Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 15:15 - ಕನ್ನಡ ಸತ್ಯವೇದವು J.V. (BSI)

15 [ಅದಕ್ಕೆ ನಾನು] - ಯೆಹೋವನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕಕ್ಕೆ ತಂದು ಕಟಾಕ್ಷಿಸು; ನನಗಾಗಿ ನನ್ನ ಹಿಂಸಕರಿಗೆ ಮುಯ್ಯಿತೀರಿಸು; ಅವರಿಗೆ ಹೆಚ್ಚು ತಾಳ್ಮೆಯನ್ನು ತೋರಿಸಬೇಡ, ನನ್ನನ್ನು ನಿರ್ಮೂಲಮಾಡಬೇಡ; ನಿನ್ನ ನಿವಿುತ್ತವೇ ನಾನು ನಿಂದೆಗೆ ಗುರಿಯಾದೆನೆಂದು ಚಿತ್ತಕ್ಕೆ ತಂದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅದಕ್ಕೆ ನಾನು, “ಯೆಹೋವನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕಕ್ಕೆ ತಂದು ಕಟಾಕ್ಷಿಸು; ನನಗಾಗಿ ನನ್ನ ಹಿಂಸಕರಿಗೆ ಮುಯ್ಯಿತೀರಿಸು. ಅವರಿಗೆ ಹೆಚ್ಚು ತಾಳ್ಮೆಯನ್ನು ತೋರಿಸಬೇಡ, ನನ್ನನ್ನು ನಿರ್ಮೂಲ ಮಾಡಬೇಡ. ನಿನ್ನ ನಿಮಿತ್ತವೇ ನಾನು ನಿಂದೆಗೆ ಗುರಿಯಾದೆನೆಂದು ಜ್ಞಾಪಕಕ್ಕೆ ತಂದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅದಕ್ಕೆ ನಾನು : “ಸರ್ವೇಶ್ವರಾ, ನೀವು ಎಲ್ಲವನ್ನು ಬಲ್ಲವರು. ನನ್ನನ್ನು ನೆನಪಿಗೆ ತಂದುಕೊಂಡು ನೆರವುನೀಡಿ. ನನಗಾಗಿ ನನ್ನ ಶತ್ರುಗಳಿಗೆ ಮುಯ್ಯಿತೀರಿಸಿರಿ. ಅವರಿಗೆ ಹೆಚ್ಚು ತಾಳ್ಮೆತೋರಿ ನನ್ನನ್ನು ನಿರ್ಮೂಲಮಾಡಬೇಡಿ. ನಿಮ್ಮ ನಿಮಿತ್ತವೇ ನಾನು ನಿಂದೆಗೆ ಗುರಿಯಾದೆ ಎಂಬುದನ್ನು ಜ್ಞಾಪಕಕ್ಕೆ ತಂದುಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೋವನೇ, ನನ್ನ ವಿಷಯ ನಿನಗೆ ಗೊತ್ತು. ನನ್ನನ್ನು ಜ್ಞಾಪಕದಲ್ಲಿಟ್ಟುಕೊಂಡು ರಕ್ಷಿಸು. ಜನರು ನನ್ನನ್ನು ತೊಂದರೆಗೀಡು ಮಾಡುತ್ತಿದ್ದಾರೆ. ಅವರಿಗೆ ತಕ್ಕ ಶಿಕ್ಷೆಯನ್ನು ಕೊಡು. ನೀನು ಅವರೊಂದಿಗೆ ಬಹಳ ತಾಳ್ಮೆಯಿಂದ ವರ್ತಿಸುತ್ತಿರುವೆ. ಅವರೊಂದಿಗೆ ತಾಳ್ಮೆಯಿಂದ ಇದ್ದು ನನ್ನನ್ನು ಹಾಳುಮಾಡಬೇಡ. ನನ್ನ ಬಗ್ಗೆ ವಿಚಾರ ಮಾಡು. ಯೆಹೋವನೇ, ನಿನಗಾಗಿ ನಾನು ಎಷ್ಟು ಕಷ್ಟಪಡುತ್ತಿದ್ದೇನೆ ಎಂಬುದನ್ನು ಯೋಚಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅದಕ್ಕೆ ನಾನು ಯೆಹೋವ ದೇವರೇ, ನೀನೇ ಬಲ್ಲೆ, ನನಗಾಗಿ ನನ್ನ ಹಿಂಸಕರಿಗೆ ಮುಯ್ಯಿ ತೀರಿಸು, ಅವರಿಗೆ ಹೆಚ್ಚು ತಾಳ್ಮೆಯನ್ನು ತೋರಿಸಬೇಡ, ನನ್ನನ್ನು ನಿರ್ಮೂಲ ಮಾಡಬೇಡ ಏಕೆಂದರೆ ನೀವು ಕನಿಕರ ಉಳ್ಳವರು, ನಿನ್ನ ನಿಮಿತ್ತವೇ ನಾನು ನಿಂದೆಗೆ ಗುರಿಯಾದೆನೆಂದು ಚಿತ್ತಕ್ಕೆ ತಂದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 15:15
42 ತಿಳಿವುಗಳ ಹೋಲಿಕೆ  

ಯೆಹೋವನೇ, ನೀನು ನನ್ನನ್ನು ತಿಳಿದಿದ್ದೀ, ನನ್ನನ್ನು ನೋಡುತ್ತಾ ನಿನ್ನೊಂದಿಗೆ ಅನ್ಯೋನ್ಯವಾಗಿರುವ ನನ್ನ ಹೃದಯವನ್ನು ಪರೀಕ್ಷಿಸುತ್ತೀ, ಅವರನ್ನು ಕುರಿಗಳನ್ನೋ ಎಂಬಂತೆ ಕೊಲೆಗೆ ಎಳೆದು ವಧೆಯ ದಿನಕ್ಕೆ ಗೊತ್ತುಮಾಡು.


ಇದಲ್ಲದೆ ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು.


ಹೃದಯವನ್ನೂ ಅಂತರಿಂದ್ರಿಯವನ್ನೂ ಪರೀಕ್ಷಿಸಿ ಶಿಷ್ಟರನ್ನು ಶೋಧಿಸುವ ಸೇನಾಧೀಶ್ವರನಾದ ಯೆಹೋವನೇ, ನೀನು ನನ್ನ ಹಿಂಸಕರಿಗೆ ಕೊಡುವ ಪ್ರತಿಫಲವನ್ನು ನನ್ನ ಕಣ್ಣು ನೋಡಲಿ; ನಿನಗೇ ನನ್ನ ವ್ಯಾಜ್ಯವನ್ನು ಅರಿಕೆ ಮಾಡಿದ್ದೇನಷ್ಟೆ.


ನಾನಾದರೋ ಸಭಾ ಪಾಲನೆಯಲ್ಲಿ ನಿನ್ನನ್ನು ಹಿಂಬಾಲಿಸುವದನ್ನು ಬಿಡುವದಕ್ಕೆ ಆತುರಪಡಲಿಲ್ಲ; ಅನಿವಾರ್ಯ ವಿಪತ್ತಿನ ದಿನವನ್ನು ಅಪೇಕ್ಷಿಸಲಿಲ್ಲ; ನೀನೇ ಬಲ್ಲೆ; ನಿನ್ನ ಸಮಕ್ಷಮದಲ್ಲೇ ನನ್ನ ಬಾಯ ಮಾತು ಹೊರಟಿತು.


ಆಮೇಲೆ ನಾನು ಲೇವಿಯರಿಗೆ - ಸಬ್ಬತ್‍ದಿನವನ್ನು ಪರಿಶುದ್ಧದಿನವೆಂದು ಆಚರಿಸುವ ಹಾಗೆ ನೀವು ನಿಮ್ಮನ್ನು ಶುದ್ಧಿಪಡಿಸಿಕೊಂಡು ಬಂದು ಬಾಗಲುಗಳನ್ನು ಕಾಯಬೇಕು ಎಂದು ಆಜ್ಞಾಪಿಸಿದೆನು. ನನ್ನ ದೇವರೇ ಇದನ್ನೂ ನನ್ನ ಹಿತಕ್ಕಾಗಿ ನೆನಪುಮಾಡಿಕೊಂಡು ನಿನ್ನ ಮಹಾಕೃಪೆಗನುಸಾರವಾಗಿ ನನ್ನನ್ನು ಕನಿಕರಿಸು.


ಮತ್ತು ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು. ಆದರೆ ಕಡೇವರೆಗೂ ತಾಳುವವನು ರಕ್ಷಣೆಹೊಂದುವನು.


ನಾನು ಮಾತಾಡುವದೆಲ್ಲಾ ಅರಚಾಟವೇ; ಬಲಾತ್ಕಾರ, ಕೊಳ್ಳೆ ಎಂದೇ ಕೂಗಿಕೊಳ್ಳುತ್ತೇನೆ; [ನಾನು ಸಾರುವ] ಯೆಹೋವನ ವಾಕ್ಯವು ನನ್ನನ್ನು ಜನರ ದೂಷಣೆಗೂ ಪರಿಹಾಸಕ್ಕೂ ಗುರಿಮಾಡಿದೆ.


ನಿನ್ನ ಸೇವಕನ ದಿವಸಗಳು ಬಹುಸ್ವಲ್ಪವಲ್ಲಾ! ನನ್ನನ್ನು ಬಾಧಿಸುವವರಿಗೆ ಶಿಕ್ಷೆವಿಧಿಸುವದು ಯಾವಾಗ?


ಯೆಹೋವನೇ, ನನ್ನನ್ನು ನೆನಪುಮಾಡಿಕೊಂಡು ನಿನ್ನ ಪ್ರಜೆಗೆ ತೋರಿಸುವ ದಯೆಯನ್ನು ನನಗೂ ತೋರಿಸು. ನನ್ನನ್ನು ರಕ್ಷಿಸಲಿಕ್ಕೆ ಬಾ,


ನನ್ನ ದೇವರೇ, ನಾನು ಆ ಜನರಿಗೋಸ್ಕರ ಮಾಡಿದ್ದೆಲ್ಲವನ್ನೂ ನನ್ನ ಹಿತಕ್ಕಾಗಿ ನೆನಪು ಮಾಡಿಕೋ.


ಪರಲೋಕವೇ, ಆನಂದಪಡು; ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ, ಇವಳು ನಿಮಗೆ ಅನ್ಯಾಯಮಾಡಿದ್ದಕ್ಕಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದರಿಂದ ಆನಂದಪಡಿರಿ ಎಂದು ಆ ಶಬ್ದ ಹೇಳಿತು.


ಅವರು - ಒಡೆಯನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂನಿವಾಸಿಗಳು ನಮ್ಮನ್ನು ಕೊಂದದ್ದಕ್ಕಾಗಿ ನೀನು ಎಷ್ಟು ಕಾಲದವರೆಗೂ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ? ಎಂದು ಮಹಾಶಬ್ದದಿಂದ ಕೂಗಿದರು.


ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು; ಕರ್ತನು ಅವನ ಕೃತ್ಯಗಳಿಗೆ ಸರಿಯಾಗಿ ಅವನಿಗೆ ಪ್ರತಿಫಲವನ್ನು ಕೊಡುವನು.


ಕರ್ತನ ಭಯವು ನಮಗಿರುವದರಿಂದ ನಾವು ಮನುಷ್ಯರನ್ನು ಒಡಂಬಡಿಸುತ್ತೇವೆ. ನಾವು ಯಥಾರ್ಥರೆಂಬದು ದೇವರಿಗೆ ಗೊತ್ತುಂಟು; ನಿಮ್ಮ ಮನಸ್ಸಿಗೆ ಕೂಡ ಗೊತ್ತಾಗಿದೆ ಎಂದು ನಂಬಿಕೊಂಡಿದ್ದೇನೆ.


ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ ಮುಯ್ಯಿಗೆ ಮುಯ್ಯಿ ತೀರಿಸುವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆಂಬದಾಗಿ ಬರೆದದೆ.


ಮತ್ತು ನನ್ನ ಹೆಸರಿನ ನಿವಿುತ್ತ ಮನೆಗಳನ್ನಾಗಲಿ ಅಣ್ಣತಮ್ಮಂದಿರನ್ನಾಗಲಿ ಅಕ್ಕತಂಗಿಯರನ್ನಾಗಲಿ ತಂದೆಯನ್ನಾಗಲಿ ತಾಯಿಯನ್ನಾಗಲಿ ಮಕ್ಕಳನ್ನಾಗಲಿ ಭೂವಿುಯನ್ನಾಗಲಿ ಬಿಟ್ಟುಬಿಟ್ಟಿರುವವರೆಲ್ಲರಿಗೆ ಅನೇಕ ಪಾಲು ಹೆಚ್ಚಾಗಿ ಸಿಕ್ಕುವದು; ಮತ್ತು ಅವರು ನಿತ್ಯಜೀವಕ್ಕೆ ಬಾಧ್ಯರಾಗುವರು.


ನನ್ನ ತಾಯೀ, ನನ್ನ ಗತಿಯನ್ನು ಏನು ಹೇಳಲಿ! ನಿನ್ನ ಗರ್ಭದಿಂದ ಬಂದ ನಾನು ಲೋಕದವರೆಲ್ಲರಿಗೆ ಜಗಳಗಂಟಿಗನೂ ವ್ಯಾಜ್ಯಗಾರನೂ ಆಗಿದ್ದೇನಲ್ಲಾ. ನಾನು ಹಣವನ್ನು ಬಡ್ಡಿಗೆ ಕೊಟ್ಟವನಲ್ಲ, ತೆಗೆದುಕೊಂಡವನಲ್ಲ, ಆದರೂ ನನ್ನನ್ನು ಎಲ್ಲರೂ ಬಯ್ಯುತ್ತಾರೆ.


ಯೆಹೋವನೇ, ನಾನು ನಂಬಿಗಸ್ತನಾಗಿಯೂ ಯಥಾರ್ಥಚಿತ್ತನಾಗಿಯೂ ನಿನಗೆ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದದ್ದನ್ನು ನೆನಪುಮಾಡಿಕೋ ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.


ನನ್ನ ಆಯುಷ್ಯವನ್ನು ಕಡಿಮೆಮಾಡಿ ಬಿಟ್ಟಿದ್ದಾನೆ. ಆದದರಿಂದ - ನನ್ನ ದೇವರೇ, ಅರ್ಧಾಯುಷ್ಯದಲ್ಲಿಯೇ ನನ್ನನ್ನು ಒಯ್ಯಬೇಡ; ನಿನ್ನ ವರುಷಗಳು ತಲತಲಾಂತರಕ್ಕೂ ಇರುತ್ತವೆ.


ನಾನು ಬಿಟ್ಟುಹೋಗಿ ಇಲ್ಲವಾಗುವದಕ್ಕಿಂತ ಮುಂಚೆ ಸ್ವಲ್ಪ ಸಂತೋಷಪಡುವಂತೆ ನಿನ್ನ ಕೋಪದೃಷ್ಟಿಯನ್ನು ನನ್ನ ಕಡೆಯಿಂದ ತಿರುಗಿಸಿಕೊಳ್ಳಬೇಕು, ದೇವಾ.


ನೀನು ನನ್ನ ಹೃದಯವನ್ನು ಪರೀಕ್ಷಿಸಿದರೂ ರಾತ್ರಿ ವೇಳೆ ವಿಚಾರಿಸಿದರೂ ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದರೂ ಯಾವ ದುರಾಲೋಚನೆಯಾದರೂ ನನ್ನಲ್ಲಿ ದೊರೆಯುವದಿಲ್ಲ; ನನ್ನ ಬಾಯಲ್ಲಿಯೂ ತಪ್ಪಿಲ್ಲ.


ನಾನು ಅಪರಾಧಿಯಲ್ಲವೆಂದು ನಿನಗೆ ಗೊತ್ತಾಯಿತಲ್ಲಾ; ನಿನ್ನ ಕೈಯೊಳಗಿಂದ ಬಿಡಿಸತಕ್ಕವರು ಯಾರೂ ಇಲ್ಲವಷ್ಟೆ,


ನೇವಿುತ ಕಾಲಗಳಲ್ಲಿ ಸಲ್ಲತಕ್ಕ ಕಾಷ್ಠದಾನದ ಮತ್ತು ಪ್ರಥಮ ಫಲದ ವಿಷಯವಾಗಿಯೂ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪು ಮಾಡಿಕೋ.


ನನ್ನ ದೇವರೇ, ಟೋಬೀಯ ಸನ್ಬಲ್ಲಟರು ಮಾಡಿದ ಈ ದುಷ್ಕೃತ್ಯಗಳು ನಿನ್ನ ನೆನಪಿನಲ್ಲಿರಲಿ; ನನ್ನನ್ನು ಹೆದರಿಸುವದಕ್ಕೆ ಪ್ರಯತ್ನಿಸಿದ ಪ್ರವಾದಿನಿಯಾದ ನೋವದ್ಯ ಮುಂತಾದ ಪ್ರವಾದಿಗಳನ್ನು ಮರೆಯಬೇಡ.


ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಅನ್ನವಿಲ್ಲದಿರುವದೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ?


ಆಗ ಸಂಸೋನನು ಯೆಹೋವನಿಗೆ - ಕರ್ತನೇ, ಯೆಹೋವನೇ, ಫಿಲಿಷ್ಟಿಯರು ಕಿತ್ತುಹಾಕಿದ ನನ್ನ ಎರಡೂ ಕಣ್ಣುಗಳಲ್ಲಿ ಒಂದಕ್ಕೋಸ್ಕರವಾದರೂ ನಾನು ಅವರಿಗೆ ಮುಯ್ಯಿತೀರಿಸುವ ಹಾಗೆ ನನ್ನನ್ನು ಈ ಸಾರಿ ಬಲಪಡಿಸು ಎಂದು ಮೊರೆಯಿಟ್ಟು


ದೇವರೇ, ನಾವು ನಿನ್ನ ನಿವಿುತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ಜನರು ನಮ್ಮನ್ನು ಕೊಯ್ಗುರಿಗಳಂತೆ ಎಣಿಸಿದ್ದಾರೆ.


ನಾನು ನಿನ್ನನ್ನು ಈ ಜನರಿಗೆ ದುರ್ಗಮವಾದ ತಾಮ್ರದ ಪೌಳಿಗೋಡೆಯನ್ನಾಗಿ ಮಾಡುವೆನು; ಅವರು ನಿನಗೆ ವಿರುದ್ಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಸೋಲಿಸಲಾಗುವದಿಲ್ಲ. ನಿನ್ನನ್ನು ಉದ್ಧರಿಸಿ ರಕ್ಷಿಸಲು ನಾನೇ ನಿನ್ನೊಂದಿಗಿರುವೆನು. ಇದು ಯೆಹೋವನಾದ ನನ್ನ ಮಾತು.


ಯೆಹೋವನಾದರೋ ಭಯಂಕರಶೂರನಾಗಿ ನನ್ನ ಸಂಗಡ ಇದ್ದಾನೆ. ಆದದರಿಂದ ನನ್ನ ಹಿಂಸಕರು ಗೆಲ್ಲದೆ ಮುಗ್ಗರಿಸುವರು; ತಮ್ಮ ಇಷ್ಟಾರ್ಥವು ನೆರವೇರದ ಕಾರಣ ದೊಡ್ಡ ನಾಚಿಕೆಗೆ ಈಡಾಗುವರು, ಎಂದಿಗೂ ಮರೆಯದ ಶಾಶ್ವತಾವಮಾನಕ್ಕೆ ಒಳಗಾಗುವರು.


ಯೆಹೋವನೇ, ನನ್ನನ್ನು ಕೊಲ್ಲಬೇಕೆಂದು ಅವರು ಮಾಡಿಕೊಂಡಿರುವ ಆಲೋಚನೆಯನ್ನೆಲ್ಲಾ ನೀನೇ ಬಲ್ಲೆ; ಅವರ ಅಪರಾಧವನ್ನು ಕ್ಷವಿುಸಬೇಡ, ಅವರ ಪಾಪವನ್ನು ಅಳಿಸದಿರು, ಅದು ನಿನ್ನ ಕಣ್ಣೆದುರಿಗಿರಲಿ; ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪವನ್ನು ವ್ಯಕ್ತಪಡಿಸುವಾಗ ಅವರಿಗೆ ತಕ್ಕದ್ದನ್ನು ಮಾಡು.


ಯೆಹೋವನೇ, ಅವರ ದುಷ್ಕೃತ್ಯಗಳಿಗೆ ಸರಿಯಾದ ಪ್ರತಿಫಲವನ್ನು ನೀನು ಅವರಿಗೆ ಕೊಡುವಿ;


ನೀನು ಕೋಪಗೊಂಡು ಅವರನ್ನು ಹಿಂದಟ್ಟಿ ಅವರು ನಿನ್ನ ಕೈಕೆಲಸವಾಗಿರುವ ಆಕಾಶದ ಕೆಳಗೆ ಉಳಿಯದಂತೆ ಅಳಿಸಿಬಿಡುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು