Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 15:9 - ಕನ್ನಡ ಸತ್ಯವೇದವು J.V. (BSI)

9 ಏಳು ಮಂದಿ ಮಕ್ಕಳನ್ನು ಹೆತ್ತ ಭಾಗ್ಯವಂತಳೂ ಬಳಲಿ ಪ್ರಾಣಬಿಟ್ಟಂತಿದ್ದಾಳೆ, ಹಗಲಿನಲ್ಲಿಯೇ ಆಕೆಯ ಪಾಲಿಗೆ ಸೂರ್ಯನು ಮುಣುಗಿದ್ದಾನೆ, ಆಶಾಭಂಗಪಟ್ಟು ಅವಮಾನಕ್ಕೆ ಈಡಾಗಿದ್ದಾಳೆ; ಆಕೆಯ ಉಳಿದ ಸಂತಾನವನ್ನು ಶತ್ರುಗಳ ಕಣ್ಣೆದುರಿನಲ್ಲಿ ನಾನು ಖಡ್ಗಕ್ಕೆ ಗುರಿಮಾಡುವೆನು, ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಏಳು ಮಂದಿ ಮಕ್ಕಳನ್ನು ಹೆತ್ತ ಭಾಗ್ಯವಂತಳೂ ಬಳಲಿ ಪ್ರಾಣಬಿಟ್ಟಂತಿದ್ದಾಳೆ, ಹಗಲಿನಲ್ಲಿಯೇ ಆಕೆಯ ಪಾಲಿಗೆ ಸೂರ್ಯನು ಮುಳುಗಿದ್ದಾನೆ, ಆಶಾಭಂಗಪಟ್ಟು ಅವಮಾನಕ್ಕೆ ಈಡಾಗಿದ್ದಾಳೆ. ಆಕೆಯ ಉಳಿದ ಸಂತಾನವನ್ನು ಶತ್ರುಗಳ ಕಣ್ಣೆದುರಿನಲ್ಲಿ ನಾನು ಖಡ್ಗಕ್ಕೆ ಗುರಿಮಾಡುವೆನು’” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಏಳು ಮಕ್ಕಳನ್ನು ಕಳೆದುಕೊಂಡ ತಾಯಿ ಪ್ರಾಣಬಿಟ್ಟಂತಿದ್ದಾಳೆ ದುಃಖದಿಂದ ಬಳಲಿ ಅವಳ ಪಾಲಿಗೆ ಸೂರ್ಯ ಮುಳುಗಿದ್ದಾನೆ ಹಾಡುಹಗಲಲ್ಲೆ. ಆಶಾಭಂಗಪಟ್ಟಿದ್ದಾಳೆ, ಅವಮಾನಕ್ಕೆ ಈಡಾಗಿದ್ದಾಳೆ. ಖಡ್ಗಕ್ಕೆ ಗುರಿಮಾಡುವೆ ಅವಳ ಉಳಿದ ಸಂತಾನವನ್ನು ಶತ್ರುಗಳ ಕಣ್ಣೆದುರಿಗೆ. ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಶತ್ರುಗಳು ಖಡ್ಗಧಾರಿಗಳಾಗಿ ಬಂದು ಜನರ ಮೇಲೆರಗಿ ಕೊಲೆಮಾಡುವರು. ಯೆಹೂದದಲ್ಲಿ ಜೀವಂತ ಉಳಿದವರನ್ನು ಅವರು ವಧಿಸುವರು. ಒಬ್ಬ ಸ್ತ್ರೀಗೆ ಏಳು ಜನ ಮಕ್ಕಳಿದ್ದರೂ ಅವರೆಲ್ಲ ಸತ್ತುಹೋಗುವರು. ಅವಳು ಅತ್ತೂಅತ್ತೂ ಬಳಲಿ ಉಸಿರಾಡದಂತಾಗುವಳು. ಅವಳು ಕಳವಳಪಡುವಳು ಮತ್ತು ಗಾಬರಿಗೊಳ್ಳುವಳು. ಪ್ರಕಾಶಮಯವಾದ ದಿನವು ದುಃಖದ ನಿಮಿತ್ತ ಅವಳಿಗೆ ಕತ್ತಲಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಏಳುಮಂದಿಯನ್ನು ಹೆತ್ತವಳು ಕುಂದುತ್ತಾಳೆ. ತನ್ನ ಪ್ರಾಣವನ್ನು ಬಿಡುತ್ತಾಳೆ. ಹಗಲಿರುವಾಗಲೇ ಅವಳ ಸೂರ್ಯನು ಅಸ್ತಮಿಸುತ್ತಾನೆ. ಅವಳು ನಾಚಿಕೆಪಡುತ್ತಾಳೆ, ಅವಮಾನಗೊಳ್ಳುತ್ತಾಳೆ. ಇದಲ್ಲದೆ ಅವರ ಶೇಷವನ್ನು ಅವರ ಶತ್ರುಗಳ ಮುಂದೆ ಖಡ್ಗಕ್ಕೆ ಒಪ್ಪಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 15:9
14 ತಿಳಿವುಗಳ ಹೋಲಿಕೆ  

ಹೊಟ್ಟೆತುಂಬಾ ಉಣ್ಣುತ್ತಿದ್ದವರು ಅನ್ನಕ್ಕೋಸ್ಕರ ಕೂಲಿಮಾಡುತ್ತಾರೆ. ಹಸಿವುಗೊಂಡವರು ಉಂಡು ಸುಖದಿಂದಿರುತ್ತಾರೆ. ಬಂಜೆಯು ಏಳು ಮಂದಿ ಮಕ್ಕಳನ್ನು ಹೆರುವಳು; ಮಕ್ಕಳುಳ್ಳವಳು ದಿಕ್ಕಿಲ್ಲದೆ ಹೋಗುವಳು.


ಒಂದೇ ದಿನದೊಳಗೆ, ಒಂದು ಕ್ಷಣದಲ್ಲಿ, ಪುತ್ರಶೋಕ, ವೈಧವ್ಯ, ಇವೆರಡೂ ನಿನಗುಂಟಾಗುವವು; ನೀನು ಎಷ್ಟು ಮಾಟಮಾಡಿದರೂ ಎಷ್ಟೇ ಮಂತ್ರತಂತ್ರಗಳನ್ನು ನಡಿಸಿದರೂ ಇವುಗಳನ್ನು ಸಂಪೂರ್ಣವಾಗಿ ಅನುಭವಿಸುವಿ.


ಅಯ್ಯೋ, ಜನಭರಿತವಾಗಿದ್ದ ನಗರಿಯು ಒಂಟಿಯಾಗಿ ಕೂತು ಬಿಟ್ಟಳಲ್ಲಾ! ಜನಾಂಗಗಳಲ್ಲಿ ರತ್ನವಾಗಿದ್ದವಳು ವಿಧವೆಯಾದಳು, ಸಂಸ್ಥಾನಗಳಲ್ಲಿ ಶಿರೋಮಣಿಯಾಗಿದ್ದವಳು ಬಿಟ್ಟಿಯಾಳಾದಳು.


ನಿನ್ನಲ್ಲಿನ ಮೂರನೆಯ ಒಂದು ಭಾಗದವರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲಿ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲು ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.


ಕರುಣಿಗಳಾದ ಹೆಂಗಸರು ತಮ್ಮ ಕೂಸುಗಳನ್ನು ಸ್ವಂತ ಕೈಯಿಂದ ಬೇಯಿಸಿಕೊಂಡಿದ್ದಾರೆ; ನನ್ನ ಜನರ ನಾಶನಕಾಲದಲ್ಲಿ ಮಕ್ಕಳು ತಾಯಿಗಳಿಗೆ ತಿಂಡಿಯಾದವು.


ಇಗೋ, ಇವರಿಗೆ ಮೇಲನ್ನಲ್ಲ, ಕೇಡನ್ನೇ ಮಾಡಬೇಕೆಂದು ಎಚ್ಚರಗೊಂಡಿದ್ದೇನೆ; ಐಗುಪ್ತದಲ್ಲಿನ ಎಲ್ಲಾ ಯೆಹೂದ್ಯರು ಖಡ್ಗಕ್ಷಾಮಗಳಿಂದ ನಾಶಹೊಂದುತ್ತಾ ನಿರ್ನಾಮವಾಗುವರು.


ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ವ್ಯಾಧಿಖಡ್ಗಕ್ಷಾಮಗಳಿಂದ ಹತಶೇಷರಾದ ಪ್ರಜೆಗಳನ್ನೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಕೊಟ್ಟುಬಿಡುವೆನು; ಅವನು ಅವರನ್ನು ಕರುಣಿಸದೆ ಕನಿಕರಪಡದೆ ಉಳಿಸದೆ ಕತ್ತಿಯಿಂದ ಸಂಹರಿಸುವನು.


[ಇವರು] - ಚೀಯೋನಿಗೆ ವಿರುದ್ಧವಾಗಿ ಸನ್ನದ್ಧರಾಗಿರಿ; ಏಳಿರಿ, ಮಧ್ಯಾಹ್ನಕ್ಕೆ ಅದರ ಮೇಲೆ ನುಗ್ಗುವ! ಅಯ್ಯೋ, ಇದೇನು! ನಮಗೆ ಹೊತ್ತು ತಿರುಗಿತಲ್ಲಾ, ಸಂಜೆಯ ನೆರಳುಗಳು ಉದ್ದವಾದವು.


ಅವರು ನನಗೆ ಕೇಡುಮಾಡುತ್ತಾರೋ, ಅವಮಾನವು ತಮ್ಮ ಮುಖವನ್ನು ಮುಚ್ಚುವಷ್ಟರ ಮಟ್ಟಿಗೆ ತಮಗೇ ಕೇಡುಮಾಡಿಕೊಳ್ಳುತ್ತಾರಲ್ಲಾ ಎಂದು ಯೆಹೋವನು ಅನ್ನುತ್ತಾನೆ.


ನಾನು ಈ ಸ್ಥಳದಲ್ಲಿ ಯೆಹೂದ್ಯರ ಮತ್ತು ಯೆರೂಸಲೇವಿುನವರ ಆಲೋಚನೆಯನ್ನು ಚೆಲ್ಲಿ ಮಣ್ಣುಪಾಲುಮಾಡಿ ಅವರ ಪ್ರಾಣವನ್ನು ಹುಡುಕುವ ಶತ್ರುಗಳ ಖಡ್ಗದಿಂದ ಅವರನ್ನು ಬೀಳಿಸಿ ಆ ಹೆಣಗಳನ್ನು ಆಕಾಶಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವನ್ನಾಗಿ ಮಾಡುವೆನು.


ನಿಮ್ಮ ಮಾತೃಭೂವಿುಯು ಮಾನಭಂಗಕ್ಕೆ ಈಡಾಗುವದು, ನಿಮ್ಮನ್ನು ಹೆತ್ತ ರಾಜ್ಯವು ನಾಚಿಕೊಳ್ಳುವದು; ಆಹಾ, ಅದು ಕಾಡು, ಕಗ್ಗಾಡು, ಬೆಗ್ಗಾಡು, ಜನಾಂಗಗಳಲ್ಲಿ ಕನಿಷ್ಠವೂ ಆಗುವದು.


ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಸುರಿದು ಶಾಂತನಾಗುವೆನು; ಆಗ್ರಹದಿಂದ ಮಾತಾಡಿದವನು ಯೆಹೋವನಾದ ನಾನೇ ಎಂಬದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು