Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 17:13 - ಕನ್ನಡ ಸತ್ಯವೇದವು J.V. (BSI)

13 ಯೆಹೋವನೇ, ಇಸ್ರಾಯೇಲ್ಯರ ನಿರೀಕ್ಷೆಯೇ, ನಿನ್ನನ್ನು ಬಿಟ್ಟುಹೋಗುವವರು ಆಶಾಭಂಗಪಡುವರು; ಯೆಹೋವನಾದ ನಿನ್ನನ್ನು ತೊರೆದವರು ಜೀವಜಲದ ಬುಗ್ಗೆಯನ್ನು ತೊರೆದವರಾಗಿದ್ದಾರೆ; ಅವರ ಹೆಸರು ದೂಳಿನಲ್ಲಿ ಬರೆಯಲ್ಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನೇ, ಇಸ್ರಾಯೇಲರ ನಿರೀಕ್ಷೆಯೇ, ನಿನ್ನನ್ನು ಬಿಟ್ಟುಹೋಗುವವರು ಆಶಾಭಂಗಪಡುವರು. ಯೆಹೋವನಾದ ನಿನ್ನನ್ನು ತೊರೆದವರು ಜೀವಜಲದ ಬುಗ್ಗೆಯನ್ನು ತೊರೆದವರಾಗಿದ್ದಾರೆ; ಅವರ ಹೆಸರು ಧೂಳಿನಲ್ಲಿ ಬರೆಯಲ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸ್ವಾಮಿ ಸರ್ವೇಶ್ವರಾ, ನೀವು ಇಸ್ರಯೇಲರ ಆಶ್ರಯ ! ನಿಮ್ಮನ್ನು ಬಿಟ್ಟುಹೋಗುವವರು ಆಶಾಭಂಗಪಡುವರು ಅವರು ಜೀವಜಲದ ಬುಗ್ಗೆಯನ್ನೆ ತೊರೆದವರು ತಮ್ಮ ಹೆಸರನ್ನು ಧೂಳಿನಲ್ಲಿ ಬರೆಸಿಕೊಂಡವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನೇ, ನೀನು ಇಸ್ರೇಲಿನ ಆಶಾಕಿರಣ, ಯೆಹೋವನೇ, ನೀನು ಜೀವಜಲದ ಬುಗ್ಗೆಯಂತಿರುವೆ, ಯಾರಾದರೂ ಯೆಹೋವನ ಅನುಸರಣೆಯನ್ನು ತ್ಯಜಿಸಿದರೆ ಅವರ ಜೀವನ ಬಹಳ ಮೊಟಕಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇಸ್ರಾಯೇಲಿನ ನಿರೀಕ್ಷೆಯಾದ ಓ ಯೆಹೋವ ದೇವರೇ, ನಿಮ್ಮನ್ನು ತೊರೆದುಬಿಟ್ಟವರೆಲ್ಲರೂ ನಾಚಿಕೆಗೆ ಒಳಗಾಗುವರು, ಜೀವವುಳ್ಳ ನೀರಿನ ಬುಗ್ಗೆಯಾದ ಯೆಹೋವ ದೇವರಿಂದ ತೊಲಗಿ ಹೋದವರನ್ನು ಧೂಳಿನಲ್ಲಿ ಬರೆಯಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 17:13
40 ತಿಳಿವುಗಳ ಹೋಲಿಕೆ  

ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ನಡಿಸುತ್ತಾನೆ. ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.


ಆಮೇಲೆ ಅವನು ಸ್ಫಟಿಕದಂತೆ ಪ್ರಕಾಶಮಾನವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಯಾದಾತನ ಸಿಂಹಾಸನದಿಂದ ಹೊರಟು ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು.


ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ; ನಾನು ಅವನಿಗೆ ಕೊಡುವ ನೀರು ಅವನಲ್ಲಿ ಉಕ್ಕುವ ಒರತೆಯಾಗಿದ್ದು ನಿತ್ಯಜೀವವನ್ನು ಉಂಟುಮಾಡುವದು ಎಂದು ಹೇಳಿದನು.


ಅದಕ್ಕೆ ಯೇಸು - ದೇವರು ಕೊಡುವ ವರವೇನೆಂಬದೂ ಕುಡಿಯುವದಕ್ಕೆ ನೀರುಕೊಡು ಎಂದು ನಿನಗೆ ಹೇಳಿದವನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಅವನನ್ನು ಬೇಡಿಕೊಳ್ಳುತ್ತಿದ್ದಿ, ಅವನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಅಂದನು.


ಆಗ ಸಿಂಹಾಸನದ ಮೇಲೆ ಕೂತಿದ್ದವನು - ಎಲ್ಲಾ ನೆರವೇರಿತು; ನಾನೇ ಆದಿಯೂ ಅಂತವೂ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಲ್ಲಿ ಕ್ರಯವಿಲ್ಲದೆ ಕುಡಿಯುವದಕ್ಕೆ ಕೊಡುವೆನು.


ಆದರೆ ದ್ರೋಹಿಗಳೂ ಪಾಪಿಗಳೂ ಒಟ್ಟಾಗಿ ನಾಶನವಾಗುವರು; ಹೌದು, ಯೆಹೋವನನ್ನು ತೊರೆದವರು ನಿರ್ಮೂಲರಾಗುವರು.


ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಮ್ಮ ಹೆಸರುಗಳು ಪರಲೋಕದಲ್ಲಿ ಬರೆದಿರುತ್ತವೆ ಎಂದು ಸಂತೋಷಪಡಿರಿ ಎಂಬದಾಗಿ ಹೇಳಿದನು.


ಇಸ್ರಾಯೇಲ್ಯರ ನಿರೀಕ್ಷೆಯೇ, ಇಕ್ಕಟ್ಟಿನಲ್ಲಿ ಅವರಿಗೆ ರಕ್ಷಕನೇ, ಏಕೆ ದೇಶದಲ್ಲಿ ಪರದೇಶಿಯಂತೆಯೂ ಇಳಿದುಕೊಳ್ಳುವದಕ್ಕೆ ಗುಡಾರಹಾಕಿಕೊಳ್ಳುವ ಪ್ರಯಾಣಿಕನ ಹಾಗೆಯೂ ಇದ್ದೀ?


ಯಾವನ ಹೆಸರು ಜೀವಬಾಧ್ಯರ ಪಟ್ಟಿಯಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.


ಯೆಹೋವನ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು - ಯೆಹೋವನು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ ಎಂದು ಹೇಳಿದ್ದಾರಲ್ಲಾ; ಅವರಿಗಂತು ಅವಮಾನವಾಗುವದು.


ಇಗೋ, ನಿನ್ನನ್ನು ಬಿಟ್ಟವರು ನಾಶವಾಗುವರು; ನಿನಗೆ ದ್ರೋಹಮಾಡಿದವರೆಲ್ಲರನ್ನು ನಿರ್ಮೂಲ ಮಾಡುತ್ತೀ.


ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟಿದ್ದಾರೆ, ತಮಗೋಸ್ಕರ ತೊಟ್ಟಿಗಳನ್ನು, ನೀರು ನಿಲ್ಲದ ಬಿರಿದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.


ಯೆಹೋವನು ಚೀಯೋನಿನಿಂದ ಗರ್ಜಿಸುತ್ತಾನೆ, ಯೆರೂಸಲೇವಿುನಿಂದ ದನಿಗೈಯುತ್ತಾನೆ; ಭೂಮ್ಯಾಕಾಶಗಳು ನಡುಗುತ್ತವೆ. ಆದರೆ ಯೆಹೋವನು ತನ್ನ ಜನರಿಗೆ ಆಶ್ರಯವೂ ಇಸ್ರಾಯೇಲ್ಯರಿಗೆ ರಕ್ಷಣದುರ್ಗವೂ ಆಗುವನು.


ನಿನ್ನನ್ನು ದಾರಿಯಲ್ಲಿ ನಡಿಸುತ್ತಿದ್ದ ನಿನ್ನ ದೇವರಾದ ಯೆಹೋವನನ್ನು ತೊರೆದುಬಿಟ್ಟು ಇದನ್ನೆಲ್ಲಾ ನೀನೇ ನಿನ್ನ ಮೇಲೆ ಬರಮಾಡಿಕೊಂಡಿಯಲ್ಲಾ.


ಆತ್ಮನೂ ಮದಲಗಿತ್ತಿಯೂ - ಬಾ ಅನ್ನುತ್ತಾರೆ. ಕೇಳುವವನು - ಬಾ ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ತೆಗೆದುಕೊಳ್ಳಲಿ.


ನಮ್ಮ ರಕ್ಷಕನಾದ ದೇವರಿಂದಲೂ ನಮ್ಮ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತ ಯೇಸುವಿನಿಂದಲೂ ನೇವಿುಸಲ್ಪಟ್ಟ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು


ಈ ಕಾರಣದಿಂದ ನಾನು ನಿಮ್ಮನ್ನು ಕಂಡು ಮಾತಾಡಬೇಕೆಂದು ಕರೆಯಿಸಿದೆನು. ಇಸ್ರಾಯೇಲ್ ಜನರ ನಿರೀಕ್ಷೆಯ ನಿವಿುತ್ತವಾಗಿ ಈ ಬೇಡಿಯಿಂದ ಕಟ್ಟಲ್ಪಟ್ಟಿದ್ದೇನೆ ಎಂದು ಹೇಳಿದನು.


ಧೂಳಿನ ನೆಲದೊಳಗೆ ದೀರ್ಘನಿದ್ರೆಮಾಡುವವರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನ ನಿತ್ಯತಿರಸ್ಕಾರಗಳನ್ನು ಅನುಭವಿಸುವರು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಈ ರಕ್ಷಣಕಾರ್ಯವನ್ನು ಮಾಡುವದು ನಿಮ್ಮ ನಿವಿುತ್ತವಲ್ಲವೆಂದು ನಿಮಗೆ ತಿಳಿದಿರಲಿ; ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳಿಗೆ ಲಜ್ಜೆಗೊಳ್ಳಿರಿ, ನಾಚಿಕೆಪಡಿರಿ.


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷವಿುಸಿಬಿಟ್ಟ ಮೇಲೆ ನೀನು ಅವುಗಳನ್ನು ಜ್ಞಾಪಕಕ್ಕೆ ತಂದು ನಾಚಿಕೆಪಟ್ಟು ನಿನ್ನ ಅವಮಾನದ ನಿವಿುತ್ತ ಇನ್ನು ಬಾಯಿ ತೆರೆಯದಿರುವಿ. ಇದು ಕರ್ತನಾದ ಯೆಹೋವನ ನುಡಿ.


ನನಗೆ ಭಯಾಸ್ಪದವಾಗಬೇಡ; ಕೇಡಿನ ಕಾಲದಲ್ಲಿ ನನಗೆ ಆಶ್ರಯವಾಗಿದ್ದೀ.


ಯೆಹೋವನು ಹೀಗನ್ನುತ್ತಾನೆ - ಮಾನವಮಾತ್ರದವರಲ್ಲಿ ಭರವಸವಿಟ್ಟು ನರಜನ್ಮದವರನ್ನು ತನ್ನ ಭುಜಬಲವೆಂದು ತಿಳಿದು ಯೆಹೋವನನ್ನು ತೊರೆಯುವ ಮನಸ್ಸುಳ್ಳವನು ಶಾಪಗ್ರಸ್ತನು.


ಭ್ರಷ್ಟನು ಕರ್ಮಫಲವನ್ನು ತಿಂದು ತಿಂದು ದಣಿಯುವನು: ಶಿಷ್ಟನು ತನ್ನಲ್ಲಿ ತಾನೇ ತೃಪ್ತನಾಗುವನು.


ಶಿಷ್ಟರ ಸ್ಮರಣೆಯು ಆಶೀರ್ವಾದಕ್ಕಾಸ್ಪದ; ದುಷ್ಟರ ನಾಮವು ನಿರ್ನಾಮ.


ವಿಗ್ರಹಗಳಲ್ಲಿ ಹಿಗ್ಗುವ ಮೂರ್ತಿಪೂಜಕರೆಲ್ಲಾ ತಲೆಬೊಗ್ಗಿಸಲಿ; ದೇವರುಗಳಿರಾ, ನೀವೆಲ್ಲರು ಆತನಿಗೆ ಅಡ್ಡಬೀಳಿರಿ.


ನಮ್ಮ ಪೂರ್ವಿಕರು ನಿನ್ನಲ್ಲಿ ಭರವಸವಿಟ್ಟರು; ನಿನ್ನನ್ನು ನಂಬಿ ಉದ್ಧಾರವಾದರು.


ಕರ್ತನಾದ ಯೆಹೋವನೇ, ಬಾಲ್ಯಾರಭ್ಯ ನನ್ನ ನಿರೀಕ್ಷೆಯೂ ಭರವಸವೂ ನೀನಲ್ಲವೋ?


ನನ್ನ ಹಿಂಸಕರಿಗೆ ಅವಮಾನವಾಗಲಿ, ನನಗಾಗದಿರಲಿ; ಭಯಭ್ರಾಂತಿಯು ಅವರನ್ನು ಹಿಡಿಯಲಿ, ನನ್ನನ್ನು ಬೇಡ; ಅವರಿಗೆ ಕೇಡುಗಾಲವನ್ನು ಬರಮಾಡಿ ವಿಪರೀತಭಂಗದಿಂದ ಅವರನ್ನು ನಾಶಪಡಿಸು.


ಈ ಜನರು ನನ್ನನ್ನು ತೊರೆದು ತಮಗಾಗಲಿ ತಮ್ಮ ಪಿತೃಗಳಿಗಾಗಲಿ ಯೆಹೂದದ ಅರಸರಿಗಾಗಲಿ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕುತ್ತಾ ಈ ಸ್ಥಳವನ್ನು ಅನ್ಯಸ್ಥಾನವಾಗಿ ಮಾಡಿ


ಕಂಡಕಂಡವರೆಲ್ಲರೂ ಅವರನ್ನು ನುಂಗಿಬಿಟ್ಟಿದ್ದಾರೆ; ಅವರ ವಿರೋಧಿಗಳು - ನಾವು ಅವರನ್ನು ನುಂಗಿದ್ದು ದೋಷವಲ್ಲ, ಅವರು ನ್ಯಾಯನಿವಾಸವೆನಿಸಿಕೊಂಡ ಯೆಹೋವನಿಗೆ, ಹೌದು, ತಮ್ಮ ಪಿತೃಗಳ ನಿರೀಕ್ಷೆಯಾದ ಯೆಹೋವನಿಗೆ ಪಾಪಮಾಡಿದರಲ್ಲಾ ಅಂದುಕೊಂಡರು.


ವಿುಥ್ಯಾದರ್ಶನ ಹೊಂದಿ ಸುಳ್ಳು ಕಣಿ ಹೇಳುವ ಪ್ರವಾದಿಗಳ ಮೇಲೆ ನಾನು ಕೈ ಮಾಡುವೆನು; ಅವರು ನನ್ನ ಜನರ ಹಿರೀ ಸಭೆಯಲ್ಲಿ ಸೇರಕೂಡದು, ಇಸ್ರಾಯೇಲ್ ವಂಶದವರ ಪಟ್ಟಿಯಲ್ಲಿ ಅವರ ಹೆಸರುಗಳು ಲಿಖಿತವಾಗವು, ಅವರು ಇಸ್ರಾಯೇಲ್ ದೇಶದಲ್ಲಿ ಪ್ರವೇಶಿಸಲೂಬಾರದು; ನಾನೇ ಕರ್ತನಾದ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ಸುನಿರೀಕ್ಷೆಯುಂಟಾದ ಸೆರೆಯವರೇ, ನಿಮ್ಮ ದುರ್ಗಕ್ಕೆ ಹಿಂದಿರುಗಿರಿ; ನಿಮಗೆ ಎರಡರಷ್ಟು [ಸುಖವನ್ನು] ದಯಪಾಲಿಸುವೆನು ಎಂದು ಈಗಲೂ ಪ್ರಕಟಿಸುತ್ತೇನೆ.


ಆ ದಿನದಲ್ಲಿ ಪಾಪವನ್ನೂ ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ ಯೆರೂಸಲೇವಿುನವರಿಗೂ ತೆರೆದಿರುವದು.


ದೇವರೇ, ನೊಂದು ಕುಗ್ಗಿದವನಾದ ನನ್ನನ್ನಾದರೋ ನಿನ್ನ ರಕ್ಷಣೆಯು ಭದ್ರಸ್ಥಳದಲ್ಲಿರಿಸುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು