ಯೆರೆಮೀಯ 18:15 - ಕನ್ನಡ ಸತ್ಯವೇದವು J.V. (BSI)15 ನನ್ನ ಜನರೋ ನನ್ನನ್ನು ಮರೆತು ವ್ಯರ್ಥವಿಗ್ರಹಗಳಿಗೆ ಧೂಪಹಾಕಿದ್ದಾರಲ್ಲಾ; ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರು ಮುಗ್ಗರಿಸುವಂತೆಯೂ ಸರಿಯಲ್ಲದ ಸೀಳುದಾರಿಗಳಲ್ಲಿ ಅಲೆಯುವಂತೆಯೂ ಮಾಡಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನನ್ನ ಜನರೋ ನನ್ನನ್ನು ಮರೆತು ವ್ಯರ್ಥ ವಿಗ್ರಹಗಳಿಗೆ ಧೂಪಹಾಕಿದ್ದಾರಲ್ಲಾ; ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರು ಮುಗ್ಗರಿಸುವಂತೆಯೂ, ಸರಿಯಲ್ಲದ ಸೀಳು ದಾರಿಗಳಲ್ಲಿ ಅಲೆಯುವಂತೆಯೂ ಮಾಡಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನನ್ನ ಜನರಾದರೋ ನನ್ನನ್ನು ಮರೆತು ವ್ಯರ್ಥವಿಗ್ರಹಗಳಿಗೆ ಧೂಪಾರತಿ ಎತ್ತಿದ್ದುಂಟು. ಸನಾತನ ಸನ್ಮಾರ್ಗಗಳಲ್ಲಿ ಮುಗ್ಗರಿಸಿ ಸರಿಯಲ್ಲದ ಸೀಳುದಾರಿಯಲ್ಲಿ ಅಲೆದದ್ದುಂಟು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆದರೆ ನನ್ನ ಜನರು ನನ್ನನ್ನು ಮರೆತಿದ್ದಾರೆ. ಅವರು ನಿಷ್ಪ್ರಯೋಜಕವಾದ ವಿಗ್ರಹಗಳಿಗೆ ನೈವೇದ್ಯ ಮಾಡುತ್ತಾರೆ. ನನ್ನ ಜನರು ತಾವು ಮಾಡುವ ಕೆಲಸಗಳಲ್ಲಿ ಮುಗ್ಗರಿಸುತ್ತಾರೆ. ಅವರು ತಮ್ಮ ಪೂರ್ವಿಕರ ಹಳೆಯ ಹಾದಿಯಲ್ಲಿಯೇ ಮುಗ್ಗರಿಸುತ್ತಾರೆ. ನನ್ನ ಜನರು ಒಳ್ಳೆಯ ರಾಜಬೀದಿಯ ಮೇಲೆ ನನ್ನನ್ನು ಹಿಂಬಾಲಿಸುವದನ್ನು ತೊರೆದು ಹಾಳಾದ ಹಾದಿಯನ್ನು ಹಿಡಿಯುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನನ್ನ ಜನರಾದರೋ ನನ್ನನ್ನು ಮರೆತುಬಿಟ್ಟಿದ್ದಾರೆ. ವ್ಯರ್ಥವಾದ ವಿಗ್ರಹಗಳಿಗೆ ಧೂಪವನ್ನರ್ಪಿಸಿದ್ದಾರೆ. ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರನ್ನು ಎಡವುವಂತೆ ಮಾಡಿ, ಮಾರ್ಗವಲ್ಲದ ಕಾಲು ದಾರಿಗಳಲ್ಲಿ ಅವರನ್ನು ನಡೆಯುವಂತೆ ಮಾಡಿವೆ. ಅಧ್ಯಾಯವನ್ನು ನೋಡಿ |
ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುವೆವು ಎಂದು ನಾವು ಮಾಡಿಕೊಂಡ ಹರಕೆಗಳನ್ನು ಖಂಡಿತವಾಗಿ ತೀರಿಸುವೆವು ಎಂಬದಾಗಿ ನೀವೂ ನಿಮ್ಮ ಹೆಂಡಿರೂ ಬಾಯಿಂದ ಪ್ರತಿಜ್ಞೆಮಾಡಿ ಕೈಯಿಂದ ನೆರವೇರಿಸಿದ್ದೀರಲ್ಲಾ; ನಿಮ್ಮ ಹರಕೆಗಳನ್ನು ತೀರಿಸೇ ತೀರಿಸಿರಿ, ನೆರವೇರಿಸೇ ನೆರವೇರಿಸಿರಿ!