Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 17:14 - ಕನ್ನಡ ಸತ್ಯವೇದವು J.V. (BSI)

14 ಯೆಹೋವನೇ, ನನ್ನನ್ನು ಸ್ವಸ್ಥಪಡಿಸು, ಆಗ ಸ್ವಸ್ಥನೇ ಆಗುವೆನು; ನನ್ನನ್ನು ರಕ್ಷಿಸು, ಆಗ ರಕ್ಷಿತನೇ ಆಗುವೆನು; ನೀನೇ ನನಗೆ ಸ್ತುತ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನೇ, ನನ್ನನ್ನು ಸ್ವಸ್ಥಪಡಿಸು, ಆಗ ಸ್ವಸ್ಥನಾಗುವೆನು. ನನ್ನನ್ನು ರಕ್ಷಿಸು, ಆಗ ರಕ್ಷಿಸಲ್ಪಡುವೆನು; ನೀನೇ ನನಗೆ ಸ್ತುತ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಹೇ ಸರ್ವೇಶ್ವರಾ, ನನ್ನನ್ನು ಸ್ವಸ್ಥಪಡಿಸಿರಿ, ನಾನು ಸ್ವಸ್ಥನಾಗುವೆನು. ನನ್ನನ್ನು ರಕ್ಷಿಸಿರಿ, ನಾನು ರಕ್ಷಿತನಾಗಿಯೆ ತೀರುವೆನು. ನೀವೇ ನನಗೆ ಸ್ತುತ್ಯಾರ್ಹರು !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನೇ, ನೀನು ನನ್ನನ್ನು ವಾಸಿಮಾಡಿದರೆ ನಿಜವಾಗಿಯೂ ನಾನು ಗುಣಹೊಂದುತ್ತೇನೆ. ನನ್ನನ್ನು ರಕ್ಷಿಸು, ಆಗ ನಿಜವಾಗಿಯೂ ರಕ್ಷಣೆ ಹೊಂದಿದವನಾಗುವೆನು. ಯೆಹೋವನೇ, ನಾನು ನಿನ್ನನ್ನು ಸ್ತುತಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರೇ, ನನ್ನನ್ನು ಸ್ವಸ್ಥಮಾಡಿ, ಆಗ ಸ್ವಸ್ಥವಾಗುವೆನು. ನನ್ನನ್ನು ರಕ್ಷಿಸು, ಆಗ ರಕ್ಷಿತನಾಗುವೆನು. ಏಕೆಂದರೆ, ನೀವೇ ನನಗೆ ಸ್ತುತ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 17:14
23 ತಿಳಿವುಗಳ ಹೋಲಿಕೆ  

ಯೆಹೋವನೇ, ಕನಿಕರಿಸು; ನಾನು ನಿಶ್ಶಕ್ತನಾಗಿ ಹೋಗಿದ್ದೇನೆ. ಯೆಹೋವನೇ, ವಾಸಿಮಾಡು; ನನ್ನ ಎಲುಬುಗಳೆಲ್ಲಾ ತತ್ತರಿಸುತ್ತವೆ.


ನಾನೇ, ನಾನೊಬ್ಬನೇ ದೇವರಾಗಿರಲಾಗಿ ನನ್ನ ವಿನಾ ಯಾವ ದೇವರೂ ಇಲ್ಲವೆಂದು ಈಗಲಾದರೂ ತಿಳಿದುಕೊಳ್ಳಿರಿ. ಬದುಕಿಸುವವನೂ ಕೊಲ್ಲುವವನೂ ನಾನೇ; ಗಾಯಪಡಿಸುವವನೂ ವಾಸಿಮಾಡುವವನೂ ನಾನೇ; ನನ್ನ ಕೈಯಿಂದ ತಪ್ಪಿಸ ಶಕ್ತನು ಯಾವನೂ ಇಲ್ಲ.


ಯೆಹೋವನೇ, ನಮ್ಮ ದೇವರೇ, ರಕ್ಷಿಸು; ಅನ್ಯಜನಗಳಲ್ಲಿ ಚದರಿರುವ ನಮ್ಮನ್ನು ತಿರುಗಿ ಕೂಡಿಸು. ಆಗ ನಿನ್ನ ಪರಿಶುದ್ಧ ನಾಮವನ್ನು ಕೊಂಡಾಡುವೆವು; ನಿನ್ನ ಸ್ತೋತ್ರದಲ್ಲಿ ಹೆಚ್ಚಳಪಡುವೆವು.


ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು, ಸೆರೆಯವರಿಗೆ ಬಿಡುಗಡೆಯಾಗುವದನ್ನು ಮತ್ತು ಕುರುಡರಿಗೆ ಕಣ್ಣು ಬರುವದನ್ನು ಪ್ರಸಿದ್ಧಿಪಡಿಸುವದಕ್ಕೂ ಮನಮುರಿದವರನ್ನು ಬಿಡಿಸಿ ಕಳುಹಿಸುವದಕ್ಕೂ


ಆತನೊಬ್ಬನೇ ನಿಮ್ಮ ಸ್ತೋತ್ರಕ್ಕೆ ಪಾತ್ರನು; ಆತನು ನಿಮ್ಮ ದೇವರು. ನೀವು ನೋಡಿದ ಆ ಮಹಾಭಯಂಕರವಾದ ಮಹತ್ಕಾರ್ಯಗಳನ್ನು ನಿಮಗೋಸ್ಕರ ನಡಿಸಿದವನು ಆತನೇ.


ನಾನು ಸ್ತುತಿಸುವ ದೇವರೇ, ಸುಮ್ಮನಿರಬೇಡ.


ಯೆಹೋವನೇ, ಅಭಿಮುಖನಾಗಿ ನನ್ನನ್ನು ಬಿಡಿಸು; ನಿನ್ನ ಕೃಪೆಯ ನಿವಿುತ್ತವೇ ನನ್ನನ್ನು ರಕ್ಷಿಸು.


ನಾನು ನಿನ್ನನ್ನು ಈ ಜನರಿಗೆ ದುರ್ಗಮವಾದ ತಾಮ್ರದ ಪೌಳಿಗೋಡೆಯನ್ನಾಗಿ ಮಾಡುವೆನು; ಅವರು ನಿನಗೆ ವಿರುದ್ಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಸೋಲಿಸಲಾಗುವದಿಲ್ಲ. ನಿನ್ನನ್ನು ಉದ್ಧರಿಸಿ ರಕ್ಷಿಸಲು ನಾನೇ ನಿನ್ನೊಂದಿಗಿರುವೆನು. ಇದು ಯೆಹೋವನಾದ ನನ್ನ ಮಾತು.


ಆದರೆ ಗಾಳಿಯನ್ನು ನೋಡಿ ಭಯಪಟ್ಟು ಮುಣುಗುತ್ತಾ - ಸ್ವಾಮೀ, ನನ್ನನ್ನು ಕಾಪಾಡು ಎಂದು ಕೂಗಿಕೊಂಡನು.


ಎಫ್ರಾಯೀಮು ಹೀಗೆ ಪ್ರಲಾಪಿಸಿಕೊಳ್ಳುವದನ್ನು ಕೇಳೇ ಕೇಳಿದ್ದೇನೆ - ನೀನು ನನ್ನನ್ನು ಶಿಕ್ಷಿಸಿದ್ದೀ, ಪಳಗದ ಹೋರಿಯಂತೆ ಶಿಕ್ಷೆಯನ್ನು ಅನುಭವಿಸಿದೆನು; ನನ್ನನ್ನು ತಿರುಗಿಸು, ನೀನು ತಿರುಗಿಸಿದ ಹಾಗೆ ತಿರುಗುವೆನು; ನೀನು ನನ್ನ ದೇವರಾದ ಯೆಹೋವನಲ್ಲವೆ.


ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೇಗೂ ಹೊಂದದ ಹಾಗೆ ಈ ಜನರ ಹೃದಯಕ್ಕೆ ಕೊಬ್ಬೇರಿಸಿ ಕಿವಿಯನ್ನು ಮಂದಮಾಡಿ ಕಣ್ಣಿಗೆ ಅಂಟುಬಳಿ ಎಂದು ನನಗೆ ಹೇಳಿದನು.


ಅವರು ಹತ್ತರ ಬಂದು ಆತನನ್ನು ಎಬ್ಬಿಸಿ - ಸ್ವಾಮೀ, ಕಾಪಾಡು, ಸಾಯುತ್ತೇವೆ ಅನ್ನಲಾಗಿ


ಆತನು ತನ್ನ ಪ್ರಜೆಗೋಸ್ಕರ [ಘನದ] ಕೊಂಬನ್ನು ಎಬ್ಬಿಸಿದ್ದಾನೆ. ಆದದರಿಂದ ಆತನ ಎಲ್ಲಾ ಭಕ್ತರೂ ಆತನ ಸಮೀಪ ಪ್ರಜೆಗಳಾದ ಇಸ್ರಾಯೇಲ್ಯರೂ ಹಿಗ್ಗುತ್ತಾರೆ. ಯಾಹುವಿಗೆ ಸ್ತೋತ್ರ!


ನಿನ್ನ ಪ್ರಿಯರಾದ ನಮ್ಮ ಮೊರೆಯನ್ನು ಲಾಲಿಸಿ ರಕ್ಷಿಸು. ನಿನ್ನ ಭುಜಬಲದಿಂದ ನಮ್ಮನ್ನು ಜಯಗೊಳಿಸು.


ಅವರು - ನಮ್ಮ ಮಾತುಗಳಿಗೆ ತಡೆಯಿಲ್ಲವಲ್ಲಾ; ನಮ್ಮ ತುಟಿಗಳು ನಮ್ಮವೇ; ನಮಗೆ ಒಡೆಯನು ಯಾವನು ಎಂದು ಹೇಳಿಕೊಳ್ಳುತ್ತಾರಲ್ಲಾ.


ಆಗ ಮೋಶೆ ಯೆಹೋವನಿಗೆ - ದೇವಾ, ಆಕೆಯನ್ನು ವಾಸಿಮಾಡಬೇಕೆಂದು ಬೇಡುತ್ತೇನೆ ಎಂದು ಮೊರೆಯಿಟ್ಟನು.


ದೇವರೇ, ನಿನ್ನ ನಾಮಮಹತ್ತಿನಿಂದ ನನ್ನನ್ನು ರಕ್ಷಿಸು; ನಿನ್ನ ಪರಾಕ್ರಮದಿಂದ ನನ್ನ ನ್ಯಾಯವನ್ನು ಸ್ಥಾಪಿಸು.


ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಜಾತ್ರೆಯ ಗದ್ದಲದಿಂದಲೂ ಮೋಸವಾಯಿತು; ನಿಜನಿಜವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಯೆಹೋವನಲ್ಲಿ ನೆಲೆಗೊಂಡಿದೆ.


ಯೆಹೋವನು ಇಂತೆನ್ನುತ್ತಾನೆ - ಇಗೋ, ಇದು ಚೀಯೋನ್, ಯಾರಿಗೂ ಬೇಡವಾಗಿರುವ ನಗರಿ ಎಂದು ಜನರು ಹೇಳಿ ನಿನ್ನನ್ನು ಭ್ರಷ್ಟಳೆಂದದ್ದನ್ನು ನಾನು ಸಹಿಸಲಾರದೆ ನಿನಗೆ ಗುಣಪಡಿಸಿ ನಿನ್ನ ಬಾಸುಂಡೆಗಳನ್ನು ವಾಸಿಮಾಡುವೆನು.


ಇಗೋ, ನಾನು ಈ ಪಟ್ಟಣವನ್ನು ಜೀರ್ಣೋದ್ಧಾರಮಾಡಿ ಅದಕ್ಕೆ ಸೌಖ್ಯವನ್ನು ಕೊಟ್ಟು ನಿವಾಸಿಗಳನ್ನು ಗುಣಪಡಿಸುವೆನು; ಸ್ಥೈರ್ಯಸಮಾಧಾನಗಳನ್ನು ಸಮೃದ್ಧಿಯಾಗಿ ಅವರ ಅನುಭವಕ್ಕೆ ತರುವೆನು;


ನನ್ನ ಪ್ರಾಣವು ಸಹ ಬಹಳವಾಗಿ ತತ್ತರಿಸುತ್ತದೆ; ಯೆಹೋವನೇ, ಎಷ್ಟರವರೆಗೂ [ನನ್ನ ಕೈ ಬಿಟ್ಟಿರುವಿ]?


ನಾನು ನಿನ್ನವನು, ರಕ್ಷಿಸು. ನಿನ್ನ ನೇಮಗಳಲ್ಲಿ ಆಸಕ್ತನಾಗಿದ್ದೇನಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು