Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 18:11 - ಕನ್ನಡ ಸತ್ಯವೇದವು J.V. (BSI)

11 ಈಗ ನೀನು ಯೆಹೂದ್ಯರಿಗೂ ಯೆರೂಸಲೇವಿುನವರಿಗೂ ಈ ಮಾತನ್ನು ಹೇಳು - ಯೆಹೋವನು ಹೀಗನ್ನುತ್ತಾನೆ - ಆಹಾ, ನಾನು ನಿಮಗೆ ವಿರುದ್ಧವಾಗಿ ಯೋಚಿಸಿ ಕೇಡನ್ನು ಕಲ್ಪಿಸುತ್ತಿದ್ದೇನೆ; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ದುರ್ಮಾರ್ಗದಿಂದ ಹಿಂದಿರುಗಲಿ, ನಡತೆಯನ್ನೂ ಕೃತ್ಯಗಳನ್ನೂ ಸರಿಪಡಿಸಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಈಗ ನೀನು ಯೆಹೂದ್ಯರಿಗೂ ಯೆರೂಸಲೇಮಿನವರಿಗೂ ಯೆಹೋವನು ಹೀಗೆನ್ನುತ್ತಾನೆ, ‘ಆಹಾ, ನಾನು ನಿಮ್ಮ ವಿರುದ್ಧವಾಗಿ ಯೋಚಿಸಿ, ಕೇಡನ್ನು ಕಲ್ಪಿಸುತ್ತಿದ್ದೇನೆ; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ದುರ್ಮಾರ್ಗದಿಂದ ಹಿಂದಿರುಗಲಿ, ನಡತೆಯನ್ನೂ ಕೃತ್ಯಗಳನ್ನೂ ಸರಿಪಡಿಸಿಕೊಳ್ಳಲಿ’ ಎಂಬ ಮಾತನ್ನು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಈಗ ನೀನು ಜುದೇಯದ ಹಾಗು ಜೆರುಸಲೇಮಿನ ಜನರಿಗೆ ಈ ಸಂದೇಶವನ್ನು ತಿಳಿಸು - ‘ಸರ್ವೇಶ್ವರ ಹೀಗೆನ್ನುತ್ತಾರೆ : ನಾನು ನಿಮಗೆ ವಿರುದ್ಧ ವಿಪತ್ತನ್ನು ಕಲ್ಪಿಸುತ್ತಿದ್ದೇನೆ. ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ದುರ್ಮಾರ್ಗವನ್ನು ಬಿಟ್ಟು ಹಿಂದಿರುಗಲಿ, ನಡತೆಯನ್ನೂ ಕೃತ್ಯಗಳನ್ನೂ ಸರಿಪಡಿಸಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಯೆರೆಮೀಯನೇ, ಯೆಹೂದದ ಜನರಿಗೆ ಮತ್ತು ಜೆರುಸಲೇಮಿನಲ್ಲಿ ವಾಸಿಸುವ ಜನರಿಗೆ ಯೆಹೋವನು ಹೀಗೆನ್ನುವನು: ‘ಈಗಲೇ ನಾನು ನಿಮಗೋಸ್ಕರ ತೊಂದರೆಗಳನ್ನು ಎಬ್ಬಿಸುತ್ತೇನೆ. ನಿಮ್ಮ ವಿರುದ್ಧ ಯೋಜನೆಗಳನ್ನು ಹಾಕುತ್ತಿದ್ದೇನೆ. ಆದ್ದರಿಂದ ನೀವು ಮಾಡುತ್ತಿರುವ ದುಷ್ಕೃತ್ಯಗಳನ್ನು ನಿಲ್ಲಿಸಬೇಕು. ಪ್ರತಿಯೊಬ್ಬನು ಪರಿವರ್ತನೆ ಹೊಂದಿ ಒಳ್ಳೆಯ ಕೆಲಸಗಳನ್ನು ಮಾಡಲು ಪ್ರಾರಂಭಿಸಬೇಕು’ ಎಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಹೀಗಿರುವುದರಿಂದ ಈಗ ಯೆಹೂದದ ಮನುಷ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ನೀನು ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿಮಗೆ ವಿರೋಧವಾಗಿ ಕೆಟ್ಟದ್ದನ್ನು ಕಲ್ಪಿಸುತ್ತಾ ಇದ್ದೇನೆ. ನಿಮಗೆ ವಿರೋಧವಾಗಿ ಉಪಾಯವನ್ನು ಆಲೋಚಿಸುತ್ತಾ ಇದ್ದೇನೆ. ನಿಮ್ಮ ನಿಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ಹಿಂದಿರುಗಿರಿ. ನಿಮ್ಮ ಮಾರ್ಗಗಳನ್ನೂ, ನಿಮ್ಮ ಕ್ರಿಯೆಗಳನ್ನೂ ಒಳ್ಳೆಯದಾಗಿ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 18:11
40 ತಿಳಿವುಗಳ ಹೋಲಿಕೆ  

