ಯೆರೆಮೀಯ 17:16 - ಕನ್ನಡ ಸತ್ಯವೇದವು J.V. (BSI)16 ನಾನಾದರೋ ಸಭಾ ಪಾಲನೆಯಲ್ಲಿ ನಿನ್ನನ್ನು ಹಿಂಬಾಲಿಸುವದನ್ನು ಬಿಡುವದಕ್ಕೆ ಆತುರಪಡಲಿಲ್ಲ; ಅನಿವಾರ್ಯ ವಿಪತ್ತಿನ ದಿನವನ್ನು ಅಪೇಕ್ಷಿಸಲಿಲ್ಲ; ನೀನೇ ಬಲ್ಲೆ; ನಿನ್ನ ಸಮಕ್ಷಮದಲ್ಲೇ ನನ್ನ ಬಾಯ ಮಾತು ಹೊರಟಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಾನಾದರೋ ಸಭಾಪಾಲನೆಯಲ್ಲಿ ನಿನ್ನನ್ನು ಹಿಂಬಾಲಿಸುವುದನ್ನು ತಪ್ಪಿಸಲು ಆತುರಪಡಲಿಲ್ಲ. ವಿಪತ್ತಿನ ಅನಿವಾರ್ಯ ದಿನವನ್ನು ಅಪೇಕ್ಷಿಸಲಿಲ್ಲ; ಅದನ್ನು ನೀನೇ ಬಲ್ಲೆ. ನಿನ್ನ ಸಮಕ್ಷಮದಲ್ಲೇ ನನ್ನ ಬಾಯ ಮಾತು ಹೊರಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಾನಾದರೋ ‘ಕೇಡನ್ನು ಬರಮಾಡಿ’ ಎಂದು ನಿಮ್ಮನ್ನು ತವಕಪಡಿಸಲಿಲ್ಲ. ಅನಿವಾರ್ಯ ವಿಪತ್ತಿನ ದಿನವನ್ನು ನಾನು ಅಪೇಕ್ಷಿಸಲಿಲ್ಲ. ಇದು ನಿಮಗೆ ತಿಳಿದ ವಿಷಯ. ನನ್ನ ಮಾತುಗಳು ನಿಮ್ಮ ಸಮಕ್ಷಮದಲ್ಲೇ ನನ್ನ ಬಾಯಿಂದ ಹೊರಟವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಯೆಹೋವನೇ, ನಾನು ನಿನ್ನನ್ನು ಬಿಟ್ಟು ಓಡಿಹೋಗಲಿಲ್ಲ, ನಾನು ನಿನ್ನನ್ನು ಅನುಸರಿಸಿದೆನು. ನೀನು ಹೇಳಿದಂತೆ ನಾನು ಕುರುಬನಾದೆ. ಆ ಭಯಂಕರ ದಿನವು ಬರಲೆಂದು ನಾನು ಬಯಸಲಿಲ್ಲ. ಯೆಹೋವನೇ, ನಾನು ಹೇಳಿದ್ದೆಲ್ಲ ನಿನಗೆ ಗೊತ್ತಿದೆ. ಈಗ ನಡೆಯುತ್ತಿರುವುದನ್ನೆಲ್ಲಾ ನೀನು ನೋಡುತ್ತಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಾನಾದರೋ ಸಭಾಪಾಲನೆಯಲ್ಲಿ ನಿಮ್ಮನ್ನು ಹಿಂಬಾಲಿಸುವುದನ್ನು ಬಿಡುವುದಕ್ಕೆ ಆತುರಪಡಲಿಲ್ಲ; ವಿಪತ್ತಿನ ಅನಿವಾರ್ಯ ದಿನವನ್ನು ಅಪೇಕ್ಷಿಸಲಿಲ್ಲ; ನೀವೇ ಬಲ್ಲೆ; ನಿಮ್ಮ ಸಮಕ್ಷಮದಲ್ಲೇ ನನ್ನ ಬಾಯ ಮಾತು ಹೊರಟಿತು. ಅಧ್ಯಾಯವನ್ನು ನೋಡಿ |