Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 16:3 - ಕನ್ನಡ ಸತ್ಯವೇದವು J.V. (BSI)

3 ಏಕಂದರೆ ಈ ಸ್ಥಳದಲ್ಲಿ ಹುಟ್ಟುವ ಗಂಡು ಹೆಣ್ಣು ಮಕ್ಕಳು, ಅವರನ್ನು ಹೆತ್ತ ತಾಯಿಯರು, ಅವರನ್ನು ಈ ದೇಶದಲ್ಲಿ ಪಡೆದ ತಂದೆಗಳು, ಇವರೆಲ್ಲರ ವಿಷಯವಾಗಿ ಯೆಹೋವನು ಹೀಗೆ ನುಡಿದಿದ್ದಾನೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಏಕೆಂದರೆ ಈ ಸ್ಥಳದಲ್ಲಿ ಹುಟ್ಟುವ ಗಂಡು ಹೆಣ್ಣು ಮಕ್ಕಳು, ಅವರನ್ನು ಹೆತ್ತ ತಾಯಿಯರು, ಅವರನ್ನು ಈ ದೇಶದಲ್ಲಿ ಪಡೆದ ತಂದೆಯಂದಿರಿಗೆ, ಇವರೆಲ್ಲರ ವಿಷಯವಾಗಿ ಯೆಹೋವನು ಹೀಗೆ ನುಡಿದಿದ್ದಾನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಏಕೆಂದರೆ ಇಲ್ಲಿ ಆ ಗಂಡುಹೆಣ್ಣು ಮಕ್ಕಳಿಗೆ, ಅವರನ್ನು ಹೆತ್ತ ತಾಯಿಯರಿಗೆ, ಅವರನ್ನು ಈ ನಾಡಿನಲ್ಲಿ ಪಡೆದ ತಂದೆಯರಿಗೆ ಸಂಭವಿಸಲು ಇರುವುದನ್ನು ಸರ್ವೇಶ್ವರನಾದ ನಾನು ಹೇಳುತ್ತೇನೆ, ಕೇಳು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೂದ ಪ್ರದೇಶದಲ್ಲಿ ಹುಟ್ಟಿದ ಮಕ್ಕಳ ಕುರಿತಾಗಿಯೂ ಅದರ ತಂದೆತಾಯಿಗಳ ಕುರಿತಾಗಿಯೂ ಯೆಹೋವನು ಹೀಗೆ ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಏಕೆಂದರೆ ಈ ಸ್ಥಳದಲ್ಲಿ ಹುಟ್ಟಿರುವ ಪುತ್ರಪುತ್ರಿಯರನ್ನು ಕುರಿತು ಮತ್ತು ಅವರ ತಾಯಂದಿರನ್ನೂ, ಅವರನ್ನು ಪಡೆದ ತಂದೆಗಳನ್ನೂ ಕುರಿತು ಯೆಹೋವ ದೇವರು ಹೀಗೆ ಹೇಳುತ್ತಾರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 16:3
6 ತಿಳಿವುಗಳ ಹೋಲಿಕೆ  

ಇಸ್ರಾಯೇಲಿನ ದೇವರೂ ಸೇನಾಧೀಶ್ವರನಾದ ಯೆಹೋವನೂ ಆಗಿರುವಾತನು ಹೀಗಂದಿದ್ದಾನೆ - ಇಗೋ, ನಿಮ್ಮ ಕಾಲದಲ್ಲಿ ನಿಮ್ಮ ಕಣ್ಣೆದುರಿಗೆ ಹರ್ಷಸಂಭ್ರಮಗಳ ಧ್ವನಿಯನ್ನೂ ವಧೂವರರ ಸ್ವರವನ್ನೂ ಈ ಸ್ಥಳದೊಳಗೆ ನಿಲ್ಲಿಸಿಬಿಡುವೆನು.


ಯೆಹೋವನು [ನನಗೆ] ಹೀಗೆ ಹೇಳಿದ್ದಾನೆ - ಗೋಳಾಟದ ಮನೆಯಲ್ಲಿ ಸೇರಬೇಡ, ಪ್ರಲಾಪಿಸಲಿಕ್ಕೆ ಹೋಗಬೇಡ, ಅವರಿಗಾಗಿ ಎದೆ ಬಡುಕೊಳ್ಳಲೂಬೇಡ; ನಾನು ದಯಪಾಲಿಸಿದ ಸಮಾಧಾನವನ್ನು, ಅಂದರೆ ನನ್ನ ಪ್ರೀತಿಯನ್ನೂ ಕೃಪೆಯನ್ನೂ ಈ ಜನರಿಂದ ತೆಗೆದುಬಿಟ್ಟಿದ್ದೇನಷ್ಟೆ.


ಆದಕಾರಣ ಇಗೋ, ನಾನು ಈ ಜನರ ಮುಂದೆ ಆಟಂಕಗಳನ್ನು ಒಡ್ಡುವೆನು; ತಂದೆಗಳೂ ಮಕ್ಕಳೂ ಅವುಗಳನ್ನು ಎಡವುವರು, ನೆರೆಹೊರೆಯವರೂ ನಾಶವಾಗುವರು. ಇದೇ ಯೆಹೋವನಾದ ನನ್ನ ನುಡಿ.


ಅವರ ವಿಧವೆಯರು ನನ್ನ ಭಾಗಕ್ಕೆ ಸಮುದ್ರದ ಉಸುಬಿಗಿಂತ ಹೆಚ್ಚಾಗಿರುವರು; ಯುವಕರ ತಾಯಿಗಳ ಮೇಲೆ ಕೊಳ್ಳೆಹೊಡೆಯುವವನನ್ನು ಮಧ್ಯಾಹ್ನದಲ್ಲೇ ಬರಮಾಡುವೆನು; ಅವರ ಮೇಲೆ ಕಳವಳವನ್ನೂ ದಿಗಿಲನ್ನೂ ತಟ್ಟನೆ ಬೀಳಿಸುವೆನು.


ನೀನು ಮದುವೆಯಾಗಬೇಡ, ಗಂಡು ಹೆಣ್ಣು ಮಕ್ಕಳು ಈ ಸ್ಥಳದಲ್ಲಿ ನಿನಗೆ ಹುಟ್ಟದಿರಲಿ.


ಇಸ್ರಾಯೇಲ್ ವಂಶದವರಿಗೆ ಹೀಗೆ ಸಾರು - ಹಾ, ನಿಮಗೆ ಮುಖ್ಯಬಲವೂ ನೇತ್ರಾನಂದವೂ ಪ್ರಾಣಪ್ರಿಯವೂ ಆದ ನನ್ನ ಪವಿತ್ರಾಲಯವನ್ನು ನಾನು ಹೊಲೆಮಾಡಿಸುವೆನು. ನೀವು ಬಿಟ್ಟುಬಂದಿರುವ ನಿಮ್ಮ ಗಂಡುಹೆಣ್ಣುಮಕ್ಕಳು ಖಡ್ಗಕ್ಕೆ ತುತ್ತಾಗುವರು ಎಂಬದಾಗಿ ಕರ್ತನಾದ ಯೆಹೋವನು ನುಡಿದಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು