Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 17:24 - ಕನ್ನಡ ಸತ್ಯವೇದವು J.V. (BSI)

24 ಯೆಹೋವನಾದ ನನ್ನ ನುಡಿ ಇದೇ - ನೀವು ನನ್ನ ಕಡೆಗೆ ಚೆನ್ನಾಗಿ ಕಿವಿಗೊಟ್ಟು ಸಬ್ಬತ್ ದಿನದಲ್ಲಿ ಈ ಊರಿನ ಬಾಗಿಲುಗಳೊಳಗೆ ಯಾವ ಹೊರೆಯನ್ನೂ ತಾರದೆ ಯಾವ ಕೆಲಸವನ್ನೂ ಮಾಡದೆ ಆ ದಿನವನ್ನು ನನ್ನ ದಿನವೆಂದು ಆಚರಿಸಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯೆಹೋವನಾದ ನನ್ನ ನುಡಿ ಇದೇ, ನೀನು ನನ್ನ ಕಡೆಗೆ ಚೆನ್ನಾಗಿ ಕಿವಿಗೊಟ್ಟು, ಸಬ್ಬತ್ ದಿನದಲ್ಲಿ ಈ ಊರಿನ ಬಾಗಿಲುಗಳೊಳಗೆ ಯಾವ ಹೊರೆಯನ್ನೂ ತಾರದೆ, ಯಾವ ಕೆಲಸವನ್ನೂ ಮಾಡದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 “ಸರ್ವೇಶ್ವರನಾದ ನಾನು ಹೇಳುವ ಮಾತಿದು : ನೀವು ನನ್ನ ಕಡೆಗೆ ಚೆನ್ನಾಗಿ ಕಿವಿಗೊಟ್ಟು ಸಬ್ಬತ್ ದಿನದಲ್ಲಿ ಈ ಊರಿನ ಬಾಗಿಲುಗಳೊಳಗೆ ಯಾವ ಹೊರೆಯನ್ನು ತರದೆ, ಯಾವ ಕೆಲಸವನ್ನೂ ಮಾಡದೆ, ಆ ದಿನವನ್ನು ಪವಿತ್ರವಾಗಿ ಆಚರಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆದರೆ ನೀವು ಎಚ್ಚರಿಕೆಯಿಂದ ನನ್ನ ಆಜ್ಞೆಯನ್ನು ಪಾಲಿಸಬೇಕು.’” ಇದು ಯೆಹೋವನ ನುಡಿ. “‘ನೀವು ಸಬ್ಬತ್‌ದಿನದಂದು ಜೆರುಸಲೇಮಿನ ದ್ವಾರಗಳ ಮೂಲಕ ಯಾವ ಭಾರವನ್ನೂ ತರಬಾರದು. ಸಬ್ಬತ್‌ದಿನವನ್ನು ನೀವು ಪವಿತ್ರದಿನವನ್ನಾಗಿ ಮಾಡಬೇಕು. ಆ ದಿನ ನೀವು ಯಾವ ಕೆಲಸವನ್ನೂ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಯೆಹೋವ ದೇವರಾದ ನನ್ನ ನುಡಿ ಇದೇ: ನೀವು ನನ್ನನ್ನು ಜಾಗ್ರತೆಯಿಂದ ಕೇಳಿ, ಸಬ್ಬತ್ ದಿನದಲ್ಲಿ, ಈ ಪಟ್ಟಣದ ಬಾಗಿಲುಗಳಲ್ಲಿ ಹೊರೆಯನ್ನು ತೆಗೆದುಕೊಂಡು ಬಾರದೆ, ಸಬ್ಬತ್ ದಿನದಲ್ಲಿ ಯಾವುದೊಂದು ಕೆಲಸಮಾಡದೆ ಪರಿಶುದ್ಧಮಾಡಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 17:24
11 ತಿಳಿವುಗಳ ಹೋಲಿಕೆ  

ನಾನು ಈಗ ನಿಮಗೆ ಬೋಧಿಸುವ ಆಜ್ಞೆಗಳಿಗೆ ನೀವು ಲಕ್ಷ್ಯಕೊಟ್ಟು ನಿಮ್ಮ ದೇವರಾದ ಯೆಹೋವನನ್ನು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ಪ್ರೀತಿಸಿ ಆತನನ್ನು ಸೇವಿಸಿದರೆ


ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ಆತನ ದೃಷ್ಟಿಗೆ ಸರಿಬೀಳುವದನ್ನು ಮಾಡಿ ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನು.


ದೂರದಲ್ಲಿರುವವರು ಬಂದು ಯೆಹೋವನ ಆಲಯವನ್ನು ಕಟ್ಟುವದಕ್ಕೆ ಕೈಹಾಕುವರು; ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದಾತನು ಸೇನಾಧೀಶ್ವರ ಯೆಹೋವನೇ ಎಂದು ನಿಮಗೆ ದೃಢವಾಗುವದು. ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಮನಃಪೂರ್ವಕವಾಗಿ ಕೇಳಿದರೆ ಇದೆಲ್ಲಾ ನೆರವೇರುವದು.


ಆಹಾರವಲ್ಲದ್ದಕ್ಕೆ ಹಣವನ್ನು ಏಕೆ ವ್ರಯಮಾಡುತ್ತೀರಿ? ತೃಪ್ತಿಗೊಳಿಸದ ಪದಾರ್ಥಕ್ಕೆ ನಿಮ್ಮ ದುಡಿತವನ್ನು ವೆಚ್ಚಮಾಡುವದೇಕೆ? ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ, ಒಳ್ಳೇದನ್ನೇ ಉಂಡು ಮೃಷ್ಟಾನ್ನದಲ್ಲಿ ಆನಂದಪಡಿರಿ.


ಅವನು ಜೋಡಿ ಜೋಡಿಯಾಗಿ ಬರುವ ಸವಾರರ ಸಾಲನ್ನೂ ಕತ್ತೆಗಳ ಮತ್ತು ಒಂಟೆಗಳ ಸಾಲುಗಳನ್ನೂ ನೋಡಿದರೆ ಬಹು ಗಮನದಿಂದ ಕಿವಿಗೊಟ್ಟು ಗಮನಿಸಲಿ ಎಂಬದೇ.


ನಾನು ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸುವವರಾಗಿ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆದು ಆತನನ್ನೇ ಹೊಂದಿಕೊಂಡಿದ್ದರೆ


ಸಬ್ಬತ್ ದಿನವನ್ನು ದೇವರ ದಿನವೆಂದು ಆಚರಣೆಗೆ ತರುವದಕ್ಕೆ ಜ್ಞಾಪಕದಲ್ಲಿಟ್ಟುಕೊಳ್ಳಬೇಕು.


ನಾನು ನೇವಿುಸಿದ ಸಬ್ಬತ್ ದಿನಗಳನ್ನು ನನ್ನ ದಿನಗಳೆಂದು ಆಚರಿಸಿರಿ; ನಾನು ನಿಮ್ಮ ದೇವರಾದ ಯೆಹೋವನು ಎಂದು ನೀವು ತಿಳುಕೊಳ್ಳುವಂತೆ ಅವು ನಿಮಗೂ ನನಗೂ ಗುರುತಾಗಿರುವವು ಎಂದು ಹೇಳಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು