Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 17:4 - ಕನ್ನಡ ಸತ್ಯವೇದವು J.V. (BSI)

4 ನಾನು ನಿಮಗೆ ದಯಪಾಲಿಸಿದ ಸ್ವಾಸ್ತ್ಯವನ್ನು ಸ್ವದೋಷದಿಂದಲೇ ಕಳೆದುಕೊಳ್ಳುವಿರಿ; ನೀವು ನೋಡದ ದೇಶದಲ್ಲಿ ನಿಮ್ಮನ್ನು ನಿಮ್ಮ ಶತ್ರುಗಳಿಗೆ ದಾಸರನ್ನಾಗಿ ಮಾಡುವೆನು; ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ, ಅದು ನಿತ್ಯವೂ ಜ್ವಲಿಸುತ್ತಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ನಿಮಗೆ ದಯಪಾಲಿಸಿದ ಸ್ವತ್ತನ್ನು ನಿಮ್ಮ ದೋಷದಿಂದಲೇ ಕಳೆದುಕೊಳ್ಳುವಿರಿ. ನೀವು ನೋಡದ ದೇಶದಲ್ಲಿ ನಿಮ್ಮನ್ನು ನಿಮ್ಮ ಶತ್ರುಗಳಿಗೆ ದಾಸರನ್ನಾಗಿ ಮಾಡುವೆನು. ನೀವು ನನ್ನ ರೋಷಾಗ್ನಿಯನ್ನು ಹೆಚ್ಚಿಸಿದ್ದೀರಿ, ಅದು ನಿತ್ಯವೂ ಉರಿಯುತ್ತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಾನು ನಿಮಗೆ ಹಕ್ಕು ಬಾಧ್ಯತೆಯಾಗಿ ದಯಪಾಲಿಸಿದ ಸೊತ್ತನ್ನು ನೀವು ದೋಷದಿಂದಲೆ ಕಳೆದುಕೊಳ್ಳುವಿರಿ. ನೀವು ನೋಡದ ನಾಡಿನಲ್ಲಿ ನಿಮ್ಮನ್ನು ನಿಮ್ಮ ಶತ್ರುಗಳಿಗೇ ಊಳಿಗದವರನ್ನಾಗಿ ಮಾಡುವೆನು. ನೀವು ನನ್ನ ಕೋಪಾಗ್ನಿಯನ್ನು ಹೊತ್ತಿಸಿದ್ದೀರಿ. ಅದು ನಿರಂತರವಾಗಿ ಉರಿಯುತ್ತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ನಿಮಗೆ ಕೊಟ್ಟ ಭೂಮಿಯನ್ನು ನೀವು ಕಳೆದುಕೊಳ್ಳುವಿರಿ. ನಿಮ್ಮನ್ನು ನಿಮಗೆ ತಿಳಿಯದ ನಾಡಿನಲ್ಲಿ ನಿಮ್ಮ ಶತ್ರುಗಳ ದಾಸರನ್ನಾಗಿ ಮಾಡುವೆನು. ಏಕೆಂದರೆ ನನಗೆ ತುಂಬಾ ಕೋಪ ಬಂದಿದೆ. ನನ್ನ ಕೋಪವು ಉರಿಯುವ ಜ್ವಾಲೆಯಂತಿದೆ; ನೀವು ಅದರಲ್ಲಿ ಭಸ್ಮವಾಗಿ ಹೋಗುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ನಿನ್ನ ದೋಷದಿಂದಲೇ ನೀನು ನಾನು ನಿನಗೆ ಕೊಟ್ಟ ಸೊತ್ತನ್ನು ಬಿಟ್ಟು ಬಿಡುವೆ. ನಿನಗೆ ತಿಳಿಯದ ದೇಶದಲ್ಲಿ ನಿನ್ನನ್ನು ನಿನ್ನ ಶತ್ರುಗಳಿಗೆ ದಾಸರನ್ನಾಗಿ ಮಾಡುವೆನು. ಏಕೆಂದರೆ ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ. ಅದು ನಿತ್ಯವೂ ಪ್ರಜ್ವಲಿಸುತ್ತಿರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 17:4
34 ತಿಳಿವುಗಳ ಹೋಲಿಕೆ  

ನಿನ್ನ ಶತ್ರುಗಳ ಕೈಗೆ ಕೊಟ್ಟು ನೀನು ನೋಡದ ದೇಶಕ್ಕೆ ಸಾಗಿಸಿಬಿಡುವೆನು. ನನ್ನ ರೋಷದಿಂದ ಉರಿಯು ಹತ್ತಿಕೊಂಡಿದೆ, ಅದು ನಿಮ್ಮನ್ನು ಸುಟ್ಟುಬಿಡುವದು.


ನಮ್ಮ ಸ್ವಾಸ್ತ್ಯವು ಪರರ ಪಾಲಾಗಿದೆ, ನಮ್ಮ ಮನೆಗಳು ಹೆರರ ಕೈಗೆ ಸಿಕ್ಕಿವೆ.


ಹೀಗಿರಲು ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ - ಆಹಾ, ನನ್ನ ಕೋಪವೆಂಬ ರೋಷಾಗ್ನಿಯು ಈ ಸ್ಥಳದಲ್ಲಿ ಸುರಿಯಲ್ಪಡುವದು; ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಕಾಡುಮರಗಳ ಮೇಲೆಯೂ ಭೂವಿುಯ ಬೆಳೆಯ ಮೇಲೆಯೂ ಅದನ್ನು ಸುರಿಯುವೆನು; ಆರದೆ ದಹಿಸುವದು.


ಹೀಗಿರಲು ಯೆಹೋವನು ತನ್ನ ಜನರಲ್ಲಿ ಉರಿಗೊಂಡು ಅವರ ಮೇಲೆ ಕೈಯೆತ್ತಿ ಅವರನ್ನು ಹೊಡೆದು ಬಿಡುವನು; ಆಗ ಬೆಟ್ಟಗಳು ನಡಗುವವು, ಹೆಣಗಳು ಬೀದಿಗಳಲ್ಲಿ ಕಸವಾಗಿ ಬಿದ್ದಿರುವವು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈಯೆತ್ತಿಯೇ ಇರುವದು.


ನೀವಾಗಲಿ ನಿಮ್ಮ ಪಿತೃಗಳಾಗಲಿ ನೋಡದ ದೇಶಕ್ಕೆ ನಿಮ್ಮನ್ನು ಈ ದೇಶದೊಳಗಿಂದ ಎಸೆದುಬಿಡುವೆನು; ಅಲ್ಲಿ ಹಗಲಿರುಳೂ ಅನ್ಯದೇವತೆಗಳನ್ನು ಸೇವಿಸುವಿರಿ; ನಾನು ನಿಮಗೆ ದಯೆತೋರಿಸೆನು.


ಮತ್ತು ಯೆಹೋವನು ನಿಮ್ಮ ಸಂಕಟದಿಂದಲೂ ಕಳವಳದಿಂದಲೂ ಕಠಿನವಾದ ಬಿಟ್ಟಿಯ ಸೇವೆಯಿಂದಲೂ


ನಿನ್ನ ಮೇಲೆ ನನ್ನ ಕೋಪವನ್ನು ಸುರಿಸಿ ರೋಷಾಗ್ನಿಯನ್ನು ಊದಿ ನಿನ್ನನ್ನು ಮೃಗಪ್ರಾಯರೂ ಹಾಳುಮಾಡುವದರಲ್ಲಿ ಗಟ್ಟಿಗರೂ ಆದವರ ಕೈಗೆ ಸಿಕ್ಕಿಸುವೆನು.


ಹಾದುಹೋಗುವವರೇ, ನಿಮ್ಮಲ್ಲಿ ಯಾರಿಗೂ ನನ್ನ ಚಿಂತೆ ಇಲ್ಲವೋ? ಯೆಹೋವನು ಅತಿರೋಷಗೊಂಡು ನನ್ನನ್ನು ಬಾಧಿಸಿ ನನಗೆ ಉಂಟುಮಾಡಿದ ವ್ಯಥೆಯನ್ನು ನೀವು ನೋಡಿ ಇಂಥಾ ವ್ಯಥೆಯು ಇನ್ನೆಲ್ಲಾದರೂ ಉಂಟೋ ಯೋಚಿಸಿರಿ.


ನಾನು ನನ್ನ ಮನೆಯನ್ನು ತೊರೆದು ನನ್ನ ಸ್ವಾಸ್ತ್ಯವನ್ನು ನಿರಾಕರಿಸಿದ್ದೇನೆ; ನನ್ನ ಪ್ರಾಣಪ್ರಿಯಳನ್ನು ಅವಳ ಶತ್ರುಗಳ ಕೈಗೆ ಒಪ್ಪಿಸಿದ್ದೇನೆ.


ನಾನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ? ಇದು ಯೆಹೋವನಾದ ನನ್ನ ಮಾತು.


ಅವರು ಆಚೆ ಹೋಗಿ ನನಗೆ ದ್ರೋಹಮಾಡಿದವರ ಹೆಣಗಳನ್ನು ನೋಡುವರು; ಅವುಗಳನ್ನು ಕಡಿಯುವ ಹುಳವು ಸಾಯುವದಿಲ್ಲ, ಸುಡುವ ಬೆಂಕಿಯು ಆರುವದಿಲ್ಲ; ಅವು ಲೋಕದವರಿಗೆಲ್ಲಾ ಅಸಹ್ಯವಾಗಿರುವವು.


ಪುರಾತನ ಕಾಲದಿಂದಲೂ ಅಗ್ನಿಕುಂಡವು ಸಿದ್ಧವಾಗಿದೆ; ಹೌದು, ರಾಜನಿಗೆ ಅಣಿಯಾಗಿದೆ; ಅದನ್ನು ಆಳವಾಗಿಯೂ ಅಗಲವಾಗಿಯೂ ಮಾಡಿದ್ದಾನೆ; ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಬೇಕಾದಷ್ಟು ಕೊರಡುಗಳೂ ಇವೆ; ಯೆಹೋವನ ಶ್ವಾಸವು ಗಂಧಕದ ಪ್ರವಾಹದೋಪಾದಿಯಲ್ಲಿ ಅದನ್ನು ಉರಿಸುವದು.


ಉಪಶಮನವನ್ನು ಪಡೆದ ಮೇಲೆ ಅವರು ತಿರಿಗಿ ದ್ರೋಹಿಗಳಾಗಿ ನಡೆಯುತ್ತಿರುವದನ್ನು ನೀನು ಕಂಡು ಅವರ ಮೇಲೆ ದೊರೆತನ ನಡಿಸತಕ್ಕ ವೈರಿಗಳ ಕೈಗೆ ಅವರನ್ನು ಒಪ್ಪಿಸಿದಿ. ಆಗ ಅವರು ಪಶ್ಚಾತ್ತಾಪಪಟ್ಟು ಕೂಗಿಕೊಳ್ಳಲು ಪರಲೋಕದಿಂದ ನೀನು ಕೇಳಿ ನಿನ್ನ ಕರುಣಾತಿಶಯದಿಂದ ಅವರನ್ನು ಅನೇಕಾವರ್ತಿ ರಕ್ಷಿಸಿ -


ಅವನು ಇವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟು ಹೋಗಬೇಕಾಯಿತು.


ಇಸ್ರಾಯೇಲ್ಯರನ್ನು ನಾನು ಅವರಿಗೆ ಕೊಟ್ಟ ದೇಶದಿಂದ ತೆಗೆದುಹಾಕಿ ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಆಲಯವನ್ನು ನಿರಾಕರಿಸಿಬಿಡುವೆನು. ಇಸ್ರಾಯೇಲ್ಯರು ಎಲ್ಲಾ ಜನಾಂಗಗಳವರ ಗಾದೆಗೂ ನಿಂದೆಗೂ ಆಸ್ಪದರಾಗುವರು.


ನೀವು ಶತ್ರುಗಳಿಂದ ಪರಾಜಯವನ್ನು ಹೊಂದುವಂತೆ ಯೆಹೋವನು ಮಾಡುವನು; ನೀವು ಒಂದೇ ದಾರಿಯಿಂದ ಅವರೆದುರಿಗೆ ಹೋಗಿ ಏಳು ದಾರಿಗಳಿಂದ ಓಡಿಹೋಗುವಿರಿ. ಲೋಕದ ಎಲ್ಲಾ ರಾಜ್ಯಗಳವರೂ ಇದನ್ನು ಕಂಡು ಬೆರಗಾಗುವರು.


ಇಸ್ರಾಯೇಲು ಒಬ್ಬ ದಾಸನೋ? ಮನೆಯ ಗುಲಾಮನಾಗಿ ಹುಟ್ಟಿದವನೋ? ಏಕೆ ಸೂರೆಯಾದನು?


ಯೆಹೋವನೇ, ನನ್ನನ್ನು ಕೊಲ್ಲಬೇಕೆಂದು ಅವರು ಮಾಡಿಕೊಂಡಿರುವ ಆಲೋಚನೆಯನ್ನೆಲ್ಲಾ ನೀನೇ ಬಲ್ಲೆ; ಅವರ ಅಪರಾಧವನ್ನು ಕ್ಷವಿುಸಬೇಡ, ಅವರ ಪಾಪವನ್ನು ಅಳಿಸದಿರು, ಅದು ನಿನ್ನ ಕಣ್ಣೆದುರಿಗಿರಲಿ; ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪವನ್ನು ವ್ಯಕ್ತಪಡಿಸುವಾಗ ಅವರಿಗೆ ತಕ್ಕದ್ದನ್ನು ಮಾಡು.


ದಾವೀದನ ಮನೆತನದವರೇ, ಯೆಹೋವನು ಇಂತೆನ್ನುತ್ತಾನೆ - ನಿಮ್ಮ ದುಷ್ಕೃತ್ಯಗಳ ನಿವಿುತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು ಯಾರೂ ಆರಿಸಲಾಗದಷ್ಟು ರಭಸವಾಗಿ ದಹಿಸಬಾರದಾಗಿದ್ದರೆ ಮುಂಜಾನೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ.


ಕೊನ್ಯನೆಂಬ ಈ ಮನುಷ್ಯನು ಅಸಡ್ಡೆಗೀಡಾದ ಒಡಕು ಗಡಿಗೆಯೋ? ಯಾರಿಗೂ ಇಷ್ಟವಲ್ಲದ ಮಡಿಕೆಯೋ? ಅವನೂ ಅವನ ಸಂತತಿಯವರೂ ಏಕೆ ಬಿಸಾಡಲ್ಪಟ್ಟಿದ್ದಾರೆ? ನೋಡದ ದೇಶಕ್ಕೆ ಏಕೆ ಎಸೆಯಲ್ಪಟ್ಟಿದ್ದಾರೆ?


ಓಹೋ, ಬೆಂಕಿಯಿಕ್ಕಿ ಸುತ್ತುಮುತ್ತಲು ಕೊಳ್ಳಿಗಳನ್ನು ಹತ್ತಿಸಿಕೊಂಡಿರುವವರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕೊಳ್ಳಿಗಳ ನಡುವೆಯೂ ನಡೆದರೂ ನಡೆಯಿರಿ. ಇಗೋ, ನನ್ನ ಹಸ್ತದಿಂದ ನಿಮಗಾಗುವ ಗತಿಯು ಇದೇ, ದುಃಖಕ್ಕೆ ಒಳಗಾಗಿ ಸಾಯುವಿರಿ.


ನಮ್ಮ ದೇವರಾದ ಯೆಹೋವನು ಇವುಗಳನ್ನೆಲ್ಲಾ ನಮಗೆ ಏಕೆ ಮಾಡಿದ್ದಾನೆ ಎಂದು ನನ್ನ ಜನರು ಅನ್ನುವಾಗ ನೀನು ಅವರಿಗೆ - ನೀವು ಯೆಹೋವನನ್ನು ತೊರೆದು ಸ್ವದೇಶದಲ್ಲಿ ಅನ್ಯದೇವತೆಗಳನ್ನು ಸೇವಿಸಿದ ಹಾಗೆ ಪರದೇಶದಲ್ಲಿ ಅನ್ಯರನ್ನು ಸೇವಿಸುವಿರಿ ಎಂದು ಹೇಳು.


ಹೀಗಿರಲು ನಾನು ಅತಿದುಷ್ಟ ಜನಾಂಗಗಳನ್ನು ಬರಮಾಡುವೆನು, ಅವು ನನ್ನ ಜನರ ಮನೆಗಳನ್ನು ವಶಮಾಡಿಕೊಳ್ಳುವವು; ನಾನು ಬಲಿಷ್ಠರ ಸೊಕ್ಕನ್ನು ಅಡಗಿಸುವೆನು, ಅವರ ಪವಿತ್ರಸ್ಥಾನಗಳು ಹೊಲೆಗೆಡುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು