Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 19:4 - ಕನ್ನಡ ಸತ್ಯವೇದವು J.V. (BSI)

4 ಈ ಜನರು ನನ್ನನ್ನು ತೊರೆದು ತಮಗಾಗಲಿ ತಮ್ಮ ಪಿತೃಗಳಿಗಾಗಲಿ ಯೆಹೂದದ ಅರಸರಿಗಾಗಲಿ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕುತ್ತಾ ಈ ಸ್ಥಳವನ್ನು ಅನ್ಯಸ್ಥಾನವಾಗಿ ಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “‘ಈ ಜನರು ನನ್ನನ್ನು ತೊರೆದು ತಮಗಾಗಲಿ, ತಮ್ಮ ಪೂರ್ವಿಕರಿಗಾಗಲಿ ಅಥವಾ ಯೆಹೂದದ ಅರಸರಿಗಾಗಲಿ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕುತ್ತಾ, ಈ ಸ್ಥಳವನ್ನು ಅನ್ಯಸ್ಥಾನವನ್ನಾಗಿ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಈ ಜನರು ನನ್ನನ್ನು ತೊರೆದು ಬಿಟ್ಟು ತಮಗಾಗಲಿ, ತಮ್ಮ ಪೂರ್ವಜರಿಗಾಗಲಿ, ಜುದೇಯದ ಅರಸರಿಗಾಗಲಿ ತಿಳಿಯದ ಅನ್ಯದೇವತೆಗಳಿಗೆ ಧೂಪಾರತಿ ಎತ್ತಿದ್ದಾರೆ. ಈ ಸ್ಥಳವನ್ನು ಅಪವಿತ್ರಗೊಳಿಸಿದ್ದಾರೆ. ನಿರ್ದೋಷಿಗಳ ರಕ್ತದಿಂದ ತುಂಬಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೂದದ ಜನರು ನನ್ನ ಅನುಸರಣೆಯನ್ನು ಬಿಟ್ಟಿದ್ದರಿಂದ ನಾನು ಹೀಗೆ ಮಾಡುವೆನು. ಇದನ್ನು ಅವರು ಅನ್ಯದೇವರುಗಳ ಸ್ಥಳವನ್ನಾಗಿ ಮಾಡಿದ್ದಾರೆ. ಯೆಹೂದದ ಜನರು ಈ ಸ್ಥಳದಲ್ಲಿ ಅನ್ಯದೇವರುಗಳಿಗಾಗಿ ಧೂಪವನ್ನು ಹಾಕಿದ್ದಾರೆ. ಬಹಳ ಹಿಂದೆ ಈ ಜನರು ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಅವರ ಹಿರಿಯರೂ ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಇವುಗಳು ಅನ್ಯದೇಶದ ಹೊಸ ದೇವರುಗಳು. ಯೆಹೂದದ ರಾಜರು ಈ ಸ್ಥಳವನ್ನು ಮುಗ್ಧಮಕ್ಕಳ ರಕ್ತದಿಂದ ತುಂಬಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ ಅವರು ನನ್ನನ್ನು ಬಿಟ್ಟು ಈ ಸ್ಥಳವನ್ನು ಅಶುದ್ಧಮಾಡಿ; ಅವರೂ, ಅವರ ತಂದೆಗಳೂ, ಯೆಹೂದದ ಅರಸರೂ ಅರಿಯದ ಬೇರೆ ದೇವರುಗಳಿಗೆ ಅಲ್ಲಿ ಧೂಪ ಸುಟ್ಟು, ಈ ಸ್ಥಳವನ್ನು ಅಪರಾಧವಿಲ್ಲದವರ ರಕ್ತದಿಂದ ತುಂಬಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 19:4
49 ತಿಳಿವುಗಳ ಹೋಲಿಕೆ  

ಇದಲ್ಲದೆ ನಿರ್ದೋಷಿಗಳಾದ ದರಿದ್ರರ ಪ್ರಾಣರಕ್ತವು ನಿನ್ನ ನೆರಿಗೆಯಲ್ಲಿ ಅಂಟಿಕೊಂಡಿದೆ; ಇವರು ಕನ್ನ ಕೊರೆಯುವದನ್ನು ಕಂಡೆನೆಂಬ ನೆವ ನಿನಗಿಲ್ಲ, ನಿನ್ನ ಈ ಎಲ್ಲಾ ದುರಭ್ಯಾಸಗಳ ದೆಸೆಯಿಂದ [ನಿನ್ನನ್ನು ದಂಡಿಸುವೆನು].


ಆದರೆ ಯೆಹೋವನಾದ ನನ್ನನ್ನು ತೊರೆದು ನನ್ನ ಪವಿತ್ರಪರ್ವತವನ್ನು ಮರೆತು ಶುಭದಾಯಕದೇವತೆಗೆ ಔತಣವನ್ನು ಅಣಿಮಾಡಿ ಗತಿದಾಯಕದೇವತೆಗೆ ಮದ್ಯವನ್ನು ತುಂಬಾ ಬೆರಸಿದ ನಿಮಗೆ ಕತ್ತಿಯನ್ನೇ ಗತಿಯಾಗಮಾಡುವೆನು.


ಮನಸ್ಸೆಯು ಯೆಹೂದ್ಯರನ್ನು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವದನ್ನು ಮಾಡ ಪ್ರೇರಿಸಿದ್ದಲ್ಲದೆ ಯೆರೂಸಲೇಮನ್ನೆಲ್ಲಾ ನಿರಪರಾಧ ರಕ್ತದಿಂದ ತುಂಬಿಸಿದನು.


ನೀವು ದುರ್ನಡತೆಯುಳ್ಳವರಾಗಿ ಯೆಹೋವನನ್ನು ಬಿಟ್ಟದ್ದರಿಂದ ಆತನು ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿಯೂ ವಿಪತ್ತು, ಕಳವಳ, ಶಾಪ ಇವುಗಳನ್ನುಂಟುಮಾಡುತ್ತಾ ನಿಮ್ಮನ್ನು ಬೇಗನೆ ನಾಶಮಾಡುವನು.


ನೀವು ಕಳವು ಕೊಲೆ ಹಾದರಗಳನ್ನು ಮಾಡಿ ಸುಳ್ಳುಸಾಕ್ಷಿ ಹೇಳಿ ಬಾಳನಿಗೆ ಹೋಮವನ್ನರ್ಪಿಸಿ ಕಂಡುಕೇಳದ ಅನ್ಯದೇವತೆಗಳನ್ನು ಹಿಂಬಾಲಿಸಿದ ಮೇಲೆ


ಯೆಹೋವನೇ, ಇಸ್ರಾಯೇಲ್ಯರ ನಿರೀಕ್ಷೆಯೇ, ನಿನ್ನನ್ನು ಬಿಟ್ಟುಹೋಗುವವರು ಆಶಾಭಂಗಪಡುವರು; ಯೆಹೋವನಾದ ನಿನ್ನನ್ನು ತೊರೆದವರು ಜೀವಜಲದ ಬುಗ್ಗೆಯನ್ನು ತೊರೆದವರಾಗಿದ್ದಾರೆ; ಅವರ ಹೆಸರು ದೂಳಿನಲ್ಲಿ ಬರೆಯಲ್ಪಡುವದು.


ಯೆಹೂದದವರೇ, ನಿಮ್ಮ ಪಟ್ಟಣಗಳೆಷ್ಟೋ ನಿಮ್ಮ ದೇವರುಗಳೂ ಅಷ್ಟು; ಯೆರೂಸಲೇವಿುನ ಬೀದಿಗಳೆಷ್ಟೋ ತುಚ್ಫದೇವತೆಯಾದ ಬಾಳನಿಗೆ ಹೋಮಮಾಡುವದಕ್ಕಾಗಿ ನೀವು ಮಾಡಿಕೊಂಡಿರುವ ಬಲಿಪೀಠಗಳೂ ಅಷ್ಟು.


ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು; ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟದ್ದು ಕೆಟ್ಟದ್ದಾಗಿಯೂ ವಿಷವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು ಎಂಬದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ.


ನಿನ್ನನ್ನು ದಾರಿಯಲ್ಲಿ ನಡಿಸುತ್ತಿದ್ದ ನಿನ್ನ ದೇವರಾದ ಯೆಹೋವನನ್ನು ತೊರೆದುಬಿಟ್ಟು ಇದನ್ನೆಲ್ಲಾ ನೀನೇ ನಿನ್ನ ಮೇಲೆ ಬರಮಾಡಿಕೊಂಡಿಯಲ್ಲಾ.


ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟಿದ್ದಾರೆ, ತಮಗೋಸ್ಕರ ತೊಟ್ಟಿಗಳನ್ನು, ನೀರು ನಿಲ್ಲದ ಬಿರಿದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.


ಇವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುತ್ತವೆ, ಇವರು ನಿರಪರಾಧಿಯ ರಕ್ತವನ್ನು ಸುರಿಸಲು ಆತುರಪಡುತ್ತಾರೆ, ಇವರ ಯೋಚನೆಗಳು ಅಧರ್ಮದ ಯೋಚನೆಗಳೇ, ಇವರು ಹೋದ ದಾರಿಗಳಲ್ಲಿ ಭಂಗವೂ ನಾಶನವೂ ಉಂಟಾಗುತ್ತವೆ;


ಅವುಗಳಿಗಾಗಿ ಆತನು ಯೆಹೂದ್ಯರನ್ನು ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದದರಿಂದ ಆತನ ಅಪ್ಪಣೆಯ ಪ್ರಕಾರ ಈ ಶಿಕ್ಷೆಯು ಅವರಿಗೆ ಆಯಿತು.


ಅವರು ದೇವಜನರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ; ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ಕೇಳಿದೆನು.


ಹೀಗೆ ಲೋಕಾದಿಯಿಂದ ಹೇಬೆಲನ ರಕ್ತವು ಮೊದಲುಗೊಂಡು ಯಜ್ಞವೇದಿಗೂ ದೇವಾಲಯಕ್ಕೂ ನಡುವೆ ಹತವಾದ ಜಕರೀಯನ ರಕ್ತದವರೆಗೂ ಸುರಿಸಲ್ಪಟ್ಟ ಎಲ್ಲಾ ಪ್ರವಾದಿಗಳ ರಕ್ತಕ್ಕೂ ಈ ಸಂತತಿಯವರು ಉತ್ತರಕೊಡಬೇಕು ಎಂಬದೇ; ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಿಮಗೆ ಹೇಳುತ್ತೇನೆ.


ಚೀಯೋನಿನ ಮಧ್ಯದಲ್ಲಿ ಶಿಷ್ಟರ ರಕ್ತವನ್ನು ಸುರಿಸಿದ ಯಾಜಕಪ್ರವಾದಿಗಳ ಪಾಪದೋಷಗಳಿಂದಲೇ ಈ ಗತಿ ಬಂತು.


ಅವರು ಊರೀಯನನ್ನು ಐಗುಪ್ತದಿಂದ ಎಳೆದು ಅರಸನಾದ ಯೆಹೋಯಾಕೀಮನ ಬಳಿಗೆ ತರಲು ಅವನು ಇವನನ್ನು ಕತ್ತಿಯಿಂದ ಕಡಿಸಿ ಶವವನ್ನು ಸಾಧಾರಣ ಜನರ ಗೋರಿಗಳ ನಡುವೆ ಹಾಕಿಸಿದನು.


ಆದರೆ ನೀವು ನನ್ನನ್ನು ಕೊಂದುಹಾಕಿದ ಪಕ್ಷಕ್ಕೆ ನೀವೂ ಈ ಪಟ್ಟಣವೂ ಇದರ ನಿವಾಸಿಗಳೂ ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ಪಾತ್ರರಾಗುವಿರಿ ಎಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ಮಾತುಗಳನ್ನೆಲ್ಲಾ ನಿಮ್ಮ ಕಿವಿಗೆ ಮುಟ್ಟಿಸುವಂತೆ ಯೆಹೋವನು ನನ್ನನ್ನು ಕಳುಹಿಸಿರುವದು ಖಂಡಿತ.


ಆದರೆ ನಿರ್ದೋಷಿಗಳ ರಕ್ತವನ್ನು ಸುರಿಸುವದು, ದೋಚಿಕೊಳ್ಳುವದು, ಹಿಂಸಿಸುವದು, ಜಜ್ಜುವದು, ಇವುಗಳನ್ನು ಮಾಡುವದರಲ್ಲಿಯೇ ನಿನ್ನ ದೃಷ್ಟಿಯೂ ನಿನ್ನ ಮನಸ್ಸೂ ನೆಲೆಗೊಂಡಿವೆ.


ನನ್ನ ಜನರೋ ನನ್ನನ್ನು ಮರೆತು ವ್ಯರ್ಥವಿಗ್ರಹಗಳಿಗೆ ಧೂಪಹಾಕಿದ್ದಾರಲ್ಲಾ; ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರು ಮುಗ್ಗರಿಸುವಂತೆಯೂ ಸರಿಯಲ್ಲದ ಸೀಳುದಾರಿಗಳಲ್ಲಿ ಅಲೆಯುವಂತೆಯೂ ಮಾಡಿವೆ.


ನೀನು ಅವರಿಗೆ ಹೀಗೆ ಹೇಳಬೇಕು - ಯೆಹೋವನ ಮಾತನ್ನು ಕೇಳಿರಿ, ನಿಮ್ಮ ಪಿತೃಗಳು ನನ್ನನ್ನು ತೊರೆದು ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸಿ ಪೂಜಿಸಿ ನನ್ನನ್ನು ಬಿಟ್ಟು ನನ್ನ ಧರ್ಮವಿಧಿಗಳನ್ನು ಮೀರಿದ್ದರಿಂದಲೂ


ಯೆಹೋವನ ಈ ಮಾತನ್ನು ಕೇಳು - ನೀನು ನನ್ನನ್ನು ಅಲ್ಲಗಳೆದು ಹಿಂದಿರುಗಿದ್ದೀ; ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ನಾಶಮಾಡುವೆನು; ಕ್ಷವಿುಸಿ ಕ್ಷವಿುಸಿ ಸಾಕಾಯಿತು.


ಆದಕಾರಣ ಅಡವಿಯ ಸಿಂಹವು ಅವರನ್ನು ಕೊಲ್ಲುವದು, ಕಾಡಿನ ತೋಳವು ಕೊಳ್ಳೆಮಾಡುವದು, ಚಿರತೆಯು ಅವರ ಪಟ್ಟಣಗಳಿಗೆ ಹೊಂಚುಹಾಕಿ ಅಲ್ಲಿಂದ ಹೊರಡುವ ಪ್ರತಿಯೊಬ್ಬನನ್ನೂ ಸೀಳುವದು; ಅವರ ಅಪರಾಧಗಳು ಬಹಳ, ಅವರ ದ್ರೋಹಗಳು ಅಪಾರ.


ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ತಿದ್ದುಪಾಟಾಗಲಿಲ್ಲ; ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.


ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲಾ ಜನಾಂಗಗಳಲ್ಲಿಯೂ ಯೆಹೋವನು ನಿಮ್ಮನ್ನು ಚದರಿಸುವನು; ಅಲ್ಲಿ ನಿಮಗಾದರೂ ನಿಮ್ಮ ಪಿತೃಗಳಿಗಾದರೂ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.


ನಿಮಗೂ ನಿಮ್ಮ ಪಿತೃಗಳಿಗೂ ಗೊತ್ತಿಲ್ಲದ ಜನಾಂಗದವರ ದೇಶಕ್ಕೆ ಯೆಹೋವನು ನಿಮ್ಮನ್ನೂ ನೀವು ನೇವಿುಸಿಕೊಳ್ಳುವ ಅರಸರನ್ನೂ ಒಯ್ಯಿಸುವನು; ಅಲ್ಲಿ ನೀವು ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಸೇವಿಸುವಿರಿ.


ಅಲ್ಲಿ ವಾಸವಾಗಿರುವ ಇಸ್ರಾಯೇಲ್ಯರಲ್ಲಿ ಕೆಲವು ಮಂದಿ ದುಷ್ಟರು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತಮ್ಮ ಊರಿನವರಿಗೆ ಸೂಚಿಸಿ - ಆ ದೇವರುಗಳನ್ನು ಸೇವಿಸೋಣ ಬನ್ನಿ ಎಂದು ಹೇಳಿ ಅವರನ್ನು ಸನ್ಮಾರ್ಗದಿಂದ ತಪ್ಪಿಸಿದ್ದಾರೆಂಬ ಸುದ್ದಿಯನ್ನು ನೀವು ಕೇಳಿದರೆ


ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ ಮಗನಾಗಲಿ ಮಗಳಾಗಲಿ ಪ್ರಾಣಪ್ರಿಯಳಾದ ಹೆಂಡತಿಯಾಗಲಿ ಆಪ್ತವಿುತ್ರನಾಗಲಿ ನಿಮಗಾದರೂ ನಿಮ್ಮ ಪಿತೃಗಳಿಗಾದರೂ ಗೊತ್ತಿಲ್ಲದ ಇತರ ದೇವರುಗಳನ್ನು ಸೂಚಿಸಿ -


ತಮ್ಮ ಗಂಡುಹೆಣ್ಣು ಮಕ್ಕಳನ್ನು ಯಾರೂ ಮೋಲೆಕನಿಗೋಸ್ಕರ ಆಹುತಿ ಕೊಡದಂತೆ ಬೇನ್‍ಹಿನ್ನೋಮ್ ತಗ್ಗಿನಲ್ಲಿದ್ದ ತೋಫೆತ್ ಎಂಬ ಸ್ಥಳವನ್ನು ಹೊಲೆಮಾಡಿದನು.


ನನ್ನ ಜನರು ನನ್ನನ್ನು ಬಿಟ್ಟದ್ದು, ಅನ್ಯದೇವತೆಗಳಿಗೆ ಹೋಮಮಾಡಿದ್ದು, ತಮ್ಮ ಕೈಯಿಂದ ನಿರ್ಮಿಸಿದ್ದಕ್ಕೆ ಅಡ್ಡಬಿದ್ದದ್ದು, ಈ ಅಧರ್ಮಕ್ಕೆಲ್ಲಾ ನಾನು ಅವರಿಗೆ ವಿಧಿಸಿರುವ ನ್ಯಾಯದಂಡನೆಗಳನ್ನು ತಿಳಿಸುವೆನು.


ಪರದೇಶಿಯನ್ನಾಗಲಿ ಅನಾಥನನ್ನಾಗಲಿ ವಿಧವೆಯನ್ನಾಗಲಿ ಹಿಂಸಿಸದೆ ಈ ಸ್ಥಳದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸದೆ ನಿಮಗೆ ಹಾನಿಕರವಾದ ಅನ್ಯದೇವತಾಭಕ್ತಿಯನ್ನು ಮಾಡದೆ ಇದ್ದರೆ


ಈ ಬಾಗಿಲುಗಳಲ್ಲಿ ಸೇರುವ ಯೆಹೂದದ ಅರಸರೇ, ಎಲ್ಲಾ ಯೆಹೂದ್ಯರೇ, ಯೆರೂಸಲೇವಿುನ ಸಕಲ ನಿವಾಸಿಗಳೇ, ಯೆಹೋವನ ಈ ಮಾತನ್ನು ಕೇಳಿರಿ -


ಯೆಹೋವನು ಹೀಗನ್ನುತ್ತಾನೆ - ನೀತಿನ್ಯಾಯಗಳನ್ನು ಆಚರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ; ವಿದೇಶಿ, ಅನಾಥ, ವಿಧವೆ, ಇವರಿಗೆ ಯಾವ ಅನ್ಯಾಯವನ್ನೂ ಹಿಂಸೆಯನ್ನೂ ಮಾಡಬೇಡಿರಿ; ನಿರ್ದೋಷಿಯ ರಕ್ತವನ್ನು ಈ ಸ್ಥಳದಲ್ಲಿ ಸುರಿಸದಿರಿ.


ಆಹಾ, ಅಲ್ಲಿನವರು ತಮಗೂ ನಿಮಗೂ ನಿಮ್ಮ ಪಿತೃಗಳಿಗೂ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕಿ ಸೇವೆಮಾಡುವದಕ್ಕೆ ಆತುರಪಟ್ಟು ನನ್ನನ್ನು ಕೆಣಕಬೇಕೆಂದೇ ಈ ದುರಾಚಾರವನ್ನು ನಡಿಸಿದ್ದರಿಂದ ಆ ಸ್ಥಳಗಳು ಹಾಳಾದವು. ಅಲ್ಲಿ ಯಾರೂ ವಾಸಿಸರು.


ನಾನು ಅವರ ಕಡೆಯಿಂದ ನನ್ನ ಮುಖವನ್ನು ಓರೆಮಾಡಲು ನನ್ನ ಇಷ್ಟಮಂದಿರವನ್ನು ಹೊಲೆಗೆಡಿಸುವರು; ಕಳ್ಳರು ಅದರಲ್ಲಿ ನುಗ್ಗಿ ಅದನ್ನು ಹೊಲಸು ಮಾಡುವರು.


ಅವರು ತಮ್ಮ ಚೊಚ್ಚಲು ಮಕ್ಕಳನ್ನು ಆಹುತಿಕೊಟ್ಟು ಅರ್ಪಿಸುತ್ತಿದ್ದ ಬಲಿಗಳಿಂದಲೇ ಅವರನ್ನು ಹೊಲೆಗೆಡಿಸಿ ಕೇವಲ ದುರವಸ್ಥೆಗೆ ತಂದೆನು.


ಅವನು ಕೂಡಿಸುವ ಸೈನ್ಯವು ಆಶ್ರಯದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸಿ ನಿತ್ಯಹೋಮವನ್ನು ನೀಗಿಸಿ ಹಾಳುಮಾಡುವ ಅಸಹ್ಯ ವಸ್ತುವನ್ನು ಪ್ರತಿಷ್ಠಿಸುವದು.


ಜನರು ಅನ್ಯದೇವತೆಗಳನ್ನು ಆರಿಸಿಕೊಂಡಿದ್ದರು; ಯುದ್ಧವು ಊರುಬಾಗಲವರೆಗೆ ಬಂದಿತ್ತು. ಇಸ್ರಾಯೇಲ್ಯರ ನಾಲ್ವತ್ತು ಸಾವಿರ ಸೈನಿಕರಲ್ಲಿ ಒಬ್ಬನಿಗೂ ಗುರಾಣಿ ಬರ್ಜಿಗಳು ಇದ್ದಿಲ್ಲ.


ಕಾನಾನ್ಯರ ಮೂರ್ತಿಗಳ ಅರ್ಪಣೆಗೋಸ್ಕರ ತಮ್ಮ ಮಕ್ಕಳ ನಿರಪರಾಧರಕ್ತವನ್ನು ಸುರಿಸಿದರು; ಇಂಥ ಕೊಲೆಗಳಿಂದ ದೇಶವನ್ನು ಹೊಲೆಮಾಡಿದರು.


ಇಸ್ರಾಯೇಲ್‍ವಂಶದ ಎಪ್ಪತ್ತು ಮಂದಿ ಹಿರಿಯರೂ ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ತಮ್ಮ ತಮ್ಮ ಕೈಗಳಲ್ಲಿ ಧೂಪಾರತಿಗಳನ್ನು ಹಿಡಿದುಕೊಂಡು ಆ ಚಿತ್ರಗಳ ಮುಂದೆ ನಿಂತಿದ್ದರು; ಧೂಪದ ಸುವಾಸನೆಯ ಧೂಮವು ಮೇಘವಾಗಿ ಏರುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು