Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 16:18 - ಕನ್ನಡ ಸತ್ಯವೇದವು J.V. (BSI)

18 ಅವರ ಅಧರ್ಮಕ್ಕೂ ಪಾಪಕ್ಕೂ ಎರಡರಷ್ಟು ಶಿಕ್ಷೆಯನ್ನು ಮೊದಲು ಕೊಡುವೆನು; ಹೆಣಗಳಂತಿರುವ ತಮ್ಮ ಹೇಯ ವಿಗ್ರಹಗಳಿಂದ ನನ್ನ ದೇಶವನ್ನು ಹೊಲಸು ಮಾಡಿ ನನ್ನ ಸ್ವಾಸ್ತ್ಯವನ್ನು ತಮ್ಮ ಅಸಹ್ಯ ವಸ್ತುಗಳಿಂದ ತುಂಬಿಸಿದ್ದಾರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರ ಅಧರ್ಮಕ್ಕೂ, ಪಾಪಕ್ಕೂ ಎರಡರಷ್ಟು ಶಿಕ್ಷೆಯನ್ನು ಮೊದಲು ಕೊಡುವೆನು; ಹೆಣಗಳಂತಿರುವ ತಮ್ಮ ಹೇಯವಿಗ್ರಹಗಳಿಂದ ನನ್ನ ದೇಶವನ್ನು ಹೊಲಸುಮಾಡಿ, ನನ್ನ ಸ್ವತ್ತನ್ನು ತಮ್ಮ ಅಸಹ್ಯ ವಸ್ತುಗಳಿಂದ ತುಂಬಿಸಿದ್ದಾರಷ್ಟೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಮೊತ್ತ ಮೊದಲು ಅವರ ಅಕ್ರಮಕ್ಕೂ ಪಾಪಕ್ಕೂ ಇಮ್ಮಡಿ ಶಿಕ್ಷೆಯನ್ನು ಕೊಡುವೆನು. ಏಕೆಂದರೆ ಹೆಣಗಳಂತಿರುವ ತಮ್ಮ ಹೇಯ ವಿಗ್ರಹಗಳಿಂದ ನನ್ನ ನಾಡನ್ನು ಹೊಲಸುಮಾಡಿದ್ದಾರೆ. ಅಸಹ್ಯವಾದ ವಸ್ತುಗಳಿಂದ ಆ ನನ್ನ ಸ್ವಂತ ನಾಡನ್ನು ತುಂಬಿಸಿಬಿಟ್ಟಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಯೆಹೂದದ ಜನರನ್ನು ಶಿಕ್ಷಿಸುತ್ತೇನೆ. ಪ್ರತಿಯೊಂದು ಪಾಪಕ್ಕಾಗಿ ನಾನು ಅವರನ್ನು ಎರಡು ಸಲ ಶಿಕ್ಷಿಸುತ್ತೇನೆ. ಅವರು ನನ್ನ ದೇಶವನ್ನು ‘ಹೊಲಸು’ ಮಾಡಿದ್ದಕ್ಕಾಗಿ ನಾನು ಹೀಗೆ ಮಾಡುತ್ತೇನೆ. ಅವರು ತಮ್ಮ ಭಯಂಕರವಾದ ವಿಗ್ರಹಗಳಿಂದ ನನ್ನ ಪ್ರದೇಶವನ್ನು ‘ಹೊಲಸು’ ಮಾಡಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ಆದರೆ ಅವರು ತಮ್ಮ ವಿಗ್ರಹಗಳಿಂದ ನನ್ನ ದೇಶವನ್ನು ತುಂಬಿಸಿಬಿಟ್ಟಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದರೆ ಮೊದಲು ನಾನು ಅವರ ಅಕ್ರಮಕ್ಕೂ, ಅವರ ಪಾಪಕ್ಕೂ ಎರಡಷ್ಟು ಪ್ರತಿಫಲ ಕೊಡುತ್ತೇನೆ. ಅವರು ನನ್ನ ದೇಶವನ್ನು ತಮ್ಮ ದುಷ್ಕೃತ್ಯಗಳಿಂದ ಅಪವಿತ್ರ ಮಾಡಿ, ನನ್ನ ಸೊತ್ತನ್ನು ತಮ್ಮ ಅಸಹ್ಯ ವಿಗ್ರಹಗಳಿಂದ ತುಂಬಿಸಿದ್ದಾರೆ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 16:18
24 ತಿಳಿವುಗಳ ಹೋಲಿಕೆ  

ಯೆರೂಸಲೇವಿುನ ಸಂಗಡ ಹೃದಯಂಗಮವಾಗಿ ಮಾತಾಡಿರಿ; ಅದಕ್ಕೆ ಗಡು ತೀರಿತು, ವಿಧಿಸಿದ ದೋಷಫಲವೆಲ್ಲಾ ನೆರವೇರಿತು, ಅದರ ಎಲ್ಲಾ ಪಾಪಗಳಿಗೂ ಯೆಹೋವನ ಕೈಯಿಂದ ಎರಡರಷ್ಟು ಶಿಕ್ಷೆಯಾಯಿತು ಎಂದು ಆ ನಗರಿಗೆ ಕೂಗಿ ಹೇಳಿರಿ; ಇದೇ ನಿಮ್ಮ ದೇವರ ಆಜ್ಞೆ.


ಇತರರಿಗೆ ಅವಳು ಮಾಡಿದ ಪ್ರಕಾರ ಅವಳಿಗೆ ಮಾಡಿರಿ; ಅವಳ ಕೃತ್ಯಗಳಿಗೆ ಸರಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ; ಅವಳು ಕಲಸಿದ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ಕಲಸಿಕೊಡಿರಿ.


ಆದರೆ ಯಾರ ಚಿತ್ತವು ತಮ್ಮ ಅಸಹ್ಯವಸ್ತುಗಳನ್ನೂ ಹೇಯವಿಗ್ರಹಗಳನ್ನೂ ಅನುಸರಿಸುತ್ತದೋ ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು. ಇದು ಕರ್ತನಾದ ಯೆಹೋವನ ನುಡಿ.


ನನ್ನ ಹಿಂಸಕರಿಗೆ ಅವಮಾನವಾಗಲಿ, ನನಗಾಗದಿರಲಿ; ಭಯಭ್ರಾಂತಿಯು ಅವರನ್ನು ಹಿಡಿಯಲಿ, ನನ್ನನ್ನು ಬೇಡ; ಅವರಿಗೆ ಕೇಡುಗಾಲವನ್ನು ಬರಮಾಡಿ ವಿಪರೀತಭಂಗದಿಂದ ಅವರನ್ನು ನಾಶಪಡಿಸು.


ನಾನು ನಿಮ್ಮನ್ನು ಫಲವತ್ತಾದ ಸೀಮೆಗೆ ಕರತಂದು ಅದರ ಫಲವನ್ನೂ ಸಾರವನ್ನೂ ಅನುಭವಿಸುವ ಹಾಗೆ ಮಾಡಿದೆನು; ಆದರೆ ನೀವು ಪ್ರವೇಶಿಸಿ ಆ ನನ್ನ ದೇಶವನ್ನು ಹೊಲೆಮಾಡಿ ನನ್ನ ಸ್ವಾಸ್ತ್ಯವನ್ನು ಅಸಹ್ಯಪಡಿಸಿದಿರಿ.


ಅವರು ಅಲ್ಲಿಗೆ ಸೇರಿ ಎಲ್ಲಾ ಅಸಹ್ಯವಸ್ತುಗಳನ್ನೂ ಸಮಸ್ತ ಹೇಯವಿಗ್ರಹಗಳನ್ನೂ ಅಲ್ಲಿಂದ ತೆಗೆದುಹಾಕುವರು.


ಕಲ್ಲು ಮರಗಳೊಡನೆ ಹಾದರಮಾಡಿ ಲಘುವೆಂದು ಭಾವಿಸಿಕೊಂಡ ತನ್ನ ಸೂಳೆತನದಿಂದ ದೇಶವನ್ನು ಅಪವಿತ್ರಪಡಿಸಿದಳು.


ನಿಮಗಾದ ಅವಮಾನಕ್ಕೆ ಬದಲಾಗಿ ಎರಡರಷ್ಟು ಮಾನವನ್ನು ಹೊಂದುವಿರಿ; ನಾಚಿಕೆಪಟ್ಟದ್ದಕ್ಕೆ ಪ್ರತಿಯಾಗಿ ಇವರು ತಮ್ಮ ಸ್ವಾಸ್ತ್ಯದಲ್ಲಿ ಹಿಗ್ಗುವರು; ಹೀಗೆ ತಮ್ಮ ದೇಶದಲ್ಲಿ ಎರಡರಷ್ಟನ್ನು ಅನುಭವಿಸುವರು; ಇವರಿಗೆ ಶಾಶ್ವತ ಸಂತೋಷವಾಗುವದು.


ಏಳಿರಿ, ತೊಲಗಿರಿ! ಈ ದೇಶವು ನಿಮಗೆ ಸುಖ ವಸತಿಯಾಗದು; ನಾಶನವನ್ನು, ವಿಪರೀತನಾಶನವನ್ನು ಉಂಟುಮಾಡುವ ಹೊಲಸು ಇದಕ್ಕೆ ಅಂಟಿಕೊಂಡಿದೆ.


ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ ನಿಯಮವನ್ನು ಅತಿಕ್ರವಿುಸಿ ಶಾಶ್ವತವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂವಿುಯು ಅವರ ಹೆಜ್ಜೆಯಿಂದ ಅಪವಿತ್ರವಾಯಿತು.


ಕಾನಾನ್ಯರ ಮೂರ್ತಿಗಳ ಅರ್ಪಣೆಗೋಸ್ಕರ ತಮ್ಮ ಮಕ್ಕಳ ನಿರಪರಾಧರಕ್ತವನ್ನು ಸುರಿಸಿದರು; ಇಂಥ ಕೊಲೆಗಳಿಂದ ದೇಶವನ್ನು ಹೊಲೆಮಾಡಿದರು.


ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು; ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದು ಹಾಕುವೆನು; ನಿಮ್ಮ ಬೊಂಬೆಗಳ ಮುಂಡಗಳ ಮೇಲೆ ನಿಮ್ಮ ಮುಂಡಗಳನ್ನು ಬೀಸಾಡುವೆನು; ನಿಮ್ಮ ವಿಷಯದಲ್ಲಿ ಅಸಹ್ಯಪಡುವೆನು.


ಇಗೋ, ಇದೆಲ್ಲಾ ಶಾಸನವಾಗಿ ನನ್ನ ಕಣ್ಣೆದುರಿಗಿದೆ, ನಾನು ಮುಯ್ಯಿತೀರಿಸುವ ತನಕ ಸುಮ್ಮನಿರಲಾರೆನು;


ಯೆಹೋವನು ಹೀಗನ್ನುತ್ತಾನೆ - ಯೆಹೂದ್ಯರು ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನೇ ನಡಿಸಿದ್ದಾರೆ, ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ತಮ್ಮ ಅಸಹ್ಯ ವಸ್ತುಗಳನ್ನು ಇಟ್ಟು ಅದನ್ನು ಹೊಲೆಮಾಡಿದ್ದಾರೆ.


ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ಸಾವಕಾಶಮಾಡದೆ ಕಳುಹಿಸುತ್ತಾ - ಅಹಹ, ನಾನು ಹೇಸುವ ಈ ಅಸಹ್ಯಕಾರ್ಯವನ್ನು ಮಾಡಬೇಡಿರಿ ಎಂದು ಪ್ರಕಟಿಸುತ್ತಾ ಬಂದರೂ ಅವರು ಕಿವಿಗೊಟ್ಟು ಕೇಳಲಿಲ್ಲ,


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ ಅಸಹ್ಯವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ಸಹಿಸೆನು, ಕಟಾಕ್ಷಿಸೆನು, ಕ್ಷವಿುಸೆನು.


ದಂಡನೆಯ ದಿನಗಳು ಹತ್ತರಿಸಿವೆ, ಮುಯ್ಯಿತೀರಿಸುವ ದಿವಸಗಳು ಸಮೀಪಿಸಿವೆ; ಇಸ್ರಾಯೇಲಿನ ಅನುಭವಕ್ಕೆ ಬಂದೇ ಬರುವವು; [ಇಸ್ರಾಯೇಲೇ,] ನಿನ್ನ ಅಧರ್ಮವು ಬಹಳವಾಗಿರುವದರಿಂದಲೂ ವಿರೋಧವು ಹೆಚ್ಚಾಗಿರುವದರಿಂದಲೂ ಪ್ರವಾದಿಯು ಮೂರ್ಖನು, ದೇವರಾತ್ಮಾವಿಷ್ಟನು ಹುಚ್ಚನು [ಅಂದುಕೊಳ್ಳುತ್ತಿ].


ಇವರೂ ಇವರ ಪಿತೃಗಳೂ ಬೆಟ್ಟಗುಡ್ಡಗಳಲ್ಲಿ ಧೂಪಹಾಕಿ ನನ್ನನ್ನು ಹೀನೈಸಿ ನಡಿಸಿದ ಅಪರಾಧಗಳ ಪ್ರತಿಫಲವನ್ನು ಇವರ ಮಡಲಿಗೆ ಹಾಕುವೆನು; ಹೌದು, ಇವರ ಕಾರ್ಯದ ಫಲವನ್ನು ಅಳತೆಗೆ ಸರಿಯಾಗಿ ಮೊಟ್ಟಮೊದಲೇ ಇವರ ಮಡಲಿಗೆ ಸುರಿಯುವೆನು ಎಂದು ಯೆಹೋವನು ಹೇಳುತ್ತಾನೆ.


ಅವರು ದೇಶದ ಮೇಲೆ ರಕ್ತವನ್ನು ಸುರಿಸಿ ತಮ್ಮ ಬೊಂಬೆಗಳಿಂದ ಅದನ್ನು ಹೊಲೆಗೈದ ಕಾರಣ ನಾನು ಅವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು