ಯೆರೆಮೀಯ 14:10 - ಕನ್ನಡ ಸತ್ಯವೇದವು J.V. (BSI)10 ಯೆಹೋವನು ಈ ಜನರನ್ನು ಕುರಿತು - ಇವರು [ನನ್ನನ್ನು ಪ್ರಯಾಣಿಕನು ಎಂದ] ಹಾಗೆಯೇ ಅಲೆಯುವದಕ್ಕೆ ಇಷ್ಟಪಟ್ಟಿದ್ದಾರೆ, ಕಾಲನ್ನು ಹಿಂದೆಗೆಯಲಿಲ್ಲ; ಆದಕಾರಣ ಯೆಹೋವನಾದ ನಾನು ಇವರನ್ನು ಕಟಾಕ್ಷಿಸೆನು; ಈಗಲೇ ಇವರ ಅಪರಾಧವನ್ನು ಮನಸ್ಸಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು ಎಂದು ಹೇಳಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೆಹೋವನು ಈ ಜನರನ್ನು ಕುರಿತು, “ಇವರು ಪ್ರಯಾಣಿಕನ ಹಾಗೆ ಅಲೆಯುವುದಕ್ಕೆ ಇಷ್ಟಪಟ್ಟಿದ್ದಾರೆ, ಕಾಲನ್ನು ಹಿಂದೆಗೆಯಲಿಲ್ಲ. ಆದಕಾರಣ ಯೆಹೋವನಾದ ನಾನು ಇವರನ್ನು ಕಟಾಕ್ಷಿಸೆನು; ಈಗಲೇ ಇವರ ಅಪರಾಧವನ್ನು ಮನಸ್ಸಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು” ಎಂದು ಹೇಳಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಈ ಜನರನ್ನು ಕುರಿತು ಸರ್ವೇಶ್ವರ ನನಗೆ ಹೇಳಿದ ಮಾತುಗಳು : “ಇವರು ಅಲೆದಾಡಲು ಇಷ್ಟಪಡುವ ಜನರು. ತಮ್ಮ ಕಾಲಿನ ಮೇಲೆ ಹತೋಟಿಯಿಲ್ಲದವರು. ಆದಕಾರಣ ಸರ್ವೇಶ್ವರನಾದ ನಾನು ಇವರನ್ನು ಕರುಣೆಯಿಂದ ನೋಡುವುದಿಲ್ಲ. ಇದೀಗಲೆ ಇವರ ಅಪರಾಧಗಳನ್ನು ನೆನಪಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯೆಹೂದದ ಜನರ ಬಗ್ಗೆ ಯೆಹೋವನು ಹೀಗೆ ಹೇಳುತ್ತಾನೆ: “ಯೆಹೂದದ ಜನರು ನನ್ನಿಂದ ದೂರವಾಗಲು ಮನಃಪೂರ್ವಕವಾಗಿ ಇಚ್ಛಿಸುತ್ತಾರೆ. ಅವರು ಮೊದಲಿಂದಲೂ ಹೀಗೆ ಮಾಡುತ್ತಲೇ ಇದ್ದಾರೆ. ಆದ್ದರಿಂದ ಈಗ ಯೆಹೋವನು ಅವರನ್ನು ಸ್ವಿಕರಿಸುವದಿಲ್ಲ. ಆತನು ಅವರ ದುಷ್ಕೃತ್ಯಗಳನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಗಳಿಗಾಗಿ ಅವರನ್ನು ದಂಡಿಸುತ್ತಾನೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಯೆಹೋವ ದೇವರು ಈ ಜನರಿಗೆ ಹೀಗೆ ಹೇಳುತ್ತಾರೆ: “ಹೀಗೆ ತಿರುಗಾಡುವುದಕ್ಕೆ ಅವರು ಇಷ್ಟಪಡುತ್ತಾರೆ. ತಮ್ಮ ಕಾಲುಗಳನ್ನು ಹಿಂದೆಗೆಯುವುದಿಲ್ಲ. ಆದ್ದರಿಂದ ಯೆಹೋವ ದೇವರು ಅವರನ್ನು ಅಂಗೀಕರಿಸುವುದಿಲ್ಲ. ಈಗಲೇ ಅವರ ಅಕ್ರಮವನ್ನು ಜ್ಞಾಪಕಮಾಡಿಕೊಳ್ಳುವೆನು. ಅವರ ಪಾಪಗಳಿಗಾಗಿ ಅವರನ್ನು ದಂಡಿಸುವೆನು.” ಅಧ್ಯಾಯವನ್ನು ನೋಡಿ |