ಯೆರೆಮೀಯ 13:25 - ಕನ್ನಡ ಸತ್ಯವೇದವು J.V. (BSI)25 ನೀನು ನನ್ನನ್ನು ಮರೆತು ಸುಳ್ಳನ್ನು ನಂಬಿದ್ದರಿಂದ ಇದೇ ನಿನ್ನ ಪಾಲು, ಇದೇ ನಾನು ನಿನಗೆ ಅಳೆದುಕೊಟ್ಟ ಭಾಗ ಎಂದು ಯೆಹೋವನು ಅನ್ನುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನೀನು ನನ್ನನ್ನು ಮರೆತು ಸುಳ್ಳನ್ನು ನಂಬಿದ್ದರಿಂದ ಇದೇ ನಿನ್ನ ಪಾಲು, ಇದೇ ನಾನು ನಿನಗೆ ಅಳೆದುಕೊಟ್ಟ ಭಾಗ ಎಂದು ಯೆಹೋವನು ನುಡಿಯುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ನೀನು ನನ್ನನ್ನು ಮರೆತುಬಿಟ್ಟು ಸುಳ್ಳನ್ನು ನಂಬಿದ್ದರಿಂದ ಇದೇ ನಿನಗೆ ಒದಗಲಿರುವ ಗತಿ. ಇದೇ ನಾನು ನಿನಗೆ ಅಳೆದುಕೊಡುವ ಪ್ರತೀಕಾರ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ನಿಮ್ಮ ಗತಿ ಹೀಗಾಗುವುದು. ನನ್ನ ಯೋಜನೆಗಳಲ್ಲಿ ಇದು ನಿಮ್ಮ ಪಾತ್ರ.” ಇದು ಯೆಹೋವನ ನುಡಿ. “ಏಕೆ ಹೀಗಾಗುವದು? ಏಕೆಂದರೆ ನೀವು ನನ್ನನ್ನು ಮರೆತುಬಿಟ್ಟಿರಿ. ಸುಳ್ಳುದೇವರುಗಳನ್ನು ನಂಬಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಇದೇ ನಿನ್ನ ಭಾಗವು, ನನ್ನಿಂದ ನಿನಗೆ ಅಳತೆ ಮಾಡಿದ ಪಾಲು,” ಎಂದು ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ನನ್ನನ್ನು ಮರೆತುಬಿಟ್ಟು, ಸುಳ್ಳು ದೇವರುಗಳಲ್ಲಿ ಭರವಸೆಯಿಟ್ಟಿದ್ದೀಯೇ. ಅಧ್ಯಾಯವನ್ನು ನೋಡಿ |