ಯೆಹೋವನು ದರ್ಶಿಗಳೆನಿಸಿಕೊಂಡ ತನ್ನ ಪ್ರವಾದಿಗಳ ಮುಖಾಂತರವಾಗಿ ಇಸ್ರಾಯೇಲ್ಯ ಯೆಹೂದ್ಯರಿಗೆ - ನೀವು ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪಿತೃಗಳಿಗೂ ನನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ನಿಮಗೂ ಕೊಟ್ಟಂಥ ನನ್ನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ನಡೆಯಿರಿ ಎಂದು ಖಂಡಿತವಾಗಿ ಹೇಳಿದಾಗ


ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ - ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ ನಿಮ್ಮ ಪಿತೃಗಳಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗನ್ನುತ್ತಾನೆ - ನೀವು ನಿಮ್ಮ ನಡತೆಯನ್ನೂ ಕೃತ್ಯಗಳನ್ನೂ ತಿದ್ದಿಕೊಳ್ಳಿರಿ; ಹೀಗೆ ಮಾಡಿದರೆ ನಾನು ನಿಮ್ಮನ್ನು ಈ ಸ್ಥಳದಲ್ಲಿ ನೆಲೆಗೊಳಿಸುವೆನು.


ಆತನು ನಿಮಗೆ ಹೇಳಿಕಳುಹಿಸಿದ ಮಾತೇನಂದರೆ - ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗದಿಂದಲೂ ದುಷ್ಕೃತ್ಯಗಳಿಂದಲೂ ಹಿಂದಿರುಗಿರಿ, ನಿಮಗೆ ಶಾಶ್ವತ ಸ್ವಾಸ್ತ್ಯವಾಗಿರಲಿ ಎಂದು ಯೆಹೋವನು ಪುರಾತನ ಕಾಲದಲ್ಲಿ ನಿಮಗೂ ನಿಮ್ಮ ಪಿತೃಗಳಿಗೂ ಅನುಗ್ರಹಿಸಿದ ದೇಶದೊಳಗೆ ನೆಲೆಗೊಳ್ಳಿರಿ;


ಧನಿಕರೇ, ಕೇಳಿರಿ; ನಿಮಗೆ ಬರುವ ದುರ್ದಶೆಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.


ಮೊದಲು ದಮಸ್ಕದವರಿಗೆ, ಆಮೇಲೆ ಯೆರೂಸಲೇವಿುನಲ್ಲಿಯೂ ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ - ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.


ಆದಕಾರಣ ನೀನು ನಿನ್ನ ಜನರಿಗೆ ಹೀಗೆ ಹೇಳು - ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನನ್ನ ಕಡೆಗೆ ಪುನಃ ತಿರುಗಿರಿ; ಇದು ಸೇನಾಧೀಶ್ವರ ಯೆಹೋವನ ನುಡಿ; ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ಆದಕಾರಣ ಯೆಹೋವನು ಇಂತೆನ್ನುತ್ತಾನೆ - ಇಗೋ, ಈ ವಂಶಕ್ಕೆ ನಾನೇ ಕೇಡನ್ನು ಕಲ್ಪಿಸುತ್ತೇನೆ; ಅದರ ಭಾರದಿಂದ ನಿಮ್ಮ ಕುತ್ತಿಗೆಗಳನ್ನು ತಪ್ಪಿಸಿಕೊಳ್ಳಲಾರಿರಿ, ನೀವು ತಲೆಯೆತ್ತಿ ನಡೆಯುವದಕ್ಕಾಗದು; ಅದು ಕೆಟ್ಟಕಾಲವೇ ಸರಿ.


ನನ್ನ ತೋಟವನ್ನು ಏನು ಮಾಡುವೆನೋ ಈಗ ನಿಮಗೆ ತಿಳಿಸುವೆನು, ಕೇಳಿರಿ; ಅದರ ಬೇಲಿಯನ್ನು ಕೀಳುವೆನು, ದನವು ಅದನ್ನು ಮೇಯ್ದುಬಿಡುವದು; ಅದರ ಗೋಡೆಯನ್ನು ಕೆಡವಿಹಾಕುವೆನು, ಅದು ತುಳಿದಾಟಕ್ಕೆ ಈಡಾಗುವದು.


ಈಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರುಷವಿದ್ದು ವ್ಯಾಪಾರವನ್ನು ಮಾಡಿ ಲಾಭವನ್ನು ಸಂಪಾದಿಸುತ್ತೇವೆ ಅನ್ನುವವರೇ, ಕೇಳಿರಿ. ನಾಳೆ ಏನಾಗುವದೋ ನಿಮಗೆ ತಿಳಿಯದು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ದುಷ್ಟನ ಸಾವಿನಲ್ಲಿ ನನಗೆ ಲೇಶವಾದರೂ ಸಂತೋಷವುಂಟೋ? ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವದೇ ನನಗೆ ಸಂತೋಷ.


ನಾನು ವ್ಯಥೆಗೊಳಿಸದ ಶಿಷ್ಟನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದರಿಂದಲೂ ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದರಿಂದಲೂ


ಯೆಹೋವನು ಬಾಬೆಲನ್ನು ಹಾಳುಮಾಡಬೇಕೆಂದು ಉದ್ದೇಶಿಸಿ ಮೇದ್ಯರ ಅರಸರು ಅದನ್ನು ನಾಶಮಾಡುವಂತೆ ಅವರ ಮನಸ್ಸನ್ನು ಪ್ರೇರಿಸಿದ್ದಾನೆ; ಆ ನಾಶನವು ಯೆಹೋವನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತೀಕಾರವೇ; [ಮೇದ್ಯರೇ,] ಬಾಣಗಳನ್ನು ಮಸೆಯಿರಿ, ಸನ್ನದ್ಧರಾಗಿರಿ!


ಅವರು ಒಂದು ವೇಳೆ ಯೆಹೋವನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಯೆಹೋವನು ಈ ಜನರ ಮೇಲೆ ತೀರಿಸಬೇಕೆಂದು ಪ್ರಕಟಿಸಿರುವ ಕೋಪರೋಷಗಳು ಅಪಾರವಾಗಿವೆ ಎಂದು ಅಪ್ಪಣೆಕೊಟ್ಟನು.


ಒಂದು ವೇಳೆ ಯೆಹೂದ ವಂಶದವರು ನಾನು ಅವರಿಗೆ ಮಾಡಬೇಕೆಂದಿರುವ ಕೇಡನ್ನು ಕೇಳಿ ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಹಿಂದಿರುಗಿದರೆ ಅವರ ಪಾಪಾಪರಾಧಗಳನ್ನು ಕ್ಷವಿುಸಿಬಿಡುವೆನು.


ಈಗಲೇ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನ್ನೂ ತಿದ್ದಿಕೊಂಡು ನಿಮ್ಮ ದೇವರಾದ ಯೆಹೋವನ ನುಡಿಗೆ ಕಿವಿಗೊಡಿರಿ; ಹಾಗಾದರೆ ಯೆಹೋವನು ನಿಮ್ಮ ವಿಷಯವಾಗಿ ನುಡಿದಿರುವ ಕೇಡನ್ನು ಮನಮರುಗಿ ಮಾಡದಿರುವನು.


ಅವರು ಒಂದು ವೇಳೆ ಕಿವಿಗೊಟ್ಟು ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಹಾಗಾದರೆ ಅವರ ದುಷ್ಕೃತ್ಯಗಳ ನಿವಿುತ್ತ ನಾನು ಅವರಿಗೆ ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು.


ಆಗ ಅವರು - ಯೆರೆಮೀಯನಿಗೆ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಎಂದಿಗೂ ತಪ್ಪದಷ್ಟೆ. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ ಎಂದುಕೊಂಡರು.


ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಗೆ ಸಮಾನನಾಗಿದ್ದೆನು; ಮರವನ್ನು ಫಲಸಹಿತವಾಗಿ ನಾಶಪಡಿಸೋಣ, ಇವನು ನಿರ್ನಾಮವಾಗುವಂತೆ ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ ಎಂದು ಅವರು ನನಗೆ ವಿರುದ್ಧವಾಗಿ ಕುಯುಕ್ತಿಗಳನ್ನು ಕಲ್ಪಿಸಿದ್ದು ನನಗೆ ತಿಳಿದಿರಲಿಲ್ಲ.


ನಾನು [ದಿವ್ಯಜ್ಞಾನದಿಂದ] ನೋಡಿದೆನು, ಹಾ, ಭೂಲೋಕವು ಹಾಳುಪಾಳಾಗಿತ್ತು; ಆಕಾಶವನ್ನು ನೋಡಿದೆನು, ಅದರಲ್ಲಿ ಬೆಳಕೇ ಇರಲಿಲ್ಲ.


ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ, ತಡಮಾಡದೆ ವಲಸೆಹೋಗಿರಿ; ನಾನು ಬಡಗಲಿಂದ ವಿಪತ್ತನ್ನೂ ಘೋರನಾಶನವನ್ನೂ ಬರಮಾಡುವೆನು.


ಭ್ರಷ್ಟರಾದ ಮಕ್ಕಳೇ, ಹಿಂದಿರುಗಿರಿ, ನಿಮ್ಮ ಭ್ರಷ್ಟತ್ವವನ್ನು ಪರಿಹರಿಸುವೆನು [ಎಂದು ಯೆಹೋವನು ಅನ್ನುತ್ತಾನೆ. ಅದಕ್ಕೆ ಜನರು] - ಇಗೋ, ನಿನ್ನ ಬಳಿಗೆ ಬಂದೆವು. ನೀನು ಯೆಹೋವನು, ನಮ್ಮ ದೇವರು.


ಯೆಹೋವನು ಹೀಗನ್ನುತ್ತಾನೆ - ಗಂಡನು ತ್ಯಜಿಸಿದವಳು ಅವನಿಂದ ಹೊರಟು ಮತ್ತೊಬ್ಬನವಳಾದ ಮೇಲೆ ಅವಳನ್ನು ಆ ಗಂಡನು ತಿರಿಗಿ ಸೇರಿಸಿಕೊಂಡಾನೇ? ಸೇರಿಸಿಕೊಂಡರೆ ಆ ದೇಶವು ಕೇವಲ ಅಪವಿತ್ರವಾಗಿ ಹೋಗುವದಲ್ಲವೆ! ಹೀಗಿರಲು ಬಹುಮಂದಿ ವಿುಂಡರೊಡನೆ ಸೂಳೆತನ ಮಾಡಿದ ನೀನು ನನ್ನ ಬಳಿಗೆ ತಿರಿಗಿ ಬರುತ್ತೀಯಾ?


ನಮ್ಮ ಪೂರ್ವಿಕರು ನಮಗೆ ಸಿಕ್ಕಿರುವ ಈ ಗ್ರಂಥವಾಕ್ಯಗಳಿಗೆ ಕಿವಿಗೊಡದೆಯೂ ಅವುಗಳನ್ನು ಕೈಕೊಳ್ಳದೆಯೂ ಹೋದದರಿಂದ ನಾವು ಯೆಹೋವನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದದರಿಂದ ನೀವು ನನಗೋಸ್ಕರವೂ ಜನರಿಗೋಸ್ಕರವೂ ಎಲ್ಲಾ ಯೆಹೂದ್ಯರಿಗೋಸ್ಕರವೂ ಯೆಹೋವನ ಬಳಿಗೆ ಹೋಗಿ ಈ ಗ್ರಂಥವಾಕ್ಯಗಳ ವಿಷಯವಾಗಿ ವಿಚಾರಿಸಿರಿ ಎಂದು ಆಜ್ಞಾಪಿಸಿದನು.


ನೀನು ಅಲ್ಲಿಗೆ ಹೋಗಿ ಬಾ; ನಾನು ನಿನ್ನ ಕೈಯಲ್ಲಿ ಇಸ್ರಾಯೇಲ್ಯರ ಅರಸನಿಗೆ ಒಂದು ಪತ್ರವನ್ನು ಕೊಡುತ್ತೇನೆ ಅಂದನು. ನಾಮಾನನು ಹತ್ತು ತಲಾಂತು ಬೆಳ್ಳಿ, ಆರು ಸಾವಿರ ತೊಲೆ ಬಂಗಾರ, ಹತ್ತು ದುಸ್ತು ಬಟ್ಟೆಗಳು ಇವುಗಳನ್ನು ತೆಗೆದುಕೊಂಡು


ನಾವು ಇಳಿದು ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ತಾರುಮಾರುಮಾಡೋಣ ಬನ್ನಿ ಅಂದನು.


ಸಜ್ಜನರು ನಾಶವಾಗುತ್ತಾರೆ, ಯಾರೂ ಮನಸ್ಸಿಗೆ ತಾರರು; ಸದ್ಭಕ್ತರು ಗತಿಸುತ್ತಾರೆ, ಆಹಾ, ಶಿಷ್ಟರು ಕೇಡಿನಿಂದ ಪಾರಾಗಿದ್ದಾರೆ ಎಂದು ಯಾರೂ ಯೋಚಿಸರು.


ಯೆಹೋವನು ಹೀಗನ್ನುತ್ತಾನೆ - ಇಸ್ರಾಯೇಲೇ, ನೀನು ಹಿಂದಿರುಗುವಿಯಾದರೆ ನನ್ನ ಬಳಿಗೇ ಬರುವಿ; ನನ್ನ ಕಣ್ಣೆದುರಿನಿಂದ ನಿನ್ನ ಅಸಹ್ಯವಸ್ತುಗಳನ್ನು ತೆಗೆದುಬಿಟ್ಟರೆ ನೀನು ಇನ್ನು ದಿಕ್ಕಾಪಾಲಾಗಿರುವದಿಲ್ಲ;


ಆದಕಾರಣ ಯೆಹೋವನೆಂಬ ನಾನು ಹೀಗನ್ನುತ್ತೇನೆ - ಇಗೋ, ಅವರು ತಪ್ಪಿಸಿಕೊಳ್ಳಲಾರದ ಕೇಡನ್ನು ಅವರ ಮೇಲೆ ಬರಮಾಡುವೆನು; ನನಗೆ ಮೊರೆಯಿಟ್ಟರೂ ಕೇಳೆನು.


ಸಕಲ ಯೆಹೂದ್ಯರಿಗೂ ಸಮಸ್ತ ಯೆರೂಸಲೇವಿುನವರಿಗೂ ಸಾರಿದನು -


ಜನರಿಗೂ ಪಶುಗಳಿಗೂ ಗೋಣಿತಟ್ಟು ಹೊದಿಕೆಯಾಗಲಿ; ಎಲ್ಲರು ದೇವರಿಗೆ ಬಲವಾಗಿ ಮೊರೆಯಿಡಲಿ; ಒಬ್ಬೊಬ್ಬನು ತನ್ನ ತನ್ನ ದುರ್ಮಾರ್ಗವನ್ನೂ ತಾನು ನಡಿಸುತ್ತಿದ್ದ ಹಿಂಸೆಯನ್ನೂ ತೊರೆದುಬಿಡಲಿ.


ನೋಡು, ಯೆಹೋವನು ನಿನ್ನ ವಿಷಯದಲ್ಲಿ ಕೇಡುನುಡಿದು ನಿನ್ನ ಎಲ್ಲಾ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನು ಕಳುಹಿಸಿದ್ದಾನೆ ಎಂದು ಹೇಳಿದನು.


ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?


ಯೆಹೂದದ ಅರಸರೇ, ಯೆರೂಸಲೇವಿುನ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ! ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುವೆನು; ಅದರ ಸುದ್ದಿಯನ್ನು ಕೇಳುವವರ ಎರಡು ಕಿವಿಗಳೂ ಮೊರ್ರೆನ್ನುವವು.


ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಆಹಾ, ಈ ಪಟ್ಟಣದವರೂ ಇದರ ಸುತ್ತಣ ಎಲ್ಲಾ ಊರುಗಳವರೂ ನನ್ನ ಮಾತುಗಳನ್ನು ಕೇಳಲೊಲ್ಲದೆ ತಮ್ಮ ಮನಸ್ಸನ್ನು ಕಠಿಣಮಾಡಿಕೊಂಡ ಕಾರಣ ನಾನು ಈ ಪಟ್ಟಣಕ್ಕೆ ಕೊಟ್ಟ ಶಾಪದ ಕೇಡನ್ನೆಲ್ಲಾ ಇವರಿಗೆ ಬರಮಾಡುವೆನು ಎಂದು ಸಮಸ್ತ ಜನರಿಗೆ ಸಾರಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು