Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 14:14 - ಕನ್ನಡ ಸತ್ಯವೇದವು J.V. (BSI)

14 ಆಗ ಯೆಹೋವನು ನನಗೆ ಹೀಗೆ ನುಡಿದನು - ಪ್ರವಾದಿಗಳು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ; ಅವರಿಗೆ ಅಪ್ಪಣೆಕೊಡಲಿಲ್ಲ, ಏನೂ ಹೇಳಲಿಲ್ಲ; ಅವರು ಸುಳ್ಳಾದ ದಿವ್ಯದರ್ಶನವನ್ನೂ ಕಣಿಯನ್ನೂ ಮಾಯಾತಂತ್ರವನ್ನೂ ಸ್ವಕಲ್ಪಿತಮೋಸವನ್ನೂ ನಿಮಗೆ ಪ್ರಕಟಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಯೆಹೋವನು ನನಗೆ ಹೀಗೆ ನುಡಿದನು, “ಈ ಪ್ರವಾದಿಗಳು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ. ಅವರಿಗೆ ಅಪ್ಪಣೆಕೊಡಲಿಲ್ಲ, ಏನೂ ಹೇಳಲಿಲ್ಲ. ಅವರು ಸುಳ್ಳಾದ ದರ್ಶನವನ್ನೂ, ಕಣಿಯನ್ನೂ, ಮಾಯಾತಂತ್ರವನ್ನೂ, ಸ್ವಕಲ್ಪಿತ ಮೋಸವನ್ನೂ ನಿಮಗೆ ಪ್ರಕಟಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅದಕ್ಕೆ ಸರ್ವೇಶ್ವರ ನನಗೆ : “ಪ್ರವಾದಿಗಳು ನನ್ನ ಹೆಸರೆತ್ತಿ ಸುಳ್ಳು, ಪ್ರವಾದನೆ ಮಾಡುತ್ತಿದ್ದಾರೆ. ನಾನು ಅವರನ್ನು ಕಳಿಸಲಿಲ್ಲ, ಅವರಿಗೆ ಅಪ್ಪಣೆಕೊಟ್ಟಿಲ್ಲ. ಅವರೊಡನೆ ಮಾತಾಡಿದ್ದಿಲ್ಲ. ಅವರು ಕಳ್ಳದರ್ಶನಗಳನ್ನು, ಕಣಿಗಳನ್ನು, ಮಾಯಮಂತ್ರಗಳನ್ನು ಹಾಗು ತಾನೇ ಕಲ್ಪಿಸಿಕೊಂಡ ಕಪಟವನ್ನು ನಿಮಗೆ ಪ್ರಕಟಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆಗ ಯೆಹೋವನು ನನಗೆ, “ಯೆರೆಮೀಯನೇ, ಆ ಪ್ರವಾದಿಗಳು ನನ್ನ ಹೆಸರಿನಿಂದ ಸುಳ್ಳುಬೋಧನೆ ಮಾಡುತ್ತಾರೆ. ನಾನು ಆ ಪ್ರವಾದಿಗಳನ್ನು ಕಳುಹಿಸಲಿಲ್ಲ. ಅವರಿಗೆ ನಾನು ಯಾವ ಅಪ್ಪಣೆಯನ್ನೂ ಕೊಟ್ಟಿಲ್ಲ, ಅವರೊಂದಿಗೆ ನಾನು ಮಾತನ್ನೂ ಆಡಿಲ್ಲ. ಆ ಪ್ರವಾದಿಗಳು ಸುಳ್ಳುದರ್ಶನಗಳನ್ನು ನಿಷ್ಪ್ರಯೋಜಕವಾದ ಮಾಟಮಂತ್ರಗಳನ್ನು ಸ್ವಕಲ್ಪಿತ ವಿಚಾರಗಳನ್ನೂ ಬೋಧಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳುಗಳನ್ನು ಪ್ರವಾದಿಸುತ್ತಾರೆ. ನಾನು ಅವರನ್ನು ಕಳುಹಿಸಲಿಲ್ಲ. ಅವರಿಗೆ ಆಜ್ಞೆಕೊಡಲಿಲ್ಲ. ಅವರ ಸಂಗಡ ಮಾತಾಡಲಿಲ್ಲ. ಸುಳ್ಳಿನ ದರ್ಶನವನ್ನೂ, ಶಕುನವನ್ನೂ, ಮಾಯ ಮಂತ್ರವನ್ನೂ, ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 14:14
32 ತಿಳಿವುಗಳ ಹೋಲಿಕೆ  

ಇನ್ನು ಮೇಲೆ ಇಸ್ರಾಯೇಲ್ ವಂಶದವರಲ್ಲಿ ಯಾರಿಗೂ ವಿುಥ್ಯಾದರ್ಶನವಾಗದು, ಮೋಸದ ಕಣಿಯೂ ಇರದು.


ಸೆರೆಯವರೆಲ್ಲರಿಗೆ ಹೀಗೆ ಹೇಳಿ ಕಳುಹಿಸು - ನೆಹೆಲಾಮ್ಯನಾದ ಶೆಮಾಯನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ - ನಾನು ಕಳುಹಿಸದೆ ಹೋದರೂ ಶೆಮಾಯನು ನಿಮಗೆ ಪ್ರವಾದನೆಮಾಡಿ ಸುಳ್ಳಿನಲ್ಲಿ ನಂಬಿಕೆಯನ್ನು ಹುಟ್ಟಿಸಿದ ಕಾರಣ


ನಿನ್ನ ಪ್ರವಾದಿಗಳು ಕಂಡುಹೇಳಿದ ಕಣಿಗಳು ವ್ಯರ್ಥ, ನಿಸ್ಸಾರ; ಅವರು ನಿನ್ನ ದೋಷವನ್ನು ಬೈಲಿಗೆ ತಾರದಕಾರಣ ನಿನ್ನ ದುರವಸ್ಥೆಯು ನೀಗಲಿಲ್ಲ; ನಿನ್ನ ವಿಷಯವಾಗಿ ಅವರಿಗೆ ಕಂಡುಬಂದ ವ್ಯರ್ಥ ದೈವೋಕ್ತಿಗಳು ನೀನು ಗಡೀಪಾರಾಗಿ ಒಯ್ಯಲ್ಪಡುವದಕ್ಕೆ ಆಸ್ಪದವಾದವು.


ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ, ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ, ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ; ಆದರೂ ಯೆಹೋವನ ಮೇಲೆ ಭಾರಹಾಕಿ - ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು ಅಂದುಕೊಳ್ಳುತ್ತಾರೆ.


ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ, ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?


[ಅಮ್ಮೋನೇ,] ನಿನ್ನ ಜೋಯಿಸರು ವಿುಥ್ಯೆಯನ್ನು ಸಾಕ್ಷಾತ್ಕರಿಸಿ ಸುಳ್ಳುಸುಳ್ಳಾಗಿ ಕಣಿ ಹೇಳುತ್ತಿದ್ದಾರೆ. ಸಮಯವು ಹತ್ತರಿಸಿ ಅಪರಾಧದ ಕಡೆಗಾಲವು ಸಂಭವಿಸಿ ಹತರಾಗಿ ಬಿದ್ದಿರುವ ದುಷ್ಟರ ಗತಿಯನ್ನು ನೋಡು! ಜೋಯಿಸರನ್ನು ನಂಬಿದ ನೀನೂ ಆ ದುಷ್ಟರ ಕತ್ತುಗಳ ಮೇಲೆ ಒರಗಿಹೋಗುವಿ.


ಸುಳ್ಳುಬೋಧಕರು ಬಂದು ಸ್ವಂತ ಮನಸ್ಸಿನಲ್ಲಿ ಅಪರಾಧಿಗಳೆಂಬ ಬರೆಯುಳ್ಳವರಾದರೂ ತಾವು ನೀತಿವಂತರೆಂದು ತೋರ್ಪಡಿಸಿಕೊಂಡು


ಆಗ ಯಾವನಾದರೂ ಮತ್ತೆ ಪ್ರವಾದನೆಮಾಡಿದರೆ ಅವನ ಹೆತ್ತ ತಾಯಿತಂದೆಗಳು ಅವನಿಗೆ - ನೀನುಳಿಯಬೇಡ; ಯೆಹೋವನ ಹೆಸರೆತ್ತಿ ಸುಳ್ಳಾಡುತ್ತೀ ಎಂದು ಹೇಳಿ ಆ ಹೆತ್ತ ತಾಯಿತಂದೆಗಳೇ ಅವನ ಪ್ರವಾದನೆಯ ನಿವಿುತ್ತ ಅವನನ್ನು ಇರಿದುಬಿಡುವರು.


ವಿಗ್ರಹಗಳು ನುಡಿಯುವದು ಜೊಳ್ಳು; ಕಣಿಯವರು ಕಾಣುವದು ಸುಳ್ಳು, ತಿಳಿಸುವ ಕನಸುಗಳು ಕಲ್ಪಿತ, ಹೇಳುವ ಸಮಾಧಾನವು ವ್ಯರ್ಥ, ಆದದರಿಂದ ನನ್ನ ಜನರು ದಿಕ್ಕಾಪಾಲಾಗಿದ್ದಾರೆ; ಕುರುಬನು ಇಲ್ಲದ ಕಾರಣ ಬಾಧೆಗೆ ಒಳಗಾಗಿದ್ದಾರೆ.


ನೀವು ವಿುಥ್ಯಾದರ್ಶನವನ್ನು ಹೊಂದಿ ಕಣಿಹೇಳುವ ಕೆಲಸವು ಇನ್ನು ನಡಿಯುವದೇ ಇಲ್ಲ; ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ಬಾಬೆಲಿನ ಅರಸನು ನಿಮಗೂ ಈ ದೇಶಕ್ಕೂ ವಿರುದ್ಧವಾಗಿ ಬಾರನು ಎಂದು ನಿಮಗೆ ಸಾರಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?


ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ತನ್ನ ಹೆಸರೆತ್ತಿ ಸುಳ್ಳನ್ನು ಸಾರುವ ಕೊಲಾಯನ ಮಗನಾದ ಅಹಾಬ, ಮಾಸೇಯನ ಮಗನಾದ ಚಿದ್ಕೀಯ ಇವರ ವಿಷಯವಾಗಿ ಇಂತೆನ್ನುತ್ತಾನೆ - ಇಗೋ, ನಾನು ಇವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಕೊಡುವೆನು; ಅವನು ನಿಮ್ಮ ಕಣ್ಣೆದುರಿಗೆ ಇವರನ್ನು ಕೊಲ್ಲಿಸುವನು;


ಆಗ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ - ಹನನ್ಯನೇ, ಕೇಳು, ಯೆಹೋವನು ನಿನ್ನನ್ನು ಕಳುಹಿಸಲಿಲ್ಲ; ಈ ಜನರು ಸುಳ್ಳನ್ನು ನಂಬುವಂತೆ ಮಾಡುತ್ತೀ.


ನೀನು ಹೋಗಿ ಹನನ್ಯನಿಗೆ - ಯೆಹೋವನು ಇಂತೆನ್ನುತ್ತಾನೆ - ನೀನು ಮರದ ನೊಗಗಳನ್ನು ಮುರಿದುಬಿಟ್ಟಿ, ಅವುಗಳಿಗೆ ಬದಲಾಗಿ ಕಬ್ಬಿಣದ ನೊಗಗಳನ್ನು ಮಾಡು,


(ಘನಹೊಂದಿದ ಹಿರಿಯನೇ ತಲೆ; ಸುಳ್ಳುಬೋಧನೆ ಮಾಡುವ ಪ್ರವಾದಿಯೇ ಬಾಲ).


ಪ್ರಿಯರೇ, ಅನೇಕ ಮಂದಿ ಸುಳ್ಳು ಪ್ರವಾದಿಗಳು ಲೋಕದೊಳಗೆ ಬಂದಿರುವದರಿಂದ ನೀವು ಆತ್ಮದ ಎಲ್ಲಾ ನುಡಿಗಳನ್ನು ನಂಬದೆ ಆಯಾ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.


ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರಹೊಂದದೆ ನಾನು ಪ್ರೇರಣೆಮಾಡದ ಮಾತುಗಳನ್ನು ಯೆಹೋವನ ಮಾತೆಂದು ಹೇಳಿ ಜನರಿಗೆ ತಿಳಿಸುವನೋ ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತಾಡುವನೋ ಅವನಿಗೆ ಮರಣಶಿಕ್ಷೆಯಾಗಬೇಕೆಂದು ಹೇಳಿದನು.


ಇವರ ಕಾವಲುಗಾರರು ಕುರುಡರು, ಇವರಲ್ಲಿ ಯಾರಿಗೂ ತಿಳುವಳಿಕೆಯಿಲ್ಲ; ಇವರೆಲ್ಲರೂ ಬೊಗಳಲಾರದ ಮೂಗನಾಯಿಗಳು, ನಿದ್ರೆಯನ್ನಾಶಿಸಿ ಮಲಗಿಕೊಂಡು ಕನವರಿಸುವ ನಾಯಿಗಳು.


ಮೇಲಾಗದಿದ್ದರೂ ಮೇಲು ಮೇಲು ಎಂದು ಹೇಳಿ ನನ್ನ ಪ್ರಜೆಯೆಂಬಾಕೆಯ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.


ಪಷ್ಹೂರನೇ, ನೀನೋ ನಿನ್ನ ಮನೆಯವರೆಲ್ಲರೊಡನೆ ಸೆರೆಗೆ ಹೋಗುವಿ; ನೀನೂ ನಿನ್ನ ವಿುಥ್ಯಾ ಪ್ರವಾದನೆಯನ್ನು ಕೇಳಿದ ನಿನ್ನ ಸಕಲ ಸ್ನೇಹಿತರೂ ಬಾಬೆಲಿಗೆ ಸೇರಿ ಅಲ್ಲೇ ಸತ್ತು ಮಣ್ಣಾಗುವಿರಿ ಎಂದು ನುಡಿದಿದ್ದಾನೆ.


ನಾನು ಹೀಗೆಯೇ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರುಷದೊಳಗಾಗಿ ಸಮಸ್ತ ಜನಾಂಗಗಳ ಹೆಗಲಿನಿಂದ ತೆಗೆದು ಮುರಿದುಹಾಕುವೆನು ಎಂದು ಹೇಳಿದನು. ಇದನ್ನು ಕೇಳಿ ಪ್ರವಾದಿಯಾದ ಯೆರೆಮೀಯನು ಅಲ್ಲಿಂದ ಹೊರಟು ಹೋದನು.


ಚೀಯೋನಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಕೊಂಡಿವೆ; ಅದರ ಅಗುಳಿಗಳನ್ನು ಮುರಿದು ಚೂರು ಚೂರು ಮಾಡಿದ್ದಾನೆ; ಅದರ ಅರಸನೂ ಸರದಾರರೂ ಅನ್ಯಜನಾಂಗಗಳೊಳಗೆ ಸೇರಿಕೊಂಡಿದ್ದಾರೆ; ಧರ್ಮೋಪದೇಶವೇ ಕಾಣೆ; ಅದರ ಪ್ರವಾದಿಗಳಿಗೆ ಕೂಡಾ ಯೆಹೋವನಿಂದ ಯಾವ ದರ್ಶನವೂ ಇಲ್ಲ.


ಅವರ ಜ್ಞಾನವು ಎಷ್ಟರದು? ಆದದರಿಂದ ನಾನು ಇವರ ಹೆಂಡರನ್ನು ಅನ್ಯರಿಗೂ ಇವರ ಹೊಲಗದ್ದೆಗಳನ್ನು ಆಕ್ರವಿುಸುವವರಿಗೂ ಕೊಟ್ಟುಬಿಡುವೆನು; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ.


ನರಪುತ್ರನೇ, ಪ್ರವಾದನೆಮಾಡಿ ಸ್ವಕಲ್ಪಿತವಾದದ್ದನ್ನೇ ಸಾರುತ್ತಲಿರುವ ಇಸ್ರಾಯೇಲಿನ ಪ್ರವಾದಿಗಳಿಗೆ ಖಂಡನೆಯಾಗಿ ನೀನು ಪ್ರವಾದಿಸುತ್ತಾ ಹೀಗೆ ಹೇಳು - ಯೆಹೋವನ ವಾಕ್ಯವನ್ನು ಕೇಳಿರಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು