ಯೆರೆಮೀಯ 16:15 - ಕನ್ನಡ ಸತ್ಯವೇದವು J.V. (BSI)15 ಇಸ್ರಾಯೇಲ್ಯರನ್ನು ಬಡಗಣ ದೇಶದಿಂದಲೂ ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಉದ್ಧರಿಸಿದ ಯೆಹೋವನ ಜೀವದಾಣೆ ಎಂದು ಪ್ರಮಾಣಮಾಡುವರು; ನಾನು ಅವರ ಪಿತೃಗಳಿಗೆ ದಯಪಾಲಿಸಿದ ದೇಶಕ್ಕೆ ಅವರನ್ನು ಹಿಂದಿರುಗಿಸುವೆನಷ್ಟೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ‘ಇಸ್ರಾಯೇಲರನ್ನು ಬಡಗಣ ದೇಶದಿಂದಲೂ, ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಉದ್ಧರಿಸಿದ ಯೆಹೋವನ ಜೀವದಾಣೆ’ ಎಂದು ಪ್ರಮಾಣಮಾಡುವರು; ನಾನು ಅವರ ಪೂರ್ವಿಕರಿಗೆ ದಯಪಾಲಿಸಿದ ದೇಶಕ್ಕೆ ಅವರನ್ನು ಹಿಂದಿರುಗಿಸುವೆನಷ್ಟೆ” ಎಂದು ಯೆಹೋವನು ಘೋಷಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಬದಲಿಗೆ, ‘ಇಸ್ರಯೇಲರನ್ನು ಉತ್ತರ ದೇಶದಿಂದ ಹಾಗು ಅವರನ್ನು ತಾನು ತಳ್ಳಿಬಿಟ್ಟಿದ್ದ ಎಲ್ಲ ಸೀಮೆಗಳಿಂದ ಬಿಡಿಸಿ ಬರಮಾಡಿದ ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡುವರು. ನಾನು ಅವರ ಪೂರ್ವಜರಿಗೆ ದಯಪಾಲಿಸಿದ ನಾಡಿಗೆ ಅವರನ್ನು ಮರಳಿ ಬರಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆಗ ಅವರು ‘ಇಸ್ರೇಲರನ್ನು ಉತ್ತರದ ನಾಡಿನಿಂದಲೂ ಎಲ್ಲಾ ದೇಶಗಳಿಂದಲೂ ಹೊರತಂದ ಯೆಹೋವನ ಜೀವದಾಣೆ.’ ಇಸ್ರೇಲರನ್ನು ನಾನು ಅವರ ಪೂರ್ವಿಕರಿಗೆ ಕೊಟ್ಟ ದೇಶಕ್ಕೆ ಮತ್ತೆ ಕರೆದುಕೊಂಡು ಬರುವೆನು. ಆದ್ದರಿಂದಲೇ ಜನರು ಹೀಗೆ ಹೇಳುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ‘ಆದರೆ ಯೆಹೋವ ದೇವರ ಜೀವದಾಣೆ, ಇಸ್ರಾಯೇಲರನ್ನು ಉತ್ತರ ದೇಶದಿಂದಲೂ, ನಾನು ಅವರನ್ನು ಅಟ್ಟಿಬಿಟ್ಟಿದ್ದ ಸಮಸ್ತ ದೇಶಗಳಿಂದಲೂ ಬರಮಾಡಿ, ನಾನು ಅವರ ಪಿತೃಗಳಿಗೆ ಕೊಟ್ಟಂಥ ಅವರ ದೇಶಕ್ಕೆ ಅವರನ್ನು ತಿರುಗಿ ಬರಮಾಡುವೆನು,’ ಎಂದು ಹೇಳುವ ದಿನಗಳು ಬರುವುವು. ಅಧ್ಯಾಯವನ್ನು ನೋಡಿ |