Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 14:22 - ಕನ್ನಡ ಸತ್ಯವೇದವು J.V. (BSI)

22 ಜನಾಂಗಗಳ ವ್ಯರ್ಥವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ? ನಮ್ಮ ದೇವರಾದ ಯೆಹೋವಾ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು; ನೀನು ಇವುಗಳನ್ನೆಲ್ಲಾ ನಡಿಸುವವನಾಗಿದ್ದೀಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಜನಾಂಗಗಳ ವ್ಯರ್ಥವಾದ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ? ನಮ್ಮ ದೇವರಾದ ಯೆಹೋವನೇ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು. ನೀನು ಇವುಗಳನ್ನೆಲ್ಲಾ ನಡೆಸುವವನಾಗಿದ್ದೀಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅನ್ಯಜನಾಂಗಗಳ ಶೂನ್ಯದೇವತೆಗಳಲ್ಲಿ ಮಳೆಸುರಿಸಬಲ್ಲವರುಂಟೆ? ಆಕಾಶವು ತಾನಾಗಿ ಹದಮಳೆಯನ್ನು ಬರಮಾಡಬಲ್ಲುದೆ? ನಮ್ಮ ದೇವರಾದ ಸರ್ವೇಶ್ವರಾ, ವೃಷ್ಟಿದಾತರು ನೀವೇ ನಾವು ನಿರೀಕ್ಷಿಸುತ್ತಿರುವುದು ನಿಮ್ಮನ್ನೇ ಹೌದು, ಇವುಗಳನ್ನೆಲ್ಲ ನಡೆಸುವವರು ನೀವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಅನ್ಯರ ವಿಗ್ರಹಗಳಿಗೆ ಮಳೆ ಸುರಿಸುವ ಸಾಮರ್ಥ್ಯವಿಲ್ಲ. ಆಕಾಶಕ್ಕೆ ಮಳೆಯನ್ನು ಸುರಿಸುವ ಸಾಮರ್ಥ್ಯವಿಲ್ಲ. ನೀನೊಬ್ಬನೇ ನಮ್ಮ ಆಶಾಕೇಂದ್ರ. ನೀನೇ ಈ ಎಲ್ಲವುಗಳನ್ನು ಸೃಷ್ಟಿಸಿದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಜನಾಂಗಗಳ ವ್ಯರ್ಥ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದ ಮಳೆಗಳನ್ನು ಕೊಟ್ಟೀತೇ? ಅಲ್ಲ, ನೀವೇ, ನಮ್ಮ ದೇವರಾದ ಯೆಹೋವ ದೇವರು, ನೀವೇ ವೃಷ್ಟಿದಾತರು, ನಾವು ನಿಮ್ಮನ್ನೇ ನಿರೀಕ್ಷಿಸುವೆವು, ನೀವು ಇವುಗಳನ್ನೆಲ್ಲಾ ನಡಿಸುವವರಾಗಿದ್ದೀರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 14:22
39 ತಿಳಿವುಗಳ ಹೋಲಿಕೆ  

ಚೀಯೋನಿನ ಸಂತತಿಯವರೇ, ನಿಮ್ಮ ದೇವರಾದ ಯೆಹೋವನಲ್ಲಿ ಹರ್ಷಿಸಿರಿ, ಉಲ್ಲಾಸಿಸಿರಿ; ಆತನು ಮುಂಗಾರನ್ನು ತಕ್ಕ ಹಾಗೆ ನಿಮಗೆ ಕೊಡುವನು; ಮುಂಗಾರು ಹಿಂಗಾರು ಮಳೆಗಳನ್ನು ಮೊದಲಿನಂತೆ ನಿಮಗಾಗಿ ಸುರಿಸುವನು.


ಮುಂಗಾರು, ಹಿಂಗಾರು ಅಂತು ಸಕಾಲದ ಮಳೆಯನ್ನು ದಯಪಾಲಿಸಿ ಸುಗ್ಗಿಯ ಕ್ಲುಪ್ತವಾರಗಳನ್ನು ನಮಗಾಗಿ ಪ್ರತ್ಯೇಕಪಡಿಸುವ ನಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯಿಡೋಣ ಎಂದು ಮನದಲ್ಲಿ ಅಂದುಕೊಳ್ಳುವದಿಲ್ಲ.


ಆತನು ಭೂವಿುಯ ಕಟ್ಟಕಡೆಯಿಂದ ಮೋಡಗಳನ್ನು ಏರಮಾಡುತ್ತಾನೆ; ಮಳೆಗೋಸ್ಕರ ವಿುಂಚನ್ನು ಹೊಳೆಯಮಾಡುತ್ತಾನೆ; ತನ್ನ ಉಗ್ರಾಣದಿಂದ ಗಾಳಿಯನ್ನು ಬೀಸಮಾಡುತ್ತಾನೆ.


ಆಗ ನೀವು ಹೊಲದಲ್ಲಿ ಬೀಜಬಿತ್ತುವದಕ್ಕೆ ಆತನು ಬಿತ್ತನೆಯ ಮಳೆಯನ್ನು ದಯಪಾಲಿಸುವನು; ನೆಲದ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವನು; ಆ ದಿನದಲ್ಲಿ ನಿಮ್ಮ ಮಂದೆಗಳು ದೊಡ್ಡದೊಡ್ಡ ಕಾವಲುಗಳಲ್ಲಿ ಮೇಯುವವು.


ಅವರು ದೇವರಲ್ಲದವುಗಳ ಮೂಲಕ ನನ್ನನ್ನು ರೇಗಿಸಿದ್ದರಿಂದ ನಾನು ಜನಾಂಗವಲ್ಲದವರ ಮೂಲಕ ಅವರಲ್ಲಿ ಹುರುಡು ಹುಟ್ಟಿಸುವೆನು. ಅವರು ಅಚೇತನ ವಿಗ್ರಹಗಳ ಮೂಲಕ ನನ್ನನ್ನು ಸಿಟ್ಟಿಗೆಬ್ಬಿಸಿದ್ದರಿಂದ ನಾನು ಸದಾಚಾರವಿಲ್ಲದ ಜನರ ಮೂಲಕ ಅವರನ್ನು ಸಿಟ್ಟಿಗೆಬ್ಬಿಸುವೆನು.


ಆತನ ಗರ್ಜನೆಗೆ ಆಕಾಶದಲ್ಲಿ ನೀರು ಮೊರೋ ಎನ್ನುತ್ತದೆ; ಆತನು ಭೂವಿುಯ ಕಟ್ಟಕಡೆಯಿಂದ ಮೋಡಗಳನ್ನು ಏರಮಾಡುತ್ತಾನೆ; ಮಳೆಗೋಸ್ಕರ ವಿುಂಚನ್ನು ಹೊಳೆಯಮಾಡುತ್ತಾನೆ; ತನ್ನ ಭಂಡಾರದಿಂದ ಗಾಳಿಯನ್ನು ಬೀಸಮಾಡುತ್ತಾನೆ.


(ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ - ನಮ್ಮ ಪಿತೃಗಳು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ ಎಂದು ಅರಿಕೆ ಮಾಡುವರು.


ಅವು ವ್ಯರ್ಥ, ಹಾಸ್ಯಾಸ್ಪದವಾದ ಕೆಲಸ; ದಂಡನೆಯಾಗುವಾಗ ಅಳಿದು ಹೋಗುವವು;


ಆಹಾ, ಇವರೆಲ್ಲಾ ಮಾಯೆ, ಇವರ ಕಾರ್ಯಗಳು ಶೂನ್ಯ, ಇವರ ಎರಕದ ಬೊಂಬೆಗಳು ಗಾಳಿಯೇ, ಹಾಳೇ!


ನಾನು ಯೆಹೋವನನ್ನು ಎದುರುನೋಡುತ್ತೇನೆ; ನನ್ನ ಪ್ರಾಣವು ಆತನನ್ನು ಕಾದುಕೊಂಡಿದೆ; ಆತನ ನುಡಿಯನ್ನು ನಿರೀಕ್ಷಿಸಿಕೊಂಡಿದ್ದೇನೆ.


ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ; ನಿರ್ದೋಷಭಕ್ತಿಯೂ ಯಥಾರ್ಥತ್ವವೂ ನನ್ನನ್ನು ಕಾಯಲಿ.


ಇಸ್ರಾಯೇಲ್ ದೇವರಾದ ಯೆಹೋವನು ನಿನಗೆ - ನಾನು ದೇಶಕ್ಕೆ ಮಳೆಯನ್ನು ಕಳುಹಿಸುವವರೆಗೆ ನಿನ್ನ ಮಡಕೆಯಲ್ಲಿರುವ ಹಿಟ್ಟು ತೀರುವದಿಲ್ಲ, ಮೊಗೆಯಲ್ಲಿರುವ ಎಣ್ಣೆಯು ಮುಗಿದುಹೋಗುವದಿಲ್ಲ ಎಂದು ಹೇಳುತ್ತಾನೆ ಅಂದನು.


ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯನಾದ ಎಲೀಯ ಎಂಬವನು ಅಹಾಬನಿಗೆ - ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್‍ದೇವರಾದ ಯೆಹೋವನಾಣೆ, ನಾನು ಸೂಚಿಸಿದ ಹೊರತು ಇಂದಿನಿಂದ ಕೆಲವು ವರುಷಗಳವರೆಗೆ ಮಳೆಯಾಗಲಿ ಮಂಜಾಗಲಿ ಬೀಳುವದಿಲ್ಲ ಅಂದನು.


ಯೆಹೋವನು ಆಕಾಶದಲ್ಲಿರುವ ತನ್ನ ಜಲನಿಧಿಯನ್ನು ತೆರೆದು ನಿಮ್ಮ ದೇಶದ ಮೇಲೆ ಬೆಳೆಗೆ ಬೇಕಾದ ಹಾಗೆ ಮಳೆಯನ್ನು ಸುರಿಸಿ ನಿಮ್ಮ ಎಲ್ಲಾ ವ್ಯವಸಾಯವನ್ನೂ ಸಫಲಮಾಡುವನು. ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಸಾಲತೆಗೆದುಕೊಳ್ಳುವದಿಲ್ಲ.


ನಾನಂತು ಯೆಹೋವನನ್ನು ಎದುರು ನೋಡುವೆನು; ನನ್ನ ರಕ್ಷಕನಾದ ದೇವರನ್ನು ಕಾದುಕೊಳ್ಳುವೆನು; ನನ್ನ ದೇವರು ನನ್ನ ಕಡೆಗೆ ಕಿವಿಗೊಡುವನು,


ಸುಗ್ಗಿಗೆ ಮೂರು ತಿಂಗಳು ಕಳೆಯಬೇಕಾದಾಗಲೂ ನಿಮಗೆ ಮಳೆಯನ್ನು ತಡೆದೆನು; ಒಂದು ಊರಿನ ಮೇಲೆ ಮಳೆಯಾಗುವಂತೆಯೂ ಇನ್ನೊಂದು ಊರಿನ ಮೇಲೆ ಮಳೆಯಾಗದಂತೆಯೂ ಮಾಡಿದೆನು; ಒಬ್ಬನ ಹೊಲದಲ್ಲಿ ಮಳೆಯಾಯಿತು, ಮಳೆಯಾಗದ ಹೊಲವು ಬಾಡಿಹೋಯಿತು.


ಆತನ ಗರ್ಜನೆಗೆ ಆಕಾಶದಲ್ಲಿ ನೀರು ಮೊರೋ ಎನ್ನುತ್ತದೆ; ಆತನು ಭೂವಿುಯ ಕಟ್ಟಕಡೆಯಿಂದ ಮೋಡಗಳನ್ನು ಏರಮಾಡುತ್ತಾನೆ; ಮಳೆಗೋಸ್ಕರ ವಿುಂಚನ್ನು ಹೊಳೆಯಮಾಡುತ್ತಾನೆ; ತನ್ನ ಭಂಡಾರದಿಂದ ಗಾಳಿಯನ್ನು ಬೀಸಮಾಡುತ್ತಾನೆ.


ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.


ಆತನು ಆಕಾಶದಲ್ಲಿ ಮೋಡಗಳನ್ನು ಕವಿಸುತ್ತಾನೆ; ಭೂವಿುಗೋಸ್ಕರ ಮಳೆಯನ್ನು ಸಿದ್ಧಮಾಡುತ್ತಾನೆ; ಬೆಟ್ಟಗಳಲ್ಲಿ ಹುಲ್ಲನ್ನು ಬೆಳಸುತ್ತಾನೆ.


ಯೆಹೋವನನ್ನು ನಿರೀಕ್ಷಿಸಿಕೊಂಡಿರು; ದೃಢವಾಗಿರು; ನಿನ್ನ ಹೃದಯವು ಧೈರ್ಯದಿಂದಿರಲಿ; ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು.


ವೃಥಾದ್ರೋಹಿಗಳಿಗೆ ಆಶಾಭಂಗವಾಗಬೇಕೇ ಹೊರತು ನಿನ್ನನ್ನು ನಿರೀಕ್ಷಿಸಿದವರಿಗೆ ಎಂದಿಗೂ ಆಗಬಾರದು.


ಭೂವಿುಯ ಮೇಲೆ ಮಳೆಸುರಿಸಿ ಹೊಲಗದ್ದೆಗಳಿಗೆ ನೀರನ್ನು ಒದಗಿಸುತ್ತಾನೆ.


ಅನೇಕ ದಿವಸಗಳಾದನಂತರ ಎಲೀಯನಿಗೆ ಯೆಹೋವನ ವಾಕ್ಯವುಂಟಾಯಿತು. ಬರಗಾಲದ ಮೂರನೆಯ ವರುಷದಲ್ಲಿ ಆತನು ಅವನಿಗೆ - ನೀನು ಹೋಗಿ ಅಹಾಬನನ್ನು ಕಾಣು; ನಾನು ದೇಶಕ್ಕೆ ಮಳೆ ಕೊಡುತ್ತೇನೆ ಅಂದನು.


ಪರಲೋಕದಲ್ಲಿರುವ ನೀನು ಲಾಲಿಸಿ ನಿನ್ನ ಸೇವಕರೂ ಪ್ರಜೆಗಳೂ ಆದ ಇಸ್ರಾಯೇಲ್ಯರ ಪಾಪಗಳನ್ನು ಕ್ಷವಿುಸಿ ಅವರು ನಡೆಯಬೇಕಾದ ಮಾರ್ಗವನ್ನು ತೋರಿಸಿ ನಿನ್ನ ಪ್ರಜೆಗೆ ಸ್ವಾಸ್ತ್ಯವಾಗಿ ಕೊಟ್ಟ ದೇಶಕ್ಕೆ ಮಳೆಯನ್ನು ಅನುಗ್ರಹಿಸು.


ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಮೂಡುವಂತೆ ಮಾಡುತ್ತಾನೆ; ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆಸುರಿಸುತ್ತಾನೆ.


ಅವರು ಯೆಹೋವನನ್ನು ಅಲ್ಲಗಳೆದು - ಆತನು ಏನು ಮಾಡಿಯಾನು? ನಮಗೆ ಕೇಡುಬಾರದು, ಖಡ್ಗವೂ ಕ್ಷಾಮವೂ ನಮ್ಮ ಕಣ್ಣಿಗೆ ಬೀಳವು;


ಜನಾಂಗಗಳ ಕಟ್ಟಳೆಗಳು ಬರಿದೇ; ಅರಣ್ಯದ ಮರವನ್ನು ಕತ್ತರಿಸುವರು, ಬಡಗಿಯು ಅದನ್ನು ಕೈಯಿಂದ, ಬಾಚಿಯಿಂದ ರೂಪಿಸುವನು.


ಅವಳು ತನ್ನ ವಿುಂಡರನ್ನು ಹಿಂದಟ್ಟಿದರೂ ಅವರನ್ನು ಸಂಧಿಸಳು; ಅವರನ್ನು ಹುಡುಕಿದರೂ ಅವರು ಸಿಕ್ಕರು; ಆಗ ಅವಳು - ನನ್ನ ಮದುವೆಯ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು, ಈಗಿನ ನನ್ನ ಸ್ಥಿತಿಗಿಂತ ಆಗಿನ ಸ್ಥಿತಿಯು ಎಷ್ಟೋ ಲೇಸು ಅಂದುಕೊಳ್ಳುವಳು.


ಮಳೆಗೆ ಕಟ್ಟಳೆಯನ್ನೂ ಗರ್ಜಿಸುವ ಸಿಡಿಲಿಗೆ ದಾರಿಯನ್ನೂ ಏರ್ಪಡಿಸಿದಾಗಲೇ


ಆತನು ತನ್ನ ಶಕ್ತಿಯಿಂದ ಭೂವಿುಯನ್ನು ನಿರ್ಮಿಸಿ ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶಮಂಡಲವನ್ನು ಹರಡಿದ್ದಾನೆ;


ಅವರ ಕತ್ತಿಯು ಅಶ್ಶೂರ ದೇಶವನ್ನು ತಿಂದುಬಿಡುವದು, ನಿಮ್ರೋದ್ ಸೀಮೆಯ ಪ್ರವೇಶಸ್ಥಾನಗಳು ಅವರ ಖಡ್ಗಕ್ಕೆ ತುತ್ತಾಗುವವು; ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ ನಮ್ಮ ಪ್ರಾಂತವನ್ನು ತುಳಿದುಹಾಕುವಾಗ [ಆ ಸಮಾಧಾನಪ್ರದನು] ನಮ್ಮನ್ನು ಅವರ ಕೈಯೊಳಗಿಂದ ಉದ್ಧರಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು