Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 19:13 - ಕನ್ನಡ ಸತ್ಯವೇದವು J.V. (BSI)

13 ಯೆರೂಸಲೇವಿುನ ಮನೆಗಳೂ ಯೆಹೂದದ ಅರಸರ ಮನೆಗಳೂ ಅಂದರೆ ಯಾವ ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಹಾಕಿ ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ ಆ ಮನೆಗಳೆಲ್ಲಾ ಹೊಲಸಾಗಿ ತೋಫೆತೆಂಬ ಸ್ಥಳಕ್ಕೆ ಸಮಾನವಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆರೂಸಲೇಮಿನ ಮನೆಗಳೂ, ಯೆಹೂದದ ಅರಸರ ಮನೆಗಳೂ ಅಂದರೆ ಯಾವ ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಹಾಕಿ, ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ, ಆ ಮನೆಗಳೆಲ್ಲಾ ಹೊಲಸಾಗಿ ತೋಫೆತ್ ಎಂಬ ಸ್ಥಳಕ್ಕೆ ಸಮಾನವಾಗುವವು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಜೆರುಸಲೇಮಿನ ಮನೆಗಳೂ ಜುದೇಯದ ಅರಸರ ಮನೆಗಳೂ, ಅಂದರೆ ಯಾವ ಯಾವ ಮನೆಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಾರತಿ ಎತ್ತಿ ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ ಆ ಮನೆಗಳೆಲ್ಲ ಹೊಲಸಾಗಿ ತೋಫೆತ್ ಸ್ಥಳಕ್ಕೆ ಸಮಾನವಾಗುವುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ‘ಜೆರುಸಲೇಮಿನ ಮನೆಗಳು ಈ ತೋಫೆತಿನಷ್ಟೆ “ಹೊಲಸಾಗುವವು.” ಯೆಹೂದದ ರಾಜರ ಅರಮನೆಗಳು ಈ ತೋಫೆತಿನಂತೆ ಹಾಳಾಗುವವು. ಏಕೆಂದರೆ ಜನರು ತಮ್ಮ ಮನೆಯ ಮಾಳಿಗೆಯ ಮೇಲೆ ಸುಳ್ಳುದೇವರುಗಳನ್ನು ಪೂಜಿಸಿದರು. ಅವರು ನಕ್ಷತ್ರಗಳನ್ನು ಪೂಜಿಸಿ ಅವುಗಳ ಗೌರವಾರ್ಥವಾಗಿ ಧೂಪಹಾಕಿದರು. ಅವರು ಸುಳ್ಳುದೇವರುಗಳಿಗೆ ಪಾನನೈವೇದ್ಯಗಳನ್ನು ಅರ್ಪಿಸಿದರು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ಸೈನ್ಯಕ್ಕೆಲ್ಲಾ ಧೂಪ ಸುಟ್ಟು, ಬೇರೆ ದೇವರುಗಳಿಗೆ ಪಾನದ ಅರ್ಪಣೆಗಳನ್ನು ಹೊಯ್ದಿದ್ದಾರೋ, ಆ ಎಲ್ಲಾ ಮನೆಗಳ ನಿಮಿತ್ತವಾಗಿ ಯೆರೂಸಲೇಮಿನ ಮನೆಗಳೂ, ಯೆಹೂದದ ಅರಸರ ಮನೆಗಳೂ ತೋಫೆತಿನ ಸ್ಥಳದ ಹಾಗೆ ಅಶುದ್ಧವಾಗುವುವು, ಎಂಬುದೇ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 19:13
19 ತಿಳಿವುಗಳ ಹೋಲಿಕೆ  

ಮತ್ತು ಈ ಪಟ್ಟಣಕ್ಕೆ ಪ್ರತಿಭಟಿಸುವ ಕಸ್ದೀಯರು ಇದರೊಳಗೆ ನುಗ್ಗಿ ಬೆಂಕಿಯಿಕ್ಕಿ ಯಾವ ಮನೆಗಳ ಮಾಳಿಗೆಗಳಲ್ಲಿ ನನ್ನ ಜನರು ಬಾಳನಿಗೆ ಧೂಪಹಾಕಿ ಅನ್ಯದೇವತೆಗಳಿಗೆ ಪಾನವನ್ನು ನೈವೇದ್ಯವಾಗಿ ಅರ್ಪಿಸಿ ನನ್ನನ್ನು ಕೆಣಕಿದ್ದಾರೋ ಆ ಮನೆಗಳಿರುವ ಈ ಪಟ್ಟಣವನ್ನು ಸುಟ್ಟುಬಿಡುವರು.


ಇದಲ್ಲದೆ ಯೆಹೂದ್ಯರ ಅರಸರು ದೇವಸ್ಥಾನದ ಮಾಳಿಗೆಯ ಮೇಲೆ ಆಹಾಜನ ಉಪ್ಪರಿಗೆಯ ಹತ್ತಿರ ಕಟ್ಟಿಸಿದ್ದ ಯಜ್ಞವೇದಿಗಳನ್ನೂ ಮನಸ್ಸೆಯು ಯೆಹೋವನ ಆಲಯದ ಎರಡು ಪ್ರಾಕಾರಗಳಲ್ಲಿ ಕಟ್ಟಿಸಿದ್ದ ಯಜ್ಞವೇದಿಗಳನ್ನೂ ಕೆಡವಿ ಪುಡಿಪುಡಿಮಾಡಿ ಅವುಗಳ ಧೂಳನ್ನು ಕಿದ್ರೋನ್‍ಹಳ್ಳದಲ್ಲಿ ಹಾಕಿಸಿದನು.


ಮಾಳಿಗೆಗಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆ ಪೂಜಿಸುವವರನ್ನೂ ಯೆಹೋವನ ಭಕ್ತರೆಂದು ಪ್ರತಿಜ್ಞೆಮಾಡಿಕೊಂಡು ಆರಾಧಿಸಿ ಮಲ್ಕಾಮನ ಮೇಲೆ ಆಣೆಯಿಡುವವರನ್ನೂ


ಗಗನದ ಒಡತಿಗೆ ಹೋಳಿಗೆಗಳನ್ನು ಮಾಡುವದಕ್ಕಾಗಿ ಮಕ್ಕಳು ಸೌದೆಯನ್ನು ಆರಿಸುತ್ತಾರೆ, ತಂದೆಗಳು ಬೆಂಕಿಯನ್ನು ಹೊತ್ತಿಸುತ್ತಾರೆ, ಹೆಂಗಸರು ಕಣಕವನ್ನು ನಾದುತ್ತಾರೆ; ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ; ನನ್ನನ್ನು ಕೆಣಕಬೇಕೆಂದೇ ಇದನ್ನೆಲ್ಲಾ ಮಾಡುತ್ತಾರೆ.


ನಿಮ್ಮ ದೇವರಾದ ಯೆಹೋವನು ಭೂಲೋಕದಲ್ಲಿರುವ ಬೇರೆ ಎಲ್ಲಾ ಜನಾಂಗಗಳಿಗೋಸ್ಕರ ದಯಪಾಲಿಸಿದ ಸೂರ್ಯಚಂದ್ರ ನಕ್ಷತ್ರಗಳೆನಿಸಿಕೊಳ್ಳುವ ಆಕಾಶ ಸೈನ್ಯವನ್ನು ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ, ಮರುಳುಗೊಂಡು ಅವುಗಳನ್ನು ಪೂಜಿಸಲೂಬಾರದು ನಮಸ್ಕರಿಸಲೂಬಾರದು.


ಆದರೆ ನಾವು ಗಗನದ ಒಡತಿಗೆ ಧೂಪಹಾಕುವದನ್ನೂ ಪಾನವನ್ನು ನೈವೇದ್ಯವಾಗಿ ಸುರಿಯುವದನ್ನೂ ನಿಲ್ಲಿಸಿಬಿಟ್ಟಂದಿನಿಂದ ಎಲ್ಲಾ ಕೊರತೆಗೂ ಗುರಿಯಾಗಿ ಖಡ್ಗಕ್ಷಾಮಗಳಿಂದ ನಾಶವಾಗುತ್ತಿದ್ದೇವೆ.


ದೇವರೇ, ಮ್ಲೇಚ್ಫರು ನಿನ್ನ ಸ್ವಾಸ್ತ್ಯವನ್ನು ಹೊಕ್ಕು ನಿನ್ನ ಪರಿಶುದ್ಧಾಲಯವನ್ನು ಹೊಲೆಮಾಡಿದರು; ಯೆರೂಸಲೇಮ್ ಪಟ್ಟಣವನ್ನು ಹಾಳು ದಿಬ್ಬಗಳಾಗಿ ಮಾಡಿಬಿಟ್ಟರು.


ಅವರು ನಿನ್ನ ಪವಿತ್ರಾಲಯಕ್ಕೆ ಬೆಂಕಿಹಾಕಿ ನಿನ್ನ ನಾಮಕ್ಕೆ ಪ್ರತಿಷ್ಠಿತವಾದ ಮಂದಿರವನ್ನು ಹೊಲೆಮಾಡಿ ನೆಲಸಮಗೊಳಿಸಿದ್ದಾರೆ.


ತಮ್ಮ ಗಂಡುಹೆಣ್ಣು ಮಕ್ಕಳನ್ನು ಯಾರೂ ಮೋಲೆಕನಿಗೋಸ್ಕರ ಆಹುತಿ ಕೊಡದಂತೆ ಬೇನ್‍ಹಿನ್ನೋಮ್ ತಗ್ಗಿನಲ್ಲಿದ್ದ ತೋಫೆತ್ ಎಂಬ ಸ್ಥಳವನ್ನು ಹೊಲೆಮಾಡಿದನು.


ಆದರೆ ದೇವರು ಅವರಿಗೆ ವಿಮುಖನಾಗಿ ಆಕಾಶದ ನಕ್ಷತ್ರ ಗಣವನ್ನು ಪೂಜಿಸುವದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವದೇನಂದರೆ - ಇಸ್ರಾಯೇಲ್ ವಂಶದವರೇ, ನೀವು ಅರಣ್ಯದಲ್ಲಿದ್ದ ನಾಲ್ವತ್ತು ವರುಷ ನನಗೆ ಯಜ್ಞಗಳನ್ನೂ ಬಲಿಗಳನ್ನೂ ಅರ್ಪಿಸುತ್ತಿದ್ದಿರೋ? ಇಲ್ಲವಲ್ಲಾ;


ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ದೇಶಕ್ಕೆ ಅವರನ್ನು ಸೇರಿಸಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳನ್ನೂ ನೋಡಿ ಅಲ್ಲಿ ಯಜ್ಞಪಶುಗಳನ್ನು ವಧಿಸಿ ನನ್ನನ್ನು ರೇಗಿಸುವ ನೈವೇದ್ಯವನ್ನವರ್ಪಿಸಿ ಸುಗಂಧಹೋಮಮಾಡಿ ಪಾನದ್ರವ್ಯವನ್ನು ಸುರಿದು ಒಪ್ಪಿಸುತ್ತಿದ್ದರು.


ಯೆಹೋವನ ಆಲಯವನ್ನೂ ಅರಮನೆಯನ್ನೂ ಯೆರೂಸಲೇವಿುನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.


ಕಲ್ಲುಕಂಬಗಳನ್ನು ಒಡೆದುಹಾಕಿ ಅಶೇರ ವಿಗ್ರಹಸ್ತಂಭಗಳನ್ನು ಕಡಿದುಬಿಟ್ಟು ಅವುಗಳಿದ್ದ ಸ್ಥಳವನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.


ಮರುದಿನ ಅವರು ಪ್ರಯಾಣಮಾಡಿ ಆ ಊರಿನ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಮಧ್ಯಾಹ್ನದಲ್ಲಿ ಪ್ರಾರ್ಥನೆ ಮಾಡುವದಕ್ಕಾಗಿ ಮಾಳಿಗೆಯನ್ನು ಹತ್ತಿದನು.


ತಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಮೀರಿ ಎರಡು ಎರಕದ ಬಸವಮೂರ್ತಿಗಳು, ಅಶೇರವಿಗ್ರಹಸ್ತಂಭ ಇವುಗಳನ್ನು ಮಾಡಿಕೊಂಡರು; ಆಕಾಶಸೈನ್ಯ ಬಾಳ್‍ದೇವತೆ ಇವುಗಳನ್ನು ಪೂಜಿಸಿದರು;


ಇವರು ಪ್ರೀತಿಸಿ ಸೇವಿಸಿ ಹಿಂಬಾಲಿಸಿ ಆಶ್ರಯಿಸಿ ಪೂಜಿಸಿದ ಸೂರ್ಯಚಂದ್ರತಾರಾಗಣಗಳ ಎದುರಿಗೆ ಹರಡಿಬಿಡುವರು; ಅವುಗಳನ್ನು ಯಾರೂ ಕೂಡಿಸಿ ಹೂಣಿಡುವದಿಲ್ಲ; ಅವು ಭೂವಿುಯ ಮೇಲೆ ಗೊಬ್ಬರವಾಗುವವು.


ನಾನು ಈ ಸ್ಥಳವನ್ನೂ ಇದರ ನಿವಾಸಿಗಳನ್ನೂ ಹೀಗೆ ನಾಶಪಡಿಸಿ ಈ ಪಟ್ಟಣವನ್ನು ತೋಫೆತಿನ ಸ್ಥಿತಿಗೆ ತರುವೆನು;


ದಿವ್ಯದರ್ಶನದ ತಗ್ಗಿನ ವಿಷಯವಾದ ದೈವೋಕ್ತಿ. ನಿನಗೆ ಏನಾಯಿತು? ನಿನ್ನ ಜನರೆಲ್ಲರೂ ಮಾಳಿಗೆಗಳನ್ನು ಹತ್ತಿದ್ದೇಕೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು