Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 18:13 - ಕನ್ನಡ ಸತ್ಯವೇದವು J.V. (BSI)

13 ಹೀಗಿರಲು ಯೆಹೋವನು ಹೀಗನ್ನುತ್ತಾನೆ - ಜನಾಂಗಗಳಲ್ಲಿ ವಿಚಾರಿಸಿರಿ, ಇಂಥಾ ಸುದ್ದಿಯನ್ನು ಯಾರು ಕೇಳಿದ್ದಾರೆ? ಇಸ್ರಾಯೇಲೆಂಬ ಯುವತಿಯು ಕೇವಲ ಅಸಹ್ಯ ಕಾರ್ಯವನ್ನು ಮಾಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹೀಗಿರಲು ಯೆಹೋವನು ಹೀಗೆನ್ನುತ್ತಾನೆ, “ಜನಾಂಗಗಳಲ್ಲಿ ವಿಚಾರಿಸಿರಿ, ಇಂಥಾ ಸುದ್ದಿಯನ್ನು ಯಾರು ಕೇಳಿದ್ದಾರೆ? ಇಸ್ರಾಯೇಲೆಂಬ ಯುವತಿಯು ಕೇವಲ ಅಸಹ್ಯಕಾರ್ಯವನ್ನು ಮಾಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸರ್ವೇಶ್ವರ ಇಂತೆಂದರು : “ಇಂಥ ಸುದ್ದಿಯನ್ನು ಯಾರು ಕೇಳಿದ್ದಾರೆಂದು ಅನ್ಯಜನಾಂಗಗಳಲ್ಲೆ ವಿಚಾರಿಸಿರಿ. ಇಸ್ರಯೇಲೆಂಬ ಯುವತಿ ಕೇವಲ ಅಸಹ್ಯಕಾರ್ಯವನ್ನೆ ಎಸಗಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನು ಹೇಳುವದನ್ನು ಆಲಿಸಿರಿ: “ಬೇರೆ ಜನಾಂಗದ ಜನರಿಗೆ ಈ ಪ್ರಶ್ನೆಯನ್ನು ಕೇಳಿರಿ, ‘ಇಸ್ರೇಲ್ ಮಾಡಿದಂಥ ದುಷ್ಕೃತ್ಯಗಳನ್ನು ಬೇರೆ ಯಾರಾದರೂ ಮಾಡಿದ್ದನ್ನು ನೀವು ಎಂದಾದರೂ ಕೇಳಿದ್ದೀರಾ?’ ಇಸ್ರೇಲ್ ದೇಶವು ದೇವರ ವಧುವಿನಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದ್ದರಿಂದ ಯೆಹೋವ ದೇವರು ಹೇಳುವುದೇನೆಂದರೆ: “ಇತರ ಜನಾಂಗಗಳಲ್ಲಿ ವಿಚಾರಿಸಿರಿ. ಇಂಥವುಗಳನ್ನು ಯಾರು ಕೇಳಿದ್ದಾರೆ? ಇಸ್ರಾಯೇಲೆಂಬ ಕನ್ಯೆಯು ಮಹಾ ಭಯಂಕರವಾದದ್ದನ್ನು ಮಾಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 18:13
14 ತಿಳಿವುಗಳ ಹೋಲಿಕೆ  

ಭೀಕರವೂ ಅಸಹ್ಯವೂ ಆದ ಸಂಗತಿಯು ದೇಶದಲ್ಲಿ ನಡೆದುಬಂದಿದೆ;


ನಾನು ಇಸ್ರಾಯೇಲ್ ಮನೆತನದಲ್ಲಿ ಅಸಹ್ಯವನ್ನು ನೋಡಿದ್ದೇನೆ; ಎಫ್ರಾಯೀವಿುನೊಳಗೆ ಸೂಳೆತನವು ನಡೆಯುತ್ತದೆ, ಇಸ್ರಾಯೇಲು ಹೊಲೆಯಾಗಿದೆ.


ಯೆರೂಸಲೇವಿುನ ಪ್ರವಾದಿಗಳಲ್ಲಿಯೂ ನಾನು ಅಸಹ್ಯವನ್ನು ನೋಡಿದ್ದೇನೆ; ಅವರು ವ್ಯಭಿಚಾರಮಾಡಿ ಮೋಸದಲ್ಲಿ ನಡೆದು ದುಷ್ಟರಲ್ಲಿ ಯಾವನೂ ತನ್ನ ದುಷ್ಟತನವನ್ನು ಬಿಡದಂತೆ ಅವರ ಕೈಗಳನ್ನು ಬಲಪಡಿಸುತ್ತಿದ್ದಾರೆ; ಅವರೆಲ್ಲರು ಸೊದೋವಿುನಂತೆ, ಆ ಪುರನಿವಾಸಿಗಳು ಗೊಮೋರದ ಹಾಗೆ ನನಗೆ ಕಾಣುತ್ತಾರೆ.


ಇಂಥಾ ಸುದ್ದಿಯನ್ನು ಯಾರು ಕೇಳಿದ್ದಾರೆ? ಇಂಥಾ ಸಂಗತಿಯನ್ನು ಕಂಡವರಾರು? ಒಂದು ದಿನದಲ್ಲಿ ರಾಷ್ಟ್ರವು ಹುಟ್ಟೀತೇ? ಕ್ಷಣಮಾತ್ರದಲ್ಲಿ ಜನಾಂಗವನ್ನು ಹೆರಲಿಕ್ಕಾದೀತೇ? ಹೌದು, ಚೀಯೋನೆಂಬಾಕೆಯು ಬೇನೆ ತಿಂದು ತನಗಾಗಿ ಮಕ್ಕಳನ್ನು ಹಡೆದಿದ್ದಾಳೆ.


ಇಸ್ರಾಯೇಲೆಂಬ ಯುವತಿಯೇ, ನಾನು ನಿನ್ನ ಹಾಳುಪ್ರದೇಶಗಳನ್ನು ಪುನಃ ಕಟ್ಟುವೆನು; ಅವು ಕಟ್ಟಡಗಳಾಗುವವು. ನೀನು ಮತ್ತೆ ದಮ್ಮಡಿಗಳಿಂದ ವೈಭವಗೊಂಡು ವಿನೋದಪಡುವವರ ನಾಟ್ಯಗಳಲ್ಲಿ ಸೇರಿಕೊಳ್ಳುವಿ.


ನೀನು ಈ ಮಾತನ್ನು ಅವರಿಗೆ ಹೇಳು - ನನ್ನ ಕಣ್ಣೀರು ರಾತ್ರೀಹಗಲು ನಿರಂತರ ಸುರಿಯಲಿ; ಏಕಂದರೆ ನನ್ನ ಜನವೆಂಬ ಯುವತಿಗೆ ದೊಡ್ಡ ಗಾಯವಾಯಿತು, ಹೌದು ಗಡುಸಾದ ಪೆಟ್ಟುಬಿತ್ತು.


ನಿಮ್ಮಲ್ಲಿ ಜಾರತ್ವವುಂಟೆಂದು ಜನರು ಸಾಧಾರಣವಾಗಿ ಹೇಳುತ್ತಾರೆ. ಒಬ್ಬನು ತನ್ನ ಅಪ್ಪನ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ; ಅಂಥ ಜಾರತ್ವವು ಅನ್ಯಜನರಲ್ಲಿಯೂ ಇಲ್ಲ.


ಕರ್ತನು ನನ್ನ ಶೂರರನ್ನೆಲ್ಲಾ ನನ್ನ ಕಣ್ಣೆದುರಿಗೆ ತೃಣೀಕರಿಸಿದ್ದಾನೆ; ನನ್ನ ಯುವಕರನ್ನು ಭಂಗಪಡಿಸಬೇಕೆಂದು ನನ್ನ ಕೇಡಿಗಾಗಿಯೇ ಮಹೋತ್ಸವವನ್ನು ಏರ್ಪಡಿಸಿದ್ದಾನೆ; ಕರ್ತನು ಯೆಹೂದವೆಂಬ ಯುವತಿಯನ್ನು ತೊಟ್ಟಿಯಲ್ಲಿನ ದ್ರಾಕ್ಷೆಯ ಹಾಗೆ ತುಳಿದಿದ್ದಾನೆ.


ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.


ದೇವರು ಇವರ ಪಾಳೆಯಕ್ಕೆ ಬಂದಿದ್ದಾನಲ್ಲಾ ಎಂದು ಫಿಲಿಷ್ಟಿಯರು ಬಹಳವಾಗಿ ಭಯಪಟ್ಟು - ಅಯ್ಯೋ, ಮುಂಚೆ ಹೀಗಿದ್ದಿಲ್ಲ.


ಲೆಬನೋನಿನ ಹಿಮವು ಅರಣ್ಯದ ಶಿಖರದಿಂದ ತಪ್ಪುವದೇ? ದೂರದಿಂದ ಇಳಿದು ಹರಿಯುವ ತೊರೆತದ ನೀರು ಬತ್ತುವದೇ?


ಇಸ್ರಾಯೇಲ್ ವಂಶದವರೇ, ನಾನು ನಿಮ್ಮ ವಿಷಯದಲ್ಲಿ ಶೋಕಗೀತವಾಗಿ ಎತ್ತುವ ಈ ಮಾತನ್ನು ಕೇಳಿರಿ -


ಇಸ್ರಾಯೇಲೆಂಬ ಯುವತಿಯು ಬಿದ್ದಿದ್ದಾಳೆ, ಮತ್ತೆ ಏಳಳು; ದಿಕ್ಕಿಲ್ಲದೆ ತನ್ನ ನೆಲದ ಮೇಲೆ ಒರಗಿದ್ದಾಳೆ; ಅವಳನ್ನೆತ್ತಲು ಯಾರೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು