Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 16:14 - ಕನ್ನಡ ಸತ್ಯವೇದವು J.V. (BSI)

14 ಯೆಹೋವನು ಹೀಗನ್ನುತ್ತಾನೆ - ಇಗೋ, ಮುಂದಿನ ಕಾಲದಲ್ಲಿ ಜನರು ಇಸ್ರಾಯೇಲ್ಯರನ್ನು ಐಗುಪ್ತದೇಶದೊಳಗಿಂದ ಉದ್ಧರಿಸಿದ ಯೆಹೋವನ ಜೀವದಾಣೆ ಎಂಬದಾಗಿ ಪ್ರಮಾಣಮಾಡುವದನ್ನು ಬಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ಇಗೋ, ಮುಂದಿನ ಕಾಲದಲ್ಲಿ ಜನರು, ‘ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಉದ್ಧರಿಸಿದ ಯೆಹೋವನ ಜೀವದಾಣೆ’ ಎಂಬುದಾಗಿ ಪ್ರಮಾಣಮಾಡುವುದನ್ನು ಬಿಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸರ್ವೇಶ್ವರ ಹೀಗೆನ್ನುತ್ತಾರೆ : “ಇಗೋ ಕೇಳು, ಕಾಲಬರಲಿದೆ. ಆಗ ಜನರು, ‘ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಬಿಡಿಸಿ ಬರಮಾಡಿದ ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡುವುದನ್ನು ಬಿಟ್ಟುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನು ಹೇಳಿದನು: “ಪ್ರಮಾಣ ಮಾಡಬೇಕಾದರೆ ಜನರು ‘ಇಸ್ರೇಲರನ್ನು ಈಜಿಪ್ಟಿನಿಂದ ಹೊರತಂದ ಯೆಹೋವನ ಜೀವದಾಣೆ’ ಎಂದು ಹೇಳುತ್ತಾರೆ. ಒಂದು ಕಾಲ ಬರಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ಆದ್ದರಿಂದ ಇಗೋ, ಯೆಹೋವ ದೇವರು ಹೇಳುವುದೇನೆಂದರೆ: ‘ಇಗೋ, ಇಸ್ರಾಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದ ಯೆಹೋವ ದೇವರ ಜೀವದಾಣೆ,’ ಎಂದು ಇನ್ನು ಹೇಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 16:14
10 ತಿಳಿವುಗಳ ಹೋಲಿಕೆ  

ಐಗುಪ್ತದೇಶದಲ್ಲಿ ನೀವೇ ದಾಸರಾಗಿರಲು ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡುಗಡೆಮಾಡಿದನೆಂಬದನ್ನು ಜ್ಞಾಪಕಮಾಡಿಕೊಳ್ಳಿರಿ. ಇದಕ್ಕೋಸ್ಕರವಾಗಿಯೇ ನಾನು ಈ ಆಜ್ಞೆಯನ್ನು ನಿಮಗೆ ಈಗ ಕೊಟ್ಟಿದ್ದೇನೆ.


ನೀನು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ನಿನ್ನನ್ನು ಬಿಡುಗಡೆ ಮಾಡಿದ ಯೆಹೋವನು ಎಂಬ ನಿನ್ನ ದೇವರು ನಾನೇ.


ನಾನು ನಿನ್ನನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ ದಾಸತ್ವದಿಂದ ಬಿಡಿಸಿದೆನು; ಮೋಶೆಯನ್ನೂ ಆರೋನನನ್ನೂ ವಿುರ್ಯಾಮಳನ್ನೂ ನಿನಗೆ ನಾಯಕರನ್ನಾಗಿ ಕಳುಹಿಸಿದೆನು.


ಇಗೋ, ನಾನು ಕೋಪರೋಷ ಮಹಾಕ್ರೋಧಭರಿತನಾಗಿ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಸಕಲ ದೇಶಗಳಿಂದ ಈ ಸ್ಥಳಕ್ಕೆ ಪುನಃ ಕರತಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.


ನೀವು ಶತ್ರುಗಳೊಡನೆ ಯುದ್ಧಕ್ಕೆ ಹೊರಟಾಗ ಅವರ ಕಡೆ ಕುದುರೆಗಳೂ ರಥಗಳೂ ನಿಮಗಿಂತ ಹೆಚ್ಚಾದ ಕಾಲ್ಬಲವೂ ಇರುವದನ್ನು ಕಂಡರೆ ಹೆದರಬಾರದು. ಐಗುಪ್ತದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಯೆಹೋವನು ನಿಮ್ಮ ಕಡೆ ಇದ್ದಾನಲ್ಲಾ .


ಕಷ್ಟದಲ್ಲಿ ಮೊರೆಯಿಟ್ಟ ನಿನ್ನನ್ನು ವಿಮೋಚಿಸಿದೆನು; ಗುಡುಗುವ ಮೋಡದಲ್ಲಿದ್ದು ನಿನಗೆ ಉತ್ತರವನ್ನು ಕೊಟ್ಟೆನು; ಮೆರೀಬಾ ಪ್ರವಾಹಗಳ ಬಳಿಯಲ್ಲಿ ನಿನ್ನನ್ನು ಪರೀಕ್ಷಿಸಿದೆನು. ಸೆಲಾ.


ಆದರೆ ನನ್ನ ಜನರು ನನ್ನ ಮಾತು ಕೇಳಲಿಲ್ಲ; ಇಸ್ರಾಯೇಲ್ಯರು ನನಗೆ ಸಮ್ಮತಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು