Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 14:2 - ಕನ್ನಡ ಸತ್ಯವೇದವು J.V. (BSI)

2 ಯೆಹೂದವು ದುಃಖಿಸುತ್ತದೆ, ಅದರ ಊರುಗಳವರು ಕಂಗೆಟ್ಟು ಕರ್ರಗಾಗಿ ನೆಲದ ಮೇಲೆ ಬಿದ್ದಿದ್ದಾರೆ, ಯೆರೂಸಲೇವಿುನವರ ಗೋಳಾಟವು ಕೇಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೂದವು ದುಃಖಿಸುತ್ತದೆ, ಅಲ್ಲಿಯ ಜನರು ಕಂಗೆಟ್ಟು ಕರ್ರಗಾಗಿ ನೆಲದ ಮೇಲೆ ಬಿದ್ದಿದ್ದಾರೆ, ಯೆರೂಸಲೇಮಿನವರ ಗೋಳಾಟವು ಕೇಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಜುದೇಯ ನಾಡು ದುಃಖಿಸುತ್ತಿದೆ ಅದರ ಪುರದ್ವಾರಗಳು ಬಹಳ ಕಪ್ಪಾಗಿವೆ. ಜೆರುಸಲೇಮಿನವರ ಗೋಳಾಟ ಕೇಳಿಸುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಯೆಹೂದ ಜನಾಂಗವು ಸತ್ತುಹೋದವರಿಗಾಗಿ ಗೋಳಾಡುವುದು. ಯೆಹೂದದ ನಗರಗಳಲ್ಲಿದ್ದ ಜನರು ದಿನೇದಿನೇ ನಿಬರ್ಲರಾಗುತ್ತಾರೆ. ಆ ಜನರು ನೆಲದ ಮೇಲೆ ಬಿದ್ದು ಬಿಡುತ್ತಾರೆ. ಜೆರುಸಲೇಮ್ ನಗರದಿಂದ ಜನರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಯೆಹೂದವು ದುಃಖಪಡುತ್ತದೆ. ಅವಳ ನಗರಗಳು ಸೊರಗುತ್ತವೆ; ಅವರು ಭೂಮಿಗಾಗಿ ಗೋಳಾಡುತ್ತಾರೆ, ಯೆರೂಸಲೇಮಿನ ಕೂಗು ಏರಿ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 14:2
30 ತಿಳಿವುಗಳ ಹೋಲಿಕೆ  

ಅವಳ ಪುರದ್ವಾರಗಳಲ್ಲಿ ಪ್ರಲಾಪವೂ ದುಃಖವೂ ತುಂಬಿರುವವು; ಅವಳು ಹಾಳಾಗಿ ನೆಲದ ಮೇಲೆ ಕೂತುಬಿಡುವಳು.


ನನ್ನ ಪ್ರಜೆಯೆಂಬಾಕೆಯ ಭಂಗದಿಂದ ನನಗೆ ಭಂಗವಾಯಿತು, ನಾನು ಕರ್ರಗಾದೆನು, ಭಯವು ನನ್ನನ್ನು ಹಿಡಿದಿದೆ.


ಸಾಯದೆ ಉಳಿದ ಜನರಿಗೂ ಗಡ್ಡೆರೋಗ ಬಂದಿತ್ತು. ಪಟ್ಟಣದ ಗೋಳಾಟವು ಆಕಾಶವನ್ನು ಮುಟ್ಟಿತು.


ಆಗ ಸೇನಾಧೀಶ್ವರ ಯೆಹೋವನು ಇಂತೆಂದನು - ನಾನು ಕೂಗಿದರೂ ಅವರು ಹೇಗೆ ಕೇಳಲಿಲ್ಲವೋ ಹಾಗೆ ಅವರು ಕೂಗಿದರೂ ನಾನು ಕೇಳುವದಿಲ್ಲ;


ಆದಕಾರಣ ಯೆಹೋವನೆಂಬ ನಾನು ಹೀಗನ್ನುತ್ತೇನೆ - ಇಗೋ, ಅವರು ತಪ್ಪಿಸಿಕೊಳ್ಳಲಾರದ ಕೇಡನ್ನು ಅವರ ಮೇಲೆ ಬರಮಾಡುವೆನು; ನನಗೆ ಮೊರೆಯಿಟ್ಟರೂ ಕೇಳೆನು.


ಅವುಗಳ ದೆಸೆಯಿಂದ ಜನಾಂಗಗಳು ಸಂಕಟಪಡುತ್ತವೆ; ಎಲ್ಲರ ಮುಖಗಳೂ ಬಾಡಿಹೋಗುತ್ತವೆ.


ಹೊಲವು ಹಾಳಾಗಿದೆ, ದೇಶವು ದುಃಖಿಸುತ್ತದೆ, ಏಕಂದರೆ ಧಾನ್ಯವು ಸೂರೆಯಾಗಿದೆ, ದ್ರಾಕ್ಷಾರಸವು ತಗ್ಗಿದೆ, ಎಣ್ಣೆಯು ಕುಗ್ಗಿದೆ.


ಹೀಗಿರಲು ದೇಶವು ನರಳುವದು, ಅದರಲ್ಲಿ ವಾಸಿಸುವ ಸಕಲ ಭೂಜಂತುಗಳೂ ಆಕಾಶಪಕ್ಷಿಗಳೂ ಬಳಲಿಹೋಗುವವು; ಸಮುದ್ರದ ಮೀನುಗಳು ಸಹ ನೀಗಿಹೋಗುವವು.


ಕ್ಷಾಮಕಾಲದ ಜ್ವರದಿಂದ ನಮ್ಮ ಚರ್ಮವು ಒಲೆಯಂತೆ ಸುಡುತ್ತದೆ.


ಚೀಯೋನಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಕೊಂಡಿವೆ; ಅದರ ಅಗುಳಿಗಳನ್ನು ಮುರಿದು ಚೂರು ಚೂರು ಮಾಡಿದ್ದಾನೆ; ಅದರ ಅರಸನೂ ಸರದಾರರೂ ಅನ್ಯಜನಾಂಗಗಳೊಳಗೆ ಸೇರಿಕೊಂಡಿದ್ದಾರೆ; ಧರ್ಮೋಪದೇಶವೇ ಕಾಣೆ; ಅದರ ಪ್ರವಾದಿಗಳಿಗೆ ಕೂಡಾ ಯೆಹೋವನಿಂದ ಯಾವ ದರ್ಶನವೂ ಇಲ್ಲ.


ಯುದ್ಧದಲ್ಲಿ ಖಡ್ಗವು ಅವರ ಯುವಕರನ್ನು ವಧಿಸಲಿ. ಸುಲಿಗೆಯವರ ಗುಂಪನ್ನು ಫಕ್ಕನೆ ಅವರ ಮೇಲೆ ಬೀಳಮಾಡು, ಅವರ ಮನೆಗಳೊಳಗಿಂದ ಅರಚಾಟವು ಕೇಳಿಸಲಿ; ಅವರು ನನ್ನನ್ನು ಹಿಡಿಯಲಿಕ್ಕೆ ಗುಂಡಿಯನ್ನು ತೋಡಿ ನನ್ನ ಕಾಲುಗಳಿಗೆ ಪಾಶಗಳನ್ನು ಗುಪ್ತವಾಗಿ ಒಡ್ಡಿದ್ದಾರೆ.


ಇನ್ನೆಷ್ಟರವರೆಗೆ ಎಲ್ಲಾ ಸೀಮೆಯ ಹುಲ್ಲು ಸೊಪ್ಪು ಒಣಗಿ ದೇಶವು ದುಃಖಿಸುತ್ತಿರುವದು? ಅಲ್ಲಿನ ನಿವಾಸಿಗಳು ದುಷ್ಟರಾಗಿರುವದರಿಂದ ಮೃಗಪಕ್ಷಿಗಳು ಬಡಿದುಕೊಂಡು ಹೋಗಿವೆ; ಆಹಾ, ಅವನು ನಮ್ಮ ಅಂತ್ಯಗತಿಯನ್ನು ನೋಡುವದೇ ಇಲ್ಲ ಎಂದು ಹೇಳಿದ್ದಾರಷ್ಟೆ.


ಇದಕ್ಕಾಗಿ ಭೂಲೋಕವು ಪ್ರಲಾಪಿಸುವದು, ಮೇಲೆ ಆಕಾಶವು ಕಪ್ಪಾಗುವದು; ನಾನು ನುಡಿದಿದ್ದೇನೆ, ಪಶ್ಚಾತ್ತಾಪಪಡೆನು; ಉದ್ದೇಶಿಸಿದ್ದೇನೆ, ಹಿಂದೆಗೆಯೆನು.


ದೇಶವು ಪ್ರಲಾಪಿಸಿ ಕುಗ್ಗುತ್ತದೆ, ಲೆಬನೋನ್ ನಾಚಿಕೊಂಡು ಒಣಗುತ್ತದೆ. ಶಾರೋನ್ ಬೆಂಗಾಡಾಗಿದೆ, ಬಾಷಾನ್ ಮತ್ತು ಕರ್ಮೆಲ್ [ತಳಿರುಗಳನ್ನು] ಉದುರಿಸಿಬಿಟ್ಟಿವೆ.


ದ್ರಾಕ್ಷಾರಸವು ವ್ಯಸನಭರಿತವಾಗಿದೆ, ದ್ರಾಕ್ಷೆಯ ಬಳ್ಳಿಯು ಬಾಡಿದೆ, ಹರ್ಷಹೃದಯರೆಲ್ಲಾ ನರಳುತ್ತಾರೆ.


ಭೂವಿುಯು ಪ್ರಲಾಪಿಸುತ್ತಾ ಬಳಲಿದೆ, ಲೋಕವು ಕುಗ್ಗಿ ಹೋಗಿದೆ, ಲೋಕೋನ್ನತರು ಕಂಗೆಟ್ಟಿದ್ದಾರೆ.


ನನ್ನ ಹೃದಯವು ಮೋವಾಬಿನ ನಿವಿುತ್ತವಾಗಿ ಮೊರೆಯಿಡುತ್ತದೆ; ಅಲ್ಲಿಂದ ಪಲಾಯನವಾದವರು ಚೋಯರಿಗೂ ಎಗ್ಲತ್ ಶೆಲಿಶೀಯಕ್ಕೂ ಓಡಿಹೋಗುತ್ತಾರೆ, ಅಳುತ್ತಾ ಲೂಹೀಥ್ ದಿಣ್ಣೆಯನ್ನು ಹತ್ತುತ್ತಾರೆ, ಹೊರೊನಯಿವಿುನ ದಾರಿಯಲ್ಲಿ ನಡೆಯುತ್ತಾ ನಾಶನವಾದೆವಲ್ಲಾ ಎಂದು ದನಿಗೈಯುತ್ತಾರೆ.


ಸೇನಾಧೀಶ್ವರನಾದ ಯೆಹೋವನ ದ್ರಾಕ್ಷೆಯ ತೋಟವು ಇಸ್ರಾಯೇಲ್ಯರ ಮನೆತನ, ಯೆಹೂದದ ಜನವೋ ಆತನ ಇಷ್ಟದ ಗಿಡವೇ; ಆತನು ನ್ಯಾಯವನ್ನು ನಿರೀಕ್ಷಿಸಿದಾಗ ಆಹಾ, ಸಿಕ್ಕಿದ್ದು ನರಹತ್ಯವೇ; ಧರ್ಮವನ್ನು ಎದುರುನೋಡಿದಾಗ ಆಹಾ, ದೊರಕಿದ್ದು ಅರಚಾಟವೇ.


ಹೀಗೆ ಬಡವರ ಗೋಳಾಟವು ದೇವರಿಗೆ ಮುಟ್ಟುವಂತೆ ಮಾಡಿದ್ದರು, ಆತನು ದಿಕ್ಕಿಲ್ಲದವರ ಮೊರೆಯನ್ನು ಆಲೈಸಿದ್ದನು.


ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ದೇಶದವನೊಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು; ನೀನು ಅವನನ್ನು ಇಸ್ರಾಯೇಲ್ಯರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. ಅವರ ಕೂಗು ನನಗೆ ಮುಟ್ಟಿತು; ಅವರನ್ನು ಕಟಾಕ್ಷಿಸಿದ್ದೇನೆ ಎಂದು ತಿಳಿಸಿದ್ದನು.


ದೇವರು ಅವರ ನರಳಾಟವನ್ನು ಕೇಳಿ ತಾನು ಅಬ್ರಹಾಮ ಇಸಾಕ ಯಾಕೋಬರಿಗೆ ಮಾಡಿದ ವಾಗ್ದಾನವನ್ನು ನೆನಪಿಗೆ ತಂದುಕೊಂಡು


ನಮ್ಮ ಎತ್ತುಗಳು ದೊಡ್ಡ ಹೇರುಗಳನ್ನು ಹೊತ್ತು ಬರುವವು. ವೈರಿಗಳು ಒಳಗೆ ನುಗ್ಗುವದಾಗಲಿ ನಮ್ಮವರನ್ನು ಒಯ್ಯುವದಾಗಲಿ ಇರುವದಿಲ್ಲ; ಬೀದಿಗಳಲ್ಲಿ ಗೋಳಾಟವು ಕೇಳಿಸುವದಿಲ್ಲ.


ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲಾ ಅಸ್ತವಿುಸಿದೆ; ಲೋಕದ ಸಡಗರವು ಸೆರೆಯಾಗಿ ತೊಲಗಿದೆ.


ಹೌದು, ಹಾಳು ಮಾಡಿದ್ದಾರೆ, ಅದು ಹಾಳಾಗಿ ನನಗೆ ಗೋಳಿಡುತ್ತದೆ; ಯಾವನೂ ಮನಸ್ಸಿಗೆ ತಾರದ್ದರಿಂದ ದೇಶವೆಲ್ಲಾ ಹಾಳುಬಿದ್ದಿದೆ.


ನಿನ್ನ ಅವಮಾನದ ಸುದ್ದಿಯು ಜನಾಂಗಗಳಿಗೆ ಕೇಳಬಂದಿದೆ, ನಿನ್ನ ಕೂಗಾಟವು ಲೋಕದಲ್ಲೆಲ್ಲಾ ತುಂಬಿದೆ; ವೀರನು ವೀರನನ್ನು ಎಡವಿ ಇಬ್ಬರೂ ಬಿದ್ದಿದ್ದಾರೆ.


ಯೆಹೋವನು ಚೀಯೋನ್ ನಗರಿಯ ಕೋಟೆಯನ್ನು ನಾಶಪಡಿಸಬೇಕೆಂದು ನೂಲನ್ನು ಎಳೆದಿದ್ದಾನೆ; ಹಾಳುಮಾಡುತ್ತಿರುವ ತನ್ನ ಕೈಯನ್ನು ಹಿಂದೆಗೆಯದೆ ಪೌಳಿಗೋಡೆಯೂ ಕೋಟೆಯೂ ಮೊರೆಯುವಂತೆ ಮಾಡಿದ್ದಾನೆ; ಅವೆರಡೂ ಕುಸಿದುಹೋಗಿವೆ.


ದೇಶ, ಬೆಟ್ಟ, ಧಾನ್ಯ, ದ್ರಾಕ್ಷಾರಸ, ಎಣ್ಣೆ, ಭೂವಿುಯ ಉತ್ಪತ್ತಿ, ಮನುಷ್ಯ, ಪಶು, ನಾನಾ ಕೈದುಡಿತ, ಇವುಗಳಿಗೆಲ್ಲಾ ಹಾಳುದೆಶೆ ತಂದಿದ್ದೇನೆ.


ರೈತರೇ, ಕಂಗೆಡಿರಿ! ತೋಟಗಾರರೇ, ಗೋಳಾಡಿರಿ! ಗೋದಿಯೂ ಜವೆಗೋದಿಯೂ ಹಾಳಾಗಿವೆ; ಹೊಲದ ಬೆಳೆಯು ನಾಶವಾಗಿದೆ.


ಉಪವಾಸ ದಿನವನ್ನು ಏರ್ಪಡಿಸಿರಿ; ಸಂಘವನ್ನು ಕೂಡಿಸಿರಿ; ಹಿರಿಯರನ್ನೂ ಸಮಸ್ತ ದೇಶನಿವಾಸಿಗಳನ್ನೂ ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಬರಮಾಡಿ ಯೆಹೋವನಿಗೆ ಮೊರೆಯಿಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು