Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 13:26 - ಕನ್ನಡ ಸತ್ಯವೇದವು J.V. (BSI)

26 ನಿನ್ನ ನೆರಿಗೆಯನ್ನು ನಿನ್ನ ಕಣ್ಣ ಮುಂದೆಯೇ ಕೀಳಿಸುವೆನು, ನಿನಗೆ ಅವಮಾನವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನಿನ್ನ ಉಡುಗೆಯನ್ನು ನಿನ್ನ ಕಣ್ಣಮುಂದೆಯೇ ಕೀಳಿಸುವೆನು, ನಿನಗೆ ಅವಮಾನವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನಿನ್ನ ಉಡುಗೆಯನ್ನು ನಿನ್ನ ಕಣ್ಮುಂದೆಯೇ ಕೀಳಿಸುವೆನು. ನೀನು ಅತ್ಯಾಚಾರಕ್ಕೆ ಈಡಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಜೆರುಸಲೇಮ್ ನಗರವೇ, ನಾನು ನಿನ್ನ ಲಂಗವನ್ನು ನಿನ್ನ ಮುಖದವರೆಗೆ ಎತ್ತಿಬಿಡುತ್ತೇನೆ. ಎಲ್ಲರೂ ನಿನ್ನನ್ನು ನೋಡುತ್ತಾರೆ. ನಿನಗೆ ನಾಚಿಕೆಯಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆದ್ದರಿಂದ ನಾನು ನಿನ್ನ ಬಟ್ಟೆಗಳನ್ನು ನಿನ್ನ ನಾಚಿಕೆ ಕಾಣುವ ಹಾಗೆ, ನಿನ್ನ ಮುಖದ ಮೇಲೆ ಎತ್ತುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 13:26
9 ತಿಳಿವುಗಳ ಹೋಲಿಕೆ  

ಈಗ ಅವಳ ವಿುಂಡರ ಕಣ್ಣೆದುರಿಗೆ ಅವಳ ನಾಚಿಕೆಗೇಡಿತನವನ್ನು ಬೈಲಿಗೆ ತರುವೆನು; ಅವಳನ್ನು ನನ್ನ ಕೈಯಿಂದ ಯಾರೂ ಬಿಡಿಸರು.


ಆಕೆಯು ಪಾಪಮಾಡಿ ಮಾಡಿ ಅಶುದ್ಧಳಾಗಿದ್ದಾಳೆ; ಮೊದಲು ಆಕೆಯನ್ನು ಸನ್ಮಾನಿಸುತ್ತಿದ್ದವರು ಈಗ ಆಕೆಯ ಮಾನಭಂಗವನ್ನು ಕಂಡು ಹೀನೈಸುತ್ತಾರೆ; ಆಕೆಯು ಬೆನ್ನಮರೆಯಲ್ಲಿ ನರಳಾಡುತ್ತಾಳೆ.


ಅವರು ನಿನ್ನಲ್ಲಿ ಹಗೆ ತೀರಿಸಿಕೊಂಡು ನೀನು ದುಡಿದದ್ದನ್ನೆಲ್ಲಾ ಅಪಹರಿಸಿ ನಿನ್ನನ್ನು ಬಟ್ಟಬರಿದುಮಾಡಿ ಬಿಟ್ಟುಬಿಡುವರು; ಹೀಗೆ ನಾಚಿಕೆಗೀಡಾದ ನಿನ್ನ ಸೂಳೆತನವು, ಹೌದು ನಿನ್ನ ಪುಂಡಾಟವೂ ಸೂಳೆತನವೂ ಬೈಲಿಗೆ ಬರುವವು.


ಇವುಗಳನ್ನು ನಾನು ನೋಡಿ ನೀನು ರವಿುಸಿದ ನಿನ್ನ ಎಲ್ಲಾ ವಿುಂಡರನ್ನೂ ನೀನು ಮೋಹಿಸಿದ ಸಮಸ್ತರನ್ನೂ ನೀನು ಹಗೆಮಾಡಿದ ಎಲ್ಲರೊಂದಿಗೆ ಸುತ್ತುಮುತ್ತಲು ನಿನಗೆ ವಿರುದ್ಧವಾಗಿ ಕೂಡಿಸಿ ಅವರ ಕಣ್ಣೆದುರಿಗೆ ನಿನ್ನನ್ನು ಬೆತ್ತಲೆಗೈದು ನಿನ್ನ ಮಾನವನ್ನು ಬಟ್ಟಬೈಲುಮಾಡುವೆನು.


ಇವು ನನಗೆ ಏಕೆ ಸಂಭವಿಸಿದವು ಎಂದು ನೀನು ಮನದೊಳಗೆ ಅಂದುಕೊಂಡರೆ ನಿನ್ನ ನೆರಿಗೆಯು ಕೀಳಲ್ಪಟ್ಟು ನಿನ್ನ ಹಿಮ್ಮಡಿಯು ನಾಚಿಕೆಗೆ ಈಡಾದದ್ದಕ್ಕೆ ನಿನ್ನ ಮಹಾಪಾಪವೇ ಕಾರಣ ಎಂದು ನಿನಗೆ ಗೊತ್ತಾಗುವದು.


ನಾನೇ ಏಸಾವನ ಆಸರೆಯನ್ನು ಕಿತ್ತಿದ್ದೇನೆ, ಅವನ ಗುಪ್ತಸ್ಥಳಗಳನ್ನು ಬಟ್ಟಬೈಲುಮಾಡಿದ್ದೇನೆ, ಅವಿತುಕೊಳ್ಳಲಾರನು; ಅವನ ಸಂತಾನದವರೂ ಸಹೋದರರೂ ನೆರೆಹೊರೆಯವರೂ ಹಾಳಾದರು, ಅವನೂ ಇಲ್ಲವಾದನು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ, ನಿನ್ನ ನೆರಿಗೆಯನ್ನು ನಿನ್ನ ಕಣ್ಣ ಮುಂದೆಯೇ ಕೀಳಿಸುವೆನು, ನಿನ್ನ ಬೆತ್ತಲೆತನವನ್ನು ಜನಾಂಗಗಳಿಗೆ ತೋರಿಸುವೆನು, ನಿನ್ನ ಅವಮಾನವನ್ನು ರಾಜ್ಯಗಳಿಗೆ ಕಾಣಿಸುವೆನು.


ನಿನ್ನ ಮಾನವು ಬೈಲಿಗೆ ಬಿದ್ದು ನೀನು ನಾಚಿಕೆಗೀಡಾಗುವಿ, ನಾನು ಯಾರನ್ನೂ ಕರುಣಿಸದೆ ಮುಯ್ಯಿ ತೀರಿಸುವೆನು.


ಅವಳು ಯಾವ ಅಂಜೂರ ದ್ರಾಕ್ಷೆಗಳನ್ನು ಇವು ನನ್ನ ವಿುಂಡರಿಂದಾದ ಪ್ರತಿಫಲ ಅಂದುಕೊಂಡಳೋ ಅವುಗಳನ್ನು ನಾನು ಹಾಳುಮಾಡಿ ಕಾಡುಗಿಡಗಳ ಗತಿಗೆ ತರುವೆನು; ಅವು ಭೂಜಂತುಗಳಿಗೆ ಆಹಾರವಾಗುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು