Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 17:23 - ಕನ್ನಡ ಸತ್ಯವೇದವು J.V. (BSI)

23 ಅವರಾದರೋ ಕಿವಿಗೊಟ್ಟು ಕೇಳಲಿಲ್ಲ, ಕೇಳಲಿಕ್ಕೂ ಉಪದೇಶ ಹೊಂದಲಿಕ್ಕೂ ಒಪ್ಪಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವರಾದರೋ ಕಿವಿಗೊಟ್ಟು ಕೇಳಲಿಲ್ಲ, ಕೇಳಲಿಕ್ಕಾಗಲಿ ಉಪದೇಶ ಹೊಂದಲಿಕ್ಕಾಗಲಿ ಒಪ್ಪಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವರಾದರೋ ನನಗೆ ಕಿವಿಗೊಡಲಿಲ್ಲ. ಕೇಳಲಿಕ್ಕೂ ಕಲಿತುಕೊಳ್ಳಲಿಕ್ಕೂ ಅವರು ಒಪ್ಪಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದರೆ ನಿಮ್ಮ ಪೂರ್ವಿಕರು ನನ್ನ ಆಜ್ಞೆಯನ್ನು ಪಾಲಿಸಲಿಲ್ಲ. ಅವರು ನನಗೆ ಗಮನಕೊಡಲಿಲ್ಲ. ನಿಮ್ಮ ಪೂರ್ವಿಕರು ತುಂಬಾ ಮೊಂಡರಾಗಿದ್ದರು. ನಾನು ಅವರನ್ನು ದಂಡಿಸಿದೆ. ಆದರೆ ಅದರಿಂದ ಏನೂ ಪ್ರಯೋಜನವಾಗಲಿಲ್ಲ. ಅವರು ನನ್ನ ಮಾತನ್ನು ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ಅವರು ವಿಧೇಯರಾಗಲಿಲ್ಲ, ಕಿವಿಗೊಟ್ಟು ಕೇಳಲಿಲ್ಲ. ಆದರೆ ವಿಧೇಯರಾಗದ ಹಾಗೆಯೂ, ಉಪದೇಶ ಹೊಂದದ ಹಾಗೆಯೂ ಹಟಮಾರಿಯಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 17:23
24 ತಿಳಿವುಗಳ ಹೋಲಿಕೆ  

ಬಹಳವಾಗಿ ಗದರಿಸಿದರೂ ತಗ್ಗದವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.


ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಆಹಾ, ಈ ಪಟ್ಟಣದವರೂ ಇದರ ಸುತ್ತಣ ಎಲ್ಲಾ ಊರುಗಳವರೂ ನನ್ನ ಮಾತುಗಳನ್ನು ಕೇಳಲೊಲ್ಲದೆ ತಮ್ಮ ಮನಸ್ಸನ್ನು ಕಠಿಣಮಾಡಿಕೊಂಡ ಕಾರಣ ನಾನು ಈ ಪಟ್ಟಣಕ್ಕೆ ಕೊಟ್ಟ ಶಾಪದ ಕೇಡನ್ನೆಲ್ಲಾ ಇವರಿಗೆ ಬರಮಾಡುವೆನು ಎಂದು ಸಮಸ್ತ ಜನರಿಗೆ ಸಾರಿದನು.


ನನ್ನ ಮಾತುಗಳನ್ನು ಕೇಳಲೊಲ್ಲದಿದ್ದ ತಮ್ಮ ಮೂಲ ಪಿತೃಗಳ ದುಷ್ಕೃತ್ಯಗಳ ಕಡೆಗೆ ತಿರುಗಿಕೊಂಡು ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸಿದ್ದಾರೆ; ಇಸ್ರಾಯೇಲ್ ವಂಶದವರೂ ಯೆಹೂದ ವಂಶದವರೂ ನಾನು ಅವರ ಪಿತೃಗಳ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿದ್ದಾರೆ.


ಚಂಡಿಗಳೇ, ಮನಶ್ಶುದ್ಧಿಯೂ ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.


[ಇದರಿಂದ, ಯೆರೂಸಲೇಮೇ,] ನೀನು ನನಗೆ ನಿಶ್ಚಯವಾಗಿ ಭಯಪಡುವಿ, ಶಿಕ್ಷಣೆಗೆ ಒಳಪಡುವಿ, ನಿನ್ನ ನಿವಾಸವು ನಾಶವಾಗದು, ನಾನು ನಿನಗೆ ವಿಧಿಸಿದ್ದೊಂದೂ [ತಗಲದು] ಎಂದು ಅಂದುಕೊಂಡೆನು; ಅವರಾದರೋ ಆತುರಗೊಂಡು ತಮ್ಮ ನಡತೆಯನ್ನೆಲ್ಲಾ ಕೆಡಿಸಿಕೊಂಡರು.


ಆ ಸಂತಾನದವರಾದರೋ ನನ್ನ ಮೇಲೆ ತಿರುಗಿಬಿದ್ದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಕೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಕೈಕೊಂಡು ನಡಿಸಲಿಲ್ಲ; ನಾನು ನೇವಿುಸಿದ ಸಬ್ಬತ್ ದಿನಗಳನ್ನು ಹೊಲೆಮಾಡಿದರು; ಆದದರಿಂದ ನಾನು ಅರಣ್ಯದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ ನನ್ನ ಕೋಪವನ್ನು ತೀರಿಸಿಕೊಳ್ಳುವೆನು ಅಂದುಕೊಂಡೆನು.


ಅವರು ನನಗೆ ಮುಖಕೊಡದೆ ಬೆನ್ನುಮಾಡಿದ್ದಾರೆ; ನಾನು ಎಡೆಬಿಡದೆ ಅವರಿಗೆ ಬೋಧಿಸುತ್ತಾ ಬಂದರೂ ಅವರು ಉಪದೇಶವನ್ನು ಹೊಂದಲೊಲ್ಲದೆ ನನಗೆ ಕಿವಿಗೊಡಲೇ ಇಲ್ಲ.


ನೀನು ಹಟಗಾರ, ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ತಾಮ್ರ ಎಂದು ನಾನು ತಿಳಿದುಕೊಂಡೆನು;


ಏಕಂದರೆ ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತವಾಗಿ ಅವರು ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿ ನಾನು ನೇವಿುಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದವರಾಗಿದ್ದರು.


ಆದರೆ ಇಸ್ರಾಯೇಲ್ ವಂಶದವರು ಅರಣ್ಯದಲ್ಲಿ ನನ್ನ ಮೇಲೆ ತಿರುಗಿಬಿದ್ದರು. ಕೈಕೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿದರು, ನಾನು ನೇವಿುಸಿದ ಸಬ್ಬತ್ ದಿನಗಳನ್ನು ವಿಶೇಷವಾಗಿ ಹೊಲೆಮಾಡಿದರು; ಆಗ ನಾನು ಅವರ ಮೇಲೆ ಅರಣ್ಯದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ಇವರನ್ನು ಧ್ವಂಸಮಾಡುವೆನು ಅಂದುಕೊಂಡೆನು.


ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ - ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ ನಿಮ್ಮ ಪಿತೃಗಳಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ಆದಕಾರಣ ನೀನು ಅವರಿಗೆ - ತಮ್ಮ ದೇವರಾದ ಯೆಹೋವನ ಧ್ವನಿಗೆ ಕಿವಿಗೊಡದೆ ಶಿಕ್ಷಿತರಾಗದೆ ಇರುವ ಜನವು ಇದೇ, ಸತ್ಯವು ಅವರ ಬಾಯಿಂದ ನಿರ್ಮೂಲವಾಗಿ ಅಳಿದುಹೋಗಿದೆ ಎಂದು ಹೇಳು.


ಯೆರೂಸಲೇಮೇ, ನಾನು ನಿನ್ನನ್ನು ಅಗಲಿ ನಾಶಪಡಿಸಿ ನಿವಾಸಿಗಳಿಲ್ಲದ ದೇಶವನ್ನಾಗಿ ಮಾಡದಂತೆ ಶಿಕ್ಷಣವನ್ನು ಹೊಂದು.


ನನ್ನ ಬೋಧನೆಯನ್ನು ಬೆಳ್ಳಿಗಿಂತಲೂ ಜ್ಞಾನೋಪದೇಶವನ್ನು ಅಪರಂಜಿಗಿಂತಲೂ ಉತ್ತಮವೆಂದು ಹೊಂದಿಕೊಳ್ಳಿರಿ.


ಅಯ್ಯೋ, ನಾನು ಸದುಪದೇಶವನ್ನು ಎಷ್ಟು ದ್ವೇಷಿಸಿದೆ, ನನ್ನ ಹೃದಯವು ಬುದ್ಧಿವಾದವನ್ನು ಎಷ್ಟು ತಾತ್ಸಾರ ಮಾಡಿತು,


ಜ್ಞಾನಿಯು ಇವುಗಳನ್ನು ಕೇಳಿ ಹೆಚ್ಚಾದ ಪಾಂಡಿತ್ಯವನ್ನು ಹೊಂದುವನು, ವಿವೇಕಿಯು [ಮತ್ತಷ್ಟು] ಉಚಿತಾಲೋಚನೆಯುಳ್ಳವನಾಗುವನು.


ವಿವೇಕಮಾರ್ಗದಲ್ಲಿ ಅಂದರೆ ನೀತಿನ್ಯಾಯಧರ್ಮಗಳಲ್ಲಿ ಶಿಕ್ಷಿತರಾಗುವರು.


ನೀವೋ ನನ್ನ ಸುಶಿಕ್ಷಣವನ್ನು ಹಗೆ ಮಾಡುತ್ತೀರಲ್ಲಾ; ನನ್ನ ಆಜ್ಞೆಯನ್ನು ಉಲ್ಲಂಘಿಸುತ್ತೀರಿ.


ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆಂದೂ ನೀವು ಅಮೋರಿಯರ ಮಧ್ಯದಲ್ಲಿ ವಾಸಿಸುವಾಗ ಅವರ ದೇವತೆಗಳನ್ನು ಪೂಜಿಸಬಾರದೆಂದೂ ಹೇಳಿದೆನು; ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ ಎಂಬದೇ ಅಂದನು.


ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ಪಶ್ಚಾತ್ತಾಪಪಡಲಿಲ್ಲ, ಸಂಹರಿಸಿದರೂ ಶಿಕ್ಷಣಕ್ಕೆ ಒಪ್ಪಲಿಲ್ಲ; ತಮ್ಮ ಮುಖವನ್ನು ಕಲ್ಲಿಗಿಂತ ಕಠಿಣಮಾಡಿಕೊಂಡು ತಿರುಗಿಕೊಳ್ಳಲೊಲ್ಲದೆ ಹೋಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು