Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 15:7 - ಕನ್ನಡ ಸತ್ಯವೇದವು J.V. (BSI)

7 ನನ್ನ ಜನರನ್ನು ದೇಶದ ಉಕ್ಕಡಗಳಲ್ಲಿ ಕವೆಗೋಲಿನಿಂದ ಹಾರಿಸಿ ತೂರುವೆನು; ಅವರನ್ನು ಪುತ್ರಶೋಕಕ್ಕೆ ಈಡುಮಾಡಿ ನಾಶಪಡಿಸುವೆನು; ಅವರು ಹೋದ ದಾರಿಯಿಂದ ಹಿಂದಿರುಗರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನನ್ನ ಜನರನ್ನು ದೇಶದ ಬಾಗಿಲುಗಳಲ್ಲಿ ಕವೆಗೋಲಿನಿಂದ ಹಾರಿಸಿ ತೂರುವೆನು. ಅವರನ್ನು ಪುತ್ರಶೋಕಕ್ಕೆ ಈಡುಮಾಡಿ ನಾಶಪಡಿಸುವೆನು; ಅವರು ಹೋದ ದಾರಿಯಿಂದ ಹಿಂದಿರುಗರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನನ್ನ ಜನರನ್ನು ನಾಡಿನ ಉಕ್ಕಡಗಳಲ್ಲಿ ಮೊರದಿಂದ ಗಾಳಿಗೆ ತೂರಿಬಿಟ್ಟೆನು. ಅವರನ್ನು ಪುತ್ರಶೋಕಕ್ಕೆ ಈಡುಮಾಡಿ ನಾಶಪಡಿಸಿದೆನು. ಏಕೆಂದರೆ, ಅವರು ತಮ್ಮ ದುರ್ಮಾರ್ಗದಿಂದ ಹಿಂದಿರುಗದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೂದದ ಜನರನ್ನು ನಾನು ಕವೆಗೋಲಿನಿಂದ ವಿಂಗಡಿಸಿದ ದೇಶದ ಎಲ್ಲಾ ನಗರಗಳ ದ್ವಾರದಲ್ಲಿ ಚದರಿಸುತ್ತೇನೆ. ನನ್ನ ಜನರು ಬದಲಾಗಲಿಲ್ಲ. ನಾನು ಅವರನ್ನು ನಾಶಮಾಡುತ್ತೇನೆ. ನಾನು ಅವರ ಮಕ್ಕಳನ್ನು ಕಸಿದುಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರನ್ನು ಮೊರದಿಂದ ದೇಶದ ಬಾಗಿಲುಗಳಲ್ಲಿ ಕವೆಗೋಲಿನಿಂದ ಹಾರಿಸಿ ತೂರುವೆನು. ನನ್ನ ಜನರನ್ನು ನಾಶಮಾಡಿ ಅವರಿಗೆ ಶೋಕವನ್ನು ನೀಡುವೆನು. ಅವರು ತಮ್ಮ ಮಾರ್ಗಗಳನ್ನು ಬಿಟ್ಟು, ಹಿಂದಿರುಗದೆ ಇದ್ದುದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 15:7
21 ತಿಳಿವುಗಳ ಹೋಲಿಕೆ  

ಆತನು ಮೊರವನ್ನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನುಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು ಎಂದು ಹೇಳಿದನು.


ಅನ್ಯಜನರನ್ನು ಬಾಬೆಲಿಗೆ ಕಳುಹಿಸುವೆನು, ಅವರು ಅದನ್ನು ತೂರುವರು, ಆ ದೇಶವನ್ನು ಬಟ್ಟಬರಿದು ಮಾಡುವರು; ನಿಯವಿುತ ವಿಪತ್ಕಾಲದಲ್ಲಿ ಅದನ್ನು ಮುತ್ತುವರಷ್ಟೆ.


ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ಪಶ್ಚಾತ್ತಾಪಪಡಲಿಲ್ಲ, ಸಂಹರಿಸಿದರೂ ಶಿಕ್ಷಣಕ್ಕೆ ಒಪ್ಪಲಿಲ್ಲ; ತಮ್ಮ ಮುಖವನ್ನು ಕಲ್ಲಿಗಿಂತ ಕಠಿಣಮಾಡಿಕೊಂಡು ತಿರುಗಿಕೊಳ್ಳಲೊಲ್ಲದೆ ಹೋಗಿದ್ದಾರೆ.


ನೀನು ತೂರಲು ಅವುಗಳನ್ನು ಗಾಳಿಯು ಬಡಿದುಕೊಂಡು ಹೋಗುವದು; ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವದು; ನೀನಂತು ಯೆಹೋವನಲ್ಲಿ ಆನಂದಿಸುವಿ, ಇಸ್ರಾಯೇಲಿನ ಸದಮಲಸ್ವಾವಿುಯಲ್ಲಿ ಹೆಚ್ಚಳಪಡುವಿ.


ಹೀಗಿದ್ದರೂ ಆ ಜನರು ತಮ್ಮನ್ನು ಹೊಡೆದಾತನ ಕಡೆಗೆ ತಿರುಗಿಕೊಳ್ಳಲೂ ಇಲ್ಲ, ಸೇನಾಧೀಶ್ವರನಾದ ಯೆಹೋವನನ್ನು ಸೇವಿಸಲೂ ಇಲ್ಲ.


ಆದಕಾರಣ ಅವರ ಮಕ್ಕಳನ್ನು ಕ್ಷಾಮಕ್ಕೆ ಗುರಿಮಾಡಿ ಕತ್ತಿಯ ಬಾಯಿಗೆ ಒಪ್ಪಿಸು; ಅವರ ಹೆಂಡಿರು ಮಕ್ಕಳನ್ನು ನೀಗಿಕೊಂಡು ವಿಧವೆಯರಾಗಲಿ; ಮೃತ್ಯುವು ಅವರ ಗಂಡಂದಿರನ್ನು ಸಂಹರಿಸಲಿ;


ದುಷ್ಟರೋ ಹಾಗಲ್ಲ; ಗಾಳಿ ಬಡುಕೊಂಡು ಹೋಗುವ ಹೊಟ್ಟಿನಂತಿದ್ದಾರೆ.


ನಿಮ್ಮ ಪಿತೃಗಳಂತಿರಬೇಡಿರಿ; ಪೂರ್ವಕಾಲದ ಪ್ರವಾದಿಗಳು ಅವರಿಗೆ - ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ದುರ್ಮಾರ್ಗ ದುಷ್ಕೃತ್ಯಗಳಿಂದ ಹಿಂದಿರುಗಿರಿ ಎಂದು ಸಾರಿದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ; ಇದು ಯೆಹೋವನ ನುಡಿ.


ನರಪುತ್ರನೇ, ಅವರಿಗೆ ಬಲಾಧಾರವೂ ನೇತ್ರಾನಂದವೂ ಆದ ಅವರ ಇಷ್ಟಸುಂದರಾಲಯವನ್ನೂ ಹೃದಯೋಲ್ಲಾಸವಾದ ಅವರ ಗಂಡುಹೆಣ್ಣುಮಕ್ಕಳನ್ನೂ


ನಿಮಗೆ ಗಂಡು ಹೆಣ್ಣು ಮಕ್ಕಳು ಎಷ್ಟು ಹುಟ್ಟಿದರೂ ಅವರು ಸೆರೆಯವರಾಗಿ ಒಯ್ಯಲ್ಪಡುವದರಿಂದ ನಿಮ್ಮ ಬಳಿಯಲ್ಲಿ ಇರುವದಿಲ್ಲ.


ಇಸ್ರಾಯೇಲ್ ವಂಶದವರಿಗೆ ಹೀಗೆ ಸಾರು - ಹಾ, ನಿಮಗೆ ಮುಖ್ಯಬಲವೂ ನೇತ್ರಾನಂದವೂ ಪ್ರಾಣಪ್ರಿಯವೂ ಆದ ನನ್ನ ಪವಿತ್ರಾಲಯವನ್ನು ನಾನು ಹೊಲೆಮಾಡಿಸುವೆನು. ನೀವು ಬಿಟ್ಟುಬಂದಿರುವ ನಿಮ್ಮ ಗಂಡುಹೆಣ್ಣುಮಕ್ಕಳು ಖಡ್ಗಕ್ಕೆ ತುತ್ತಾಗುವರು ಎಂಬದಾಗಿ ಕರ್ತನಾದ ಯೆಹೋವನು ನುಡಿದಿದ್ದಾನೆ.


ಏಕಂದರೆ ಬೀದಿಗಳಲ್ಲಿ ಮಕ್ಕಳೂ ಚೌಕಗಳಲ್ಲಿ ಯುವಕರೂ ಇಲ್ಲದ ಹಾಗೆ ಮೃತ್ಯುವು ನಮ್ಮ ಕಿಟಕಿಗಳ ಮೇಲೆ ಹತ್ತಿ ನಮ್ಮ ಉಪ್ಪರಿಗೆಗಳೊಳಗೆ ನುಗ್ಗಿದೆ.


ನಿಮ್ಮ ಗಂಡು ಹೆಣ್ಣು ಮಕ್ಕಳನ್ನು ನಿಮ್ಮ ಮುಂದೆಯೇ ಹಿಡಿದು ಅನ್ಯರಿಗೆ ವಶಪಡಿಸುವರು; ನೀವು ಹಗಲೆಲ್ಲಾ ಅವರನ್ನು ಕಾಣಬೇಕೆಂದು ಹಂಬಲಿಸುತ್ತಾ ಕಂಗೆಡುವಿರಿ; ಆದರೆ ನಿಮ್ಮ ಯತ್ನವೇನೂ ಸಾಗುವದಿಲ್ಲ.


ನಿಮ್ಮ ಸಂತಾನ ವ್ಯವಸಾಯಗಳಿಗೂ ದನಕುರಿಗಳಿಗೂ ಅಶುಭವುಂಟಾಗುವದು.


ಬೆಟ್ಟದ ಸೀಮೆಯೇ, ನಾನು ನಿನ್ನಲ್ಲಿ ಜನಸಂಚಾರವನ್ನುಂಟುಮಾಡುವೆನು; ನನ್ನ ಜನರಾದ ಇಸ್ರಾಯೇಲ್ಯರೇ ನಿನ್ನಲ್ಲಿ ಸಂಚರಿಸುತ್ತಾ ನಿನ್ನನ್ನು ಸ್ವಾಸ್ತ್ಯವಾಗಿ ಅನುಭವಿಸುವರು; ನೀನು ಇನ್ನು ಅವರಿಗೆ ಪುತ್ರಶೋಕವನ್ನು ಕೊಡದಿರುವಿ.


ಇವರು ಇಸ್ರಾಯೇಲ್ಯರನ್ನು ಬಾಯಿತೆರೆದು ನುಂಗಿದ್ದಾರೆ. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಎತ್ತಿಯೇ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು