Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 14:13 - ಕನ್ನಡ ಸತ್ಯವೇದವು J.V. (BSI)

13 ಅದಕ್ಕೆ ನಾನು - ಅಯ್ಯೋ, ಕರ್ತನಾದ ಯೆಹೋವನೇ, ಇಗೋ ಪ್ರವಾದಿಗಳು ಈ ಜನರಿಗೆ - ಖಡ್ಗವು ನಿಮ್ಮ ಕಣ್ಣಿಗೆ ಕಾಣದು, ಕ್ಷಾಮವು ನಿಮಗೆ ಸಂಭವಿಸದು; ಯೆಹೋವನು ಈ ಸ್ಥಳದಲ್ಲಿ ಸ್ಥಿರಸಮಾಧಾನವನ್ನು ನಿಮಗೆ ಕೊಡುವನು ಎಂದು ನುಡಿಯುತ್ತಾರೆ ಎಂಬದಾಗಿ ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ಇಗೋ ಪ್ರವಾದಿಗಳು ಈ ಜನರಿಗೆ, ‘ಖಡ್ಗವು ನಿಮ್ಮ ಕಣ್ಣಿಗೆ ಕಾಣದು, ಕ್ಷಾಮವು ನಿಮಗೆ ಸಂಭವಿಸದು; ಯೆಹೋವನು ಈ ಸ್ಥಳದಲ್ಲಿ ತಾನು ಪ್ರಮಾಣ ಮಾಡಿದಂತೆ ಸಮಾಧಾನವನ್ನು ನಿಮಗೆ ಕೊಡುವನು ಎಂದು ನುಡಿಯುತ್ತಾರೆ’” ಎಂಬುದಾಗಿ ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ನಾನು, “ಅಯ್ಯೋ, ಸ್ವಾಮಿ ಸರ್ವೇಶ್ವರಾ, ಈ ಜನರಿಗೆ, ‘ಖಡ್ಗ ನಿಮ್ಮ ಕಣ್ಣಿಗೂ ಕಾಣಿಸದು, ಕ್ಷಾಮ ನಿಮಗೆಂದಿಗೂ ಬಂದೊದಗದು. ಸರ್ವೇಶ್ವರ ಈ ನಾಡಿನಲ್ಲೆ ನಿಮಗೆ ಚಿರಶಾಂತಿ ಸಮಾಧಾನವನ್ನು ಕೊಡುವರು’ ಎಂದು ಪ್ರವಾದಿಗಳೇ ನುಡಿಯುತ್ತಿದ್ದಾರೆ,” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ನಾನು ಯೆಹೋವನಿಗೆ, “ನನ್ನ ಒಡೆಯನಾದ ಯೆಹೋವನೇ, ಪ್ರವಾದಿಗಳು ಜನರಿಗೆ ಬೇರೆಯದನ್ನೇ ಹೇಳಿದರು. ಅವರು ಯೆಹೂದದ ಜನರಿಗೆ, ‘ನೀವು ಶತ್ರುವಿನ ಖಡ್ಗಕ್ಕೆ ತುತ್ತಾಗುವದಿಲ್ಲ. ನೀವೆಂದಿಗೂ ಹಸಿವಿನಿಂದ ಬಳಲುವದಿಲ್ಲ, ಯೆಹೋವನು ಈ ದೇಶದಲ್ಲಿ ನಿಮಗೆ ನೆಮ್ಮದಿಯನ್ನು ದಯಪಾಲಿಸುವನು’ ಎಂದು ಹೇಳುತ್ತಿದ್ದರು” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ನಾನು, “ಹಾ, ಸಾರ್ವಭೌಮ ಯೆಹೋವ ದೇವರೇ, ಇಗೋ, ಪ್ರವಾದಿಗಳು ಅವರಿಗೆ: ‘ನೀವು ಖಡ್ಗವನ್ನು ನೋಡುವುದಿಲ್ಲ. ನಿಮಗೆ ಕ್ಷಾಮವು ಬಾರದು. ಆದರೆ ಯೆಹೋವ ದೇವರು ನಿಮಗೆ ಈ ಸ್ಥಳದಲ್ಲಿ ಸ್ಥಿರಸಮಾಧಾನ ಕೊಡುತ್ತಾರೆ,’ ಎಂದು ಹೇಳುತ್ತಾರೆ,” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 14:13
17 ತಿಳಿವುಗಳ ಹೋಲಿಕೆ  

ಮೇಲಾಗದಿದ್ದರೂ ಮೇಲು ಮೇಲು ಎಂದು ಹೇಳಿ ನನ್ನ ಜನರ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.


ಆದರೆ ಇಸ್ರಾಯೇಲ್ ಜನರಲ್ಲಿ ಸುಳ್ಳುಪ್ರವಾದಿಗಳೂ ಎದ್ದರಲ್ಲಾ; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ನಾಶಕರವಾದ ಮತಭೇದಗಳನ್ನು ಕಳ್ಳತನದಿಂದ ಹುಟ್ಟಿಸುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನು ಕೂಡ ತಾವು ಅರಿಯೆವು ಎಂದು ಹೇಳುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶವನ್ನು ಬರಮಾಡಿಕೊಳ್ಳುವರು.


ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ, ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ, ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ; ಆದರೂ ಯೆಹೋವನ ಮೇಲೆ ಭಾರಹಾಕಿ - ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು ಅಂದುಕೊಳ್ಳುತ್ತಾರೆ.


ನನ್ನನ್ನು ಅಸಡ್ಡೆಮಾಡುವವರಿಗೆ - ನಿಮಗೆ ಶುಭವಾಗುವದು ಎಂಬದಾಗಿ ಯೆಹೋವನು ಅಂದಿದ್ದಾನೆ ಎಂದು ಹೇಳುತ್ತಲೇ ಇದ್ದಾರೆ; ಸ್ವಂತ ಹೃದಯದ ಹಟದಂತೆ ನಡೆಯುವವರೆಲ್ಲರಿಗೂ - ನಿಮಗೆ ಯಾವ ಕೇಡೂ ಸಂಭವಿಸದು ಎಂದು ನುಡಿಯುತ್ತಾರೆ.


ಆಗ ನಾನು - ಅಯ್ಯೋ, ಕರ್ತನಾದ ಯೆಹೋವನೇ, ನೀನು ಈ ಜನರಿಗೂ ಯೆರೂಸಲೇವಿುಗೂ ನಿಮಗೆ ಸಮಾಧಾನವಾಗುವದೆಂದು ಹೇಳಿ ನಿಶ್ಚಯವಾಗಿ ಇವರನ್ನು ಬಹಳ ಮೋಸಗೊಳಿಸಿದ್ದೀ; ಖಡ್ಗವು ಪ್ರಾಣದ ಮಟ್ಟಿಗೂ ಇಳಿಯುತ್ತದಲ್ಲಾ ಅಂದೆನು.


ಮೇಲಾಗದಿದ್ದರೂ ಮೇಲು ಮೇಲು ಎಂದು ಹೇಳಿ ನನ್ನ ಪ್ರಜೆಯೆಂಬಾಕೆಯ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.


ನಾನು ವ್ಯಥೆಗೊಳಿಸದ ಶಿಷ್ಟನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದರಿಂದಲೂ ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದರಿಂದಲೂ


ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ, ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?


ಅವರು ಯೆಹೋವನನ್ನು ಅಲ್ಲಗಳೆದು - ಆತನು ಏನು ಮಾಡಿಯಾನು? ನಮಗೆ ಕೇಡುಬಾರದು, ಖಡ್ಗವೂ ಕ್ಷಾಮವೂ ನಮ್ಮ ಕಣ್ಣಿಗೆ ಬೀಳವು;


ಅದಕ್ಕೆ ನಾನು - ಅಯ್ಯೋ, ಕರ್ತನಾದ ಯೆಹೋವನೇ, ನಾನು ಮಾತು ಬಲ್ಲವನಲ್ಲ, ಬಾಲಕನು ಎಂದು ಬಿನ್ನವಿಸಿದೆನು.


ಇವರ ಕಾವಲುಗಾರರು ಕುರುಡರು, ಇವರಲ್ಲಿ ಯಾರಿಗೂ ತಿಳುವಳಿಕೆಯಿಲ್ಲ; ಇವರೆಲ್ಲರೂ ಬೊಗಳಲಾರದ ಮೂಗನಾಯಿಗಳು, ನಿದ್ರೆಯನ್ನಾಶಿಸಿ ಮಲಗಿಕೊಂಡು ಕನವರಿಸುವ ನಾಯಿಗಳು.


ಪ್ರವಾದಿಗಳು ಬರೀ ಗಾಳಿಯೇ, ದೈವೋಕ್ತಿಯು ಅವರಲ್ಲಿಲ್ಲ; ಅವರಿಗೇ ಹೀಗಾಗಲಿ ಅಂದುಕೊಂಡಿದ್ದಾರೆ.


ಇನ್ನು ಮೇಲೆ ಇಸ್ರಾಯೇಲ್ ವಂಶದವರಲ್ಲಿ ಯಾರಿಗೂ ವಿುಥ್ಯಾದರ್ಶನವಾಗದು, ಮೋಸದ ಕಣಿಯೂ ಇರದು.


ಪಷ್ಹೂರನೇ, ನೀನೋ ನಿನ್ನ ಮನೆಯವರೆಲ್ಲರೊಡನೆ ಸೆರೆಗೆ ಹೋಗುವಿ; ನೀನೂ ನಿನ್ನ ವಿುಥ್ಯಾ ಪ್ರವಾದನೆಯನ್ನು ಕೇಳಿದ ನಿನ್ನ ಸಕಲ ಸ್ನೇಹಿತರೂ ಬಾಬೆಲಿಗೆ ಸೇರಿ ಅಲ್ಲೇ ಸತ್ತು ಮಣ್ಣಾಗುವಿರಿ ಎಂದು ನುಡಿದಿದ್ದಾನೆ.


ಬಾಬೆಲಿನ ಅರಸನು ನಿಮಗೂ ಈ ದೇಶಕ್ಕೂ ವಿರುದ್ಧವಾಗಿ ಬಾರನು ಎಂದು ನಿಮಗೆ ಸಾರಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು