ಯೆರೆಮೀಯ 17:26 - ಕನ್ನಡ ಸತ್ಯವೇದವು J.V. (BSI)26 ಮತ್ತು ಯೆಹೂದದ ಪಟ್ಟಣಗಳು, ಯೆರೂಸಲೇವಿುನ ಸುತ್ತಣ ಪ್ರದೇಶಗಳು, ಬೆನ್ಯಾಮೀನ್ ಸೀಮೆ, ಇಳಕಲಿನ ಪ್ರದೇಶ, ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ, ಈ ಎಲ್ಲಾ ಸ್ಥಳಗಳಿಂದಲೂ ಸರ್ವಾಂಗಹೋಮಪಶು, ಯಜ್ಞಪಶು, ನೈವೇದ್ಯ, ಧೂಪ ಎಂಬೀ ಕೃತಜ್ಞತಾರ್ಪಣಗಳನ್ನು ಯೆಹೋವನ ಆಲಯಕ್ಕೆ ಜನರು ತೆಗೆದುಕೊಂಡು ಬರುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಯೆಹೂದದ ಪಟ್ಟಣಗಳು, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಬೆನ್ಯಾಮೀನ್ ಸೀಮೆ, ಇಳಕಲಿನ ಪ್ರದೇಶ, ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ ಈ ಎಲ್ಲಾ ಸ್ಥಳಗಳಿಂದಲೂ ಸರ್ವಾಂಗಹೋಮಪಶು, ಯಜ್ಞಪಶು, ನೈವೇದ್ಯ, ಧೂಪ ಎಂಬ ಕೃತಜ್ಞತಾ ಅರ್ಪಣೆಗಳನ್ನು ಯೆಹೋವನ ಆಲಯಕ್ಕೆ ಜನರು ತೆಗೆದುಕೊಂಡು ಬರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಜುದೇಯದ ನಗರಗಳು, ಜೆರುಸಲೇಮಿನ ಸುತ್ತಮುತ್ತಲಿನ ಪ್ರದೇಶಗಳು, ಬೆನ್ಯಾಮಿನ್ ಪ್ರಾಂತ್ಯ, ಇಳಕಲಿನ ಪ್ರದೇಶ, ಬೆಟ್ಟದ ಮೇಲಣ ಪ್ರದೇಶ, ದಕ್ಷಿಣ ಪ್ರಾಂತ್ಯ, ಈ ಎಲ್ಲ ಸ್ಥಳಗಳಿಂದ ಸರ್ವಾಂಗಹೋಮಪಶು, ಯಜ್ಞಪಶು, ಧಾನ್ಯನೈವೇದ್ಯ, ಧೂಪ ಮತ್ತು ಕೃತಜ್ಞತಾರ್ಪಣೆ ಇವುಗಳನ್ನು ಜನರು ನನ್ನ ಆಲಯಕ್ಕೆ ತೆಗೆದುಕೊಂಡು ಬರುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಜೆರುಸಲೇಮಿಗೆ ಯೆಹೂದದ ಪಟ್ಟಣಗಳಿಂದ ಜನರು ಬರುವರು. ಅದರ ಸುತ್ತಲೂ ಇದ್ದ ಸಣ್ಣಸಣ್ಣ ಹಳ್ಳಿಗಳಿಂದ ಜನರು ಜೆರುಸಲೇಮಿಗೆ ಬರುವರು. ಬೆನ್ಯಾಮೀನ್ ಕುಲದವರು ವಾಸಿಸುವ ಪ್ರದೇಶದಿಂದ ಜನರು ಬರುವರು. ಪಶ್ಚಿಮ ಬೆಟ್ಟಗಳ ಇಳಿಜಾರು ಪ್ರದೇಶದಿಂದ ಮತ್ತು ಬೆಟ್ಟಪ್ರದೇಶದಿಂದ ಜನರು ಬರುವರು. ನೆಗೆವ್ ಪ್ರದೇಶದಿಂದ ಜನರು ಬರುವರು. ಆ ಜನರೆಲ್ಲರು ಸರ್ವಾಂಗಹೋಮಗಳನ್ನು, ಯಜ್ಞಗಳನ್ನು, ಧಾನ್ಯನೈವೇದ್ಯಗಳನ್ನು, ಧೂಪವನ್ನು ಮತ್ತು ಕೃತಜ್ಞತಾಯಜ್ಞಗಳನ್ನು ತೆಗೆದುಕೊಂಡು ಯೆಹೋವನ ಆಲಯಕ್ಕೆ ಬರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಇದಲ್ಲದೆ ಯೆಹೂದದ ಪಟ್ಟಣಗಳಿಂದಲೂ, ಯೆರೂಸಲೇಮಿನ ಸುತ್ತಲಿನ ಸ್ಥಳಗಳಿಂದಲೂ, ಬೆನ್ಯಾಮೀನನ ದೇಶದಿಂದಲೂ, ಬಯಲಿನಿಂದಲೂ, ಬೆಟ್ಟಗಳಿಂದಲೂ, ದಕ್ಷಿಣದಿಂದಲೂ ದಹನಬಲಿಗಳನ್ನೂ, ಬಲಿಗಳನ್ನೂ, ಧಾನ್ಯ ಸಮರ್ಪಣೆಗಳನ್ನೂ, ಧೂಪವನ್ನೂ ತರುವರು. ಸ್ತೋತ್ರದ ಅರ್ಪಣೆಗಳನ್ನು ಯೆಹೋವ ದೇವರ ಆಲಯಕ್ಕೆ ತರುವರು. ಅಧ್ಯಾಯವನ್ನು ನೋಡಿ |