ಯೆರೆಮೀಯ 17:10 - ಕನ್ನಡ ಸತ್ಯವೇದವು J.V. (BSI)10 ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು ಹೃದಯವನ್ನು ಪರೀಕ್ಷಿಸುವವನೂ ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು, ಹೃದಯವನ್ನು ಪರೀಕ್ಷಿಸುವವನೂ, ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸರ್ವೇಶ್ವರನಾದ ನಾನು ಹೃದಯ ಪರಿಶೀಲಕ ಹೌದು, ಅಂತರಿಂದ್ರಿಯಗಳನ್ನು ಪರಿಶೋಧಿಸುವಾತ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಾನೇ ಯೆಹೋವನು, ನಾನು ಮನುಷ್ಯನ ಹೃದಯದ ಆಳವನ್ನು ನೋಡಬಲ್ಲೆ, ಮನುಷ್ಯನ ಬುದ್ಧಿಯನ್ನು ಪರೀಕ್ಷಿಸಬಲ್ಲೆ. ಆದ್ದರಿಂದ ಪ್ರತಿಯೊಬ್ಬ ಮನುಷ್ಯನಿಗೆ ತಕ್ಕ ಪ್ರತಿಫಲವನ್ನು ನಾನು ನಿರ್ಧರಿಸಬಲ್ಲೆ. ಪ್ರತಿಯೊಬ್ಬ ಮನುಷ್ಯನಿಗೆ ಅವನ ಕೆಲಸಕ್ಕೆ ತಕ್ಕಂತೆ ಸರಿಯಾಗಿ ಫಲವನ್ನು ಕೊಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ಯೆಹೋವ ದೇವರಾದ ನಾನೇ ಹೃದಯವನ್ನು ಪರೀಕ್ಷಿಸುತ್ತೇನೆ. ಅಂತರಿಂದ್ರಿಯಗಳನ್ನು ಶೋಧಿಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ, ಅವನ ಕ್ರಿಯೆಗಳ ಫಲದ ಪ್ರಕಾರವೂ ಪ್ರತಿಫಲ ಕೊಡುತ್ತೇನೆ.” ಅಧ್ಯಾಯವನ್ನು ನೋಡಿ |
ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು; ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.