Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 13:18 - ಕನ್ನಡ ಸತ್ಯವೇದವು J.V. (BSI)

18 ರಾಜನಿಗೂ ರಾಜಮಾತೆಗೂ - ನೆಲದಲ್ಲಿ ಕೂತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ರಾಜನಿಗೂ ಮತ್ತು ರಾಜಮಾತೆಗೂ, “ನೆಲದಲ್ಲಿ ಕುಳಿತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ” ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸರ್ವೇಶ್ವರ ನನಗೆ ಹೀಗೆಂದರು : “ರಾಜನಿಗೂ ರಾಜಮಾತೆಗೂ ಈ ವರ್ತಮಾನವನ್ನು ತಿಳಿಸು - ‘ನೀವು ಇಳಿದುಬಂದು ನೆಲದಲ್ಲಿ ಕುಳಿತುಕೊಳ್ಳಿ. ನಿಮ್ಮ ಚೆಲುವಾದ ಕಿರೀಟ ಬಿದ್ದುಹೋಗಿದೆ ತಲೆಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಈ ಸಂಗತಿಗಳನ್ನು ರಾಜನಿಗೂ ರಾಣಿಗೂ ಹೇಳಿರಿ: “ನಿಮ್ಮ ಸಿಂಹಾಸನಗಳಿಂದ ಕೆಳಗಿಳಿದು ಬನ್ನಿ. ನಿಮ್ಮ ಸುಂದರವಾದ ಕಿರೀಟಗಳು ನಿಮ್ಮ ತಲೆಯಿಂದ ಉರುಳಿ ಕೆಳಗೆ ಬಿದ್ದಿವೆ” ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ರಾಜನಿಗೂ ರಾಜಮಾತೆಗೂ ಹೀಗೆ ಹೇಳಿರಿ, “ನೆಲದಲ್ಲಿ ಕೂತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 13:18
30 ತಿಳಿವುಗಳ ಹೋಲಿಕೆ  

ನಿನ್ನನ್ನೂ ನಿನ್ನ ಹೆತ್ತ ತಾಯಿಯನ್ನೂ ಜನ್ಮಭೂವಿುಯಲ್ಲದ ಅನ್ಯದೇಶಕ್ಕೆ ಎಸೆಡುಬಿಡುವೆನು;


ಆಗ ಯೆಹೂದದ ಅರಸನಾದ ಯೆಹೋಯಾಖೀನನು ತನ್ನ ತಾಯಿ ಪರಿವಾರದವರು ಸೇನಾಪತಿಗಳು ಕಂಚುಕಿಗಳು ಇವರೊಡನೆ ಅವನ ಬಳಿಗೆ ಹೋದನು; ಅವನು ಇವನನ್ನು ತನ್ನ ಆಳಿಕೆಯ ಎಂಟನೆಯ ವರುಷದಲ್ಲಿ ಸೆರೆಹಿಡಿದನು.


ಅವನು ಯೆಹೋಯಾಖೀನನನ್ನೂ ಅವನ ತಾಯಿ ಹೆಂಡತಿಯರು ಕಂಚುಕಿಗಳು


ಅವನ ದೇವಪ್ರಾರ್ಥನೆಯೂ ಅವನಿಗೆ ದೊರಕಿದ ಸದುತ್ತರವೂ ಅವನು ತನ್ನನ್ನು ತಗ್ಗಿಸಿಕೊಳ್ಳುವದಕ್ಕಿಂತ ಮುಂಚೆ ಮಾಡಿದ ಅಪರಾಧದ್ರೋಹಗಳೂ ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ಏರ್ಪಡಿಸಿ ಅಶೇರಸ್ತಂಭ ವಿಗ್ರಹ ಇವುಗಳನ್ನು ನಿಲ್ಲಿಸಿದ್ದೂ ದರ್ಶಿಗಳ ಚರಿತ್ರೆಯಲ್ಲಿ ಬರೆದಿರುತ್ತವೆ.


ಯುವತಿಯೇ, ಬಾಬೆಲ್‍ಪುರಿಯೇ, ಕೆಳಕ್ಕಿಳಿದು ಧೂಳಿನಲ್ಲಿ ಕೂತುಕೋ, ಕಸ್ದೀಯರ ನಗರಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಕ್ಕರಿಸು! ನೀನು ಇನ್ನು ಕೋಮಲೆ, ಸುಕುಮಾರಿ, ಎಂದು ಎನಿಸಿಕೊಳ್ಳೆ.


ಆದರೆ ಆ ಕಷ್ಟದಲ್ಲಿ ಮನಸ್ಸೆಯು ತನ್ನ ದೇವರಾದ ಯೆಹೋವನ ಪ್ರಸನ್ನತೆಯನ್ನು ಬೇಡಿಕೊಂಡನು. ಅವನು ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನನ್ನು ಪ್ರಾರ್ಥಿಸಲು


ಹೀಗಿರುವದರಿಂದ ದೇವರ ತ್ರಾಣವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ತರುವನು.


ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆಗಲಾತನು ನಿಮ್ಮನ್ನು ಮೇಲಕ್ಕೆ ತರುವನು.


ಹೀಗಿರುವದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಗ್ಗಿಸಿಕೊಳ್ಳುತ್ತಾನೋ, ಅವನೇ ಪರಲೋಕರಾಜ್ಯದಲ್ಲಿ ಹೆಚ್ಚಿನವನು.


ಯೋನನ ಪ್ರಕಟನೆಯು ನಿನೆವೆಯ ಅರಸನಿಗೆ ಮುಟ್ಟಲು ಅವನು ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದುಬಿಟ್ಟು ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತನು.


ಅವಳ ಪುರದ್ವಾರಗಳಲ್ಲಿ ಪ್ರಲಾಪವೂ ದುಃಖವೂ ತುಂಬಿರುವವು; ಅವಳು ಹಾಳಾಗಿ ನೆಲದ ಮೇಲೆ ಕೂತುಬಿಡುವಳು.


ಆಮೋನನ ತಂದೆಯಾದ ಮನಸ್ಸೆಯು ಯೆಹೋವನ ಮುಂದೆ ತನ್ನನ್ನು ತಗ್ಗಿಸಿಕೊಂಡಿದ್ದನಷ್ಟೆ. ಆಮೋನನಾದರೋ ತನ್ನನ್ನು ತಗ್ಗಿಸಿಕೊಳ್ಳದೆ ಮಹಾಪರಾಧಿಯಾದನು.


ಮೋಶೆ ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ - ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವದೇನಂದರೆ - ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವದು ಇನ್ನು ಎಲ್ಲಿಯವರೆಗೋ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು.


ಚೀಯೋನ್ ನಗರಿಯ ಹಿರಿಯರು ನೆಲದಲ್ಲಿ ಮೌನವಾಗಿ ಕುಕ್ಕರಿಸಿದ್ದಾರೆ; ತಲೆಯ ಮೇಲೆ ಧೂಳನ್ನು ತೂರಿಕೊಂಡು ಗೋಣಿತಟ್ಟನ್ನು ಸುತ್ತಿಕೊಂಡಿದ್ದಾರೆ; ಯೆರೂಸಲೇವಿುನ ಯುವತಿಯರು ತಲೆಗಳನ್ನು ನೆಲಕ್ಕೆ ಬೊಗ್ಗಿಸಿದ್ದಾರೆ.


ನಾರಿನಿಂದ ಮಹಾಯಾಜಕನ ಮುಂಡಾಸವನ್ನೂ ನಾರಿನಿಂದ ಯಾಜಕರ ಅಲಂಕಾರವಾದ ಮುಂಡಾಸಗಳನ್ನೂ


ಸಂಪತ್ತು ಶಾಶ್ವತವಾಗಿರುವದಿಲ್ಲವಷ್ಟೆ; ಕಿರೀಟವು ತಲತಲಾಂತರಗಳವರೆಗೆ ನಿಂತೀತೋ?


ಪ್ರವಾದಿಯಾದ ಯೆರೆಮೀಯನು ಸೆರೆಹೋಗಿದ್ದ ಹಿರಿಯರಲ್ಲಿ ಉಳಿದವರಿಗೂ ಯಾಜಕರಿಗೂ ಪ್ರವಾದಿಗಳಿಗೂ ಅಂತು ನೆಬೂಕದ್ನೆಚ್ಚರನು ಯೆರೂಸಲೇವಿುನಿಂದ ಬಾಬೆಲಿಗೆ ಸೆರೆ ಒಯ್ದಿದ್ದ ಸಕಲಜನರಿಗೂ


ಅವರು ಆ ಮಾತುಗಳನ್ನೆಲ್ಲಾ ಕೇಳಿ ಬೆಬ್ಬರಬಿದ್ದು ಒಬ್ಬರನ್ನೊಬ್ಬರು ನೋಡುತ್ತಾ, ನಾವು ಈ ಮಾತುಗಳನ್ನೆಲ್ಲಾ ಅರಸನಿಗೆ ತಿಳಿಸಲೇ ಬೇಕು ಎಂದು ಬಾರೂಕನಿಗೆ ಹೇಳಿದರು.


ಚೀಯೋನ್ ನಗರಿಯ ವ್ಯೆಭವವೆಲ್ಲಾ ಕಳೆದುಹೋಗಿದೆ; ಅಲ್ಲಿನ ಪ್ರಧಾನರು ಮೇವಿಲ್ಲದ ಜಿಂಕೆಗಳಂತೆ ಬಲಗುಂದಿ ಅಟ್ಟುವವರಿಗೆ ಬೆಂಗೊಟ್ಟು ಓಡಿಹೋಗಿದ್ದಾರೆ.


ಆಕೆಯ ನೆರಿಗೆಯು ಹೊಲಸಾಗಿತ್ತು, ಮುಂದಿನ ಗತಿಯೇನೆಂದು ಮನಸ್ಸಿಗೆ ತರಲಿಲ್ಲ; ಆದಕಾರಣ ವಿಪರೀತ ಹೀನಸ್ಥಿತಿಯಲ್ಲಿ ಬಿದ್ದು ಬಿಟ್ಟಳು; ಸಂತೈಸುವವರೇ ಇಲ್ಲ. ಯೆಹೋವನೇ, ನನ್ನ ಕಷ್ಟವನ್ನು ಲಕ್ಷಿಸು; ನನ್ನ ಶತ್ರು ಹೆಚ್ಚಳಪಡುತ್ತಾನಲ್ಲಾ [ಎಂದು ಮೊರೆಯಿಡುತ್ತಾಳೆ].


ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಗಿದೆ, ಅಯ್ಯೋ, ನಮ್ಮ ಗತಿಯನ್ನು ಏನು ಹೇಳೋಣ! ನಾವು ಪಾಪಮಾಡಿದವರೇ ಸರಿ.


ಮೂಗಿಗೆ ಮೂಗುತಿಯನ್ನು, ಶಿರಸ್ಸಿಗೆ ಸುಂದರಕಿರೀಟವನ್ನು ಇಟ್ಟು ನಿನ್ನನ್ನು ಆಭರಣಗಳಿಂದ ಸಿಂಗರಿಸಿದೆನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಮುಂಡಾಸವನ್ನು ಕಿತ್ತುಬಿಡು! ಕಿರೀಟವನ್ನು ಎತ್ತಿಹಾಕು! ಎಲ್ಲವೂ ವ್ಯತ್ಯಸ್ತವಾಗಲಿ; ಕೆಳಗಿನದನ್ನು ಮೇಲೆ ಮಾಡು, ಮೇಲಿನದನ್ನು ಕೆಳಗೆ ಮಾಡು;


ವಿಯೋಗದುಃಖವನ್ನು ತೋರಿಸಬೇಡ, ರುಮಾಲನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ಬಾಯನ್ನು ಬಟ್ಟೆಯಿಂದ ಮುಚ್ಚಿಕೊಳ್ಳಬೇಡ, ಗಾರಿಗೆಯನ್ನು ತಿನ್ನಬೇಡ.


ರುಮಾಲನ್ನು ಸುತ್ತಿಕೊಂಡು ಕೆರಗಳನ್ನು ಮೆಟ್ಟಿಕೊಂಡು ಇರುವಿರಿ; ನೀವು ಗೋಳಾಡುವದಿಲ್ಲ, ಅಳುವದಿಲ್ಲ; ನಿಮ್ಮ ಅಧರ್ಮದಿಂದ ಕ್ಷೀಣವಾಗಿ ಹೋಗುವಿರಿ, ಒಬ್ಬರೆದುರಿಗೊಬ್ಬರು ನರಳುವಿರಿ.


ಇವರು ತಲೆಗೆ ನಾರಿನ ಮುಂಡಾಸವನ್ನು, ಸೊಂಟಕ್ಕೆ ನಾರಿನ ಚಡ್ಡಿಯನ್ನು ಹಾಕಿಕೊಂಡಿರಲಿ; ಬೆವರುವ ಯಾವ ಉಡುಪನ್ನೂ ಉಟ್ಟುಕೊಳ್ಳಬಾರದು.


ಹೀಗೆ ಅವನ ಹೃದಯವು ಉಬ್ಬಿ ಅವನ ಸ್ವಭಾವವು ಜಡವಾಗಿ ಅವನಿಗೆ ಸೊಕ್ಕೇರಲು ಅವನನ್ನು ರಾಜಾಸನದಿಂದ ತಳ್ಳಿ ಮಾನವನ್ನು ತೆಗೆದುಬಿಟ್ಟನು;


ಯೆಹೋವನು ಹೀಗನ್ನುತ್ತಾನೆ - ನನ್ನ ಜೀವದಾಣೆ, ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಕೊನ್ಯನೆಂಬ ನೀನು ನನ್ನ ಬಲಗೈಯ ಮುದ್ರೆಯುಂಗುರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತು ಹಾಕುತ್ತಿದ್ದೆನು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು