ಯೆರೆಮೀಯ 17:27 - ಕನ್ನಡ ಸತ್ಯವೇದವು J.V. (BSI)27 ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತು ಯೆರೂಸಲೇವಿುನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಕೊಳ್ಳದೆ ಆ ದಿನವನ್ನು ನನ್ನ ದಿನವೆಂದು ಆಚರಿಸದೆ ಇದ್ದರೆ ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಯೆರೂಸಲೇವಿುನ ಉಪ್ಪರಿಗೆಗಳನ್ನು ದಹಿಸಿಬಿಡುವದು, ಆರುವದೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತು ಯೆರೂಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಕೊಳ್ಳದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸದೆ ಇದ್ದರೆ ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಯೆರೂಸಲೇಮಿನ ಉಪ್ಪರಿಗೆಗಳನ್ನು ದಹಿಸಿಬಿಡುವುದು, ಆರುವುದೇ ಇಲ್ಲ’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಆದರೆ ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಹೊತ್ತು, ಜೆರುಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಗೊಳ್ಳದೆ, ಆ ಸಬ್ಬತ್ ದಿನವನ್ನು ಪವಿತ್ರ ದಿನ ಎಂದು ಆಚರಿಸದೆಹೋದರೆ, ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು. ಅದು ಜೆರುಸಲೇಮಿನ ಅರಮನೆಗಳನ್ನು ದಹಿಸಿಬಿಡುವುದು, ಆ ಬೆಂಕಿ ಆರುವುದೇ ಇಲ್ಲ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 “‘ನೀವು ನನ್ನ ಮಾತನ್ನು ಕೇಳದಿದ್ದರೆ ಮತ್ತು ನನ್ನ ಆಜ್ಞೆಯನ್ನು ಪಾಲಿಸದಿದ್ದರೆ ಕೇಡಾಗುವುದು. ಸಬ್ಬತ್‌ದಿನದಲ್ಲಿ ಹೊರೆಗಳನ್ನು ಹೊತ್ತುಕೊಂಡು ಜೆರುಸಲೇಮಿಗೆ ಹೋದರೆ ನೀವು ಆ ದಿನವನ್ನು ಪವಿತ್ರದಿನವೆಂದು ಆಚರಿಸಿದಂತೆ ಆಗುವುದಿಲ್ಲ. ಆಗ ನಾನು ನಂದಿಸಲಾಗದ ಬೆಂಕಿಯನ್ನು ಹೊತ್ತಿಸುತ್ತೇನೆ. ಆ ಬೆಂಕಿಯು ಜೆರುಸಲೇಮಿನ ದ್ವಾರಗಳಲ್ಲಿ ಪ್ರಾರಂಭವಾಗಿ ಅರಮನೆಗಳನ್ನು ಸುಡುವವರೆಗೂ ಉರಿಯುತ್ತಿರುವುದು.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆದರೆ ನೀವು ಸಬ್ಬತ್ ದಿನವನ್ನು ಪರಿಶುದ್ಧಮಾಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತುಕೊಂಡು, ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಿದರೆ ಯೆರೂಸಲೇಮಿನ ದ್ವಾರಗಳಲ್ಲಿ ಬೆಂಕಿಯನ್ನು ಹಚ್ಚುವೆನು. ಅದು ಆರಿಹೋಗದೆ, ಯೆರೂಸಲೇಮಿನ ಕೋಟೆಗಳನ್ನು ದಹಿಸಿಬಿಡುವುದು.’ ” ಅಧ್ಯಾಯವನ್ನು ನೋಡಿ |