Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 18:20 - ಕನ್ನಡ ಸತ್ಯವೇದವು J.V. (BSI)

20 ಮೇಲಿಗೆ ಮುಯ್ಯಾಗಿ ಕೇಡು ಆಗ ತಕ್ಕದ್ದೋ? ನನ್ನ ಪ್ರಾಣವನ್ನು ಹಿಡಿಯಬೇಕೆಂದು ಗುಂಡಿಯನ್ನು ತೋಡಿದ್ದಾರಲ್ಲಾ. ಅವರ ಮೇಲಣ ನಿನ್ನ ರೋಷವನ್ನು ತಪ್ಪಿಸಲು ನಾನು ನಿನ್ನ ಮುಂದೆ ನಿಂತುಕೊಂಡು ಅವರ ಹಿತಕ್ಕಾಗಿ ವಿಜ್ಞಾಪಿಸಿಕೊಂಡದ್ದನ್ನು ಚಿತ್ತವಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಒಳ್ಳೆಯದನ್ನು ಮಾಡಿದ್ದಕ್ಕೆ ಕೇಡಿನ ಪ್ರತಿಫಲ ಅಗತ್ಯವೇ? ನನ್ನ ಪ್ರಾಣವನ್ನು ಹಿಡಿಯಬೇಕೆಂದು ಗುಂಡಿಯನ್ನು ತೋಡಿದ್ದಾರಲ್ಲಾ. ಅವರ ಮೇಲಣ ನಿನ್ನ ರೋಷವನ್ನು ತಪ್ಪಿಸಲು ನಾನು ನಿನ್ನ ಮುಂದೆ ನಿಂತುಕೊಂಡು ಅವರ ಹಿತಕ್ಕಾಗಿ ವಿಜ್ಞಾಪಿಸಿಕೊಂಡದ್ದನ್ನು ನೆನಪಿಗೆ ತಂದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಮಾಡಿದ ಮೇಲಿಗೆ ಕೇಡಿನ ಪ್ರತಿಫಲವೆ? ನನ್ನ ಪ್ರಾಣ ಹಿಡಿಯಲು ಗುಂಡಿಯನ್ನು ತೋಡಿದ್ದಾರೆ. ಅವರ ಮೇಲೆ ನಿಮಗಿದ್ದ ಕೋಪಾವೇಶವನ್ನು ಶಮನಗೊಳಿಸಲು ನಿಮ್ಮ ಮುಂದೆ ನಿಂತು ನಾನು ವಿನಂತಿಸಿದ್ದನ್ನು ನೆನಪಿಗೆ ತಂದುಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಾನು ಯೆಹೂದದ ಜನರಿಗೆ ಒಳ್ಳೆಯದನ್ನು ಮಾಡಿದೆನು. ಆದರೆ ಅವರೀಗ ನನಗೆ ಕೆಟ್ಟದ್ದನ್ನು ಮಾಡುತ್ತಿದ್ದಾರೆ. ಈಗ ಅವರು ನನ್ನನ್ನು ಕೊಲ್ಲುವುದಕ್ಕಾಗಿ ಒಂದು ಗುಂಡಿಯನ್ನು ತೋಡಿದ್ದಾರೆ. ಯೆಹೋವನೇ, ನಾನು ಮಾಡಿದ್ದು ನಿನ್ನ ಜ್ಞಾಪಕದಲ್ಲಿದೆಯೇ? ನಾನು ನಿನ್ನ ಎದುರಿಗೆ ನಿಂತುಕೊಂಡು ಈ ಜನರಿಗೆ ಒಳ್ಳೆಯದನ್ನು ಮಾಡೆಂದೂ ಅವರ ಮೇಲೆ ಕೋಪಗೊಳ್ಳಬಾರದೆಂದೂ ನಿನ್ನಲ್ಲಿ ಕೇಳಿಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಒಳ್ಳೆಯದಕ್ಕೆ ಬದಲಾಗಿ ಕೆಟ್ಟದ್ದನ್ನು ಸಲ್ಲಿಸಬಹುದೇ? ಏಕೆಂದರೆ, ಅವರು ನನ್ನ ಪ್ರಾಣಕ್ಕೆ ಕುಳಿಯನ್ನು ಅಗೆದಿದ್ದಾರೆ. ಅವರಿಗೋಸ್ಕರ ಒಳ್ಳೆಯದನ್ನು ಮಾತಾಡುವುದಕ್ಕೂ, ನಿನ್ನ ಉಗ್ರವನ್ನು ಅವರಿಂದ ತಿರುಗಿಸುವುದಕ್ಕೂ ನಾನು ನಿನ್ನ ಮುಂದೆ ನಿಂತದ್ದನ್ನು ಜ್ಞಾಪಕಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 18:20
31 ತಿಳಿವುಗಳ ಹೋಲಿಕೆ  

ನನ್ನ ಕಾಲಿಗೆ ಬಲೆಯನ್ನು ಹಾಸಿದ್ದಾರೆ; ನನ್ನ ಪ್ರಾಣವು ಕುಂದಿಹೋಯಿತು. ನನ್ನ ದಾರಿಯಲ್ಲಿ ಕುಣಿಯನ್ನು ಅಗೆದರು; ತಾವೇ ಅದರಲ್ಲಿ ಬಿದ್ದುಹೋದರು. ಸೆಲಾ.


ಅವರು ನಿಷ್ಕಾರಣವಾಗಿ ನನಗೆ ಬಲೆಯೊಡ್ಡಿದ್ದಾರೆ; ಅಕಾರಣವಾಗಿ ನನ್ನ ಪ್ರಾಣವನ್ನು ತೆಗೆಯಬೇಕೆಂದು ಗುಂಡಿಯನ್ನು ತೋಡಿದ್ದಾರೆ.


ಆದದರಿಂದ ಆತನು ಅವರನ್ನು ಸಂಹರಿಸುವೆನೆನ್ನಲು ಆತನು ಆರಿಸಿಕೊಂಡ ಮೋಶೆಯು ಮಧ್ಯಸ್ಥನಾಗಿ ಅವರನ್ನು ಸಂಹರಿಸದಂತೆ ಆತನ ಕೋಪವನ್ನು ಶಾಂತಪಡಿಸಿದನು.


ಅವರು ಉಪಕಾರಕ್ಕೆ ಅಪಕಾರವನ್ನೇ ಮಾಡುತ್ತಾರೆ; ನಾನು ದಿಕ್ಕಿಲ್ಲದವನಾದೆನು.


ಯುದ್ಧದಲ್ಲಿ ಖಡ್ಗವು ಅವರ ಯುವಕರನ್ನು ವಧಿಸಲಿ. ಸುಲಿಗೆಯವರ ಗುಂಪನ್ನು ಫಕ್ಕನೆ ಅವರ ಮೇಲೆ ಬೀಳಮಾಡು, ಅವರ ಮನೆಗಳೊಳಗಿಂದ ಅರಚಾಟವು ಕೇಳಿಸಲಿ; ಅವರು ನನ್ನನ್ನು ಹಿಡಿಯಲಿಕ್ಕೆ ಗುಂಡಿಯನ್ನು ತೋಡಿ ನನ್ನ ಕಾಲುಗಳಿಗೆ ಪಾಶಗಳನ್ನು ಗುಪ್ತವಾಗಿ ಒಡ್ಡಿದ್ದಾರೆ.


ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುವನು; ಗೋಡೆಯೊಡೆಯುವವನನ್ನು ಹಾವು ಕಚ್ಚುವದು.


ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುವನು; ಹೊರಳಿಸುವವನ ಮೇಲೆಯೇ ಕಲ್ಲು ಹೊರಳುವದು.


ದುಷ್ಟರು ನನ್ನನ್ನು ಸಂಹರಿಸಬೇಕೆಂದು ಹೊಂಚಿ ನೋಡುತ್ತಾರೆ; ನಾನು ನಿನ್ನ ಕಟ್ಟಳೆಗಳನ್ನೇ ಲಕ್ಷಿಸಿಕೊಂಡಿರುವೆನು.


ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.


ಯೇಸು ಅವರನ್ನು - ತಂದೆಯ ಕಡೆಯಿಂದ ಅನೇಕ ಒಳ್ಳೇ ಕ್ರಿಯೆಗಳನ್ನು ನಿಮಗೆ ತೋರಿಸಿದೆನು; ಅವುಗಳಲ್ಲಿ ಯಾವ ಕ್ರಿಯೆಯ ದೆಸೆಯಿಂದ ನನ್ನ ಮೇಲೆ ಕಲ್ಲೆಸೆಯುತ್ತೀರಿ ಎಂದು ಕೇಳಿದ್ದಕ್ಕೆ


ಯೆಹೋವನೇ, ನಮ್ಮ ದುಷ್ಟತನವನ್ನೂ ನಮ್ಮ ಪಿತೃಗಳ ದುರಾಚಾರವನ್ನೂ ತಿಳಿದುಕೊಂಡಿದ್ದೇವೆ; ನಿನಗೇ ಪಾಪಮಾಡಿದ್ದೇವಲ್ಲ.


ಆದಕಾರಣ ಈ ಜನರಿಗೋಸ್ಕರ ಬೇಡಿಕೊಳ್ಳಬೇಡ, ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಲೂ ಬೇಡ; ಅವರು ತಮ್ಮ ಕೇಡಿನ ನಿವಿುತ್ತ ನನಗೆ ಮೊರೆಯಿಡುವಾಗ ನಾನು ಕೇಳೆನು.


ನೀನಂತು ಈ ಜನರಿಗೋಸ್ಕರ ಬೇಡಿಕೊಳ್ಳಬೇಡ, ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಬೇಡ, ನನಗೆ ವಿಜ್ಞಾಪಿಸಲೂಬೇಡ, ನಾನು ಕೇಳಲೊಲ್ಲೆ.


ಉಪಕಾರಕ್ಕೆ ಅಪಕಾರಮಾಡುವವನ ಮನೆಗೆ ಕೇಡುತಪ್ಪದು.


ಉಪಕಾರಕ್ಕೆ ಪ್ರತಿಯಾಗಿ ಅಪಕಾರ ಸಲ್ಲಿಸುವವರು ಒಳ್ಳೆಯದನ್ನು ಅನುಸರಿಸುವ ನನ್ನನ್ನು ಎದುರಿಸುತ್ತಾರೆ.


ಅವನು ಅಗೆದು ಅಗೆದು ಗುಂಡಿಯನ್ನು ತೋಡಿ ಅದರೊಳಗೆ ತಾನೇ ಬಿದ್ದುಹೋದನಲ್ಲಾ.


ನೀವು ಚೀಟಿಹಾಕಿ ಅನಾಥನನ್ನು ತೆಗೆದುಕೊಳ್ಳುವವರು; ಸ್ನೇಹಿತನನ್ನೂ ವಿಕ್ರಯಿಸುವವರು.


ತರುವಾಯ ಅವನು ತನ್ನ ತಂದೆಯ ಮುಂದೆ ದಾವೀದನನ್ನು ಹೊಗಳಿ - ಒಡೆಯನು ತನ್ನ ಸೇವಕನಾದ ದಾವೀದನಿಗೆ ಅನ್ಯಾಯಮಾಡದಿರಲಿ; ಅವನು ನಿನಗೆ ದ್ರೋಹಮಾಡಲಿಲ್ಲ; ಅವನು ಮಾಡಿದ್ದೆಲ್ಲವೂ ನಿನ್ನ ಹಿತಕ್ಕಾಗಿಯೇ.


ನನ್ನ ಜನರಲ್ಲಿ ದುಷ್ಟರು ಕಂಡು ಬಂದಿದ್ದಾರೆ; ಬೇಡರು ಹೊಂಚುವ ಹಾಗೆ ಹೊಂಚುಹಾಕುತ್ತಾರೆ; ಬೋನೊಡ್ಡಿ ಮನುಷ್ಯರನ್ನು ಹಿಡಿಯುತ್ತಾರೆ.


ಯೆಹೋವನು ನನಗೆ ಹೀಗೆ ಹೇಳಿದನು - ಮೋಶೆಯೂ ಸಮುವೇಲನೂ ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗದು; ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿಹೋಗಲಿ! ಅವರು - ನಾವು ಎಲ್ಲಿಗೆ ಹೋಗೋಣ ಎಂದು ಕೇಳಲು


ಯೆಹೋವನೇ, ನನ್ನ ಕಡೆಗೆ ಕಿವಿಗೊಡು, ನನ್ನೊಡನೆ ವ್ಯಾಜ್ಯವಾಡುವವರ ಮಾತನ್ನು ಕೇಳು.


ಈ ಪಟ್ಟಣವು ಏಕೆ ಹಾಳಾಗಬೇಕು? ಅವರು ಪ್ರವಾದಿಗಳಾಗಿದ್ದು ಯೆಹೋವನ ವಾಕ್ಯಕ್ಕೆ ನೆಲೆಯಾಗಿದ್ದರೆ ಈಗ ಸೇನಾಧೀಶ್ವರನಾದ ಯೆಹೋವನಿಗೆ ವಿಜ್ಞಾಪನೆ ಮಾಡಿ ಯೆಹೋವನ ಆಲಯದಲ್ಲಿಯೂ ಯೆಹೂದದ ಅರಸನ ಮನೆಯಲ್ಲಿಯೂ ಯೆರೂಸಲೇವಿುನಲ್ಲಿಯೂ ಉಳಿದಿರುವ ಉಪಕರಣಗಳು ಬಾಬೆಲಿಗೆ ಹೋಗದಂತೆ ಬೇಡಿಕೊಳ್ಳಲಿ.


ಯೆಹೋವನೇ, ನನಗಾದ ಅನ್ಯಾಯವನ್ನು ನೋಡಿದ್ದೀ, ನನಗೆ ನ್ಯಾಯತೀರಿಸು.


ನನ್ನ ಹಿಂಸಕರಿಗೆ ಅವಮಾನವಾಗಲಿ, ನನಗಾಗದಿರಲಿ; ಭಯಭ್ರಾಂತಿಯು ಅವರನ್ನು ಹಿಡಿಯಲಿ, ನನ್ನನ್ನು ಬೇಡ; ಅವರಿಗೆ ಕೇಡುಗಾಲವನ್ನು ಬರಮಾಡಿ ವಿಪರೀತಭಂಗದಿಂದ ಅವರನ್ನು ನಾಶಪಡಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು