Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 15:20 - ಕನ್ನಡ ಸತ್ಯವೇದವು J.V. (BSI)

20 ನಾನು ನಿನ್ನನ್ನು ಈ ಜನರಿಗೆ ದುರ್ಗಮವಾದ ತಾಮ್ರದ ಪೌಳಿಗೋಡೆಯನ್ನಾಗಿ ಮಾಡುವೆನು; ಅವರು ನಿನಗೆ ವಿರುದ್ಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಸೋಲಿಸಲಾಗುವದಿಲ್ಲ. ನಿನ್ನನ್ನು ಉದ್ಧರಿಸಿ ರಕ್ಷಿಸಲು ನಾನೇ ನಿನ್ನೊಂದಿಗಿರುವೆನು. ಇದು ಯೆಹೋವನಾದ ನನ್ನ ಮಾತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾನು ನಿನ್ನನ್ನು ಈ ಜನರಿಗೆ ದುರ್ಗಮವಾದ ತಾಮ್ರದ ಪೌಳಿಗೋಡೆಯನ್ನಾಗಿ ಮಾಡುವೆನು. ಅವರು ನಿನ್ನ ವಿರುದ್ಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನು ಉದ್ಧರಿಸಿ ರಕ್ಷಿಸಲು ನಾನೇ ನಿನ್ನೊಂದಿಗಿರುವೆನು. ಇದು ಯೆಹೋವನಾದ ನನ್ನ ಮಾತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಾನು ನಿನ್ನನ್ನು ಆ ಜನರಿಗೆ ದುರ್ಗಮವಾದ ಕಂಚಿನ ಪೌಳಿಗೋಡೆಯನ್ನಾಗಿಸುವೆನು. ನಿನಗೆ ವಿರುದ್ಧ ಅವರು ಯುದ್ಧಮಾಡುವರು. ಆದರೆ ನಿನ್ನನ್ನು ಸೋಲಿಸಲಾಗದು. ನಿನ್ನ ನ್ನು ಉದ್ಧರಿಸಿ ರಕ್ಷಿಸಲು ನಾನೇ ನಿನ್ನೊಂದಿಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಾನು ನಿನ್ನನ್ನು ಬಲಶಾಲಿಯನ್ನಾಗಿ ಮಾಡುತ್ತೇನೆ. ನೀನು ತಾಮ್ರದ ಗೋಡೆಯಂತೆ ಗಟ್ಟಿಯಾಗಿರುವೆ ಎಂದು ಆ ಜನರು ತಿಳಿದುಕೊಳ್ಳುವರು. ಯೆಹೂದದ ಜನರು ನಿನ್ನ ವಿರುದ್ಧ ಹೋರಾಡುವರು. ಆದರೆ ಅವರು ನಿನ್ನನ್ನು ಸೋಲಿಸಲಾರರು. ಏಕೆಂದರೆ ನಾನೇ ನಿನ್ನ ಜೊತೆಯಲ್ಲಿ ಇದ್ದೇನೆ. ನಾನು ನಿನಗೆ ಸಹಾಯಮಾಡುತ್ತೇನೆ ಮತ್ತು ನಾನು ನಿನ್ನನ್ನು ರಕ್ಷಿಸುತ್ತೇನೆ.” ಇದು ಯೆಹೋವನಿಂದ ಬಂದ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಇದಲ್ಲದೆ ನಾನು ನಿನ್ನನ್ನು ಈ ಜನಕ್ಕೆ ಬಲವಾದ ಕಂಚಿನ ಗೋಡೆಯಾಗಿ ಮಾಡುತ್ತೇನೆ. ನಿನಗೆ ವಿರೋಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಜಯಿಸಲಾರರು. ಏಕೆಂದರೆ ನಾನೇ ನಿನ್ನನ್ನು ರಕ್ಷಿಸುವುದಕ್ಕೂ, ನಿನ್ನನ್ನು ತಪ್ಪಿಸುವುದಕ್ಕೂ ನಿನ್ನ ಸಂಗಡ ಇದ್ದೇನೆ, ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 15:20
27 ತಿಳಿವುಗಳ ಹೋಲಿಕೆ  

ನಿನ್ನ ಹಣೆಯನ್ನು ಕಗ್ಗಲ್ಲಿಗಿಂತ ಕಠಿನವಾದ ವಜ್ರದಷ್ಟು ಕಠಿನಪಡಿಸಿದ್ದೇನೆ; ಅವರು ದ್ರೋಹಿವಂಶದವರು, ಅವರಿಗೆ ಭಯಪಡಬೇಡ; ಅವರ ಬಿರುನೋಟಕ್ಕೆ ಬೆಚ್ಚದಿರು.


ಅವರಿಗೆ ಅಂಜಬೇಡ; ನಿನ್ನನ್ನುದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು ಎಂದು ಹೇಳಿದನು.


ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿಸುತ್ತೇನೆ; ಹೌದು, ನಿನಗೆ ಸಹಾಯಕೊಡುತ್ತೇನೆ; ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ. ಸೆಲಾ.


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ. ಸೆಲಾ.


ಕರ್ತನು ನಿನ್ನ ಆತ್ಮದ ಸಂಗಡ ಇರಲಿ. ಕೃಪೆಯು ನಿಮ್ಮೊಂದಿಗಿರಲಿ.


ಯೆಹೋವನು ನನಗೆ - ನಾನು ನಿನ್ನನ್ನು ನನ್ನ ಜನವೆಂಬ ಅದುರಿಗೆ ಶೋಧಕನನ್ನಾಗಿ ನೇವಿುಸಿದ್ದೇನೆ; ನೀನು ಅವರ ನಡತೆಯನ್ನು ಪರೀಕ್ಷಿಸಿ ತಿಳಿದುಕೊಳ್ಳಬೇಕು.


ಇದರಿಂದ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವಳು.


ನನ್ನ ತಾಯೀ, ನನ್ನ ಗತಿಯನ್ನು ಏನು ಹೇಳಲಿ! ನಿನ್ನ ಗರ್ಭದಿಂದ ಬಂದ ನಾನು ಲೋಕದವರೆಲ್ಲರಿಗೆ ಜಗಳಗಂಟಿಗನೂ ವ್ಯಾಜ್ಯಗಾರನೂ ಆಗಿದ್ದೇನಲ್ಲಾ. ನಾನು ಹಣವನ್ನು ಬಡ್ಡಿಗೆ ಕೊಟ್ಟವನಲ್ಲ, ತೆಗೆದುಕೊಂಡವನಲ್ಲ, ಆದರೂ ನನ್ನನ್ನು ಎಲ್ಲರೂ ಬಯ್ಯುತ್ತಾರೆ.


[ಅದಕ್ಕೆ ನಾನು] - ಯೆಹೋವನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕಕ್ಕೆ ತಂದು ಕಟಾಕ್ಷಿಸು; ನನಗಾಗಿ ನನ್ನ ಹಿಂಸಕರಿಗೆ ಮುಯ್ಯಿತೀರಿಸು; ಅವರಿಗೆ ಹೆಚ್ಚು ತಾಳ್ಮೆಯನ್ನು ತೋರಿಸಬೇಡ, ನನ್ನನ್ನು ನಿರ್ಮೂಲಮಾಡಬೇಡ; ನಿನ್ನ ನಿವಿುತ್ತವೇ ನಾನು ನಿಂದೆಗೆ ಗುರಿಯಾದೆನೆಂದು ಚಿತ್ತಕ್ಕೆ ತಂದುಕೋ.


ಯೆರೂಸಲೇಮು ಶತ್ರುವಶವಾಗುವ ತನಕ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.


ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆರೆಮೀಯನ ವಿಷಯವಾಗಿ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನಿಗೆ -


ನೀವು ಹೆದರಿರುವ ಬಾಬೆಲಿನ ಅರಸನಿಗೆ ಹೆದರಬೇಡಿರಿ; ಅವನಿಗೆ ಅಂಜದಿರಿ; ನಾನು ನಿಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಲಿಕ್ಕೆ ನಿಮ್ಮೊಂದಿಗಿದ್ದೇನಲ್ಲಾ. ಇದು ಯೆಹೋವನಾದ ನನ್ನ ನುಡಿ.


ಅರಸೇ, ನಾವು ಸೇವಿಸುವ ದೇವರಿಗೆ ಚಿತ್ತವಿದ್ದರೆ ಆತನು ಧಗಧಗನೆ ಉರಿಯುವ ಆವಿಗೆಯೊಳಗಿಂದ, ನಮ್ಮನ್ನು ಬಿಡಿಸಬಲ್ಲನು; ಹೇಗೂ ನಿನ್ನ ಕೈಯಿಂದ ನಮ್ಮನ್ನು ಬಿಡಿಸುವನು.


ನೀತಿವಂತರ ರಕ್ಷಣೆ ಯೆಹೋವನಿಂದಲೇ; ಇಕ್ಕಟ್ಟಿನಲ್ಲಿ ಆತನೇ ಅವರಿಗೆ ದುರ್ಗಸ್ಥಾನ.


ಇಗೋ, ಅವರ ಕಠಿನ ಮುಖಕ್ಕೆ ವಿರುದ್ಧವಾಗಿ ನಿನ್ನ ಮುಖವನ್ನು ಕಠಿನಪಡಿಸಿದ್ದೇನೆ; ಅವರ ಹಣೆಗೆ ಪ್ರತಿಯಾಗಿ ನಿನ್ನ ಹಣೆಯನ್ನು ಗಟ್ಟಿಮಾಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು