ಯೆರೆಮೀಯ 16:4 - ಕನ್ನಡ ಸತ್ಯವೇದವು J.V. (BSI)4 ಅವರು ಘೋರಮರಣಕ್ಕೆ ಗುರಿಯಾಗುವರು, ಅವರಿಗಾಗಿ ಯಾರೂ ಗೋಳಾಡರು, ಅವರನ್ನು ಯಾರೂ ಹೂಣಿಡರು; ಅವರು ಭೂವಿುಯ ಮೇಲೆ ಗೊಬ್ಬರವಾಗುವರು; ಖಡ್ಗವೂ ಕ್ಷಾಮವೂ ಅವರನ್ನು ನಿರ್ಮೂಲ ಮಾಡುವವು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂವಿುಯ ಜಂತುಗಳಿಗೂ ಆಹಾರವಾಗುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವರು ಘೋರವಾದ ಮರಣಕ್ಕೆ ಗುರಿಯಾಗುವರು, ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಅವರನ್ನು ಯಾರೂ ಹೂಣಿಡುವುದಿಲ್ಲ; ಅವರು ಭೂಮಿಯ ಮೇಲೆ ಗೊಬ್ಬರವಾಗುವರು. ಖಡ್ಗವೂ, ಕ್ಷಾಮವೂ ಅವರನ್ನು ನಿರ್ಮೂಲ ಮಾಡುವವು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಮತ್ತು ಭೂಜಂತುಗಳಿಗೂ ಆಹಾರವಾಗುವವು” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅವರು ಘೋರ ಮರಣಕ್ಕೆ ಗುರಿಯಾಗುವರು. ಅವರಿಗಾಗಿ ಯಾರೂ ದುಃಖಿಸುವುದಿಲ್ಲ. ಅವರನ್ನು ಯಾರೂ ಹೂಣುವುದಿಲ್ಲ. ಅವರು ಗೊಬ್ಬರವಾಗಿ ಭೂಮಿಯ ಮೇಲೆ ಬಿದ್ದಿರುವರು. ಖಡ್ಗದಿಂದ ಹಾಗು ಕ್ಷಾಮದಿಂದ ಅವರು ನಾಶವಾಗುವರು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಜಂತುಗಳಿಗೂ ಆಹಾರವಾಗುವುವು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 “ಅವರು ಒಂದು ಭಯಾನಕವಾದ ರೀತಿಯಲ್ಲಿ ಮರಣಹೊಂದುತ್ತಾರೆ. ಅವರನ್ನು ಯಾರೂ ಹೂಳುವುದಿಲ್ಲ. ಅವರ ದೇಹಗಳು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುತ್ತವೆ. ಅವರು ವೈರಿಗಳ ಖಡ್ಗಗಳಿಂದ ಮಡಿಯುವರು. ಅವರು ಅನ್ನವಿಲ್ಲದೆ ಸಾಯುವರು. ಅವರ ಶವಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೇಲಿನ ಕಾಡುಪ್ರಾಣಿಗಳಿಗೂ ಆಹಾರವಾಗುವವು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 “ಅವರು ಮರಣಕರವಾದ ಬೇನೆಗಳಿಂದ ಸಾಯುವರು. ಅವರಿಗೋಸ್ಕರ ಗೋಳಾಟ ಆಗುವುದಿಲ್ಲ. ಅವರಿಗೆ ಸಮಾಧಿಯಾಗುವುದಿಲ್ಲ. ಭೂಮಿಯ ಮೇಲೆ ಅವರು ಗೊಬ್ಬರವಾಗುವರು. ಖಡ್ಗದಿಂದಲೂ ಕ್ಷಾಮದಿಂದಲೂ ಸಂಹಾರವಾಗುವರು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗುವುವು.” ಅಧ್ಯಾಯವನ್ನು ನೋಡಿ |
ಆದಕಾರಣ ಯೆಹೋವನು ಇಂತೆನ್ನುತ್ತಾನೆ - ನೀವು ನನ್ನನ್ನು ಕೇಳಲಿಲ್ಲ, ನಿಮ್ಮ ನಿಮ್ಮ ಸಹೋದರರಿಗೂ ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ; ಇದೇ ಯೆಹೋವನ ನುಡಿ - ಇಗೋ, ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ; ನಿಮ್ಮನ್ನು ಖಡ್ಗವ್ಯಾಧಿಕ್ಷಾಮಗಳಿಗೆ ಗುರಿಯಾಗುವಂತೆ ಬಿಡುತ್ತೇನೆ; ನಿಮ್ಮನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.