Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 15:14 - ಕನ್ನಡ ಸತ್ಯವೇದವು J.V. (BSI)

14 ನಿನ್ನ ಶತ್ರುಗಳ ಕೈಗೆ ಕೊಟ್ಟು ನೀನು ನೋಡದ ದೇಶಕ್ಕೆ ಸಾಗಿಸಿಬಿಡುವೆನು. ನನ್ನ ರೋಷದಿಂದ ಉರಿಯು ಹತ್ತಿಕೊಂಡಿದೆ, ಅದು ನಿಮ್ಮನ್ನು ಸುಟ್ಟುಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವುಗಳನ್ನು ನಿನ್ನ ಶತ್ರುಗಳ ಕೈಗೆ ಕೊಟ್ಟು, ನೀನು ನೋಡದ ದೇಶಕ್ಕೆ ಸಾಗಿಸಿಬಿಡುವೆನು. ನನ್ನ ರೋಷದಿಂದ ಉರಿಯು ಹತ್ತಿಕೊಂಡಿದೆ, ಅದು ನಿಮ್ಮನ್ನು ಸುಟ್ಟುಬಿಡುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅಪರಿಚಿತ ನಾಡಿಗೆ ಅವರನ್ನು ಸಾಗಿಸುವೆನು. ಅಲ್ಲಿ ಶತ್ರುಗಳಿಗೇ ಊಳಿಗದವರನ್ನಾಗಿಸುವೆನು. ಏಕೆಂದರೆ ನನ್ನ ಕೋಪಾಗ್ನಿ ಉರಿಯುತ್ತಿದೆ. ಅದು ನಿಮ್ಮನ್ನು ಸುಟ್ಟುಹಾಕುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೂದದ ಜನರೇ, ನಾನು ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವೆನು. ಅವರು ನೀವೆಂದೂ ತಿಳಿಯದ ಪ್ರದೇಶದಿಂದ ಬಂದು ನಿಮ್ಮನ್ನು ಅಲ್ಲಿಗೆ ಸಾಗಿಸುವರು. ನನಗೆ ಅತಿಕೋಪ ಬಂದಿದೆ. ನನ್ನ ಕೋಪವು ಜ್ವಾಲೆಯಂತಿದೆ. ಆ ಜ್ವಾಲೆಯಿಂದ ನೀವು ಸುಟ್ಟುಹೋಗುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿನ್ನ ಶತ್ರುಗಳ ಕೈಗೆ ಕೊಟ್ಟು, ನಿನ್ನನ್ನು ಗೊತ್ತಿಲ್ಲದ ದೇಶಕ್ಕೆ ಸಾಗಿಸಿಬಿಡುವೆನು. ನನ್ನ ರೋಷದಿಂದ ಉರಿಯು ಹತ್ತಿಕೊಂಡಿದೆ, ಅದು ನಿಮ್ಮನ್ನು ಸುಟ್ಟುಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 15:14
18 ತಿಳಿವುಗಳ ಹೋಲಿಕೆ  

ನೀವಾಗಲಿ ನಿಮ್ಮ ಪಿತೃಗಳಾಗಲಿ ನೋಡದ ದೇಶಕ್ಕೆ ನಿಮ್ಮನ್ನು ಈ ದೇಶದೊಳಗಿಂದ ಎಸೆದುಬಿಡುವೆನು; ಅಲ್ಲಿ ಹಗಲಿರುಳೂ ಅನ್ಯದೇವತೆಗಳನ್ನು ಸೇವಿಸುವಿರಿ; ನಾನು ನಿಮಗೆ ದಯೆತೋರಿಸೆನು.


ನನ್ನ ಕೋಪಾಗ್ನಿ ಪ್ರಜ್ವಲಿಸುತ್ತದೆ; ಅದು ಪಾತಾಳದವರೆಗೂ ವ್ಯಾಪಿಸಿ ಬೆಳೆ ಸಹಿತವಾಗಿ ಭೂವಿುಯನ್ನೂ ಬುಡಸಹಿತವಾಗಿ ಬೆಟ್ಟಗಳನ್ನೂ ದಹಿಸಿಬಿಡುವದು.


ನಾನು ನಿಮಗೆ ದಯಪಾಲಿಸಿದ ಸ್ವಾಸ್ತ್ಯವನ್ನು ಸ್ವದೋಷದಿಂದಲೇ ಕಳೆದುಕೊಳ್ಳುವಿರಿ; ನೀವು ನೋಡದ ದೇಶದಲ್ಲಿ ನಿಮ್ಮನ್ನು ನಿಮ್ಮ ಶತ್ರುಗಳಿಗೆ ದಾಸರನ್ನಾಗಿ ಮಾಡುವೆನು; ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ, ಅದು ನಿತ್ಯವೂ ಜ್ವಲಿಸುತ್ತಿರುವದು.


ನೀನು ಪ್ರತ್ಯಕ್ಷನಾಗುವಾಗ ಉರಿಯುವ ಕುಲುಮೆಯಂತಿದ್ದು ಅವರನ್ನು ಬೂದಿಮಾಡುವಿ. ಯೆಹೋವನು ಮಹಾಕೋಪದಿಂದ ಅವರನ್ನು ನಾಶಮಾಡುವನು; ಆತನ ಕೋಪಾಗ್ನಿ ಅವರನ್ನು ದಹಿಸಿಬಿಡುವದು.


ನಿಮಗೂ ನಿಮ್ಮ ಪಿತೃಗಳಿಗೂ ಗೊತ್ತಿಲ್ಲದ ಜನಾಂಗದವರ ದೇಶಕ್ಕೆ ಯೆಹೋವನು ನಿಮ್ಮನ್ನೂ ನೀವು ನೇವಿುಸಿಕೊಳ್ಳುವ ಅರಸರನ್ನೂ ಒಯ್ಯಿಸುವನು; ಅಲ್ಲಿ ನೀವು ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಸೇವಿಸುವಿರಿ.


ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲಾ ಜನಾಂಗಗಳಲ್ಲಿಯೂ ಯೆಹೋವನು ನಿಮ್ಮನ್ನು ಚದರಿಸುವನು; ಅಲ್ಲಿ ನಿಮಗಾದರೂ ನಿಮ್ಮ ಪಿತೃಗಳಿಗಾದರೂ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.


ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.


ನಾನು ನಿಮ್ಮನ್ನು ದಮಸ್ಕದ ಆಚೆ ಸೆರೆಗೆ ತಳ್ಳುವೆನು; ಸೇನಾಧೀಶ್ವರ ದೇವರೆಂಬ ಯೆಹೋವನು ಇದನ್ನು ನುಡಿದಿದ್ದಾನೆ.


ಅವನು ಇವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟುಹೋಗಬೇಕಾಯಿತು.


ಹಿಜ್ಕೀಯನ ಮಗನೂ ಯೆಹೂದದ ಅರಸನೂ ಆದ ಮನಸ್ಸೆಯು ಯೆರೂಸಲೇವಿುನಲ್ಲಿ ನಡಿಸಿದ್ದಕ್ಕೆ ಪ್ರತಿಫಲವಾಗಿ ನಾನು ಅವರನ್ನು ಲೋಕದ ಸಮಸ್ತರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.


ನಾನು ಊರಹೊರಗೆ ಹೋದರೆ ಇಗೋ, ಖಡ್ಗದಿಂದ ಹತರಾದವರು; ಊರೊಳಗೆ ಬಂದರೆ ಇಗೋ, ಕ್ಷಾಮದಿಂದ ಕೊರಗುವವರು! ಪ್ರವಾದಿಗಳೂ ಯಾಜಕರೂ ತಮಗೆ ಗೊತ್ತಿಲ್ಲದ ದೇಶಕ್ಕೆ ಗಡೀಪಾರಾಗಿದ್ದಾರೆ.


ಯೆಹೂದದವರೇ, ಯೆರೂಸಲೇವಿುನ ನಿವಾಸಿಗಳೇ, ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿ ಯೆಹೋವನಿಗಾಗಿ ಸುನ್ನತಿಯಾಗಿರಿ; ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿವಿುತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು ಯಾರೂ ಆರಿಸಲಾಗದಷ್ಟು ರಭಸವಾಗಿ ಧಗಧಗಿಸುವದು.


ಆಗ ಆತನು ಅವರ ಮೇಲೆ ತನ್ನ ರೋಷಾಗ್ನಿಯನ್ನೂ ಯುದ್ಧದ ರೌದ್ರವನ್ನೂ ಸುರಿಸಿದನು. ಎಲ್ಲಾ ಕಡೆಯಿಂದಲೂ ಅವರಿಗೆ ಉರಿಹತ್ತಿತು, ಆದರೆ ಅವರು ತಿಳಿಯಲಿಲ್ಲ; ದಹಿಸಿತು, ಲಕ್ಷ್ಯಕ್ಕೆ ತರಲಿಲ್ಲ.


ಎಲ್ಲಾ ಜನಾಂಗಗಳವರೂ ನಿಮ್ಮ ಆ ದೇಶವು ಯಾವ ವ್ಯವಸಾಯವಾದರೂ ಇಲ್ಲದೆ ಹುಲ್ಲಾದರೂ ಬೆಳೆಯದೆ ಹಾಳುಬಿದ್ದು ಯೆಹೋವನು ಮಹಾ ಕೋಪದಿಂದ ಕೆಡವಿದ ಸೊದೋಮ್ ಗೊಮೋರ ಅದ್ಮಾ ಚೆಬೋಯೀಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟುಹೋದದ್ದಾಗಿ ಎಲ್ಲಾ ಕಡೆಗಳಲ್ಲಿಯೂ ಗಂಧಕ ಉಪ್ಪುಗಳಿಂದ ತುಂಬಿರುವದನ್ನು ಕಂಡು -


ನೀವು ಶತ್ರುಗಳಿಂದ ಪರಾಜಯವನ್ನು ಹೊಂದುವಂತೆ ಯೆಹೋವನು ಮಾಡುವನು; ನೀವು ಒಂದೇ ದಾರಿಯಿಂದ ಅವರೆದುರಿಗೆ ಹೋಗಿ ಏಳು ದಾರಿಗಳಿಂದ ಓಡಿಹೋಗುವಿರಿ. ಲೋಕದ ಎಲ್ಲಾ ರಾಜ್ಯಗಳವರೂ ಇದನ್ನು ಕಂಡು ಬೆರಗಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು