ಯೆರೆಮೀಯ 16:9 - ಕನ್ನಡ ಸತ್ಯವೇದವು J.V. (BSI)9 ಇಸ್ರಾಯೇಲಿನ ದೇವರೂ ಸೇನಾಧೀಶ್ವರನಾದ ಯೆಹೋವನೂ ಆಗಿರುವಾತನು ಹೀಗಂದಿದ್ದಾನೆ - ಇಗೋ, ನಿಮ್ಮ ಕಾಲದಲ್ಲಿ ನಿಮ್ಮ ಕಣ್ಣೆದುರಿಗೆ ಹರ್ಷಸಂಭ್ರಮಗಳ ಧ್ವನಿಯನ್ನೂ ವಧೂವರರ ಸ್ವರವನ್ನೂ ಈ ಸ್ಥಳದೊಳಗೆ ನಿಲ್ಲಿಸಿಬಿಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇಸ್ರಾಯೇಲಿನ ದೇವರೂ ಸೇನಾಧೀಶ್ವರನಾದ ಯೆಹೋವನೂ ಆಗಿರುವಾತನು ಹೀಗೆಂದಿದ್ದಾನೆ, ‘ಇಗೋ, ನಿಮ್ಮ ಕಾಲದಲ್ಲಿ ನಿಮ್ಮ ಕಣ್ಣೆದುರಿಗೆ ಹರ್ಷಸಂಭ್ರಮಗಳ ಧ್ವನಿಯನ್ನೂ ಮತ್ತು ವಧೂವರರ ಸ್ವರವನ್ನೂ ಈ ಸ್ಥಳದೊಳಗೆ ನಿಲ್ಲಿಸಿಬಿಡುವೆನು.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಏಕೆಂದರೆ ಇಸ್ರಯೇಲಿನ ದೇವರೂ ಸರ್ವಶಕ್ತ ಸರ್ವೇಶ್ವರನೂ ಆದ ನಾನು ಹೇಳುತ್ತೇನೆ, ಕೇಳು : ನಿಮ್ಮ ಕಾಲದಲ್ಲೆ, ನಿಮ್ಮ ಕಣ್ಣೆದುರಿಗೆ, ಸಂತೋಷ ಸಂಭ್ರಮದ ಧ್ವನಿಯನ್ನು ನಿಲ್ಲಿಸಿಬಿಡುವೆನು. ವಧೂವರರ ಸದ್ದೂ ಇಲ್ಲವಾಗುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: ‘ಉಲ್ಲಾಸಪಡುತ್ತಿದ್ದ ಜನರ ಧ್ವನಿಯನ್ನು ನಾನು ಬೇಗನೆ ನಿಲ್ಲಿಸಿಬಿಡುತ್ತೇನೆ. ಮದುವೆಯ ಸಮಾರಂಭಗಳಲ್ಲಿ ಜನರು ಮಾಡುವ ಸಂತೋಷ ಸಂಭ್ರಮದ ಧ್ವನಿಯನ್ನು ನಾನು ನಿಲ್ಲಿಸಿಬಿಡುತ್ತೇನೆ. ಇದು ನಿನ್ನ ಜೀವನಕಾಲದಲ್ಲಿಯೇ ಸಂಭವಿಸುತ್ತದೆ. ಇದೆಲ್ಲವನ್ನು ನಾನು ಬೇಗ ಮಾಡುತ್ತೇನೆ.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿಮ್ಮ ಕಣ್ಣುಗಳ ಮುಂದೆ ನಿಮ್ಮ ದಿನಗಳಲ್ಲಿಯೇ ಉಲ್ಲಾಸದ ಸ್ವರವನ್ನೂ, ಸಂತೋಷದ ಸ್ವರವನ್ನೂ, ಮದುಮಗನ ಸ್ವರವನ್ನೂ, ಮದುಮಗಳ ಸ್ವರವನ್ನೂ ಈ ಸ್ಥಳದೊಳಗಿಂದ ನಿಲ್ಲಿಸಿಬಿಡುವೆನು. ಅಧ್ಯಾಯವನ್ನು ನೋಡಿ |