ಯೆರೆಮೀಯ 14:15 - ಕನ್ನಡ ಸತ್ಯವೇದವು J.V. (BSI)15 ಆದಕಾರಣ ನನ್ನ ಅಪ್ಪಣೆಯಿಲ್ಲದೆ ನನ್ನ ಹೆಸರಿನಿಂದ ಪ್ರವಾದಿಸುತ್ತಾ ಖಡ್ಗವೂ ಕ್ಷಾಮವೂ ಈ ದೇಶಕ್ಕೆ ಬಾರವು ಎಂದು ಬೋಧಿಸುವ ಪ್ರವಾದಿಗಳ ವಿಷಯದಲ್ಲಿ ಯೆಹೋವನಾದ ನಾನು - ಖಡ್ಗದಿಂದಲೂ ಕ್ಷಾಮದಿಂದಲೂ ಈ ಪ್ರವಾದಿಗಳು ನಿರ್ಮೂಲರಾಗುವರು ಎಂದು ಹೇಳುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆದಕಾರಣ ನನ್ನ ಅಪ್ಪಣೆಯಿಲ್ಲದೆ ನನ್ನ ಹೆಸರಿನಿಂದ ಪ್ರವಾದಿಸುತ್ತಾ ಖಡ್ಗವೂ, ಕ್ಷಾಮವೂ ಈ ದೇಶಕ್ಕೆ ಬಾರವು ಎಂದು ಬೋಧಿಸುವ ಪ್ರವಾದಿಗಳ ವಿಷಯದಲ್ಲಿ ಯೆಹೋವನಾದ ನಾನು, ‘ಖಡ್ಗದಿಂದಲೂ, ಕ್ಷಾಮದಿಂದಲೂ ಈ ಪ್ರವಾದಿಗಳು ನಿರ್ಮೂಲರಾಗುವರು’” ಎಂದು ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆದುದರಿಂದ ನನ್ನ ಅಪ್ಪಣೆಯಿಲ್ಲದೆ, ನನ್ನ ಹೆಸರೆತ್ತಿ, ಪ್ರವಾದನೆ ಮಾಡುತ್ತಾ ಖಡ್ಗವಾಗಲಿ, ಕ್ಷಾಮವಾಗಲಿ ಈ ನಾಡಿಗೆ ಬರುವುದಿಲ್ಲ ಎಂದು ಬೋಧಿಸುತ್ತಿದ್ದಾರಲ್ಲವೆ? ಆ ಪ್ರವಾದಿಗಳ ವಿಷಯದಲ್ಲಿ ಸರ್ವೇಶ್ವರನಾದ ನಾನು ಹೇಳುವುದೇನೆಂದರೆ - ಖಡ್ಗದಿಂದಲೆ, ಕ್ಷಾಮದಿಂದಲೆ ಆ ಪ್ರವಾದಿಗಳು ನಾಶವಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನನ್ನ ಹೆಸರಿನಲ್ಲಿ ಬೋಧನೆ ಮಾಡುತ್ತಿರುವ ಈ ಪ್ರವಾದಿಗಳ ಬಗ್ಗೆ ನಾನು ಹೇಳುವದು ಇಷ್ಟೇ. ನಾನು ಆ ಪ್ರವಾದಿಗಳನ್ನು ಕಳುಹಿಸಿಲ್ಲ. ಆ ಪ್ರವಾದಿಗಳು ‘ಶತ್ರುಗಳು ಖಡ್ಗಧಾರಿಗಳಾಗಿ ಎಂದಿಗೂ ಈ ದೇಶದ ಮೇಲೆ ಧಾಳಿ ಮಾಡುವದಿಲ್ಲ. ಈ ದೇಶದಲ್ಲಿ ಎಂದೂ ಕ್ಷಾಮ ಕಾಣಿಸಿಕೊಳ್ಳುವದಿಲ್ಲ’ ಎಂದು ಹೇಳಿದ್ದಾರೆ. ಆದರೆ ಆ ಪ್ರವಾದಿಗಳು ಹಸಿವಿನ ತಾಪದಿಂದ ಸಾಯುತ್ತಾರೆ ಮತ್ತು ಶತ್ರುವಿನ ಖಡ್ಗ ಅವರನ್ನು ಕೊಲ್ಲುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದ್ದರಿಂದ ಯೆಹೋವ ದೇವರು ತಾನು ಕಳುಹಿಸದೆ, ತನ್ನ ಹೆಸರಿನಲ್ಲಿ ಪ್ರವಾದಿಸುವಂಥ ಮತ್ತು, ‘ಈ ದೇಶದಲ್ಲಿ ಖಡ್ಗವೂ ಬರವೂ ಇರುವುದಿಲ್ಲ,’ ಎಂದು ಹೇಳುವಂಥ ಪ್ರವಾದಿಗಳನ್ನು ಕುರಿತು, ಖಡ್ಗದಿಂದಲೂ ಕ್ಷಾಮದಿಂದಲೂ ಆ ಪ್ರವಾದಿಗಳು ತಾವೇ ನಿರ್ಮೂಲವಾಗುತ್ತಾರೆ. ಅಧ್ಯಾಯವನ್ನು ನೋಡಿ |