Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 16:7 - ಕನ್ನಡ ಸತ್ಯವೇದವು J.V. (BSI)

7 ಸತ್ತವನಿಗೋಸ್ಕರ ದುಃಖಪಡುವವರನ್ನು ಸಂತೈಸುವದಕ್ಕಾಗಿ ಯಾರೂ ಕಜ್ಜಾಯವನ್ನು ಮುರಿದುಕೊಡರು; ತಂದೆಯನ್ನಾಗಲಿ ತಾಯಿಯನ್ನಾಗಲಿ ಕಳಕೊಂಡವರಿಗೆ ಯಾರೂ ಸಮಾಧಾಯಕ ಪಾನಪಾತ್ರೆಯನ್ನು ನೀಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಸತ್ತವನಿಗೋಸ್ಕರ ದುಃಖಪಡುವವರನ್ನು ಸಂತೈಸುವುದಕ್ಕಾಗಿ ಯಾರೂ ಕಜ್ಜಾಯವನ್ನು ಹಂಚುವುದಿಲ್ಲ. ತಂದೆಯನ್ನಾಗಲಿ ತಾಯಿಯನ್ನಾಗಲಿ ಕಳಕೊಂಡವರಿಗೆ ಯಾರೂ ಸಮಾಧಾನದಾಯಕ ಪಾನಪಾತ್ರೆಯನ್ನು ನೀಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸತ್ತವನಿಗಾಗಿ ದುಃಖಪಡುವವರನ್ನು ಸಂತೈಸುವುದಕ್ಕೋಸ್ಕರ ಯಾರೂ ಕಜ್ಜಾಯವನ್ನು ಹಂಚುವುದಿಲ್ಲ. ತಂದೆಯನ್ನಾಗಲಿ, ತಾಯಿಯನ್ನಾಗಲಿ ಕಳೆದುಕೊಂಡವರಿಗು ಕೂಡ ಯಾರೂ ಸಾಂತ್ವನದ ಪಾನಪಾತ್ರೆಯನ್ನು ನೀಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸತ್ತವರಿಗಾಗಿ ಗೋಳಾಡುವವರ ಸಲುವಾಗಿ ಯಾರೂ ಆಹಾರವನ್ನು ತರುವದಿಲ್ಲ. ತಾಯಿಯನ್ನಾಗಲಿ ತಂದೆಯನ್ನಾಗಲಿ ಕಳೆದುಕೊಂಡವರಿಗೆ ಯಾರೂ ಸಮಾಧಾನವನ್ನು ಹೇಳುವದಿಲ್ಲ. ಸತ್ತವರಿಗಾಗಿ ಅಳುವವರನ್ನು ಸಮಾಧಾನಪಡಿಸಲು ಯಾರೂ ಪಾನಪಾತ್ರೆಯನ್ನು ನೀಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಸತ್ತವನಿಗಾಗಿ ದುಃಖ ಪಡುವವರನ್ನು ಸಂತೈಸುವುದಕ್ಕೋಸ್ಕರ ಯಾರೂ ಕಜ್ಜಾಯವನ್ನು ಹಂಚುವುದಿಲ್ಲ. ತಂದೆಯನ್ನಾಗಲಿ, ತಾಯಿಯನ್ನಾಗಲಿ ಕಳೆದುಕೊಂಡವರಿಗೂ ಕೂಡ ಯಾರೂ ಸಾಂತ್ವನದ ಪಾನಪಾತ್ರೆಯನ್ನು ನೀಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 16:7
8 ತಿಳಿವುಗಳ ಹೋಲಿಕೆ  

ಯೆಹೋವನಿಗೆ ದ್ರಾಕ್ಷಾರಸವನ್ನು ನೈವೇದ್ಯವಾಗಿ ಸುರಿಯರು, ಅವರ ಯಜ್ಞಗಳು ಆತನಿಗೆ ಮೆಚ್ಚಿಕೆಯಾಗವು; ಅವರ ಆಹಾರವು ಹೆಣದ ಮನೆಯ ಆಹಾರದಂತಿರುವದು, ಅದನ್ನು ತಿನ್ನುವವರೆಲ್ಲರೂ ಅಶುದ್ಧರಾಗುವರು, ಅದು ಹೊಟ್ಟೆತುಂಬುವದಕ್ಕೆ ಮಾತ್ರ ಅನುಕೂಲಿಸುವದು. ಅದು ಯೆಹೋವನ ಆಲಯಕ್ಕೆ ಬಂದಿಲ್ಲವಷ್ಟೆ.


ವಿಯೋಗದುಃಖವನ್ನು ತೋರಿಸಬೇಡ, ರುಮಾಲನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ಬಾಯನ್ನು ಬಟ್ಟೆಯಿಂದ ಮುಚ್ಚಿಕೊಳ್ಳಬೇಡ, ಗಾರಿಗೆಯನ್ನು ತಿನ್ನಬೇಡ.


ನಾವು [ಸತ್ತವರಿಗೋಸ್ಕರ] ದುಃಖಿಸುವ ಕಾಲದಲ್ಲೆಲ್ಲಾ ಅದರಲ್ಲಿ ಏನೂ ತಿನ್ನಲಿಲ್ಲ; ಅಶುದ್ಧರಾಗಿ ಅದನ್ನು ತೆಗೆದುಹಾಕಲಿಲ್ಲ; ಸತ್ತವರಿಗೋಸ್ಕರ ಅದರಲ್ಲಿ ಏನೂ ಕೊಡಲಿಲ್ಲ; ನಮ್ಮ ದೇವರಾದ ಯೆಹೋವನ ಮಾತಿನಲ್ಲಿ ಲಕ್ಷ್ಯವಿಟ್ಟು ನೀನು ನೇವಿುಸಿದ್ದನ್ನೆಲ್ಲಾ ಅನುಸರಿಸಿದ್ದೇವೆ.


ಆಗ ಅವನ ಎಲ್ಲಾ ಅಣ್ಣತಮ್ಮಂದಿರೂ ಎಲ್ಲಾ ಅಕ್ಕತಂಗಿಯರೂ ಮೊದಲು ಅವನ ಮನೆಯಲ್ಲಿ ಅವನೊಂದಿಗೆ ಭೋಜನಮಾಡುತ್ತಿದ್ದ ಎಲ್ಲಾ ಪರಿಚಿತರೂ ಅವನ ಬಳಿಗೆ ಬಂದು ಯೆಹೋವನು ಅವನ ಮೇಲೆ ಬರಮಾಡಿದ್ದ ಆಪತ್ತಿನ ವಿಷಯವಾಗಿ ತಮ್ಮ ತಮ್ಮ ಅನುತಾಪವನ್ನು ತೋರ್ಪಡಿಸಿ ಅವನನ್ನು ಸಂತೈಸಿದರು. ಇದಲ್ಲದೆ ಪ್ರತಿಯೊಬ್ಬರೂ ಒಂದೊಂದು ವರಹವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಅವನಿಗೆ ಕೊಟ್ಟರು.


ಆಮೇಲೆ ತಿರಿಗಿ ದೃಷ್ಟಿಸಿ ಲೋಕದಲ್ಲಿನ ಹಿಂಸೆಗಳನ್ನೆಲ್ಲಾ ನೋಡಿದೆನು; ಆಹಾ, ಹಿಂಸೆಗೊಂಡವರ ಕಣ್ಣೀರು ಏನೆಂದು ಹೇಳಲಿ! ಸಂತಯಿಸುವವರು ಯಾರೂ ಇರಲಿಲ್ಲ; ಹಿಂಸಕರಿಗೆ ಬಹು ಬಲ; ಸಂತಯಿಸುವವರೋ ಒಬ್ಬರೂ ಇರಲಿಲ್ಲ.


ಸತ್ತವನಿಗಾಗಿ ಅಳಬೇಡಿರಿ, ಬಡುಕೊಳ್ಳಬೇಡಿರಿ; ಸೆರೆಯಾದವನಿಗೇ ಬಿಕ್ಕಿಬಿಕ್ಕಿ ಅಳಿರಿ; ಅವನು ಇನ್ನು ಹಿಂದಿರುಗನು, ಜನ್ಮಭೂವಿುಯನ್ನು ನೋಡನು.


ಆಕೆಯ ನೆರಿಗೆಯು ಹೊಲಸಾಗಿತ್ತು, ಮುಂದಿನ ಗತಿಯೇನೆಂದು ಮನಸ್ಸಿಗೆ ತರಲಿಲ್ಲ; ಆದಕಾರಣ ವಿಪರೀತ ಹೀನಸ್ಥಿತಿಯಲ್ಲಿ ಬಿದ್ದು ಬಿಟ್ಟಳು; ಸಂತೈಸುವವರೇ ಇಲ್ಲ. ಯೆಹೋವನೇ, ನನ್ನ ಕಷ್ಟವನ್ನು ಲಕ್ಷಿಸು; ನನ್ನ ಶತ್ರು ಹೆಚ್ಚಳಪಡುತ್ತಾನಲ್ಲಾ [ಎಂದು ಮೊರೆಯಿಡುತ್ತಾಳೆ].


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು