ಯೆರೆಮೀಯ 15:4 - ಕನ್ನಡ ಸತ್ಯವೇದವು J.V. (BSI)4 ಹಿಜ್ಕೀಯನ ಮಗನೂ ಯೆಹೂದದ ಅರಸನೂ ಆದ ಮನಸ್ಸೆಯು ಯೆರೂಸಲೇವಿುನಲ್ಲಿ ನಡಿಸಿದ್ದಕ್ಕೆ ಪ್ರತಿಫಲವಾಗಿ ನಾನು ಅವರನ್ನು ಲೋಕದ ಸಮಸ್ತರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 “ಹಿಜ್ಕೀಯನ ಮಗನೂ ಯೆಹೂದದ ಅರಸನೂ ಆದ ಮನಸ್ಸೆಯು ಯೆರೂಸಲೇಮಿನಲ್ಲಿ ನಡೆಸಿದ್ದಕ್ಕೆ ಪ್ರತಿಯಾಗಿ, ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಈ ಜನರನ್ನು ಜಗದ ರಾಜ್ಯಗಳೆಲ್ಲವು ಭಯೋತ್ಪಾದಕರೆಂದು ಭಾವಿಸುವಂತೆ ಮಾಡುವೆನು. ಹಿಜ್ಕೀಯನ ಮಗನು ಹಾಗು ಜುದೇಯದ ಅರಸನು ಆದ ಮನಸ್ಸೆಯು ಜೆರುಸಲೇಮಿನಲ್ಲಿ ನಡೆಸಿದ ದುಷ್ಕೃತ್ಯಕ್ಕೆ ಇದು ಪ್ರತೀಕಾರವಾಗಿರುವುದು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೆಹೂದದ ಜನರನ್ನು ಭೂಲೋಕದ ಎಲ್ಲಾ ಜನರಿಗೆ ಒಂದು ಭಯಾನಕವಾದ ಉದಾಹರಣೆಯಾಗುವಂತೆ ಮಾಡುತ್ತೇನೆ. ಮನಸ್ಸೆಯು ಜೆರುಸಲೇಮಿನಲ್ಲಿ ಮಾಡಿದ ಪಾಪಕೃತ್ಯಗಳ ಫಲವಾಗಿ ನಾನು ಯೆಹೂದದಲ್ಲಿ ಹೀಗೆ ಮಾಡುತ್ತೇನೆ. ಮನಸ್ಸೆಯು ರಾಜನಾದ ಹಿಜ್ಕೀಯನ ಮಗನಾಗಿದ್ದನು. ಮನಸ್ಸೆಯು ಯೆಹೂದದ ರಾಜನಾಗಿದ್ದನು.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವರನ್ನು ಹಿಜ್ಕೀಯನ ಮಗನಾದ ಯೆಹೂದದ ಅರಸನಾದ ಮನಸ್ಸೆಯು ಯೆರೂಸಲೇಮಿನಲ್ಲಿ ನಡಿಸಿದ್ದಕ್ಕೆ ಪ್ರತಿಫಲವಾಗಿ ನಾನು ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಂತೆ ಮಾಡುವೆನು. ಅಧ್ಯಾಯವನ್ನು ನೋಡಿ |
ಆದಕಾರಣ ಯೆಹೋವನು ಇಂತೆನ್ನುತ್ತಾನೆ - ನೀವು ನನ್ನನ್ನು ಕೇಳಲಿಲ್ಲ, ನಿಮ್ಮ ನಿಮ್ಮ ಸಹೋದರರಿಗೂ ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ; ಇದೇ ಯೆಹೋವನ ನುಡಿ - ಇಗೋ, ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ; ನಿಮ್ಮನ್ನು ಖಡ್ಗವ್ಯಾಧಿಕ್ಷಾಮಗಳಿಗೆ ಗುರಿಯಾಗುವಂತೆ ಬಿಡುತ್ತೇನೆ; ನಿಮ್ಮನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.