ್ದರೆ ನಿಮ್ಮ ಗರ್ವದ ನಿಮಿತ್ತ ನನ್ನ ಮನ ಗೋಳಾಡುವುದು ಗುಟ್ಟಾಗಿ. ನೀವು ಸೆರೆಯಾಗಿ ಹೋಗುವುದರಿಂದ ಅಳುವೆನು ಸರ್ವೇಶ್ವರನ ಮುಂದೆ ಬಹಳವಾಗಿ. ನನ್ನ ಕಣ್ಣುಗಳಿಂದ ಕಂಬನಿ ಹರಿವುದು ಧಾರಾಕಾರವಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೆಹೂದದ ಜನರಾದ ನೀವು ಯೆಹೋವನ ಮಾತನ್ನು ಕೇಳದಿದ್ದರೆ, ನಾನು ಗುಟ್ಟಾದ ಸ್ಥಳದಲ್ಲಿ ಅಳುವೆನು. ನಿಮ್ಮ ಅಹಂಕಾರವು ನನ್ನನ್ನು ಅಳುವ ಹಾಗೆ ಮಾಡುವುದು. ನಾನು ಬಹಳ ಗಟ್ಟಿಯಾಗಿ ಅಳುವೆನು, ನನ್ನ ಕಣ್ಣುಗಳಿಂದ ಕಣ್ಣೀರು ಹೊರಸೂಸುವುದು. ಏಕೆಂದರೆ ಯೆಹೋವನ ಮಂದೆಯು ಸೆರೆಹಿಡಿಯಲ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನೀವು ಕೇಳದಿದ್ದರೆ, ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿಮಿತ್ತ ಗೋಳಾಡುವುದು, ಯೆಹೋವ ದೇವರ ಮಂದೆಯು ಸೆರೆಯಾಗಿ ಹೋದದ್ದರಿಂದ ಬಹಳವಾಗಿ ಅಳುವೆನು. ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 13:17
25 ತಿಳಿವುಗಳ ಹೋಲಿಕೆ  

ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನನ್ನ ನಾಮವನ್ನು ಘನಪಡಿಸಬೇಕೆಂಬ ಆಜ್ಞೆಯನ್ನು ನೀವು ಆಲಿಸಿ ಮಂದಟ್ಟುಮಾಡಿಕೊಳ್ಳದಿದ್ದರೆ ನಾನು ನಿಮಗೆ ಶಾಪವನ್ನು ಬರಮಾಡುವೆನು, ನಿಮಗೆ ಆಶೀರ್ವಾದವಾಗಿ ದಯಪಾಲಿಸಿದವುಗಳನ್ನೂ ಶಪಿಸುವೆನು; ಹೌದು, ಈ ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮಂದಟ್ಟುಮಾಡಿಕೊಳ್ಳದ ಕಾರಣ ಅವುಗಳನ್ನು ಶಪಿಸೇ ಇದ್ದೇನೆ.


ನೀನು ಈ ಮಾತನ್ನು ಅವರಿಗೆ ಹೇಳು - ನನ್ನ ಕಣ್ಣೀರು ರಾತ್ರೀಹಗಲು ನಿರಂತರ ಸುರಿಯಲಿ; ಏಕಂದರೆ ನನ್ನ ಜನವೆಂಬ ಯುವತಿಗೆ ದೊಡ್ಡ ಗಾಯವಾಯಿತು, ಹೌದು ಗಡುಸಾದ ಪೆಟ್ಟುಬಿತ್ತು.


ಅಯ್ಯೋ, ನನ್ನ ಶಿರಸ್ಸು ಜಲಮಯವಾಗಿಯೂ ನನ್ನ ನೇತ್ರಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಎಷ್ಟೋ ಲೇಸು! ನನ್ನ ಜನರಲ್ಲಿ ಹತರಾದವರ ನಿವಿುತ್ತ ಹಗಲಿರುಳೂ ಅಳಬೇಕಲ್ಲಾ!


ಇಸ್ರಾಯೇಲ್ಯರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು.


ನೀವು ನನ್ನ ಕುರಿಗಳು, ನನ್ನ ಕಾವಲಿನ ಕುರಿಗಳು; ನರಪ್ರಾಣಿಗಳಾದ ನಿಮಗೆ ನಾನು ದೇವರು ಎಂದು ಕರ್ತನಾದ ಯೆಹೋವನು ಅನ್ನುತ್ತಾನೆ.


ನಿನ್ನ ಜನರು ಕರ್ತನಿಗೆ ಮನಃಪೂರ್ವಕವಾಗಿ ಮೊರೆಯಿಟ್ಟಿದ್ದಾರೆ; ಚೀಯೋನ್‍ನಗರಿಯ ಕೋಟೆಯವರೇ, ನಿಮ್ಮ ಕಣ್ಣೀರು ಹಗಲಿರುಳೂ ತೊರೆಯಂತೆ ಹರಿಯಲಿ, ನಿಮಗೆ ವಿರಾಮವೇ ಬೇಡ, ಅದು ನಿಮ್ಮ ನೇತ್ರದಿಂದ ನಿಲ್ಲದೆ ಸುರಿಯಲಿ;


ಈ ವಿಪತ್ತುಗಳಿಂದ ಅಳುವೆನು, ನನ್ನನ್ನು ಸಂತೈಸಿ ದಣುವಾರಿಸತಕ್ಕವನು ದೂರವಾಗಿರುವದರಿಂದ ನನ್ನ ಕಣ್ಣೀರು ಧಾರೆಧಾರೆಯಾಗಿ ಸುರಿಯುವದು. ಶತ್ರುವು ಗೆದ್ದು ನನ್ನ ಮಕ್ಕಳು ಹಾಳಾದರು.


ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದವರ ನಿವಿುತ್ತ ನನಗೆ ಕಣ್ಣೀರು ಪ್ರವಾಹವಾಗಿ ಹರಿಯುತ್ತದೆ.


ಸಮುವೇಲನು ಜೀವದಿಂದಿರುವವರೆಗೂ ಸೌಲನನ್ನು ನೋಡುವದಕ್ಕೆ ಹೋಗಲಿಲ್ಲ; ಆದರೆ ಯೆಹೋವನು ಸೌಲನನ್ನು ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದ್ದಕ್ಕೋಸ್ಕರ ಪಶ್ಚಾತ್ತಾಪಪಟ್ಟದರಿಂದ ಸಮುವೇಲನು ಅವನ ವಿಷಯದಲ್ಲಿ ದುಃಖಪಡುತ್ತಿದ್ದನು.


ಮೀಸಲಾದ ಮಂದೆಯಂತೆ, ಹಬ್ಬಗಳಲ್ಲಿ ಯೆರೂಸಲೇವಿುಗೆ ಬಂದು ಸೇರುವ ಹಿಂಡಿನ ಹಾಗೆ ಮನುಷ್ಯರು ಹಾಳುಪಟ್ಟಣಗಳಲ್ಲಿ ಹಿಂಡುಹಿಂಡಾಗಿ ತುಂಬಿಕೊಳ್ಳುವರು; ಆಗ ನಾನೇ ಯೆಹೋವನು ಎಂದು ಅವರಿಗೆ ನಿಶ್ಚಯವಾಗುವದು.


ರಾತ್ರಿಯಲ್ಲಿ ಬಿಕ್ಕಿ ಬಿಕ್ಕಿ ಅಳುವದರಿಂದ ಕಣ್ಣೀರು ಕೆನ್ನೆಗಳ ಮೇಲೆ ನಿಂತೇ ಇದೆ; ಆಕೆಯ ಬಹುಮಂದಿ ಪ್ರಿಯರಲ್ಲಿ ಯಾರೂ ಸಂತೈಸರು; ಆಕೆಗೆ ವಿುತ್ರರೆಲ್ಲಾ ಶತ್ರುಗಳಾಗಿ ದ್ರೋಹ ಮಾಡಿದ್ದಾರೆ,


ನನ್ನ ಕಾವಲಿನ ಕುರಿಗಳನ್ನು ಚದರಿಸಿ ಹಾಳುಮಾಡುವ ಕುರುಬರ ಗತಿಯನ್ನು ಏನೆಂದು ಹೇಳಲಿ ಎಂಬದು ಯೆಹೋವನ ನುಡಿ.


ನೀವು ಈ ಮಾತುಗಳನ್ನು ಕೇಳದಿದ್ದರೆ ಈ ಅರಮನೆಯು ಹಾಳುಬೀಳುವದು ಎಂದು ನನ್ನ ಮೇಲೆ ಆಣೆಯಿಡುತ್ತೇನೆ. ಇದು ಯೆಹೋವನ ನುಡಿ.


ನಾನಾದರೋ ಸಭಾ ಪಾಲನೆಯಲ್ಲಿ ನಿನ್ನನ್ನು ಹಿಂಬಾಲಿಸುವದನ್ನು ಬಿಡುವದಕ್ಕೆ ಆತುರಪಡಲಿಲ್ಲ; ಅನಿವಾರ್ಯ ವಿಪತ್ತಿನ ದಿನವನ್ನು ಅಪೇಕ್ಷಿಸಲಿಲ್ಲ; ನೀನೇ ಬಲ್ಲೆ; ನಿನ್ನ ಸಮಕ್ಷಮದಲ್ಲೇ ನನ್ನ ಬಾಯ ಮಾತು ಹೊರಟಿತು.


ಆಗ ಆತನ ಜನರು ಪುರಾತನವಾದ ಮೋಶೆಯ ಕಾಲವನ್ನು ಜ್ಞಾಪಕಮಾಡಿಕೊಂಡು ಹೀಗಂದರು - ತನ್ನ ಜನವೆಂಬ ಮಂದೆಯನ್ನು ಕುರುಬರ ಸಹಿತ ಸಮುದ್ರದೊಳಗಿಂದ ಮೇಲಕ್ಕೆ ಬರಮಾಡಿದಾತನು ಎಲ್ಲಿ?


ನಾನು ವಿನೋದಗಾರರ ಕೂಟದಲ್ಲಿ ಕೂತುಕೊಳ್ಳಲಿಲ್ಲ, ಉಲ್ಲಾಸಪಡಲೂ ಇಲ್ಲ; ನೀನು ನನ್ನ ಮೇಲೆ ಕೈಯಿಟ್ಟಿದ್ದರಿಂದ ಒಂಟಿಗನಾಗಿ ಕೂತೆನು; ನನ್ನನ್ನು ರೋಷದಿಂದ ತುಂಬಿಸಿದ್ದಿಯಷ್ಟೆ.


ಇಸ್ರಾಯೇಲ್ಯರ ದೇವರಾದ ಯೆಹೋವನು ತನ್ನ ಜನರೆಂಬ ಕುರಿಗಳನ್ನು ಮೇಯಿಸುವ ಕುರುಬರ ದ್ರೋಹವನ್ನು ಕಂಡು ಅವರನ್ನು ಕುರಿತು ಇಂತೆನ್ನುತ್ತಾನೆ - ನೀವು ನನ್ನ ಮಂದೆಯನ್ನು ಚದರಿಸಿ ಅಟ್ಟಿಬಿಟ್ಟಿದ್ದೀರಿ, ವಿಚಾರಿಸಲೇ ಇಲ್ಲ; ಆಹಾ, ನಿಮ್ಮ ದುಷ್ಕೃತ್ಯಗಳ ನಿವಿುತ್ತ ನಾನು ನಿಮ್ಮನ್ನು ವಿಚಾರಿಸುವೆನು.


ಆಕೆಯ ನೆರಿಗೆಯು ಹೊಲಸಾಗಿತ್ತು, ಮುಂದಿನ ಗತಿಯೇನೆಂದು ಮನಸ್ಸಿಗೆ ತರಲಿಲ್ಲ; ಆದಕಾರಣ ವಿಪರೀತ ಹೀನಸ್ಥಿತಿಯಲ್ಲಿ ಬಿದ್ದು ಬಿಟ್ಟಳು; ಸಂತೈಸುವವರೇ ಇಲ್ಲ. ಯೆಹೋವನೇ, ನನ್ನ ಕಷ್ಟವನ್ನು ಲಕ್ಷಿಸು; ನನ್ನ ಶತ್ರು ಹೆಚ್ಚಳಪಡುತ್ತಾನಲ್ಲಾ [ಎಂದು ಮೊರೆಯಿಡುತ್ತಾಳೆ].


ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು ಎಂದು ಅಪ್ಪಣೆಕೊಟ್ಟನು.


ನರಪುತ್ರನೇ, ಇಗೋ, ಒಂದೇ ಏಟಿನಿಂದ ನಾನು ನಿನಗೆ ನೇತ್ರಾನಂದವಾಗಿರುವವಳನ್ನು ನಿನ್ನಿಂದ ತೆಗೆದುಬಿಡುವೆನು, ಆದರೂ ನೀನು ಗೋಳಾಡಬೇಡ, ಅಳಬೇಡ, ನಿನ್ನ ಕಣ್ಣೀರು ಸುರಿಯದಿರಲಿ, ಸದ್ದಿಲ್ಲದೆ ಮೊರೆಯಿಡು,


ಸ್ವಜನರು ನಾಶವಾದಕಾರಣ ನನ್ನ ಕಣ್ಣೀರು ಹೊಳೆಹೊಳೆಯಾಗಿ ಹರಿಯುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು