ಯೆರೆಮೀಯ 18:23 - ಕನ್ನಡ ಸತ್ಯವೇದವು J.V. (BSI)23 ಯೆಹೋವನೇ, ನನ್ನನ್ನು ಕೊಲ್ಲಬೇಕೆಂದು ಅವರು ಮಾಡಿಕೊಂಡಿರುವ ಆಲೋಚನೆಯನ್ನೆಲ್ಲಾ ನೀನೇ ಬಲ್ಲೆ; ಅವರ ಅಪರಾಧವನ್ನು ಕ್ಷವಿುಸಬೇಡ, ಅವರ ಪಾಪವನ್ನು ಅಳಿಸದಿರು, ಅದು ನಿನ್ನ ಕಣ್ಣೆದುರಿಗಿರಲಿ; ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪವನ್ನು ವ್ಯಕ್ತಪಡಿಸುವಾಗ ಅವರಿಗೆ ತಕ್ಕದ್ದನ್ನು ಮಾಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಯೆಹೋವನೇ, ನನ್ನನ್ನು ಕೊಲ್ಲಬೇಕೆಂದು ಅವರು ಮಾಡಿಕೊಂಡಿರುವ ಆಲೋಚನೆಯನ್ನೆಲ್ಲಾ ನೀನೇ ಬಲ್ಲೆ. ಅವರ ಅಪರಾಧವನ್ನು ಕ್ಷಮಿಸಬೇಡ, ಅವರ ಪಾಪವನ್ನು ಅಳಿಸದಿರು, ಅದು ನಿನ್ನ ಕಣ್ಣೆದುರಿಗಿರಲಿ. ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪವನ್ನು ವ್ಯಕ್ತಪಡಿಸುವಾಗ ಅವರಿಗೆ ತಕ್ಕದ್ದನ್ನು ಮಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಸರ್ವೇಶ್ವರಾ, ನನ್ನನ್ನು ಕೊಲ್ಲಲು ಅವರು ಮಾಡಿಕೊಂಡಿರುವ ಸಂಚು ನಿಮಗೆ ತಿಳಿದಿದೆ. ಅವರ ಅಪರಾಧವನ್ನು ಕ್ಷಮಿಸಬೇಡಿ, ಅವರ ಪಾಪವನ್ನು ಅಳಿಸಬೇಡಿ, ಅದು ನಿಮ್ಮ ಕಣ್ಣೆದುರಿಗೇ ಇರಲಿ. ಅವರು ನಿಮ್ಮ ಮುಂದೆ ಎಡವಿಬೀಳಲಿ. ನಿಮ್ಮ ಕೋಪ ವ್ಯಕ್ತವಾಗುವಾಗ ಅವರಿಗೆ ತಕ್ಕುದನ್ನು ಮಾಡಿ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಯೆಹೋವನೇ, ನನ್ನನ್ನು ಕೊಲ್ಲಲು ಅವರು ಹಾಕಿದ ಯೋಜನೆಗಳನ್ನೆಲ್ಲ ನೀನು ಬಲ್ಲೆ. ಅವರ ಅಪರಾಧಗಳನ್ನು ಮನ್ನಿಸಬೇಡ. ಅವರ ಪಾಪಗಳನ್ನು ಅಳಿಸಬೇಡ. ನನ್ನ ವೈರಿಗಳನ್ನು ನಾಶಪಡಿಸು, ನೀನು ಕೋಪದಲ್ಲಿದ್ದಾಗ ಆ ಜನರನ್ನು ಶಿಕ್ಷಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆದರೂ ಯೆಹೋವ ದೇವರೇ, ಅವರು ನನ್ನನ್ನು ಸಾಯಿಸುವುದಕ್ಕೆ ನನಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೆಲ್ಲಾ ನೀವು ಬಲ್ಲಿರಿ. ಅವರ ಅಕ್ರಮವನ್ನು ಮನ್ನಿಸಬೇಡಿ. ಅವರ ಪಾಪಗಳನ್ನು ನಿನ್ನ ಸನ್ನಿಧಿಯೊಳಗಿಂದ ಅಳಿಸಿಬಿಡಬೇಡಿರಿ. ಅವರು ನಿಮ್ಮ ಮುಂದೆ ಎಡವಿಬೀಳಲಿ. ನಿಮ್ಮ ಕೋಪದ ಕಾಲದಲ್ಲಿ ಅವರಿಗೆ ತಕ್ಕದ್ದನ್ನು ಮಾಡಿರಿ. ಅಧ್ಯಾಯವನ್ನು ನೋಡಿ |