ಯೆರೆಮೀಯ 15:19 - ಕನ್ನಡ ಸತ್ಯವೇದವು J.V. (BSI)19 ಇದರಿಂದ ಯೆಹೋವನು ಹೀಗಂದಿದ್ದಾನೆ - ನೀನು [ನನ್ನ ಕಡೆಗೆ] ಹಿಂದಿರುಗಿದರೆ ನನ್ನ ಸಮ್ಮುಖದಲ್ಲಿ ನಿಲ್ಲುವಂತೆ ನಾನು ನಿನ್ನನ್ನು ತಿರುಗಿ ಸೇರಿಸಿಕೊಳ್ಳುವೆನು; ನೀನು ತುಚ್ಫವಾದದ್ದನ್ನು ನಿರಾಕರಿಸಿ ಅಮೂಲ್ಯವಾದದ್ದನ್ನು ಪ್ರಕಾಶಪಡಿಸಿದರೆ ನೀನು ನನ್ನ ಬಾಯಂತಿರುವಿ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು, ನೀನು ಅವರ ಕಡೆಗೆ ತಿರುಗದಿರುವಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಇದರಿಂದ ಯೆಹೋವನು, “ನೀನು ನನ್ನ ಕಡೆಗೆ ಹಿಂದಿರುಗಿದರೆ ನನ್ನ ಸಮ್ಮುಖದಲ್ಲಿ ನಿಲ್ಲುವಂತೆ ನಾನು ನಿನ್ನನ್ನು ತಿರುಗಿ ಸೇರಿಸಿಕೊಳ್ಳುವೆನು. ನೀನು ತುಚ್ಛವಾದದ್ದನ್ನು ನಿರಾಕರಿಸಿ, ಅಮೂಲ್ಯವಾದದ್ದನ್ನು ಪ್ರಕಾಶಪಡಿಸಿದರೆ ನೀನು ನನ್ನ ಬಾಯಂತಿರುವಿ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು, ನೀನು ಅವರ ಕಡೆಗೆ ತಿರುಗದಿರುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅದಕ್ಕೆ ಸರ್ವೇಶ್ವರ : “ನೀನು ನನಗೆ ಅಭಿಮುಖನಾಗಿ ಹಿಂದಿರುಗಿ ಬಂದರೆ ಮರಳಿ ನಿನ್ನನ್ನು ನನ್ನ ಸೇವೆಗೆ ಸೇರಿಸಿಕೊಳ್ಳುವೆನು. ತುಚ್ಛವಾದುದನ್ನು ತೊರೆದು ಅಮೂಲ್ಯವಾದುದನ್ನು ಉಚ್ಚರಿಸುವೆಯಾದರೆ ನೀನು ನನ್ನ ಬಾಯಂತಿರುವೆ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು. ನೀನು ಅವರ ಕಡೆಗೆ ತಿರುಗದಿರುವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆಗ ಯೆಹೋವನು ಹೇಳಿದನು: “ಯೆರೆಮೀಯನೇ, ನೀನು ಬದಲಾವಣೆ ಹೊಂದಿ ನನ್ನಲ್ಲಿಗೆ ಬಂದರೆ ನಾನು ನಿನ್ನನ್ನು ದಂಡಿಸುವುದಿಲ್ಲ. ನೀನು ಬದಲಾವಣೆ ಹೊಂದಿ ನನ್ನಲ್ಲಿಗೆ ಬಂದರೆ ನೀನು ನನ್ನ ಸೇವೆ ಮಾಡಬಹುದು. ಹುರುಳಿಲ್ಲದ ಮಾತುಗಳನ್ನು ಬಿಟ್ಟು ಮುಖ್ಯವಾದ ವಿಷಯಗಳನ್ನು ಕುರಿತು ಮಾತನಾಡುವದಾದರೆ ನೀನು ನನ್ನ ಪರವಾಗಿ ಮಾತನಾಡಬಹುದು. ಯೆರೆಮೀಯನೇ, ಯೆಹೂದದ ಜನರು ಬದಲಾವಣೆ ಹೊಂದಿ ನಿನ್ನಲ್ಲಿಗೆ ಬರಬೇಕು. ಆದರೆ ನೀನು ಬದಲಾವಣೆ ಹೊಂದಿ ಅವರಂತೆ ಆಗಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆದಕಾರಣ ಯೆಹೋವ ದೇವರು ಹೀಗೆನ್ನುತ್ತಾರೆ: ನೀನು ಮಾನಸಾಂತರಪಟ್ಟರೆ, ನೀನು ನನಗೆ ಸೇವೆಮಾಡುವಂತೆ ನಾನು ನಿನ್ನನ್ನು ಪುನಃಸ್ಥಾಪಿಸುವೆನು. ನೀನು ತುಚ್ಛವಾದವುಗಳಿಗೆ ಬದಲಾಗಿ ಅಮೂಲ್ಯವಾದವುಗಳನ್ನೇ ಮಾತನಾಡುತ್ತಿದ್ದರೆ, ನೀನು ನನ್ನ ಬಾಯಿಯ ಹಾಗಿರುವೆ. ಅವರು ನಿನ್ನ ಕಡೆಗೆ ತಿರುಗಲಿ, ಆದರೆ ನೀನು ಅವರ ಕಡೆಗೆ ಹಿಂದಿರುಗಬೇಡ. ಅಧ್ಯಾಯವನ್ನು ನೋಡಿ |