Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 15:1 - ಕನ್ನಡ ಸತ್ಯವೇದವು J.V. (BSI)

1 ಯೆಹೋವನು ನನಗೆ ಹೀಗೆ ಹೇಳಿದನು - ಮೋಶೆಯೂ ಸಮುವೇಲನೂ ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗದು; ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿಹೋಗಲಿ! ಅವರು - ನಾವು ಎಲ್ಲಿಗೆ ಹೋಗೋಣ ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ನನಗೆ ಹೀಗೆ ಹೇಳಿದನು, “ಮೋಶೆಯು ಮತ್ತು ಸಮುವೇಲನು ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗುವುದಿಲ್ಲ. ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿ ಹೋಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು : “ಮೋಶೆ ಮತ್ತು ಸಮುವೇಲನು ನನ್ನ ಮುಂದೆ ನಿಂತು ವಿಜ್ಞಾಪಿಸಿದರೂ ನಾನು ಈ ಜನರ ಬಗ್ಗೆ ನನ್ನ ಮನಸ್ಸನ್ನು ಬದಲಾಯಿಸೆನು. ಇವರನ್ನು ನನ್ನ ಸಮ್ಮುಖದಿಂದ ತಳ್ಳಿಬಿಡು; ತೊಲಗಿಹೋಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಯೆಹೂದದ ಜನರಿಗಾಗಿ ಪ್ರಾರ್ಥಿಸಿ, ಬೇಡಿಕೊಳ್ಳಲು ಮೋಶೆಯೂ ಸಮುವೇಲನೂ ಇದ್ದಿದ್ದರೂ ನಾನು ಈ ಜನರ ಬಗ್ಗೆ ಮರುಕಪಡುತ್ತಿರಲಿಲ್ಲ. ಯೆಹೂದದ ಜನರನ್ನು ನನ್ನಿಂದ ದೂರ ಕಳುಹಿಸು. ಅವರಿಗೆ ಹೋಗಲು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಮೋಶೆಯೂ ಸಮುಯೇಲನೂ ನನ್ನ ಮುಂದೆ ನಿಂತರೂ, ನನ್ನ ಮನಸ್ಸು ಈ ಜನರ ಮೇಲೆ ಇರುವುದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿಬಿಡು. ಅವರು ಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 15:1
32 ತಿಳಿವುಗಳ ಹೋಲಿಕೆ  

ನೋಹ ದಾನಿಯೇಲ ಯೋಬ ಎಂಬೀ ಮೂವರು ಪುರುಷರು ಅದರಲ್ಲಿದ್ದರೂ ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರು; ಇದು ಕರ್ತನಾದ ಯೆಹೋವನ ನುಡಿ.


ಮತ್ತು ಯೆಹೋವನು ನನಗೆ - ಈ ಜನರ ಹಿತವನ್ನು ಬಯಸಿ ಇವರಿಗೋಸ್ಕರ ಪ್ರಾರ್ಥನೆಮಾಡಬೇಡ.


ಆದಕಾರಣ ಈ ಜನರಿಗೋಸ್ಕರ ಬೇಡಿಕೊಳ್ಳಬೇಡ, ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಲೂ ಬೇಡ; ಅವರು ತಮ್ಮ ಕೇಡಿನ ನಿವಿುತ್ತ ನನಗೆ ಮೊರೆಯಿಡುವಾಗ ನಾನು ಕೇಳೆನು.


ಆದದರಿಂದ ಆತನು ಅವರನ್ನು ಸಂಹರಿಸುವೆನೆನ್ನಲು ಆತನು ಆರಿಸಿಕೊಂಡ ಮೋಶೆಯು ಮಧ್ಯಸ್ಥನಾಗಿ ಅವರನ್ನು ಸಂಹರಿಸದಂತೆ ಆತನ ಕೋಪವನ್ನು ಶಾಂತಪಡಿಸಿದನು.


ಆತನ ಯಾಜಕರಲ್ಲಿ ಮೋಶೆ ಆರೋನರೂ ಆತನ ಹೆಸರಿನಲ್ಲಿ ಪ್ರಾರ್ಥಿಸುವವರೊಳಗೆ ಸಮುವೇಲನೂ ಪ್ರಾರ್ಥಿಸಿಕೊಂಡಾಗೆಲ್ಲಾ ಯೆಹೋವನು ಅವರಿಗೆ ಸದುತ್ತರವನ್ನು ದಯಪಾಲಿಸುತ್ತಿದ್ದನು.


ನಾನಾದರೋ ನಿಮಗೋಸ್ಕರವಾಗಿ ಯೆಹೋವನನ್ನು ಪ್ರಾರ್ಥಿಸುತ್ತಾ ಆತನ ಉತ್ತಮ ನೀತಿಮಾರ್ಗವನ್ನು ನಿಮಗೆ ತೋರಿಸಿಕೊಡುವದನ್ನು ಬಿಡುವದೇ ಇಲ್ಲ; ಬಿಟ್ಟರೆ ಆತನ ದೃಷ್ಟಿಯಲ್ಲಿ ಪಾಪಿಯಾಗಿರುವೆನು.


ಆತನು ಇಸ್ರಾಯೇಲ್‍ಕುಲಗಳಲ್ಲಿ ಉಳಿದಿದ್ದ ಇವರನ್ನೂ ಹೇಸಿ ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟು ಸೂರೆಮಾಡುವವರಿಗೆ ಒಪ್ಪಿಸಿ ಬಾಧಿಸಿದನು.


ಆಗ ಸಮುವೇಲನು ಹಾಲುಕುಡಿಯುವ ಕುರಿಮರಿಯನ್ನು ತಂದು ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಿ ಇಸ್ರಾಯೇಲ್ಯರಿಗೋಸ್ಕರ ಮೊರೆಯಿಡಲು ಆತನು ಸದುತ್ತರವನ್ನು ದಯಪಾಲಿಸಿದನು. ಹೇಗಂದರೆ -


ಯೆಹೋವನು ಯೆರೂಸಲೇವಿುನವರ ಮೇಲೆಯೂ ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ ಕಡೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವಷ್ಟು ರೋಷವುಳ್ಳವನಾದನು. ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರಿಗಿಬಿದ್ದದರಿಂದ


ಇಗೋ, ಖಂಡಿತವಾಗಿ ನಿಮ್ಮನ್ನೂ ನಾನು ನಿಮಗೆ ಮತ್ತು ನಿಮ್ಮ ಪಿತೃಗಳಿಗೆ ದಯಪಾಲಿಸಿದ ಪಟ್ಟಣವನ್ನೂ ಭಾರವೆಂದು ಎತ್ತಿ ನನ್ನೆದುರಿನಿಂದ ಎಸೆದುಬಿಟ್ಟು


ಮೇಲಿಗೆ ಮುಯ್ಯಾಗಿ ಕೇಡು ಆಗ ತಕ್ಕದ್ದೋ? ನನ್ನ ಪ್ರಾಣವನ್ನು ಹಿಡಿಯಬೇಕೆಂದು ಗುಂಡಿಯನ್ನು ತೋಡಿದ್ದಾರಲ್ಲಾ. ಅವರ ಮೇಲಣ ನಿನ್ನ ರೋಷವನ್ನು ತಪ್ಪಿಸಲು ನಾನು ನಿನ್ನ ಮುಂದೆ ನಿಂತುಕೊಂಡು ಅವರ ಹಿತಕ್ಕಾಗಿ ವಿಜ್ಞಾಪಿಸಿಕೊಂಡದ್ದನ್ನು ಚಿತ್ತವಿಸು.


ಇದರಿಂದ ಯೆಹೋವನು ಹೀಗಂದಿದ್ದಾನೆ - ನೀನು [ನನ್ನ ಕಡೆಗೆ] ಹಿಂದಿರುಗಿದರೆ ನನ್ನ ಸಮ್ಮುಖದಲ್ಲಿ ನಿಲ್ಲುವಂತೆ ನಾನು ನಿನ್ನನ್ನು ತಿರುಗಿ ಸೇರಿಸಿಕೊಳ್ಳುವೆನು; ನೀನು ತುಚ್ಫವಾದದ್ದನ್ನು ನಿರಾಕರಿಸಿ ಅಮೂಲ್ಯವಾದದ್ದನ್ನು ಪ್ರಕಾಶಪಡಿಸಿದರೆ ನೀನು ನನ್ನ ಬಾಯಂತಿರುವಿ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು, ನೀನು ಅವರ ಕಡೆಗೆ ತಿರುಗದಿರುವಿ.


ಜಾಣನಾದ ಸೇವಕನಿಗೆ ರಾಜನ ಕೃಪೆ; ಮಾನಗೇಡಿಗೆ ರಾಜನ ರೌದ್ರ.


ಯಾಕಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಅನುರೂಪ ಮಾತ್ರವಾದದ್ದಾಗಿಯೂ ಕೈಯಿಂದ ಕಟ್ಟಿದ್ದಾಗಿಯೂ ಇರುವ ಆಲಯದಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳುವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.


ರೇಕಾಬನ ಮಗನಾದ ಯೋನಾದಾಬನ ಸಂತಾನದವರೊಳಗೆ ನನ್ನ ಸಮ್ಮುಖಸೇವೆಮಾಡತಕ್ಕವರು ತಲತಲಾಂತರಕ್ಕೂ ಇದ್ದೇ ಇರುವರು. ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇದನ್ನು ನುಡಿದಿದ್ದಾನೆ.


ನಾನು ಇಸ್ರಾಯೇಲ್ ನಾಯಕರಲ್ಲಿಯೂ ಸ್ವೇಚ್ಫೆಯಿಂದ ಸೈನ್ಯದಲ್ಲಿ ಸೇರಿದ ಜನರಲ್ಲಿಯೂ ಸಂತೋಷಿಸುತ್ತೇನೆ; ಯೆಹೋವನನ್ನು ಕೊಂಡಾಡಿರಿ.


ಇತ್ತಲಾಗಿ ಅಬ್ರಹಾಮನು ಬೆಳಿಗ್ಗೆ ಎದ್ದು ತಾನು ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದ ಸ್ಥಳಕ್ಕೆ ತಿರಿಗಿ ಬಂದು


ಯೆಹೋಶುವನು ದೇವದೂತನ ಮುಂದೆ ಕೊಳೆಬಟ್ಟೆಯಾಗಿ ನಿಂತಿರಲು


ನಾನು ಆತನನ್ನು ಬೇಡಿಕೊಳ್ಳುತ್ತಾ - ಕರ್ತನಾದ ಯೆಹೋವನೇ, ನೀನು ನಿನ್ನ ಮಹಿಮೆಯಿಂದ ರಕ್ಷಿಸಿ ನಿನ್ನ ಭುಜಬಲದಿಂದ ಐಗುಪ್ತ್ಯರಿಂದ ಬಿಡುಗಡೆಮಾಡಿದ ನಿನ್ನ ಸ್ವಕೀಯ ಜನರನ್ನು ನಾಶಮಾಡಬೇಡ.


ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪವು ಕೂಡಿತು; ಆದದರಿಂದ ನಿನ್ನ ಸೇವಕರಾದ ನಾವು ಸಾಯದಂತೆ ನಿನ್ನ ದೇವರಾದ ಯೆಹೋವನನ್ನು ಬೇಡಿಕೋ ಎಂದು ವಿಜ್ಞಾಪಿಸಲು ಅವನು -


ಅಯ್ಯೋ, ಹಾಳಾದೆವು, ಭಂಗಪಟ್ಟೆವು; ನಾವು ನಮ್ಮ ದೇಶವನ್ನು ಬಿಟ್ಟೆವಲ್ಲಾ, [ಶತ್ರುಗಳು] ನಮ್ಮ ಮನೆಗಳನ್ನು ಕೆಡವಿದ್ದಾರಲ್ಲಾ ಎಂಬ ಪ್ರಲಾಪಧ್ವನಿಯು ಚೀಯೋನಿನೊಳಗಿಂದ ಕೇಳಿಸುತ್ತದೆ.


ಇಗೋ, ನಾನು ಈ ಸಾರಿ ದೇಶನಿವಾಸಿಗಳನ್ನು ಎಸೆದೇ ಬಿಡುವೆನು, ಅವರಿಗೆ ಬುದ್ಧಿಬರಲೆಂದು ಅವರನ್ನು ಬಾಧಿಸುವೆನು ಎಂದು ಯೆಹೋವನು ಅನ್ನುತ್ತಾನೆ.


ಯೆಹೋವನು [ನನಗೆ] ಹೀಗೆ ಹೇಳಿದ್ದಾನೆ - ಗೋಳಾಟದ ಮನೆಯಲ್ಲಿ ಸೇರಬೇಡ, ಪ್ರಲಾಪಿಸಲಿಕ್ಕೆ ಹೋಗಬೇಡ, ಅವರಿಗಾಗಿ ಎದೆ ಬಡುಕೊಳ್ಳಲೂಬೇಡ; ನಾನು ದಯಪಾಲಿಸಿದ ಸಮಾಧಾನವನ್ನು, ಅಂದರೆ ನನ್ನ ಪ್ರೀತಿಯನ್ನೂ ಕೃಪೆಯನ್ನೂ ಈ ಜನರಿಂದ ತೆಗೆದುಬಿಟ್ಟಿದ್ದೇನಷ್ಟೆ.


ನೀವಾಗಲಿ ನಿಮ್ಮ ಪಿತೃಗಳಾಗಲಿ ನೋಡದ ದೇಶಕ್ಕೆ ನಿಮ್ಮನ್ನು ಈ ದೇಶದೊಳಗಿಂದ ಎಸೆದುಬಿಡುವೆನು; ಅಲ್ಲಿ ಹಗಲಿರುಳೂ ಅನ್ಯದೇವತೆಗಳನ್ನು ಸೇವಿಸುವಿರಿ; ನಾನು ನಿಮಗೆ ದಯೆತೋರಿಸೆನು.


ಕೊನ್ಯನೆಂಬ ಈ ಮನುಷ್ಯನು ಅಸಡ್ಡೆಗೀಡಾದ ಒಡಕು ಗಡಿಗೆಯೋ? ಯಾರಿಗೂ ಇಷ್ಟವಲ್ಲದ ಮಡಿಕೆಯೋ? ಅವನೂ ಅವನ ಸಂತತಿಯವರೂ ಏಕೆ ಬಿಸಾಡಲ್ಪಟ್ಟಿದ್ದಾರೆ? ನೋಡದ ದೇಶಕ್ಕೆ ಏಕೆ ಎಸೆಯಲ್ಪಟ್ಟಿದ್ದಾರೆ?


ನಾನು ದೇಶವನ್ನು ಹಾಳುಮಾಡದಂತೆ ನನ್ನೆದುರಿಗೆ ದೇಶರಕ್ಷಣೆಗಾಗಿ ಪೌಳಿಯ ಒಡಕಿನಲ್ಲಿ ನಿಲ್ಲುವದಕ್ಕೂ ಗೋಡೆಯನ್ನು ಗಟ್ಟಿಮಾಡುವದಕ್ಕೂ ತಕ್ಕವನನ್ನು ನಾನು ಹುಡುಕಲು ಯಾರೂ ಸಿಕ್ಕಲಿಲ್ಲ.


ಇವರು ಉಪವಾಸ ಮಾಡುವಾಗ ಇವರ ಮೊರೆಯನ್ನು ಕೇಳೆನು; ಹೋಮನೈವೇದ್ಯಗಳನ್ನು ಅರ್ಪಿಸಲು ಸ್ವೀಕರಿಸೆನು; ಖಡ್ಗ ಕ್ಷಾಮ ವ್ಯಾಧಿಗಳಿಂದ ಇವರನ್ನು ನಿರ್ಮೂಲಮಾಡುವೆನು ಎಂದು ಹೇಳಿದನು.


ಅವರ ದುಷ್ಟತನವು ಗಿಲ್ಗಾಲಿನಲ್ಲಿ ತುಂಬಿದೆ; ಅಲ್ಲೇ ನನ್ನ ದ್ವೇಷಕ್ಕೆ ಗುರಿಯಾಗಿದ್ದಾರೆ; ಅವರ ದುಷ್ಕೃತ್ಯಗಳ ನಿವಿುತ್ತ ನಾನು ಅವರನ್ನು ನನ್ನ ನಿವಾಸದೊಳಗಿಂದ ಓಡಿಸಿಬಿಡುವೆನು; ಅವರನ್ನು ಇನ್ನು ಪ್ರೀತಿಸೆನು; ಅವರ ಅಧಿಕಾರಿಗಳೆಲ್ಲರೂ ದ್ರೋಹಿಗಳೇ ಸರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು