ಯೆರೆಮೀಯ 14:21 - ಕನ್ನಡ ಸತ್ಯವೇದವು J.V. (BSI)21 ನಿನ್ನ ನಾಮದ ಮೇಲೆ ದೃಷ್ಟಿಯಿಡು, ನಿನ್ನ ಮಹಿಮೆಯ ಸಿಂಹಾಸನವನ್ನು ಅಸಡ್ಡೆಮಾಡಬೇಡ, ಅವಮಾನಪಡಿಸಬೇಡ; ನೀನು ನಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೋ, ಅದನ್ನು ಭಂಗಪಡಿಸದಿರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಿನ್ನ ನಾಮದ ಮೇಲೆ ದೃಷ್ಟಿಯಿಡು, ನಿನ್ನ ಮಹಿಮೆಯ ಸಿಂಹಾಸನವನ್ನು ಅಸಡ್ಡೆಮಾಡಬೇಡ. ಅವಮಾನಪಡಿಸಬೇಡ; ನೀನು ನಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೋ, ಅದನ್ನು ಭಂಗಪಡಿಸದಿರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನಿಮ್ಮ ನಾಮವನ್ನು ಮುಂದಿಟ್ಟು, ನಮಗೆ ಅವಮಾನ ಮಾಡಬೇಡಿ ನಿಮ್ಮ ಮಹಿಮೆಯ ಸಿಂಹಾಸನವನ್ನು ಅಸಡ್ಡೆ ಮಾಡಬೇಡಿ ನಮ್ಮೊಡನೆ ಮಾಡಿದ ಒಡಂಬಡಿಕೆಯನ್ನು ನೆನೆಯಿರಿ. ಅದನ್ನು ಭಂಗಪಡಿಸಬೇಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಯೆಹೋವನೇ, ನಿನ್ನ ಹೆಸರಿನ ಒಳ್ಳೆಯತನ ಉಳಿಸಿಕೊಳ್ಳುವದಕ್ಕಾದರೂ ನಮ್ಮನ್ನು ದೂರ ತಳ್ಳಬೇಡ. ನಿನ್ನ ಮಹಿಮೆಯ ಸಿಂಹಾಸನದ ಗೌರವವನ್ನು ಕುಂದಿಸಬೇಡ. ನೀನು ನಮ್ಮೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಸ್ಮರಿಸಿಕೊ. ಆ ಒಡಂಬಡಿಕೆಯನ್ನು ಮುರಿಯಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನಿಮ್ಮ ನಾಮದ ಮೇಲೆ ದೃಷ್ಟಿಯಿಡಿ, ನಿಮ್ಮ ಮಹಿಮೆಯ ಸಿಂಹಾಸನವನ್ನು ಅಸಡ್ಡೆ ಮಾಡಬೇಡಿ, ಅವಮಾನಪಡಿಸಬೇಡಿ. ನೀವು ನಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೋ, ಅದನ್ನು ಭಂಗಪಡಿಸದಿರಿ. ಅಧ್ಯಾಯವನ್ನು ನೋಡಿ |
ನಿನ್ನ ಸೇವಕರಾದ ಅಬ್ರಹಾಮ್ ಇಸಾಕ್ ಯಾಕೋಬರನ್ನು ನೆನಪಿಗೆ ತಂದುಕೋ. ನೀನು ನಿನ್ನ ಜೀವದಾಣೆ ಪ್ರಮಾಣಮಾಡಿ ಅವರಿಗೆ - ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಮಾಡುವೆನೆಂದೂ ನಾನು ಸೂಚಿಸಿರುವ ಈ ಪ್ರದೇಶಗಳನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನೆಂದೂ ಅವರು ಈ ದೇಶವನ್ನು ಶಾಶ್ವತವಾಗಿ ಸ್ವಾಧೀನದಲ್ಲಿಟ್ಟುಕೊಳ್ಳುವರೆಂದೂ ಮಾತುಕೊಡಲಿಲ್ಲವೇ ಅಂದನು.