Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 19:12 - ಕನ್ನಡ ಸತ್ಯವೇದವು J.V. (BSI)

12 ನಾನು ಈ ಸ್ಥಳವನ್ನೂ ಇದರ ನಿವಾಸಿಗಳನ್ನೂ ಹೀಗೆ ನಾಶಪಡಿಸಿ ಈ ಪಟ್ಟಣವನ್ನು ತೋಫೆತಿನ ಸ್ಥಿತಿಗೆ ತರುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಾನು ಈ ಸ್ಥಳವನ್ನೂ ಇದರ ನಿವಾಸಿಗಳನ್ನೂ ಹೀಗೆ ನಾಶಪಡಿಸಿ, ಈ ಪಟ್ಟಣವನ್ನು ತೋಫೆತಿನ ಸ್ಥಿತಿಗೆ ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಾನು ಈ ಸ್ಥಳವನ್ನೂ ಇದರ ನಿವಾಸಿಗಳನ್ನೂ ಅಷ್ಟರಮಟ್ಟಿಗೆ ನಾಶಪಡಿಸಿ ಈ ನಗರವನ್ನು ತೋಫೆತಿನ ಪರಿಸ್ಥಿತಿಗೆ ಇಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಾನು ಈ ಜನರಿಗೂ ಮತ್ತು ಈ ಸ್ಥಳಕ್ಕೂ ಹೀಗೆ ಮಾಡುತ್ತೇನೆ. ನಾನು ಈ ನಗರವನ್ನು ತೋಫೆತಿನಂತೆ ಮಾಡುತ್ತೇನೆ’ ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಹೀಗೆ ಈ ಸ್ಥಳಕ್ಕೂ, ಅದರ ನಿವಾಸಿಗಳಿಗೂ ಮಾಡುವೆನೆಂದು ಯೆಹೋವ ದೇವರು ಹೇಳುತ್ತಾರೆ. ಈ ಪಟ್ಟಣವನ್ನು ತೋಫೆತಿನ ಹಾಗೆಯೇ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 19:12
4 ತಿಳಿವುಗಳ ಹೋಲಿಕೆ  

ನಾನು ನಿಮ್ಮ ದೇವರಾಗಿದ್ದು ಹಾಲೂ ಜೇನೂ ಹರಿಯುವ ದೇಶವನ್ನು ಕೊಡುವದಾಗಿ ನಿಮ್ಮ ಮೂಲಪಿತೃಗಳಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು ಎಂದು ಹೇಳಿದೆನಷ್ಟೆ; ಆ ನನ್ನ ಮಾತು ಈಗ ಕೈಗೂಡಿದೆ. ನಾನು ಅವರಿಗೆ ವಿಧಿಸಿದ ನಿಬಂಧನವಾಕ್ಯಗಳಿಗೆ ಕಿವಿಗೊಡದವನು ಶಾಪಗ್ರಸ್ತನಾಗಲಿ ಎಂಬದಾಗಿ ಇಸ್ರಾಯೇಲ್ಯರ ದೇವರಾದ ಯೆಹೋವನು ನುಡಿಯುತ್ತಾನೆಂದೇ ಸಾರಬೇಕು. ಆಗ ನಾನು - ಅಪ್ಪಣೆಯಂತಾಗಲಿ, ಯೆಹೋವನೇ, ಎಂದು ಉತ್ತರಕೊಟ್ಟೆನು.


ಆತನ ಗರ್ಜನೆಗೆ ಆಕಾಶದಲ್ಲಿ ನೀರು ಮೊರೋ ಎನ್ನುತ್ತದೆ; ಆತನು ಭೂವಿುಯ ಕಟ್ಟಕಡೆಯಿಂದ ಮೋಡಗಳನ್ನು ಏರಮಾಡುತ್ತಾನೆ; ಮಳೆಗೋಸ್ಕರ ವಿುಂಚನ್ನು ಹೊಳೆಯಮಾಡುತ್ತಾನೆ; ತನ್ನ ಭಂಡಾರದಿಂದ ಗಾಳಿಯನ್ನು ಬೀಸಮಾಡುತ್ತಾನೆ.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಒಡೆದು ಸರಿಪಡಿಸಲಾಗದ ಮಣ್ಣಿನ ಪಾತ್ರೆಯಂತೆ ನಾನು ಈ ಜನವನ್ನೂ ಪಟ್ಟಣವನ್ನೂ ಒಡೆದುಬಿಡುವೆನು; ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಶವಗಳನ್ನು ತೋಫೆತಿನಲ್ಲಿ ಹೂಣುವರು.


ಯೆರೂಸಲೇವಿುನ ಮನೆಗಳೂ ಯೆಹೂದದ ಅರಸರ ಮನೆಗಳೂ ಅಂದರೆ ಯಾವ ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಹಾಕಿ ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ ಆ ಮನೆಗಳೆಲ್ಲಾ ಹೊಲಸಾಗಿ ತೋಫೆತೆಂಬ ಸ್ಥಳಕ್ಕೆ ಸಮಾನವಾಗುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು